ಪ್ರಧಾನಿ ಹುದ್ದೆಯಿಂದ ಕೆಳಗಿಳಿಯಲಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್

Friday, July 28th, 2017
Nawaz Sherif

ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅಕ್ರಮ ಸಂಪಾದನೆ ಹಾಗೂ ತೆರಿಗೆ ವಂಚನೆಯಿಂದ ಗಳಿಸಿದ ಕಾಳಧನವನ್ನು ಅಂತರರಾಷ್ಟ್ರೀಯ ಬ್ಯಾಂಕ್‌ಗಳಲ್ಲಿ ಇರಿಸಿರುವವರ ಪಟ್ಟಿಯು ಪನಾಮ ಪೇಪರ್ಸ್‌ ಸೋರಿಕೆಯಿಂದ ಬಹಿರಂಗಗೊಂಡಿತ್ತು. ವಿಶ್ವದಾದ್ಯಂತ ಬಾರಿ ಸುದ್ದಿಗೆ ಗ್ರಾಸವಾಗಿದ್ದ  ಈ  ಹಗರಣ ಸಂಬಂಧ ಪಾಕಿಸ್ತಾನ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರನ್ನು ದೋಷಿ ಎಂದು ತೀರ್ಮಾನಿಸಿರುವ ಕೋರ್ಟ್ ಅವರನ್ನು ಪ್ರಧಾನಿ ಹುದ್ದೆಯಿಂದ ಅನರ್ಹಗೊಳಿಸಿದೆ.    

4 ಲಕ್ಷ ಮೌಲ್ಯದ ಮರದ ದಿಮ್ಮಿಗಳನ್ನು ವಶಪಡಿಸಿದ ಬಂಟ್ವಾಳ ವಲಯ ಅರಣ್ಯಾಧಿಕಾರಿಗಳು

Friday, July 28th, 2017
forest

ಬಂಟ್ವಾಳ : ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಬಂಟ್ವಾಳ ವಲಯ ಅರಣ್ಯಾಧಿಕಾರಿಗಳು ಕಡಂಬು ಎಂಬಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನ ವಿಡ್ಲ ಪಡ್ನೂರು ಗ್ರಾಮದ ಕಡಂಬು ಎಂಬಲ್ಲಿ ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಸಾಲೆತ್ತೂರು ಬಾರೆಬೆಟ್ಟು ನಿವಾಸಿ ಮಹಮ್ಮದ್ ಮುಸ್ತಾಫ ಅವರಿಗೆ ಸೇರಿದ ಲಾರಿಯನ್ನು ಬಂಟ್ವಾಳ ವಲಯ ಅರಣ್ಯಾಧಿಕಾರಿಗಳ ತಂಡ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.  ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 4 ಲಕ್ಷ ವೆಂದು ಅಂದಾಜಿಸಲಾಗಿದೆ. ಕಾರ‍್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಬಿ. ಸುರೇಶ್, ಉಪ ವಲಯ ಅರಣ್ಯಾಧಿಕಾರಿ ಪ್ರೀತಮ್ […]

ನಾಗರಪಂಚಮಿ, ಭೂಲೋಕದ ಪ್ರತ್ಯಕ್ಷ ಅಂದರೆ ಕಣ್ಣಿಗೆ ಕಾಣುವ ದೇವರನ್ನು ಪೂಜಿಸುವ ಹಬ್ಬ

Friday, July 28th, 2017
Kaup Govardhan

ಮಂಗಳೂರು : ಹಿಂದೂಗಳ ನೈಸರ್ಗಿಕ ಆರಾಧನೆ ಎಂದು ಕರೆಯಲ್ಪಡುವ ನಾಗರಪಂಚಮಿ, ಭೂಲೋಕದ ಪ್ರತ್ಯಕ್ಷ ಅಂದರೆ ಕಣ್ಣಿಗೆ ಕಾಣುವ ದೇವರನ್ನು ಪೂಜಿಸುವ ಹಬ್ಬ ಎಂದು ನಂಬಲಾಗಿದೆ. ಪರಶುರಾಮ ದೇವರು ಸಮುದ್ರರಾಜನಿಂದ ತುಳುನಾಡನ್ನು ಪಡೆದುಕೊಂಡಾಗ ಅದು ಉಪಯೋಗಕ್ಕೆ ಬಾರದ ಬರಡು ಭೂಮಿಯಾಗಿತ್ತು. ಉಪ್ಪಿನ ಕೋಟೆಯಂತೆ ಇದ್ದ ಭೂಮಿಯನ್ನು ಸಮೃದ್ಧ ಭೂಮಿಯನ್ನಾಗಿಸಿ ಕೊಡಲು ಪರಶುರಾಮ ನಾಗ ರಾಜನನ್ನು ಬೇಡಿಕೊಳ್ಳುತ್ತಾನೆ. ಪರಶುರಾಮನ ಮೊರೆಯನ್ನು ಕೇಳಿದ ನಾಗಗಳು ತಮ್ಮ ದೇಹವನ್ನು ಪಣಕ್ಕೆ ಇಟ್ಟು ಉಪ್ಪಿನ ಕೋಟೆಯನ್ನು ಮೆಟ್ಟಿ ಪಾತಾಳದಿಂದ ಸಿಹಿನೀರು ತರುತ್ತವೆ. ಅಡಿಯಲ್ಲಿದ್ದ ಮೆಕ್ಕಲು […]

ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನ, ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗರ ಪಂಚಮಿ ಉತ್ಸವ

Thursday, July 27th, 2017
Nagarapanchami

ಮಂಗಳೂರು : ಇತಿಹಾಸ ಪ್ರಸಿದ್ದ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಡೆದ ನಾಗರ ಪಂಚಮಿ ಉತ್ಸವದಲ್ಲಿ ಸಾವಿರಾರು ಮಂದಿ ಭಕ್ತರು ಪಾಲ್ಗೊಂಡರು. ಅನಂತ (ಶಿವ) ಪದ್ಮನಾಭ (ವಿಷ್ಣು)ವಿನ ಸಮಾಗಮವಿರುವ ಕುಡುಪು ನಾಗನ ಆರಾಧನೆಯ ಪ್ರಮುಖ ಕೇಂದ್ರವಾಗಿದೆ. ಶ್ರಾವಣ ಮಾಸದ ಹುಣ್ಣಿಮೆಯ5 ನೇ ದಿನವನ್ನು ಭಕ್ತರು ನಾಗ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ನಾಗರ ಪಂಚಮಿಯನ್ನಾಗಿ ಆಚರಿಸುತ್ತಾರೆ. ಮುಂಜಾನೆ 6.30 ಕ್ಕೆ ಅನಂತ ಪದ್ಮನಾಭ ದೇವರಿಗೆ ವಿಶೇಷ ಪಂಚಾಮೃತ ಅಭಿಷೇಕ ಮಾಡಿ, ನಾಗ ಬನದಲ್ಲಿ ನಾಗ ದೇವರಿಗೆ […]

ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದ ಮೇಲ್ಛಾವಣಿಯ ಸಿಮೆಂಟ್ ಪದರು ಕುಸಿದು ಓರ್ವ ಗಂಭೀರ

Thursday, July 27th, 2017
biju

ಮಂಗಳೂರು : ನಗರದ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಮೇಲ್ಛಾವಣಿಯ ಸಿಮೆಂಟ್ ಪದರು  ಕುಸಿದು ಬಿದ್ದ ಪರಿಣಾಮ ಓರ್ವ ಗಂಭೀರ ಗಾಯಗೊಂಡು, ಹಲವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ . ಟಿಕೆಟ್‌ ಕೌಂಟರ್‌ ಬಳಿ ಸರತಿ ಸಾಲಿನಲ್ಲಿ ನಿಂತವರ ಮೇಲೆಯೇ ಮೇಲ್ಛಾವಣಿ  ಸಿಮೆಂಟ್ ಪದರು  ಕುಸಿದು ಬಿದ್ದಿದೆ. ಹಳೆಯದಾದ ಮೇಲ್ಛಾವಣಿಯಲ್ಲಿ ಬಿರುಕು ಬಿಟ್ಟ ಕುರುಹು ಮೊದಲೇ ಕಾಣಿಸಿಕೊಂಡಿತ್ತು.  ಸರತಿ ಸಾಲಿನಲ್ಲಿ ನಿಂತಿದ್ದ ಕೇರಳದ ಬಿಜು ಎಂಬವರ ತಲೆಗೆ ಬಿದ್ದ ಸಿಮೆಂಟ್ ತುಂಡು ಗಳಿಂದ ಗಂಭೀರ ಸ್ವರೂಪದ ಗಾಯಗಳಾಗಿವೆ. ನಗರದ ಖಾಸಗಿ ಆಸ್ಪತ್ರೆಗೆ ತನ್ನ […]

ಕಾರ್ಗಿಲ್‌ ಹುತಾತ್ಮ ಸೈನಿಕರಿಗೆ ಮೋಂಬತ್ತಿ ಬೆಳಗಿ ನಮನ

Thursday, July 27th, 2017
Kargil

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕರ ಸಂಘದ ವತಿಯಿಂದ ಶ್ರೀ ಶಾಸ್ತಾವು ಭೂತನಾಥೇಶ್ವರ ದೇವಸ್ಥಾನ ಮತ್ತು ಲಯನ್ಸ್‌ ಜಿಲ್ಲೆ 317-ಡಿ ಸಹಯೋಗದಲ್ಲಿ ಬುಧವಾರ ನಗರದ ಕದ್ರಿಹಿಲ್ಸ್‌ನ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್‌ ಹೋರಾಟದಲ್ಲಿ ಹುತಾತ್ಮರಾದ ಸೈನಿಕರಿಗೆ ಮೋಂಬತ್ತಿ ಬೆಳಗಿ, ಹೂ ಹಾಕಿ ನಮನ ಸಲ್ಲಿಸಲಾಯಿತು. ಕಾರ್ಗಿಲ್‌ ಹೋರಾಟದಲ್ಲಿ ಹುತಾತ್ಮರಾದ ಸೈನಿಕರನ್ನು ಸ್ಮರಿಸುವುದು ದೇಶವಾಸಿಗಳಾದ ಪ್ರತಿಯೊಬ್ಬರ ಕರ್ತವ್ಯ. ಸೈನಿಕರ ತ್ಯಾಗ, ಪರಿಶ್ರಮವನ್ನು ನೆನಪಿಸಿಕೊಂಡು ಗೌರವಿಸುವ ಕೆಲಸವನ್ನು ಪ್ರತಿಯೊಬ್ಬರೂ ಮಾಡಬೇಕು ಎಂದು ವಿಧಾನ ಪರಿಷತ್‌ ವಿಪಕ್ಷ ಮುಖ್ಯ ಸಚೇತಕ ಕ್ಯಾ| […]

ಮೇಯರ್ ಕವಿತಾ ಸನಿಲ್, ಪಾಲಿಕೆ ಅಧಿಕಾರಿಗಳು ಹಾಗೂ ಟ್ರಾಫಿಕ್ ಪೊಲೀಸ್ ರಿಂದ ಪುಟ್ ಪಾತ್ ನಲ್ಲಿ ಪಾದಯಾತ್ರೆ

Thursday, July 27th, 2017
padayatre

ಮಂಗಳೂರು: ಮಹಾನಗರಪಾಲಿಕೆ ಅಧಿಕಾರಿಗಳು ಹಾಗೂ ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಮೇಯರ್ ನೇತೃತ್ವದಲ್ಲಿ  ಪಿವಿಎಸ್‌ ಸರ್ಕಲ್ ನಿಂದ ಸ್ಟೇಟ್ ಬ್ಯಾಂಕ್‌ವರೆಗೆ ಬುಧವಾರ ಸಂಚಾರ ಸುಧಾರಣೆ ಪಾದಯಾತ್ರೆ ನಡೆಸಿದರು. ಈ ಪಾದಯಾತ್ರೆ ಸಂದರ್ಭದಲ್ಲಿ ರಸ್ತೆಯಲ್ಲಿ ಕಂಡು ಬಂದ ಅನಧಿಕೃತ ಪಾರ್ಕಿಂಗ್, ರಸ್ತೆ-ಫುಟ್ ಪಾತ್ ಒತ್ತುವರಿ ತೆರವು ಹಾಗೂ ಸಂಚಾರಕ್ಕೆ ಅಡ್ಡಿಯಾಗಿರುವ ಗೂಡಂಗಡಿಗಳನ್ನು ತೆರವುಗೊಳಿಸಿ  ಎಚ್ಚರಿಕೆ ನೀಡಲಾಯಿತು. ಕಾರ್ಪೊರೇಟರ್‌ ಎ.ಸಿ. ವಿನಯ ರಾಜ್‌ ನಗರದ ಮಿಲಾಗ್ರಿಸ್‌ನ ಆಟೋ ನಿಲ್ದಾಣದಲ್ಲಿ ವಿಧಾನ ಪರಿಷತ್‌ ಮುಖ್ಯ ಸಚೇತಕ ಐವನ್‌ ಡಿ’ಸೋಜಾ ಅವರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ಕಮಾನು ನಿರ್ಮಿಸಲು  ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ […]

ಪವನ್ ರಾಜ್ ಶೆಟ್ಟಿ ಕೊಲೆ ಪ್ರಕರಣದ ಮೂವರು ಆರೋಪಿಗಳು ಪೊಲೀಸರ ವಶ

Thursday, July 27th, 2017
Pawan shetty

ಮಂಗಳೂರು : ಜುಲೈ 24 ರ ಮಧ್ಯರಾತ್ರಿ ಮಂಗಳೂರಿನ ಹೊರವಲಯದ ವಾಮಂಜೂರಿನಲ್ಲಿ ನಡೆದ ರೌಡಿಶೀಟರ್ ಪವನ್ ರಾಜ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಆರೋಪಿಗಳನ್ನು  ಪೊಲೀಸರು ಭೇದಿಸಿದ್ದಾರೆ. ಪ್ರಕರಣದ ತನಿಖೆ ನಡೆಸಿದ ಮಂಗಳೂರು ಗ್ರಾಮಾಂತರ ಪೋಲೀಸರು ಕೊಲೆ ನಡೆದ 24 ಗಂಟೆಗಳೊಳಗೆ 3 ಆರೋಪಿಗಳನ್ನು ಬಂಧಿಸಿದ್ದಾರೆ. ವಾಮಂಜೂರಿನ ಬಿಪಿನ್, ಶರಣ್ ಹಾಗೂ ಹರೀಶ್ ಪೋಲೀಸರಿಂದ ಬಂಧಿತರಾದ ಆರೋಪಿಗಳಾಗಿದ್ದಾರೆ. ಪವನ್ ರಾಜ್ ಕೊಲೆ ಮಾಡಿದ ಬಳಿಕ ಆರೋಪಿಗಳು ಹತ್ಯೆಗೆ ಬಳಸಿದ ಲಾಂಗ್ ಮಚ್ಚುಗಳನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದರು. ಇದು […]

ರಸ್ತೆ ನಾಮಕರಣದಲ್ಲಿ ರಾಜಕೀಯ ಮಾಡಿದವರಿಗೆ ಸೂಕ್ತ ಸಮಯದಲ್ಲಿ ಉತ್ತರಿಸುತ್ತೇವೆ : ಎ. ಸದಾನಂದ ಶೆಟ್ಟಿ

Wednesday, July 26th, 2017
Mulki Sundarram Shetty

ಮಂಗಳೂರು: ರಸ್ತೆ ನಾಮಕರಣದಲ್ಲಿ ರಾಜಕೀಯ ಮಾಡಿದವರಿಗೆ ಸೂಕ್ತ ಸಮಯದಲ್ಲಿ ಉತ್ತರಿಸುತ್ತೇವೆ ಎಂದು ಮುಲ್ಕಿ ಸುಂದರರಾಮ ಶೆಟ್ಟಿ ಅಭಿಮಾನಿಗಳ ಬಳಗದ ಗೌರವಾಧ್ಯಕ್ಷ ಎ. ಸದಾನಂದ ಶೆಟ್ಟಿ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಿಜಯ ಬ್ಯಾಂಕ್‌‌ನ ಸ್ಥಾಪಕಾಧ್ಯಕ್ಷ ಮುಲ್ಕಿ ಸುಂದರರಾಮ ಶೆಟ್ಟಿಯವರ ಹೆಸರನ್ನು ನಗರದ ರಸ್ತೆಗೆ ಇಡುವಲ್ಲಿ ನಡೆದ ರಾಜಕೀಯ ಸರಿಯಲ್ಲ. ಸುಂದರರಾಮ ಶೆಟ್ಟಿಯವರ ಸೇವೆ ಕೇವಲ ಒಂದು ಜಾತಿಗೆ ಸೀಮಿತವಾಗಿಲ್ಲ. ಸಾವಿರಾರು ಮಂದಿಗೆ ಜಾತಿ, ಮತದ ಭೇದವಿಲ್ಲದೆ ಉದ್ಯೋಗ ಕಲ್ಪಿಸಿ ಅವರ ಜೀವನಕ್ಕೆ ಬೆಳಕಾದ ಮೇರು ವ್ಯಕ್ತಿತ್ವದ  ಹೆಸರಿಡುವಾಗ […]

ಅಲ್ಪಸಂಖ್ಯಾತರಾದರೆ ಸೌಲಭ್ಯ ಸಿಗುತ್ತದೆ ಎಂದು ಹಿಂದೂ ಧರ್ಮದಿಂದ ದೂರವಾಗಬೇಡಿ : ಪೇಜಾವರ ಶ್ರೀ

Tuesday, July 25th, 2017
Swamiji

ಉಡುಪಿ : ಅಲ್ಪಸಂಖ್ಯಾತರಾಗಿ ಮಾನ್ಯತೆ ಪಡೆದರೆ ಸಿಗುವ ಸೌಲಭ್ಯದ ಲಾಭ ಪಡೆಯುವ ಉದ್ದೇಶದಿಂದ ಲಿಂಗಾಯಿತರು, ವೀರಶೈವರು ತಾವು ಹಿಂದೂಗಳಲ್ಲ ಎಂದು ಹೇಳುತ್ತಿದ್ದಾರೆ ಎಂದು ಪರ್ಯಾಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥರು ಹೇಳಿದ್ದಾರೆ. ಉಡುಪಿ ಶ್ರೀ ಕೃಷ್ಣಮಠದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಪೇಜಾವರ ಶ್ರೀ ಗಳು, ಶಿವನೇ ಪರದೈವವೆಂದು ಪ್ರತಿಪಾದಿಸುವ ಲಿಂಗಾಯಿತ ಧರ್ಮವು ಹಿಂದೂ ಧರ್ಮವೇ ಆಗಿದೆ. ರಾಜಕೀಯ ಪ್ರೇರಿತರಾಗಿ ಧರ್ಮವನ್ನು ಒಡೆದು ತಾವು ಬೇರೆ ಎಂದು ಹೇಳುವುದು ಮೂರ್ಖತನ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ. ಜಾತಿ ವ್ಯವಸ್ಥೆಯನ್ನು ಒಪ್ಪದ ರಾಮಕೃಷ್ಣ ಆಶ್ರಮ, ಆರ್ಯ ಸಮಾಜ ಹಿಂದೂ ಧರ್ಮವೇ ಆಗಿಲ್ಲವೇ […]