ಕೊಣಾಜೆ ಯಲ್ಲಿ ನಾಲ್ಕು ಬಸ್ ಗಳಿಗೆ ಕಿಡಿಗೇಡಿ ಗಳಿಂದ ಕಲ್ಲು

Thursday, June 22nd, 2017
Konaje Bus

ಕೊಣಾಜೆ : ಇನೋಳಿಯಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ಬಸ್ ಗಳಿಗೆ ಕಿಡಿಗೇಡಿಗಳು ಕಲ್ಲೆಸೆದು ಹಾನಿ ಗೈದ ಘಟನೆ ನಡೆದ ಪ್ರಕರಣ ಕೊಣಾಜೆ ಠಾಣೆಯಲ್ಲಿ ಗುರುವಾರ ದಾಖಲಾಗಿದೆ. ಗಣೇಶ್ ಶೆಟ್ಟಿ ಎಂಬವರ ಮಾಲಕತ್ವದ ಅಕ್ಷಯ ಹೆಸರಿನ ಎರಡು ಬಸ್ ಗಳು, ಪುರುಷೋತ್ತಮ ಶೆಟ್ಟಿ ಎಂಬವರ ಮಾಲಕತ್ವದ ಚಿತ್ರರಾಜ್ ಹಾಗೂ ಜಗನ್ನಾಥ ಶೆಟ್ಟಿ ಎಂಬವರ ಮಾಲಕತ್ವದ ಪದ್ಮಶ್ರೀ ಬಸ್ ಗಳನ್ನು ಎಂದಿನಂತೆ ಬುಧವಾರ ರಾತ್ರಿ ಕೂಡಾ ನಿಲ್ಲಿಸಲಾಗಿತ್ತು. ಈ ಸಂದರ್ಭ ಕಿಡಿಗೇಡಿಗಳು ಕಲ್ಲು ತೂರಿ ಗಾಜುಗಳನ್ನು ಪುಡಿಗೈದಿದ್ದಾರೆ. ಕೆಲವು ತಿಂಗಳುಗಳ ಹಿಂದೆ ಪಾವೂರು […]

ಶೈಕ್ಷಣಿಕ ಒತ್ತಡದಿಂದ ಹೆಚ್ಚುತ್ತಿರುವ ಮಕ್ಕಳ ನಾಪತ್ತೆ : ಜಿಲ್ಲಾಧಿಕಾರಿ ಕಳವಳ

Thursday, June 22nd, 2017
DC

ಮಂಗಳೂರು : ಅತಿಯಾದ ಕಲಿಕೆಯ ಒತ್ತಡದಿಂದ ಮಕ್ಕಳು ನಾಪತ್ತೆ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಕಳವಳ ವ್ಯಕ್ತಪಡಿಸಿದ್ದಾರೆ. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2014ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 214 ಮಕ್ಕಳು ನಾಪತ್ತೆಯಾಗಿದ್ದು, ಈ ಪೈಕಿ 200 ಮಕ್ಕಳು ಪತ್ತೆಯಾಗಿದ್ದಾರೆ. ಪತ್ತೆಯಾದ ಮಕ್ಕಳಲ್ಲಿ ನಾಪತ್ತೆಯ ಕಾರಣಗಳನ್ನು ವಿಚಾರಿಸಿದಾಗ ಸುಮಾರು 51 ಮಕ್ಕಳು ಶಾಲೆ ಹಾಗೂ ಪಾಲಕರಿಂದ ಕಲಿಕೆಯ […]

ಎಸ್ ಡಿಪಿಐ ಕಾರ್ಯಕರ್ತ ಅಶ್ರಫ್ ಹತ್ಯಾ ಆರೋಪಿಗಳ ಶೀಘ್ರ ಬಂಧನ : ಎಡಿಜಿಪಿ

Thursday, June 22nd, 2017
Aloka

ಮಂಗಳೂರು : ಬಂಟ್ವಾಳದ ಬೆಂಜನಪದವಿನಲ್ಲಿ  ಎಸ್‌ಡಿಪಿ ಮುಖಂಡ ಮುಹಮ್ಮದ್ ಅಶ್ರಫ್ ಕಲಾಯಿ ಹತ್ಯೆಯ ಆರೋಪಿಗಳ ಬಂಧನಕ್ಕೆ ನಾಲ್ಕು ವಿಶೇಷ ತಂಡ ರಚನೆ ಮಾಡಲಾಗಿದೆ. ಈಗಾಗಲೇ ನಮ್ಮ ಮಾಹಿತಿದಾರರಿಗೆ ಆರೋಪಿಗಳ ಮಾಹಿತಿ ಲಭ್ಯವಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ  ಅಲೋಕ್ ಮೋಹನ್ ಹೇಳಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿದ ಅವರು,  ಪೊಲೀಸ್ ತಂಡಗಳು ಪ್ರತ್ಯೇಕ ನಿಗಾದೊಂದಿಗೆ ತನಿಖೆ ನಡೆಸುತ್ತಿವೆ. ಆರೋಪಿಗಳನ್ನು ಬಂಧಿಸಿದಾಕ್ಷಣ ಈ ಘಟನೆಗಳ ಷಡ್ಯಂತ್ರ ರೂಪಿಸಿದವರನ್ನೂ ಬಂಧಿಸಲು ಸಾಧ್ಯವಾಗಲಿದೆ. ಜಿಲ್ಲೆಯಲ್ಲಿ ನಡೆದಿರುವ ಘಟನೆಗಳು ಉತ್ತಮ […]

ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ

Thursday, June 22nd, 2017
sp

ಮಂಗಳೂರು :  ರಾಜ್ಯ ಸರಕಾರದ ಆದೇಶದಂತೆ ದ.ಕ. ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೂತನವಾಗಿ ನೇಮಕಗೊಂಡಿರುವ ಸುಧೀರ್ ಕುಮಾರ್ ರೆಡ್ಡಿ ಇಂದು ಅಧಿಕಾರ ಸ್ವೀಕರಿಸಿದರು. ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ, ಪ್ರಸ್ತುತ ಬೆಂಗಳೂರಿನ ನಗರ ಪೊಲೀಸ್ ಆಡಳಿತ ವಿಭಾಗಕ್ಕೆ ವರ್ಗಾವಣೆಗೊಂಡಿರುವ ಭೂಷಣ್ ಗುಲಾಬ್ ರಾವ್ ಬೊರಸೆ ನೂತನ ಎಸ್ಪಿಗೆ ಅಧಿಕಾರ ಹಸ್ತಾಂತರಿಸಿದರು. ಸುಧೀರ್ ಕುಮಾರ್ ರೆಡ್ಡಿ 2010ನೆ ಸಾಲಿನ ಐಪಿಎಸ್ ಅಧಿಕಾರಿಯಾಗಿದ್ದು, ಮಂಡ್ಯದಲ್ಲಿ ಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೂಲತ: ಆಂಧ್ರ ಪ್ರದೇಶದ ಗುಂಟೂರಿನವರು.  ಈ ಹಿಂದೆ ಭಟ್ಕಳದಲ್ಲಿ ಎಎಸ್ಪಿಯಾಗಿ, […]

ರೈತರ ಸಹಕಾರಿ ಬ್ಯಾಂಕ್ ಗಳಲ್ಲಿನ 50 ಸಾವಿರ ಸಾಲ ಮನ್ನಾ : ಸಿಎಂ ಘೋಷಣೆ

Wednesday, June 21st, 2017
CM siddu

ಬೆಂಗಳೂರು: ಸಹಕಾರಿ ಬ್ಯಾಂಕ್ ಗಳಲ್ಲಿನ 50 ಸಾವಿರ ರೂ. ವರೆಗಿನ ರೈತರ ಸಾಲಮನ್ನಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಜೂನ್ 20 ರ ವರೆಗಿನ ಪ್ರತಿ ರೈತರ ಸಾಲ ಮನ್ನಾ ಮಾಡುವುದಾಗಿ ವಿಧಾನ ಸಭೆಯಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ. ಸಾಲಮನ್ನಾದಿಂದ 22,227,506 ರಾಜ್ಯದ ರೈತರಿಗೆ ಅನುಕೂಲವಾಗಲಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ 8,165 ಕೋಟಿ ರು ಹೊರೆಯಾಗಲಿದೆ. ರೈತರ ಸಾಲಮನ್ನಾ ಮಾಡುವಂತೆ ಬಿಜೆಪಿ ಹಲವು ದಿನಗಳಿಂದ ಪಟ್ಟು ಹಿಡಿದಿತ್ತು. ಸಾಲ ಮನ್ನಾ ಮಾಡದಿದ್ದರೇ ಬೃಹತ್ ಹೋರಾಟ ನಡೆಸುವುದಾಗಿ ಬಿಜೆಪಿ ಎಚ್ಚರಿಕೆ […]

ರಮಾನಾಥ ರೈ ವರ್ಚಸ್ಸನ್ನು ಕುಗ್ಗಿಸಲು ಬಿಜೆಪಿ ಮತ್ತು ಸಂಘ ಪರಿವಾರ ಪ್ರಯತ್ನ ಮಾಡುತ್ತಿವೆ : ಮಿಥುನ್ ರೈ

Wednesday, June 21st, 2017
mithun

ಮಂಗಳೂರು : ಪ್ರಚೋದನಾಕಾರಿ ಭಾಷಣ ಮಾಡುವವರನ್ನು ಬಂಧಿಸಲು ಹೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ.  ಸಚಿವ ರಮಾನಾಥ ರೈ ವರ್ಚಸ್ಸನ್ನು ಕುಗ್ಗಿಸಲು ಬಿಜೆಪಿ ಮತ್ತು ಸಂಘ ಪರಿವಾರ ಪ್ರಯತ್ನ ಮಾಡುತ್ತಿವೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಹೇಳಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ  ಮಾತನಾಡಿದ ಮಿಥುನ್, ಕಾಂಗ್ರೆಸ್‌ಗೆ ಶಾಂತಿ ಮುಖ್ಯ,  ಜಿಲ್ಲೆಯ ಅಬಿವೃದ್ಧಿ ಕಾಪಾಡುವ ದೃಷ್ಟಿಯಿಂದ ರಮಾನಾಥ ರೈ ನೀಡಿರುವ ಸೂಚನೆಯನ್ನೇ ಅಪರಾಧ ಎಂಬಂತೆ ಬಿಂಬಿಸಿ ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು. ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ […]

ಯೋಗದಿಂದ ಆರೋಗ್ಯ, ಆಯುಷ್ಯ ವೃದ್ಧಿ ಟಿ. ಶ್ಯಾಮ್ ಭಟ್

Wednesday, June 21st, 2017
yoga

ಉಜಿರೆ: ಮಾನಸಿಕ, ದೈಹಿಕ ಹಾಗೂ ಸಾಮಾಜಿಕ ಆರೋಗ್ಯ ರಕ್ಷಣೆಗೆ ಯೋಗ ಅಗತ್ಯ. ಯೋಗದಿಂದ ಆರೋಗ್ಯ ಮತ್ತು ಆಯುಷ್ಯ ವೃದ್ಧಿಯಾಗುತ್ತದೆ. ಎಲ್ಲರೂ ಶ್ರದ್ಧೆಯಿಂದ ನಿತ್ಯವೂ ಯೋಗಾಭ್ಯಾಸ ಮಾಡಬೇಕು ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಅಧ್ಯಕ್ಷ ಟಿ. ಶ್ಯಾಮ್ ಭಟ್ ಹೇಳಿದರು. ಅವರು ಬುಧವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಆಯೋಜಿಸಲಾದ ಮೂರನೇ ವಿಶ್ವಯೋಗ ದಿನಾಚರಣೆ ಸಂದರ್ಭದಲ್ಲಿ ಮಾತನಾಡಿದರು. ಉತ್ತಮ ಜ್ಞಾನ, ಪ್ರೀತಿ-ವಿಶ್ವಾಸ ಮತ್ತು ನಿಸ್ಪೃಹ ಸೇವಾ ಮನೋಭಾವ ಹೊಂದಿದವರು ಪರಿಶುದ್ಧರಾಗುತ್ತಾರೆ. ಇಂದು ಆಧುನಿಕ ಜೀವನ ಶೈಲಿ, ಆಹಾರ […]

ಬಿಷಪ್ ಅಲೋಶಿಯಸ್ ಪಾವ್ಲ್ ಡಿ’ಸೋಜಾ ಅವರ 76ನೇ ಜನ್ಮ ದಿನಾಚರಣೆ

Wednesday, June 21st, 2017
Alosius poul

ಮಂಗಳೂರು :  ಬದುಕು ದೇವರ ವರ, ಅದನ್ನು ಪರರ ಸೇವೆ ಮತ್ತು ಇತರ ಒಳ್ಳೆಯ ಕೆಲಸಗಳಿಗೆ ವಿನಿಯೋಗಿಸಿದಾಗ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು ಎಂದು ಮಂಗಳೂರಿನ ಬಿಷಪ್ ರೆ| ಡಾ| ಅಲೋಶಿಯಸ್ ಪಾವ್ಲ್ ಡಿ’ಸೋಜಾ ಅವರು ಹೇಳಿದರು. ಅವರು ಬುಧವಾರ ತಮ್ಮ 76 ನೇ ಜನ್ಮದಿನದ ಅಂಗವಾಗಿ ಬಿಜೈ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್‌ನಲ್ಲಿ ನಡೆದ ಕೃತಜ್ಞಾತರ್ಪಣೆಯ ಬಲಿಪೂಜೆ ಮತ್ತು ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ಹೆತ್ತವರು ತಮ್ಮ ಮಕ್ಕಳಿಗೆ ದೇವರ ಪ್ರೀತಿ ಮತ್ತು ಮೌಲ್ಯಗಳ ಬಗ್ಗೆ ತಿಳಿಸಿ ಅವರನ್ನು […]

ಬೆಂಜನಪದವಿನಲ್ಲಿ ಎಸ್‌ಡಿಪಿಐ ವಲಯಾಧ್ಯಕ್ಷನನ್ನು ಅಟ್ಟಾಡಿಸಿ ಹತ್ಯೆ

Wednesday, June 21st, 2017
sdpi

ಬಂಟ್ವಾಳ : ಎಸ್‌ಡಿಪಿಐ ಅಮ್ಮುಂಜೆ ವಲಯ ಅಧ್ಯಕ್ಷರನ್ನು ಮಾರಕಾಯುಧಗಳಿಂದ ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಜನಪದವಿನ ಕರಾವಳಿ ಕಾಲೇಜು ಬಳಿ ಇಂದು ಬೆಳಗ್ಗೆ ನಡೆದಿದೆ. ಮೃತರನ್ನು ಮಲ್ಲೂರು ಅಮ್ಮುಂಜೆಯ ಕಲಾಯಿ ನಿವಾಸಿ ಅಶ್ರಫ್(35) ಎಂದು ಗುರುತಿಸಲಾಗಿದೆ.  ಎಸ್‌ಡಿಪಿಐ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಅಶ್ರಫ್ ಕಲಾಯಿ ಇಂದು ಬೆಳಗ್ಗೆ ಕಲಾಯಿಯಲ್ಲಿ ಧ್ವಜಾರೋಹಣ ನೆರೆವೇರಿಸಿ, ಬಳಿಕ ಹೊಂಡಮಯವಾಗಿರುವ ಕಲಾಯಿ ರಸ್ತೆಯ ದುರಸ್ತಿಗೊಳಿಸಲು ಸಾರ್ವಜನಿಕರೊಂದಿಗೆ ಶ್ರಮದಾನ ಮಾಡಿದ್ದರು. ಆ ಬಳಿಕ ಅವರ ಬಾಡಿಗೆಗೆಂದು ಬೆಂಜನಪದವು ಕರಾವಳಿ ಸೈಟ್‌ಗೆ ತೆರಳಿದ್ದರೆಂದು ತಿಳಿದುಬಂದಿದೆ. ಕಲಾಯಿಯಲ್ಲಿ ರಿಕ್ಷಾ […]

ರಾಜಕೀಯ ಲಾಭಕೋಸ್ಕರ ಜಿಲ್ಲೆಯ ಗಲಭೆಗಳಿಗೆ ರೈ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ : ಪುರಾಣಿಕ್

Tuesday, June 20th, 2017
vhp

ಮಂಗಳೂರು : ಆರ್‌ಎಸ್‌ಎಸ್ ಮುಖಂಡ ಡಾ. ಪ್ರಭಾಕರ ಭಟ್‌ರನ್ನು ಏಕವಚನದಲ್ಲಿ ಸಂಭೋದಿಸಿ 307 ಕೇಸು ದಾಖಲಿಸಿ ಎಂದು ಸಚಿವರು ಸೂಚಿಸುವ ಮೂಲಕ ಪೊಲೀಸ್ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ನಡೆಯುವ ಗಲಭೆ, ಅಹಿತಕರ ಘಟನೆಗಳಿಗೆ ಕಾಂಗ್ರೆಸ್ ನಾಯಕರು ಕುಮ್ಮಕ್ಕು ನೀಡುತ್ತಿದ್ದಾರೆ. ಆದರೆ ಅದನ್ನು ಮರೆಮಾಚಿ ಹಿಂದೂಗಳೇ ಗಲಭೆ ಸೃಷ್ಟಿಸುತ್ತಿದ್ದಾರೆ ಎಂದು ಅಪಪ್ರಚಾರ ಮಾಡಿ ಕೋಮು ಭಾವನೆ ಹಚ್ಚಲಾಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ನಡೆದ ಎಲ್ಲಾ ಗಲಭೆ ಪ್ರಕರಣಗಳನ್ನು ಸರಕಾರ ಸಿಬಿಐಗೆ ವಹಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯಾಧ್ಯಕ್ಷ […]