ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿ.ವಿ ಗೆ ಹ್ಯಾಟ್ರಿಕ್ ಪ್ರಶಸ್ತಿ

Wednesday, January 4th, 2017
Mangalore-university

ಮಂಗಳೂರು : ಚೆನ್ನೈನ ಎಸ್.ಆರ್.ಎಮ್ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಡಿ. 31ರಿಂದ ಜ. 2ರವರೆಗೆ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಅಮೋಘ ಸಾಧನೆ ತೋರಿದ ಮಂಗಳೂರು ವಿ.ವಿ ವನಿತೆಯರು ಹ್ಯಾಟ್ರಿಕ್ ಪ್ರಶಸ್ತಿ ಗಳಿಸುವಲ್ಲಿ ಸಫಲರಾಗಿದ್ದಾರೆ. ದಾಖಲೆಯ ಸತತ 13ನೇ ಬಾರಿ ಅಖಿಲ ಭಾರತ ವಿ.ವಿ ಚಾಂಪಿಯನ್‌ ಶಿಪ್‌ಗೆ ಅರ್ಹತೆ ಗಳಿಸಿದ ಮಂಗಳೂರು ವಿ.ವಿಯು ಲೀಗ್ ಹಂತದ ಪಂದ್ಯಗಳಲ್ಲಿ ತಮಿಳುನಾಡಿನ ಬಿ.ಎಸ್.ಎ.ಆರ್. ವಿ.ವಿಯನ್ನು ಹಾಗೂ ಮದ್ರಾಸ್ ವಿ.ವಿ ತಂಡಗಳನ್ನು ನೇರ ಸೆಟ್‌‌ಗಳಿಂದ ಸೋಲಿಸಿ ಅಂತಿಮ […]

ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ವಹಿಸುತ್ತಿರುವ ಕಾರ್ಯದ ಬಗ್ಗೆ ಅಮೆರಿಕಾ ಅಧ್ಯಯನ ತಂಡ ಶ್ಲಾಘನೆ

Wednesday, January 4th, 2017
SCDCC

ಮಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರ ಆರ್ಥಿಕ ಅಭಿವೃದ್ಧಿಗಾಗಿ ವಿಶೇಷವಾಗಿ ಶ್ರಮಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಕಾರ್ಯನಿರ್ವಹಣೆಯನ್ನು ಅಮೆರಿಕಾದ ಪ್ರತಿಷ್ಠಿತ ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾದ ಪ್ರಾಧ್ಯಾಪಕರು ಮತ್ತು ಅಧ್ಯಯನ ತಂಡ ಶ್ಲಾಘಿಸಿದೆ. ನಗರದ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಗೆ ಭೇಟಿ ನೀಡಿದ ಈ ಅಧ್ಯಯನ ತಂಡ, ಮೈಕ್ರೋ ಫೈನಾನ್ಸ್ ಮತ್ತು ಸ್ವಸಹಾಯ ಗುಂಪು ಯೋಜನೆಯ ಅನುಷ್ಠಾನದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ವಹಿಸುತ್ತಿರುವ ಕಾರ್ಯದ ಬಗ್ಗೆ ಅಧ್ಯಯನ ನಡೆಸಿದೆ. ಈ ಸಂದರ್ಭದಲ್ಲಿ ಮಾತನಾಡಿದ ಎಸ್‌ಸಿಡಿಸಿಸಿ […]

ಮೂರು ವರ್ಷಗಳ ಹಿಂದೆ ನಡೆದ ಕಳ್ಳತನ ಪ್ರಕರಣವನ್ನು ಭೇದಿಸಿದ ಮಂಗಳೂರು ಸಿಸಿಬಿ ಪೊಲೀಸರು

Wednesday, January 4th, 2017
jewellery-worth

ಮಂಗಳೂರು: ಮೂರು ವರ್ಷಗಳ ಹಿಂದೆ ನಡೆದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಿರುವ ಪೊಲೀಸರು, 3 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ. 2013ರ ಡಿಸೆಂಬರ್ 12ರಂದು ಬೆಳುವಾಯಿ ಗ್ರಾಮದ ಮೂಡಾಯಿಕಾಡು ನಿವಾಸಿ ಶ್ರೀವಲೇರಿಯನ್ ಅರನ್ನಾ ಎಂಬುವರ ಮನೆಯ ಹಿಂಭಾಗದ ಬಾಗಿಲನ್ನು ಮುರಿದು ದರೋಡೆ ಮಾಡಲಾಗಿತ್ತು. ಈ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಇಂದು ಪೊಲೀಸರು […]

ಕಾರು ಹಾಗೂ ಟ್ರಕ್ ಡಿಕ್ಕಿ: ನಾಲ್ವರು ಸ್ಥಳದಲ್ಲೇ ದಾರುಣ ಸಾವು

Wednesday, January 4th, 2017
Car-truck-collision

ಮಂಗಳೂರು: ಬೆಳ್ಳಂಬೆಳಗ್ಗೆ ಕಾರು ಹಾಗೂ ಟ್ರಕ್ ನಡುವೆ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ತಂದೆ, ತಾಯಿ, ಮಗ ಹಾಗೂ ಓರ್ವ ಯುವಕ ಸೇರಿದಂತೆ ಒಟ್ಟು ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಇಲ್ಲಿನ ಮಂಜೇಶ್ವರದ ಎ.ಜೆ ಆಂಗ್ಲ ಮಾಧ್ಯಮ ಶಾಲಾ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ 4ರ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕೇರಳದ ತ್ರಿಶೂರು ನಿವಾಸಿಗರಾದ ಡಾ. ರಾಮನಾರಾಯಣ ಸಿಕೆ (52) ಪತ್ನಿ ವತ್ಸಲ, ಮಗ ರಂಜಿತ್‌ (20) ಮತ್ತು […]

ಸಕ್ಕರೆ ಖಾತೆ ಸಚಿವ ಎಚ್.ಎಸ್.ಮಹಾದೇವ ಪ್ರಸಾದ್ ಸಂತಾಪ ಸಭೆ

Wednesday, January 4th, 2017
Mahadeva prasad

ಮಂಗಳೂರು : ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಜ್ಯದ ಸಹಕಾರಿ ಮತ್ತು ಸಕ್ಕರೆ ಖಾತೆ ಸಚಿವ ಎಚ್.ಎಸ್.ಮಹಾದೇವ ಪ್ರಸಾದ್ ಅವರ ನಿಧನಕ್ಕೆ  ಮಂಗಳವಾರ ಸಂತಾಪ ಸಭೆ ನಡೆಯಿತು . ಅರಣ್ಯ,ಪರಿಸರ ಹಾಗೂ ಜೀವಿಶಾಸ್ತ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮನಾಥ ರೈ ಸಹಕಾರಿ ರಂಗದ ರೈತರ ಸಮಸ್ಯೆಗಳ ಬಗ್ಗೆ ತ್ವರಿತವಾಗಿ ಸ್ಪಂದಿಸುತ್ತಿದ್ದ ಮಹಾದೇವ ಪ್ರಸಾದ್   ಜನಾನುರಾಗಿಯಾಗಿದ್ದರು . ಅವರ ನಿಧನ ಪಕ್ಷಕ್ಕೆ ಹಾಗೂ ರಾಜ್ಯದ ಜನತೆಗೆ ಅಪಾರ ನಷ್ಟ ವನ್ನುಂಟು ಮಾಡಿದೆ ಎಂದು  ಸಂತಾಪ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ರೈತರ ಸಮಸ್ಯೆಗಳ ಬಗ್ಗೆ […]

ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ ಮದನ್ ಮಾಸ್ತರ್ ಗೆ ನೂರರ ಸಂಭ್ರಮ

Tuesday, January 3rd, 2017
Madan Masthar

ಮಂಗಳೂರು: ಅಂದು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಕರೆ ನೀಡಿದ್ದ ಕ್ವಿಟ್ ಇಂಡಿಯ ಚಳವಳಿಗೆ ದೇಶದ ಯುವಕರು ತಂಡೋಪತಂಡವಾಗಿ ಓಗೊಟ್ಟರೆ, ಮಂಗಳೂರಿನ ಯುವಕನೂ ಹೋರಾಟಕ್ಕೆ ಧುಮುಕಿದ್ದರು. ಅಂದು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ ಅವರಿಗೆ ಈಗ ನೂರರ ಸಂಭ್ರಮ. ಮಾಸ್ತರಿಕೆ ಮಾಡಿಕೊಂಡಿದ್ದ ಇವರು ಇಡೀ ಊರಿಗೂ ಸಹ ಮಾಸ್ತರ್. ಹೌದು, ಕೇರಳದ ಕಾಸರಗೋಡು ಜಿಲ್ಲೆಯ ಪೆರ್ಲ ಗ್ರಾಮದ ಮದನ್ ಮಾಸ್ತರ್ ಅವರೇ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಜನರ ಪ್ರೀತಿ, ಗೌರವಕ್ಕೆ ಪಾತ್ರರಾದವರು. ಸ್ವಾತಂತ್ರ್ಯ ಹೋರಾಟದ ಬಳಿಕವೂ ಇವರ ಜನೋಪಯೋಗಿ ಕಾರ್ಯಕ್ಕೆ […]

ರಾಜ್ಯಕ್ಕೆ ವ್ಯವಸ್ಥಿತವಾಗಿ ಬೆಂಕಿ ಹಚ್ಚುವ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ: ಸತ್ಯಜಿತ್

Tuesday, January 3rd, 2017
Sathyajith

ಮಂಗಳೂರು: ರಾಜ್ಯಕ್ಕೆ ವ್ಯವಸ್ಥಿತವಾಗಿ ಬೆಂಕಿ ಹಚ್ಚುವ ಕೆಲಸವನ್ನು ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿ ಸತ್ಯಜಿತ್ ಸುರತ್ಕಲ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಣಾಜೆಯ ಕಾರ್ತಿಕ್ ಹತ್ಯೆ ಪ್ರಕರಣದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಭಾವೋದ್ವೇಗದಲ್ಲಿ ಆಡಿದ ಕೆಲವೊಂದು ಶಬ್ದಗಳನ್ನು ಹಿಡಿದುಕೊಂಡು ಕಾಂಗ್ರೆಸ್ ನಾಯಕರು ಬೊಬ್ಬೆ ಹೊಡೆಯುತ್ತಿರುವುದು ನೋಡಿದಾಗ `ದೆವ್ವದ ಬಾಯಿಯಲ್ಲಿ ಭಗವದ್ಗೀತೆ’ ಕೇಳಿದಂತ ಮಾತು ನೆನಪಾಗುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. […]

ನಳಿನ್‌‌‌‌ ಕುಮಾರ್ ಕಟೀಲ್‌‌ ನೀಡಿರುವ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Tuesday, January 3rd, 2017
congress

ಮಂಗಳೂರು: ಉಳ್ಳಾಲದಲ್ಲಿ ನಡೆದ ಪ್ರತಿಭಟನೆಯೊಂದರಲ್ಲಿ ಸಂಸದ ನಳಿನ್‌‌‌‌ ಕುಮಾರ್ ಕಟೀಲ್‌‌ ನೀಡಿರುವ ಹೇಳಿಕೆಯನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಸಂಸದ ನಳಿನ್ ಅವರ ಹೇಳಿಕೆ ಜಿಲ್ಲೆಗೆ ಕಪ್ಪು ಚುಕ್ಕೆಯಾಗಿದೆ. ಬಿಜೆಪಿಗರು ಬೆಂಕಿ ಹಚ್ಚಿದರೆ ಕಾಂಗ್ರೆಸ್ ಪಕ್ಷ ನಂದಿಸುವ ಕಾರ್ಯ ಮಾಡಲಿದೆ ಎಂದರು. ಪ್ರತಿಭಟನಾ ಸಭೆಯಲ್ಲಿ ಆಡಿದ್ದು ಸಂಸದರ ಗಿಮಿಕ್. ಯಾವುದೇ ಚುನಾವಣೆ ಬಂದಾಗಲೂ ಕೋಮುಗಲಭೆ ಹುಟ್ಟುಹಾಕುವಲ್ಲಿ […]

ಕ್ಷೇತ್ರದ ಸಂಸದನಾಗಿ ನನ್ನ ಜವಾಬ್ದಾರಿಯ ಪೂರ್ಣ ಅರಿವಿದೆ : ನಳಿನ್

Monday, January 2nd, 2017
mp-nalin

ಮಂಗಳೂರು : ಕಾರ್ತಿಕ್‌ರಾಜ್ ಹತ್ಯೆ ಪ್ರಕರಣದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಭಾನುವಾರ ಕೊಣಾಜೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಯಾವುದೇ ಪ್ರಚೋದನಾಕಾರಿ ಹೇಳಿಕೆ ನೀಡಿಲ್ಲ. ಜಿಲ್ಲೆಯ ಶಾಂತಿ ಕದಡುವ ಯಾವುದೇ ದುರುದ್ದೇಶ ನನ್ನ ಹೇಳಿಕೆಯಲ್ಲಿ ಇರಲಿಲ್ಲ. ಆದಾಗ್ಯೂ ನೋವಿನಿಂದ ಆಡಿದ ಮಾತಿನ ಭರದಲ್ಲಿ ವ್ಯಕ್ತವಾದ ಕೆಲವು ಶಬ್ದಗಳ ಬಗ್ಗೆ ಈಗಾಗಲೇ ಮಾಧ್ಯಮಗಳ ಮೂಲಕ ವಿಷಾದ ವ್ಯಕ್ತಪಡಿಸಿzನೆ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ. ಅಮಾಯಕ ಹಿಂದೂ ಯುವಕರ ಹತ್ಯೆಯಿಂದ ಜನತೆ ಆತಂಕಕ್ಕೀಡಾಗಿದ್ದಾರೆ. ಕಾರ್ತಿಕ್‌ರಾಜ್ ಹತ್ಯೆ ನಡೆದು ಎರಡು ತಿಂಗಳಾದರೂ […]

ಲೋಕಸಭಾ ಸದಸ್ಯ ಸಾಮರಸ್ಯ ಕಾಪಾಡಬೇಕು, ಬೆಂಕಿ ಹಚ್ಚಬಾರದು : ಸಚಿವ ರೈ

Monday, January 2nd, 2017
rai

ಮಂಗಳೂರು, : ಕೊಣಾಜೆಯಲ್ಲಿ  ‘ದ.ಕ ಜಿಲ್ಲೆಗೆ ಬೆಂಕಿ ಹಚ್ಚಲು ಸಿದ್ಧ’ ಎಂಬ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ದ.ಕ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಜವಾಬ್ದಾರಿಯುತ ಲೋಕಸಭಾ ಸದಸ್ಯ ಸಾಮರಸ್ಯ ಕಾಪಾಡಬೇಕು. ಚುನಾಯಿತ ಪ್ರತಿನಿಧಿಯಾಗಿ ಈ ರೀತಿಯ ಹೇಳಿಕೆ ಸಲ್ಲದು. ಈ ಬಗ್ಗೆ ಗೃಹ ಸಚಿವರಲ್ಲಿ ಸಂಪರ್ಕದಲ್ಲಿದ್ದು, ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ಅವರು ಬೆಂಕಿ ಹಚ್ಚುವಾಗ ಅದನ್ನು ಶಮನ ಮಾಡುವ ಶಕ್ತಿ ಸರಕಾರಕ್ಕಿದೆ ಎಂದು ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಠಾಣೆ ಮುಂದೆ […]