ರಾಹುಲ್, ಕೇಜ್ರಿ ವಿರುದ್ಧ ದೂರು

Monday, March 10th, 2014
Rahul-Gandhi

ನವದೆಹಲಿ: ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ ಕೇಜ್ರಿವಾಲ್ ವಿರುದ್ಧ ಭಾನುವಾರ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಆರ್‌ಎಸ್‌ಎಸ್ ಕಾರ್ಯಕರ್ತರಿಂದಲೇ ಮಹಾತ್ಮಾ ಗಾಂಧಿ ಹತ್ಯೆಯಾಯಿತು ಎಂಬ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪದಿಂದ ಕ್ರುದ್ಧಗೊಂಡಿರುವ ಬಿಜೆಪಿ ಅವರ ವಿರುದ್ಧ ಆಯೋಗಕ್ಕೆ ದೂರು ನೀಡಿದೆ. ಮಾತ್ರವಲ್ಲ ಕಾಂಗ್ರೆಸ್‌ನ ಮಾನ್ಯತೆ ರದ್ದುಮಾಡುವಂತೆ ಒತ್ತಾಯಿಸಿದೆ. ಕಾಂಗ್ರೆಸ್ ನಾಯಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕಠಿಣ […]

ಪೂಜಾರಿಗೆ ಒಲಿದ ಮತದೇವರು!

Monday, March 10th, 2014
Janardhan-Poojary

ಮಂಗಳೂರು: ಕಾಂಗ್ರೆಸ್ ಆಂತರಿಕ ಚುನಾವಣೆಯಲ್ಲಿ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಗೆಲವು ಸಾಧಿಸಿದ್ದು, ಮಂಗಳೂರು ಲೋಕಸಭೆ ಕ್ಷೇತ್ರದಿಂದ ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಭಾನುವಾರ ನಡೆದ ಆಂತರಿಕ ಚುನಾವಣೆಯಲ್ಲಿ 598 ಮತಗಳ ಪೈಕಿ 547 ಮತಗಳು ಚಲಾವಣೆಯಾಗಿದ್ದು, 7 ಮತಗಳು ಅಸಿಂಧುಗೊಂಡಿವೆ. ಈ ಪೈಕಿ ಜನಾರ್ದನ ಪೂಜಾರಿ 478 ಮತ ಪಡೆದರೆ, ಕಣಚೂರು ಮೋನು 62 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. 10 ನಿಮಿಷ ತಡವಾಗಿ ಬಂದ ಶಾಸಕ ಮೊಯಿನುದ್ದೀನ್ ಬಾವಾಗೆ ಮತ ಹಾಕುವ ಅವಕಾಶ ನೀಡಲಿಲ್ಲ. […]

ಬಿಜೆಪಿಯಲ್ಲಿ ಟಿಕೆಟ್ ಗೊಂದಲ ಮೋದಿ ಪಾಲಿಗೆ ವಾರಣಸಿ ಪಕ್ಕಾ ಅಟಲ್‌ರ ಲಖನೌ ಲಕ್ ಯಾರಿಗೆ?

Monday, March 10th, 2014
Murli-Manohar-Joshi

ನವದೆಹಲಿ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಉತ್ತರಪ್ರದೇಶದ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸುವ ಬಗೆಗಿನ ಗೊಂದಲಗಳಿಗೆ ಭಾನುವಾರ ಬಹುತೇಕ ತೆರೆ ಬಿದ್ದಿದೆ. ಕೇಂದ್ರದ ಮಾಜಿ ಸಚಿವ, ಹಾಲಿ ಸಂಸದ ಡಾ. ಮುರಳಿ ಮನೋಹರ ಜೋಶಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ‘ಪಕ್ಷದ ವರಿಷ್ಠರು ಯಾವುದೇ ನಿರ್ಧಾರ ಕೈಗೊಂಡರೂ ಅದನ್ನು ನಾನು ಪಾಲಿಸುತ್ತೇನೆ’ ಎಂದು ಅವರು ನವದೆಹಲಿಯಲ್ಲಿ ತಿಳಿಸಿದ್ದಾರೆ. 13ರ ಸಭೆಯಲ್ಲಿ ನಿರ್ಧಾರ: ಮಾ.13ರಂದು ನವದೆಹಲಿಯಲ್ಲಿ ಬಿಜೆಪಿಯ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.  […]

26 ಕೈಯಾಳುಗಳು ಅಂತಿಮ, ಲಕ್ಷ್ಮಿ, ನಿವೇದಿತ್, ನಿಲೇಕಣಿ, ರಮ್ಯಾ, ಸುರೇಶ್, ಕುಮಾರ್ ಕ್ಲಿಯರ್

Saturday, March 8th, 2014
Janardhana-poojary

ನವದೆಹಲಿ: ಕರ್ನಾಟಕದಿಂದ ಅತಿ ಹೆಚ್ಚು ಸ್ಥಾನ ನಿರೀಕ್ಷಿಸಿರುವ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ 26 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಖೈರುಗೊಳಿಸಿದೆ. ಆಂತರಿಕ ಚುನಾವಣೆ ಮೂಲಕ ಆಯ್ಕೆ ಮಾಡಬೇಕಾದ ಮಂಗಳೂರು ಮತ್ತು ಬೆಂಗಳೂರು ಉತ್ತರ ಕ್ಷೇತ್ರಗಳ ಪೈಕಿ ಮಂಗಳೂರಿಗೆ ಜನಾರ್ದನ ಪೂಜಾರಿ ಅವರನ್ನೇ ಕಣಕ್ಕಿಳಿಸಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಈ ಹಿಂದೆಯೇ ನಿರ್ಧರಿಸಿದ್ದಂತೆ ಎಲ್ಲ 9 ಹಾಲಿ ಸಂಸದರು ಟಿಕೆಟ್ ಗಿಟ್ಟಿಸಿದ್ದಾರೆ.  ಶುಕ್ರವಾರ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಸುದೀರ್ಘ ಚರ್ಚೆ ನಂತರ […]

ಲೋಕಸಮರ: ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ, 4 ಹಾಲಿ ಸಂಸದರಿಗೆ ಕೊಕ್

Saturday, March 8th, 2014
BJP

ನವದೆಹಲಿ: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿಯು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದ್ದು, ಮೊದಲ ಪಟ್ಟಿಯಲ್ಲಿ ನಾಲ್ವರು ಹಾಲಿ ಸಂಸದರಿಗೆ ಕೊಕ್ ನೀಡಲಾಗಿದೆ. ಅಭ್ಯರ್ಥಿಗಳ ಆಯ್ಕೆ ಸಂಬಂಧ ಇಂದು ದೆಹಲಿಯಲ್ಲಿ ನಡೆದ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ 20 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಲಾಯಿತು. ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಅವರು ಮೊದಲ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದರು. […]

ಕೇಜ್ರಿವಾಲ್ ಜತೆ ಡಿನ್ನರ್ ಗೆ 20 ಸಾವಿರ ರುಪಾಯಿ ಶುಲ್ಕ!

Saturday, March 8th, 2014
Arvind-Kejriwal

ಬೆಂಗಳೂರು: ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಊಟ ಮಾಡುವ ಭಾಗ್ಯ ಬೆಂಗಳೂರಿಗರಿಗೆ ಸಿಕ್ಕಿದೆ. ಆದರೆ ಅದಕ್ಕಾಗಿ ನೀವು 20 ಸಾವಿರ ರುಪಾಯಿ ಖರ್ಚು ಮಾಡಬೇಕು ಅಷ್ಟೆ. ಅರವಿಂದ್ ಕೇಜ್ರಿವಾಲ್ ಅವರು ಇದೇ ಮಾರ್ಚ್ 15ರಂದು ನಗರಕ್ಕೆ ಆಗಮಿಸುತ್ತಿದ್ದು, ಈ ವೇಳೆ ಆಪ್ ನಾಯಕರು ಪಕ್ಷದ ನಿಧಿ ಸಂಗ್ರಹಣೆಗೆ ಭೋಜನಕೂಟ ಏರ್ಪಡಿಸಿದ್ದಾರೆ. ನೀವು 20 ಸಾವಿರ ರುಪಾಯಿ ಕೊಟ್ಟರೆ, ಕೇಜ್ರಿವಾಲ್ ಜತೆ ಊಟದೊಂದಿಗೆ ಸಂದರ್ಶನ ಮಾಡಬಹುದು. ಇತ್ತಿಚೀಗಷ್ಟೆ ಎಎಪಿ […]

ಸರಕಾರಿ ಆಧಾರ್: ನಿಲೇಕಣಿ ವಿರುದ್ಧ ಬಿಜೆಪಿ ದೂರು

Saturday, March 8th, 2014
Nandan-Nilekani

ಬೆಂಗಳೂರು: ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ಸಿನ ಘೋಷಿತ ಅಭ್ಯರ್ಥಿ ನಂದನ್ ನಿಲೇಕಣಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ. ಸದ್ಯಕ್ಕೆ ‘ಆಧಾರ್’ ಯೋಜನೆಯ ಅಧ್ಯಕ್ಷರಾಗಿರುವ ನಂದನ್ ನಿಲೇಕಣಿ ಅವರು ತಮ್ಮ ಅಧಿಕಾರ ಸ್ಥಾನವನ್ನು ದುರುಪಯೋಗ ಮಾಡಿಕೊಂಡು ಕೇಂದ್ರದ ಆಧಾರ್ ಸರಕಾರಿ ಯೋಜನೆಯನ್ನು ತಮ್ಮ ಸ್ವಂತ ಕಾರ್ಯಕ್ರಮದಂತೆ ಕ್ಷೇತ್ರದಾದ್ಯಂತ ಬಿಂಬಿಸಿಕೊಳ್ಳುತ್ತಿದ್ದಾರೆ. ಇದರಿಂದ ಮತದಾರರಿಗೆ ತಪ್ಪು ಸಂದೇಶ ರವಾನೆಯಾಗುತ್ತಿದೆ ಎಂದು ದೂರಿನಲ್ಲಿ ಬಿಜೆಪಿ ಗಮನ ಸೆಳೆದಿದೆ. ಸರಕಾರಿ ಆಧಾರ್: ನಿಲೇಕಣಿ ವಿರುದ್ಧ ಬಿಜೆಪಿ ದೂರು ಮಾರ್ಚ್ 5ರಿಂದ ದೇಶಾದ್ಯಂತ […]

ಇಂದು ಮಹಿಳಾ ದಿನಾಚರಣೆಗೆ ಮೋದಿ ಜತೆ ಚಾಯ್ ಪೆ ಚರ್ಚಾ

Saturday, March 8th, 2014
Narendra-Modi

ಮಂಗಳೂರು: ವಿಶ್ವ ಮಹಿಳಾ ದಿನಾಚರಣೆ ಸಂದರ್ಭ ಮಾ.8ರಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಜತೆ 2ನೇ ಸುತ್ತಿನ ‘ಚಾಯ್ ಪೆ ಚರ್ಚಾ’ ಕಾರ್ಯಕ್ರಮ ಏರ್ಪಡಲಿದೆ. ಸಂಜೆ 4ರಿಂದ 6.30ರ ವರೆಗೆ ಏಕಕಾಲದಲ್ಲಿ ಚಹಾದೊಂದಿಗೆ ಚರ್ಚೆ ನಡೆಯಲಿದೆ. ರಾಜ್ಯದ 110 ಕೇಂದ್ರಗಳಲ್ಲಿ, ದೇಶಾದ್ಯಂತ ಒಟ್ಟು 1500 ಸ್ಥಳಗಳಲ್ಲಿ ಈ ಸಂವಾದ ನಡೆಯಲಿದೆ. ಶೇ.50 ಚರ್ಚೆ ಗ್ರಾಮೀಣ ಪ್ರದೇಶದಲ್ಲಿ ನಡೆಯುವುದು ಈ ಬಾರಿಯ ವಿಶೇಷ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಪುಲಸ್ತ್ಯ ರೈ ಗುರುವಾರ ಸುದ್ದಿಗೋಷ್ಠಿಯಲ್ಲಿ […]

ಸಿಎಂ ತವರಿಗೆ ಸುವರ್ಣ ಭಾಗ್ಯ

Saturday, March 8th, 2014
Siddaramaiah

ಮೈಸೂರು: ಮೈಸೂರು ತಾಲೂಕು ಸಿದ್ದರಾಮನಹುಂಡಿಯ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ ಒಂಬತ್ತೂವರೆ ತಿಂಗಳುಗಳಾಗಿದ್ದರೂ ಈವರೆಗೆ ಸ್ವಗ್ರಾಮಕ್ಕೆ ಭೇಟಿ ನೀಡಲು ಆಗಿಲ್ಲ. ಆದರೆ ಅಭಿವೃದ್ಧಿ ಭಾಗ್ಯ ದೊರೆತಿದೆ. ಸಿದ್ದರಾಮನಹುಂಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳನ್ನು ಸುವರ್ಣ ಗ್ರಾಮೋದಯ ಯೋಜನೆಯಲ್ಲಿ ಅಭಿವೃದ್ಧಿಪಡಿಸಲು 9.60 ಕೋಟಿ ಬಿಡುಗಡೆ ಮಾಡಲಾಗಿದೆ. ಸುವರ್ಣ ಗ್ರಾಮೋದಯ ಯೋಜನೆಯ 5ನೇ ಹಂತದಲ್ಲಿ ಮೈಸೂರು ತಾಲೂಕಿಗೆ ರಾಜ್ಯ ಸರ್ಕಾರ 6.86 ಕೋಟಿ ನಿಗದಿಪಡಿಸಿತ್ತು. ಇದಕ್ಕಾಗಿ ಒಟ್ಟು 32,845 ಜನಸಂಖ್ಯೆ ಇರುವ 16 ಗ್ರಾಮಗಳನ್ನು ಆಯ್ಕೆ ಮಾಡಲಾಗಿತ್ತು. ಈ ಪೈಕಿ ಸಿದ್ದರಾಮನಹುಂಡಿ ಹಾಗೂ […]

ಎತ್ತಿನಹೊಳೆ ವಿರೋಧಿಗಳ ಪರ ಬ್ಯಾಟಿಂಗ್!

Saturday, March 8th, 2014
U.T.-Kadar

ಮಂಗಳೂರು: ಎತ್ತಿನಹೊಳೆ ಯೋಜನೆ ಪರವಾಗಿ ಮಾತನಾಡಿಲ್ಲ. ನೆಲ, ಜಲ ಉಳಿವಿಗಾಗಿ ಹೋರಾಟ ನಡೆಸಿದ ದಕ್ಷಿಣ ಕನ್ನಡದ ಜನರನ್ನು ಸಂಘಟನೆಗಳನ್ನು ಅಭಿನಂದಿಸುತ್ತೇನೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು. ‘ಎತ್ತಿನಹೊಳೆ ಯೋಜನೆ ಪರವಾಗಿದ್ದಾರೆ’ ಎಂಬ ಆರೋಪಗಳನ್ನು ಅಲ್ಲಗಳೆದ ಯು.ಟಿ.ಖಾದರ್ ದಕ್ಷಿಣ ಕನ್ನಡ ಜಿಲ್ಲೆ ಎತ್ತಿನಹೊಳೆ  ಹೋರಾಟ ವಿರುದ್ಧ ಹೇಳಿಕೆ ನೀಡಿಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಕೋಲಾರದಲ್ಲಿ ಈ ಕುರಿತು ತಾವು ಯಾವುದೇ ವಿರುದ್ಧ ಹೇಳಿಕೆ ನೀಡಿಲ್ಲ ಎಂದು ಅಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಹತ್ತು ನಿಮಿಷಗಳ ವೀಡಿಯೋ […]