‘ರಾಜೀವ್’ ಹಂತಕರ ಬಿಡುಗಡೆ: ಫೆ. 27ಕ್ಕೆ ವಿಚಾರಣೆ
Monday, February 24th, 2014ನವದೆಹಲಿ: ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡಲು ತೀರ್ಮಾನಿಸಿದ್ದ ತಮಿಳುನಾಡು ಸರ್ಕಾರ ನಿರ್ಧಾರವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಫೆಬ್ರವರಿ 27ರಂದು ಕೈಗೆತ್ತಿಕೊಳ್ಳಲಿದೆ. ತಮಿಳುನಾಡು ಸರ್ಕಾರದ ನಿರ್ಧಾರ ಮತ್ತು ರಾಜೀವ್ ಹಂತಕರ ಗಲ್ಲು ಶಿಕ್ಷೆಯನ್ನು ಜೀವಾವಧಿಗೆ ಇಳಿಸಿದ್ದ ಸುಪ್ರೀಂಕೊರ್ಟ್ನ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ಫೆ. 27ರಂದು ಸುಪ್ರೀಂಕೋರ್ಟ್ ನಡೆಸಲಿದೆ. ನಳಿನಿ ಶ್ರೀಹರನ್ ಸೇರಿದಂತೆ ಸಂತನ್, ಮುರಗನ್ ಮತ್ತು ಪೆರಾರಿವೇಲನ್ ಅವರ […]