“ಮಾದಕದ್ರವ್ಯ ವ್ಯಸನಮುಕ್ತ ಮಂಗಳೂರು” ಜಾಥಾಕ್ಕೆ ಚಾಲನೆ

Friday, November 15th, 2024
Jatha

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ತಾಲೂಕು ಸಮಿತಿ, ಮಹಿಳಾ ಘಟಕ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರ ಹಾಗೂ ಎಲ್ಲಾ ಶಾಲಾ ಕಾಲೇಜು ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ “ಮಾದಕದ್ರವ್ಯ ವ್ಯಸನಮುಕ್ತ ಮಂಗಳೂರು” ಕಾರ್ಯಕ್ರಮದ ಉದ್ಘಾಟನೆ ಗುರುವಾರ ಸಂಜೆ ಎಸ್.ಡಿ.ಎಂ. ಕಾನೂನು ಕಾಲೇಜು ಸಭಾಂಗಣದಲ್ಲಿ ಜರುಗಿತು. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತಾಡಿದ […]

ಕನ್ನಡ ಕೇಟರಿಂಗ್ ಮಾಲಕರ ಸಂಘದಿಂದ ವಿವಿಧ ಬೇಡಿಕೆಗಳನ್ನು ಅಗ್ರಹಿಸಿ ದ.ಕ ಜಿಲ್ಲಾಧಿಕಾರಿಗೆ ಮನವಿ

Wednesday, November 13th, 2024
catering-owners-association

ಮಂಗಳೂರು ನಗರ:-ದಕ್ಷಿಣ ಕನ್ನಡ ಕೇಟರಿಂಗ್ ಮಾಲಕರ ಸಂಘ ( ರಿ) ಮಂಗಳೂರು ಇದರ ವಿವಿಧ ಬೇಡಿಕೆಗಳನ್ನು ಅಗ್ರಹಿಸಿ ದ.ಕ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಅಬ್ದುಲ್ ರಶೀದ್ ,ಗೌರವಾಧ್ಯಕ್ಷ ಸುಧಾಕರ ಕಾಮತ್ ಎಮ್ ಎ ಎಸ್ ಇಕ್ಬಾಲ್ , ಉಪಾಧ್ಯಕ್ಷ ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿ ಕರುಣಾಕರ ಪಡಿಯಾರ್ ಕೋಶಾಧಿಕಾರಿ ಪ್ರಕಾಶ್ ಲೋಬೊ , ಮಾಜಿ ಅಧ್ಯಕ್ಷ ರಾಜಗೋಪಾಲ್ ರೈ, ಅನಿಸ್ ಶೇಖ್ ಮೊಹಮ್ಮದ್, ದೀಪಕ್ ಕೋಟ್ಯಾನ್ ಸ್ಥಾಪಕ ಸದಸ್ಯರು ಬಾಲಕೃಷ್ಣ […]

ಉಪ ಚುನಾವಣೆ ಮತದಾನಕ್ಕೆ ಕೇವಲ ಎರಡು ದಿನ ಮೊದಲು ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡಿದ ಕಾಂಗ್ರೆಸ್ : ಸಂಸದ ಬ್ರಿಜೇಶ್ ಚೌಟ ಆರೋಪ

Wednesday, November 13th, 2024
ಉಪ ಚುನಾವಣೆ ಮತದಾನಕ್ಕೆ ಕೇವಲ ಎರಡು ದಿನ ಮೊದಲು ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡಿದ ಕಾಂಗ್ರೆಸ್ : ಸಂಸದ ಬ್ರಿಜೇಶ್ ಚೌಟ ಆರೋಪ

ಮಂಗಳೂರು: ಮತಕ್ಕಾಗಿ ಜನರನ್ನು ಓಲೈಕೆ ಮಾಡುವುದೇ ಕಾಂಗ್ರೆಸ್‌ನ ಏಕೈಕ ಅಜೆಂಡಾ. ಹೀಗಾಗಿ, ಉಪ ಚುನಾವಣೆ ಮತದಾನಕ್ಕೆ ಕೇವಲ ಎರಡು ದಿನ ಬಾಕಿಯಿದ್ದಾಗ ಸಿದ್ದರಾಮಯ್ಯ ಸರ್ಕಾರ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡಿ ಮತದಾರರನ್ನು ಸೆಳೆಯಲು ಯತ್ನಿಸಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ಶಿಗ್ಗಾಂವಿ ಸಹಿತ ಉಪ ಚುನಾವಣೆ ನಡೆಯುವ ವಿಧಾನಸಭಾ ಕ್ಷೇತ್ರಗಳಲ್ಲಿ ಕೆಲವು ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆ ಕಂತಿನ ಹಣ ಖಾತೆಗೆ ಬಿಡುಗಡೆ ಮಾಡಿರುವುದಕ್ಕೆ ಪ್ರತಿಕ್ರಿಯಿಸಿರುವ ಕ್ಯಾ. ಚೌಟ ಅವರು, ಇದು ಕಾಂಗ್ರೆಸ್‌ ಸರ್ಕಾರವು […]

ಚುನಾವಣಾ ನೀತಿ ಸಂಹಿತೆ : ಪಿಲಿಕುಳ ಕಂಬಳ ಮುಂದೂಡಿಕೆ

Wednesday, November 13th, 2024
pilikula-kamabala

ಮಂಗಳೂರು : ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನಲೆ ಜಿಲ್ಲಾಡಳಿತ ವತಿಯಿಂದ ನವೆಂಬರ್ 17ಮತ್ತು 18ರಂದು ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಕಂಬಳೋತ್ಸವವನ್ನು ಮುಂದೂಡಲಾಗಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆದೇಶದನ್ವಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಘೋಷಿಸಿದ್ದು, ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನವೆಂಬರ್ 16ರಿಂದ 26ರವರೆಗೆ ಜಾರಿಯಲ್ಲಿರುತ್ತದೆ. ಅದರಂತೆ, ಮೂಡುಶೆಡ್ಡೆ ಗ್ರಾಮ ಪಂಚಾಯತ್ […]

ಕೋರ್ಟ್ ಆದೇಶ ಉದ್ದೇಶಪೂರ್ವಕ ಉಲ್ಲಂಘನೆ: ನ್ಯಾಯಾಂಗ ನಿಂದನಾ ಅರ್ಜಿ ದಾಖಲಿಸಿಕೊಂಡ ನ್ಯಾಯಾಲಯ!

Monday, November 11th, 2024
court

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ಚುನಾವಣೆ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದೆ. ಈ ಪ್ರತಿಷ್ಠಿತ ಸಂಸ್ಥೆಯ ಚುನಾವಣೆಯ ಜವಾಬ್ದಾರಿ ಹೊತ್ತ ಚುನಾವಣಾಧಿಕಾರಿಯ ನಿರ್ಧಾರ ಈಗ ಕುತೂಹಲದ ಕೇಂದ್ರ ಬಿಂದುವಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷರಾದ ಪ್ರಕಾಶ್ ನಾಯಕ್ ಅವರಿಗೆ ಮತದಾನದ ಹಕ್ಕು ಮತ್ತು ಸ್ಪರ್ಧಿಸುವ ಹಕ್ಕನ್ನು ನಿರಾಕರಿಸಲಾಗಿತ್ತು. ಈ ಷರಾ ಕಾನೂನುಬಾಹಿರವಾಗಿದ್ದು, ಈ ಷರಾವನ್ನು ತೆಗೆದುಹಾಕುವಂತೆ ಕೋರಿ ಪ್ರಕಾಶ್ ನಾಯಕ್, ಸಂಘದ ಜವಾಬ್ದಾರಿಯುತ ಪ್ರತಿನಿಧಿಗೆ ಮತ್ತು […]

ನ.16: 71ನೇ ಅಖಿಲ ಭಾರತ ಸಹಕಾರ ಸಪ್ತಾಹ : ಡಾ.ಎಂ.ಎನ್. ರಾಜೇಂದ್ರ ಕುಮಾರ್

Monday, November 11th, 2024
sahakari-saptaha

ಮಂಗಳೂರು: “71ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು “ವಿಕಸಿತ ಭಾರತ” ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಎಂಬ ಧೈಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಅದೇ ರೀತಿಯಲ್ಲಿ ರಾಜ್ಯಮಟ್ಟದ ಏಳು ದಿನದ ಕಾರ್ಯಕ್ರಮಗಳು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆಸಲಾಗುತ್ತಿದೆ. ಮಂಗಳೂರಿನಲ್ಲಿ ನವೆಂಬರ್ 16 ರಂದು “ಉದ್ಯಮಶೀಲತೆ, ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಸಹಕಾರ ಸಂಸ್ಥೆಗಳ ಪಾತ್ರ” ಎಂಬ ವಿಷಯದೊಂದಿಗೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಪೂರ್ವಾಹ್ನ 10.00 ಗಂಟೆಗೆ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜನೆಯಾಗಿದೆ“ ಎಂದು ಎಸ್ ಸಿಡಿಸಿಸಿ ಬ್ಯಾಂಕ್ […]

“ರಂಗಚಾವಡಿ” ವರ್ಷದ ಹಬ್ಬ, ಹಿರಿಯ ರಂಗಕರ್ಮಿ ಲಯನ್ ಕಿಶೋರ್ ಡಿ.ಶೆಟ್ಟಿ ಅವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

Monday, November 11th, 2024
Kishor-D-Shetty

ಸುರತ್ಕಲ್: “ರಂಗಚಾವಡಿ” ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಶನ್ ಸುರತ್ಕಲ್ ಇದರ ಸಹಯೋಗದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು. ಚಲನಚಿತ್ರ ನಿರ್ಮಾಪಕ ಡಾ.ಸಂಜೀವ ದಂಡೆಕೇರಿ ದೀಪ ಪ್ರಜ್ವಲನೆಗೈದರು. ಬಳಿಕ ಮಾತಾಡಿದ ಅವರು, ರಂಗಚಾವಡಿ ಪ್ರಶಸ್ತಿ ಸ್ವೀಕರಿಸುತ್ತಿರುವ ಹಿರಿಯ ರಂಗಕರ್ಮಿ ಕಿಶೋರ್ ಡಿ. ಶೆಟ್ಟಿ ಅವರದು ಸಾವಿರಾರು ಕಲಾವಿದರಿಗೆ ಸ್ಫೂರ್ತಿ ತುಂಬುವ ವ್ಯಕ್ತಿತ್ವ. ಅವರನ್ನು ಪಡೆದಿರುವುದು ನಮ್ಮ ತುಳುನಾಡಿನ ಸಮಸ್ತ ಕಲಾವಿದರ ಪುಣ್ಯ. ಬಡಹೆಣ್ಣುಮಕ್ಕಳ ಮದುವೆ, ಬಡಕುಟುಂಬದ ಆರ್ಥಿಕ ಸಂಕಷ್ಟಕ್ಕೆ […]

ಒನಕೆ ಓಬವ್ವರ ಸಾಹಸ, ಧೈರ್ಯ ಮಾದರಿ :- ಮಮತಾ ಗಟ್ಟಿ

Monday, November 11th, 2024
Mamatha-gatty-obuva

ಮಂಗಳೂರು : ವೀರ ವನಿತೆ ಒನಕೆ ಓಬವ್ವಳು ಸಾಮಾನ್ಯ ಮಹಿಳೆಯಾಗಿದ್ದರೂ, ಅವಳ ನಾಡ ಪ್ರೇಮದಿಂದ, ಧೈರ್ಯ, ಸಾಹಸ ಇಂದಿನ ಮಹಿಳೆಯರಿಗೆ ಮಾದರಿಯಾಗಿದ್ದು, ಅವರ ಸಾಧನೆಯನ್ನು ನಾವೆಲ್ಲರೂ ತಿಳಿದುಕೊಂಡಿರಬೇಕು ಎಂದು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು. ಅವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕುದ್ರೋಳಿ ನಾರಾಯಣಗುರು ಪಿಯು ಕಾಲೇಜಿನಲ್ಲಿ ನಡೆದ ವೀರರಾಣಿ ಒನಕೆ ಓಬವ್ವ […]

ಜೈನ ಸಾಹಿತಿ ಬಂಟ್ವಾಳ ಇರ್ವತ್ತೂರು ಬೀಡಿನ ಶ್ರೀಮತಿ ವಿಜಯ ಜಿ. ಜೈನ್ ನಿಧನ

Monday, November 11th, 2024
Vijaya G jain

ಬಂಟ್ವಾಳ: ಸುರ್ಯ ಗುತ್ತು ಮನೆತನದ ಹಿರಿಯರಾದ ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ ಶ್ರೀಮತಿ ವಿಜಯ ಜಿ. ಜೈನ್ ಅವರು ಇಂದು ಸ್ವಗ್ರಹದಲ್ಲಿ ನಿಧನ ಹೊಂದಿದರು. ಅವರು ಮಕ್ಕಳಾದ ಹಿರಿಯ ಪತ್ರಕರ್ತ ಐ.ಬಿ. ಸಂದೀಪ್ ಕುಮಾರ್ ಇರ್ವತ್ತೂರು ಮಾಗಣೆ ಗುರಿಕಾರ ಐ.ಬಿ. ಸಂಜೀತ್ ಕುಮಾರ್ ಮತ್ತು ಮಿಜಾರು ಅನಂತಮ್ ಮನೆಯ ಶಾಲಿನಿ ನವೀನ್ ಕುಮಾರ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಅವರು ಜೈನ ‘ಭಕ್ತಿ ಸುಮನಾಂಜಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಡೆ […]

ಸಂಬಂಧಿ ಹುಡುಗಿಯ ಮನೆಗೆ ರಾತ್ರಿ ವೇಳೆ ಬಂದ ಯುವಕನಿಗೆ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ದುಷ್ಕರ್ಮಿಗಳ ತಂಡ

Sunday, November 10th, 2024
Mustafa-Bengre

ಮಂಗಳೂರು : ಸಜೀಪನಡು ಗ್ರಾಮದ ಕಂಚಿನಡ್ಕಪದವಿನಲ್ಲಿರುವ ದೂರದ ಸಂಬಂಧಿ ಹುಡುಗಿಯೊಬ್ಬಳ ಮನೆಗೆ ರಾತ್ರಿ ವೇಳೆ ಭೇಟಿಯಾಗಲು ಬಂದ ಯುವಕನೊಬ್ಬನನ್ನು ತಂಡವೊಂದು ಕಂಬಕ್ಕೆ ಕಟ್ಟಿಹಾಕಿ ಅಮಾನವೀಯವಾಗಿ ಥಳಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಗೊಳಗಾದ ಯುವಕನನ್ನು ಬೆಂಗರೆಯ ಅಬ್ದುಲ್ ರಜಾಕ್‍ ಎಂಬವರ ಮಗ ಮಹಮ್ಮದ್‍ ಮುಸ್ತಾಪ(21) ಎಂದು ಗುರುತಿಸಲಾಗಿದೆ. ಯುವಕನಿಗೆ ಹಲ್ಲೆನಡೆಸಿದ ಆರೋಪಿಗಳನ್ನು ಮಹಮ್ಮದ್‌ ಸಪ್ವಾನ್ (25), ಮಹಮ್ಮದ್‌ ರಿಜ್ವಾನ್‌ (25), ಇರ್ಪಾನ್‍(27), ಅನೀಸ್‍ ಅಹಮ್ಮದ್‍ (19), ನಾಸೀರ್‍ (27), ಶಾಕೀರ್‍ (18) ಎಂದು ಗುರುತಿಸಲಾಗಿದ್ದು ಹಲ್ಲೆಗೊಳಗಾದ ಯುವಕ […]