ಬಿಜೆಪಿಯವರು ಕೆಲಸ ಮಾಡದೇ ಇದ್ದರು ಮತ ಹಾಕುತ್ತಿದ್ದೀರಿ : ಡಿಸಿಎಂ ಡಿ.ಕೆ.ಶಿವಕುಮಾರ್

Tuesday, June 25th, 2024
ಬಿಜೆಪಿಯವರು ಕೆಲಸ ಮಾಡದೇ ಇದ್ದರು ಮತ ಹಾಕುತ್ತಿದ್ದೀರಿ : ಡಿಸಿಎಂ ಡಿ.ಕೆ.ಶಿವಕುಮಾರ್

ಮಂಗಳೂರು : “ಕುಮಾರಸ್ವಾಮಿ ಅವರು ಚನ್ನಪಟ್ಟಣ ನೋಡುವುದಕ್ಕೂ ಮೊದಲೇ ನಾನು ನೋಡಿದ್ದೇನೆ. ಅವರು ತಡವಾಗಿ ರಾಜಕೀಯಕ್ಕೆ ಬಂದವರು. ಅವರಿಗಿಂತ 10 ವರ್ಷ ಮೊದಲೇ ನನಗೆ ಚನ್ನಪಟ್ಟಣ ಗೊತ್ತು. ನಾನು ಅದೇ ಜಿಲ್ಲೆಯವನು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಮಂಗಳೂರಿನ ಬಜಪೆ ವಿಮಾನ ನಿಲ್ದಾಣ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಚನ್ನಪಟ್ಟಣಕ್ಕೆ ನೀವು ಏನೂ ಮಾಡಿಲ್ಲ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, […]

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Tuesday, June 25th, 2024
ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

ಉಜಿರೆ : ಇಲ್ಲಿನ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಶ್ರೀ.ಎ.ವಿ ಶೆಟ್ಟಿ ಅವರು ಜೂ.25 ರಂದು 2024-25ರ ಶೈಕ್ಷಣಿಕ ವರ್ಷದ ಶಾಲಾ ಸಂಘಗಳನ್ನು ಉದ್ಘಾಟಿಸಿದರು. ಬಳಿಕ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಕಲಿಕೆಯು ಕಲ್ಪನೆಯೊಂದಿಗೆ ಸಾಗಬೇಕು ಹಾಗೂ ಶಿಕ್ಷಣದ ಜತೆಗೆ ವಿದ್ಯಾರ್ಥಿಗಳು ಇತರ ಪೂರಕ ಚಟುವಟಿಕೆಗಳ ಮೂಲಕ ಜ್ಞಾನ ಗಳಿಸಬೇಕು ಹಾಗೂ ಧರ್ಮಸ್ಥಳದ ಸಮಾಜಮುಖಿ ಕಾರ್ಯಗಳಿಂದ ನಾವು ಉತ್ತಮ ಮೌಲ್ಯಗಳನ್ನು ಕಲಿಯಲು ಸಾಧ್ಯ ಎಂದು ಎಂದು ಹೇಳಿದರು. ಶಾಲೆಯ […]

ಮಿಥುನ ಕೊಡೆತ್ತೂರ್‌ಗೆ ‘ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿ

Tuesday, June 25th, 2024
Mithun-Kodethuru

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ಹೊಸದಿಗಂತ ದಿನಪತ್ರಿಕೆಯ ಮೂಲ್ಕಿ ವರದಿಗಾರ ಮಿಥುನ ಕೊಡೆತ್ತೂರ್‌ ಆಯ್ಕೆಯಾಗಿದ್ದಾರೆ. ಹೊಸದಿಗಂತ ಪತ್ರಿಕೆಯಲ್ಲಿ 2023 ನವೆಂಬರ್‌ 7ರಂದು ಪ್ರಕಟವಾದ ಮಿಥುನ್‌ ಅವರ “‌ಬಾರಾಡಿಯಲ್ಲಿ ಬೆಳೆದಿದೆ 840 ತಳಿ ಭತ್ತʼ’ ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು 5,001 ರು., ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ಒಳಗೊಂಡಿದೆ. ಡೆಕ್ಕನ್‌ ಹೆರಾಲ್ಡ್‌ ಪತ್ರಿಕೆಯ ಮಂಗಳೂರು ಸುದ್ದಿವಿಭಾಗ ಮುಖ್ಯಸ್ಥ ಹರ್ಷ ಮತ್ತು ಆಳ್ವಾಸ್‌ ಪತ್ರಿಕೋದ್ಯಮ ವಿಭಾಗದ […]

ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಯಲು ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳಿಂದ ಜಿಲ್ಲಾಧಿಕಾರಿಗಳ ಭೇಟಿ

Tuesday, June 25th, 2024
catholic sabha

ಮಂಗಳೂರು : ಪಾವೂರು ಉಳಿಯ ದ್ವೀಪದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಗಟ್ಟಬೇಕು ಹಾಗೂ ಅಲ್ಲಿನ ದ್ವೀಪವಾಸಿಗಳ ಬದುಕನ್ನು ರಕ್ಷಿಸಬೇಕೆಂದು ಒತ್ತಾಯಿಸಿ ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ್(ರಿ) ಹಾಗೂ ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆಯ ಆಶ್ರಯದಲ್ಲಿ ಇಂದು(24-06-2024) ದ.ಕ.ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿಯನ್ನು ಅರ್ಪಿಸಲಾಯಿತು. ಉಳ್ಳಾಲ ತಾಲೂಕು, ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಪಾವೂರು ಉಳಿಯ ದ್ವೀಪ(ಕುದ್ರು) ದಲ್ಲಿ ಯಾವುದೇ ತರಹದ ಮರಳುಗಾರಿಕೆಗೆ ಅನುಮತಿ ಇಲ್ಲದಿದ್ದರೂ ಬಲಾಢ್ಯ ಮರಳು ಮಾಫಿಯಾ ಅಕ್ರಮವಾಗಿ ಮರಳುಗಾರಿಕೆ ವ್ಯಾಪಕವಾಗಿ […]

ಸಹಕಾರಿ ಕ್ಷೇತ್ರದ ಪ್ರಗತಿ, ಸಾಧನೆ ಶ್ಲಾಘನೀಯವಾಗಿದೆ : ಡಿ. ವೀರೇಂದ್ರ ಹೆಗ್ಗಡೆ

Tuesday, June 25th, 2024
Sahakari

ಉಜಿರೆ: ಪರಸ್ಪರ ಪ್ರೀತಿ-ವಿಶ್ವಾಸ, ನಂಬಿಕೆಯಿಂದ ವ್ಯವಹಾರ ಮಾಡುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರದಲ್ಲಿ ಸಹಕಾರಿ ಸಂಘಗಳಲ್ಲಿ ಶೇ. ನೂರು ಸಾಲ ವಸೂಲಾತಿ ಆಗುತ್ತಿದ್ದು ಸಹಕಾರಿ ಕ್ಷೇತ್ರದ ಪ್ರಗತಿ, ಸಾಧನೆ ಶ್ಲಾಘನೀಯವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳ ಗ್ರಾಮದ ಕಲ್ಲೇರಿಯಲ್ಲಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಉನ್ನತಿ” ಉದ್ಘಾಟಿಸಿ ಶುಭ ಹಾರೈಸಿದರು. ಸಮಾಜದ ಎಲ್ಲಾ ಸ್ತರದ ಜನರು ಸಹಕಾರಿ ರಂಗದಲ್ಲಿ ಸಕ್ರಿಯವಾಗಿ ಭಾಗವಹಿಸಿ ಸಮಾಜದ […]

ಫಿಶ್ ಕಬಾಬ್, ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರೆಸಿದರೆ ಜೀವಾವಧಿ ಜೈಲುಶಿಕ್ಷೆ ಹಾಗು 10 ಲಕ್ಷದವರೆಗೆ ದಂಡ

Tuesday, June 25th, 2024
fish-fry

ಬೆಂಗಳೂರು : ಫಿಶ್ ಕಬಾಬ್, ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ಇಂತಹ ಆಹಾರಗಳನ್ನು ತಿನ್ನುವ ವಿದ್ಯಾರ್ಥಿಗಳು, ಯುವ ಸಮುದಾಯ ಕ್ರಮೇಣ ಸಕ್ಕರೆಕಾಯಿಲೆ, ಬಿಪಿ, ಕಾನ್ಸರ್ ಮೊದಲಾದ ರೋಗಗಳಿಗೆ ತುತ್ತಾಗುವುದು ಖಚಿತಗೊಂಡಿದೆ. ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನ ನಿಷೇಧಿಸಲಾಗಿತ್ತು. ಇದೇ ವೇಳೆ ಚಿಕನ್ ಕಬಾಬ್ […]

“ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ” ವಚನ ಸ್ವೀಕರಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

Monday, June 24th, 2024
Brijesh Chowta

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯರಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸೋಮವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು. ಸೋಮವಾರ ಲೋಕಸಭೆಯಲ್ಲಿ ಅವರು ಕನ್ನಡದಲ್ಲಿ ಮಾಡಿದ ಪ್ರಮಾಣವಚನದಲ್ಲಿ ತುಳುನಾಡಿನ ದೈವ ದೇವರನ್ನು ಸ್ಮರಿಸಿದ್ದು ವಿಶೇಷವಾಗಿತ್ತು. “ನಾನು ಕ್ಯಾಪ್ಟನ್ ಬ್ರಿಜೇಶ್ ಚೌಟ ಲೋಕಸಭೆಯ ಸದಸ್ಯನಾಗಿ ಚುನಾಯಿತನಾದವನಾಗಿ ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ದೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದೂ, ಭಾರತದ ಸಾರ್ವಭೌಮತ್ವವನ್ನು ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದೂ ಮತ್ತು ನಾನು ಈಗ ವಹಿಸಿಕೊಳ್ಳಲಿರುವ ಕರ್ತವ್ಯವನ್ನು […]

ಕೋಟಿ ಹಣ ಇರಬಹುದು ಎಂದು ಗೋಣಿ ಚೀಲ ತಂದಿದ್ದ ಕಳ್ಳರು

Monday, June 24th, 2024
Ulaibettu

ಮಂಗಳೂರು : ಉಳಾಯಿಬೆಟ್ಟು ಪೆರ್ಮಂಕಿಯಲ್ಲಿ ಕಲ್ಲು ಕೋರೆ ಉದ್ಯಮಿ ಪದ್ಮನಾಭ ಕೋಟ್ಯಾನ್‌ ಮನೆಗೆ ನುಗ್ಗಿದ್ದ ದರೋಡೆಕೋರರು ಕೋಟ್ಯಂತರ ಮೌಲ್ಯದ ನಗದು ಮತ್ತು ಚಿನ್ನಾಭರಣ ಇರಬಹುದು ಎಂಬ ಲೆಕ್ಕ ಹಾಕಿದ್ದ ದರೋಡೆಕೋರರು ಅದನ್ನು ಹೊತ್ತೂಯ್ಯಲು ಗೋಣಿ ಚೀಲ ತಂದಿದ್ದರು ಎಂಬ ಅಂಶ ತಿಳಿದುಬಂದಿದೆ.  ಆದರೆ ದರೋಡೆಕೋರರು ನಿರೀಕ್ಷಿದಷ್ಟು ನಗದು ಹಣ ಸಿಗಲಿಲ್ಲ ಎನ್ನಲಾಗುತ್ತಿದೆ. ಕೃತ್ಯದ ಸಂದರ್ಭದಲ್ಲಿ ಮನೆಯವರನ್ನು ಪದೇ ಪದೆ ಹಣ ಎಲ್ಲಿದೆ ಎಂದು ಪ್ರಶ್ನಿಸಿದ್ದು ಯಜಮಾನ ಪದ್ಮನಾಭ ಕೋಟ್ಯಾನ್ ಮೇಲೆ ಅದೇ ಕಾರಣಕ್ಕೆ ಅರ್ಧ ಗಂಟೆ ಕಾಲ ಹಲ್ಲೆ […]

ದ್ವಿತೀಯ ಪಿ.ಯು.ಸಿ. ಪರೀಕ್ಷೆ-3 ನಿಷೇಧಾಜ್ಞೆ ಆದೇಶ

Monday, June 24th, 2024
puc-exam

ಮಂಗಳೂರು : 2024ನೇ ಸಾಲಿನ ದ್ವಿತೀಯ ಪಿ.ಯು.ಸಿ. ಪರೀಕ್ಷೆ-3 ನಡೆಯಲಿರುವ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಜೂನ್ 24 ರಿಂದ ಜುಲೈ 5 ರವರೆಗೆ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ವಿಧಿಸಿ, ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ, ಉಪ ಪೊಲೀಸ್ ಆಯುಕ್ತ ಸಿದ್ಧಾರ್ಥ್ ಗೋಯಲ್ ಅವರು ಆದೇಶಿಸಿದ್ದಾರೆ. ಈ ಅವಧಿಯಲ್ಲಿ […]

ಕನ್ನಡದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಂಸದ ಬಸವರಾಜ ಬೊಮ್ಮಾಯಿ

Monday, June 24th, 2024
basavaraj bommai

ದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದರಾಗಿ ಬಸವರಾಜ ಬೊಮ್ಮಾಯಿಯವರು ಕನ್ನಡದಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ಬೀಕರಿಸಿದರು. ನೂತನ ಸಂಸತ್ ಭವನದಲ್ಲಿ ನಡೆದ ನೂತನ ಸಂಸದರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಹಾವೇರಿ ಗದಗ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭೆಯ ಹಂಗಾಮಿ ಸಭಾಧ್ಯಕ್ಷ ಭತೃಹರಿ ಮಹತಾಭ್ ಪ್ರಮಾಣ ವಚನ ಬೊಧಿಸಿದರು.