ಕೇಂದ್ರ ಸರ್ಕಾರದಿಂದ ಚಾರ್ಮಾಡಿ ಘಾಟ್‌ ಹೆದ್ದಾರಿ ದ್ವಿಪಥಗೊಳಿಸಲು 343.74 ಕೋಟಿ ರೂ. ಬಿಡುಗಡೆ: ಸಂಸದ ಕ್ಯಾ. ಚೌಟ

Saturday, November 9th, 2024
Charmadi-Ghat

ಮಂಗಳೂರು: ಚಾರ್ಮಾಡಿ ಘಾಟ್‌ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 343.74 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಮಂಗಳೂರಿನಿಂದ ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯಲ್ಲಿ 75 ಕಿ.ಮೀ ನಿಂದ 86.20 ಕಿ.ಮೀ. ಅಂತರದವರೆಗೆ ಅಭಿವೃದ್ದಿಯಾಗಲಿದೆ. ಆ ಮೂಲಕ ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಯು ದ್ವಿಪಥವಾಗಿ ಅಗಲೀಕರಣಗೊಳ್ಳಲಿದೆ. ಈ […]

ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ವಿಧ್ಯಾರ್ಥಿನಿ ಸಾವು, ಸಹೋದರಿಗೆ ಗಂಭೀರ ಗಾಯ

Saturday, November 9th, 2024
Rachana-Sullia

ಸುಳ್ಯ : ಸ್ಕೂಟರ್ ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ನಲ್ಲಿದ್ದ ವಿಧ್ಯಾರ್ಥಿನಿ ಸಾವನಪ್ಪಿದ ಘಟನೆ ಸುಳ್ಯದ ಪರಿವಾರಕಾನ -ಉಬರಡ್ಕ ರಸ್ತೆಯ ಸೂಂತೋಡು ಎಂಬಲ್ಲಿ ಸಂಭವಿಸಿದೆ. ಮೃತರನ್ನು ಪುತ್ತೂರಿನ ಖಾಸಗಿ ಕಾಲೇಜಿನ ದ್ವಿತೀಯ ಪದವಿ ವಿದ್ಯಾರ್ಥಿನಿ, ಉಬರಡ್ಕ ಮಿತ್ತೂರು ಗ್ರಾಮದ ನಾರಾಯಣ ಕಾಡುತೋಟ ಎಂಬವರ ಪುತ್ರಿ ರಚನಾ (20) ಎಂದು ಗುರುತಿಸಲಾಗಿದೆ. ಆಕೆಯ ಸಹೋದರಿ ಸಹ ಸವಾರೆಯಾಗಿದ್ದ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಹತ್ತನೇ ತರಗತಿ ವಿದ್ಯಾರ್ಥಿನಿ ಅನನ್ಯ (16) ಎಂಬವರು […]

“ವಾಗೊಂಚೊ ಖೆಳ್” ನೂತನ ಕೊಂಕಣಿ ಚಿತ್ರದ ಮುಹೂರ್ತ, ಪೋಸ್ಟರ್ ರಿಲೀಸ್

Saturday, November 9th, 2024
Vangoche-khel

ಮಂಗಳೂರು: ಪ್ರವೀಣ್‌ ಫೆರ್ನಾಂಡಿಸ್ ಇವರ ಸನ್ ಶೈನ್ ಕ್ರಿಯೇಷನ್ಸ್ ನಿರ್ಮಾಣ ಸಂಸ್ಥೆಯ ಚೊಚ್ಚಲ ನಿರ್ಮಾಣದಲ್ಲಿ ತಯಾರಾಗುತ್ತಿರುವ “ವಾಗೊಂಚೊ ಖೆಳ್” ಕೊಂಕಣಿ ಚಲನಚಿತ್ರದ ಮುಹೂರ್ತ ಮತ್ತು ಪೋಸ್ಟರ್ ರಿಲೀಸ್ ಕಾರ್ಯಕ್ರಮ ಶುಕ್ರವಾರ ಸಂಜೆ ಕುಲಶೇಖರದ ಹೋಲಿ ಕ್ರಾಸ್ ಚರ್ಚ್ ಮಿನಿ ಹಾಲ್ ನಲ್ಲಿ ಜರುಗಿತು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಚಿತ್ರದ ನಿರ್ದೇಶಕ ಅರ್ವಿನ್ ಲೋಬೊ ಅವರು, ”ಚಿತ್ರೀಕರಣ ಇದೇ ಬರುವ ನವೆಂಬರ್ 11ರಿಂದ ಶುರುವಾಗಲಿದ್ದು ಮಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಾದ ಬಿಕರ್ನಕಟ್ಟೆ, ಶಕ್ತಿನಗರ, ಮೂಡುಶೆಡ್ಡೆ, ವಾಮಂಜೂರು, ವಲೆನ್ಸಿಯ, ಬೈತುರ್ಲಿ, […]

ಶ್ರೀನಿವಾಸ್ ಇಂದಾಜೆಗೆ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ!

Saturday, November 9th, 2024
Srinivas-Indaje

ಮಂಗಳೂರು: ನವ ದೆಹಲಿಯ ಪಬ್ಲಿಕ್ ರಿಲೇಶನ್ ಕೌನ್ಸಿಲ್ ಒಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಕೇಂದ್ರ ವಿದ್ಯುತ್ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯದ ರಾಜ್ಯ ಸಚಿವ ಶ್ರೀಪಾದ್ ಎಸ್ಸೋ ನಾಯಕ್ ಪ್ರದಾನ ಮಾಡಿದರು. ಮಂಗಳೂರು ನಗರದ ಹೋಟೆಲ್ ಮೋತಿಮಹಲ್ ನಲ್ಲಿ ಪಬ್ಲಿಕ್ ರಿಲೇಶನ್ ಸೊಸೈಟಿ ಒಫ್ ಇಂಡಿಯಾ ಸಂಸ್ಥೆಯ ವಿಶ್ವ ಸ0ವಹನ ಪ್ರಶಸ್ತಿ […]

ಯಸ್ ಬಿ ಗ್ರೂಪ್ಸ್ – ಪಿಲಿಪಂಜ ತುಳು ಸಿನಿಮಾ ಕ್ಕೆ ಮುಹೂರ್ತ

Friday, November 8th, 2024
Pilipanja

ಮಂಗಳೂರು: ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ನಡಿ ತಯಾರಾಗಲಿರುವ ಪಿಲಿಪಂಜ ಚಲನಚಿತ್ರಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವೇದಮೂರ್ತಿ ಶ್ರೀ ಅನಂತಪ್ರಸಾದ ಅಸ್ರಣ್ಣನವರ ಆಶಿರ್ವಚನದ ಮೂಲಕ ನಡೆಯಿತು. ತುಳುರಂಗಭೂಮಿ ಹಾಗೂ ಚಲನಚಿತ್ರದ ನಿರ್ದೇಶಕ, ನಿರ್ಮಾಪಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು ಕ್ಯಾಮೆರಾ ಚಾಲನೆ ಮಾಡಿದರು. ಉಮಾನಾಥ ಪೂಜಾರಿ ಚಿತ್ರಕ್ಕೆ ಕ್ಲಾಪ್ ಮಾಡಿದರು. ಚಿತ್ರದ ನಿರ್ಮಾಪಕ ಪ್ರತೀಕ್ ಪೂಜಾರಿ, ನಿರ್ದೇಶಕ ಭರತ್ ಶೆಟ್ಟಿ, ಎಕ್ಸಿಕ್ಯುಟಿವ್ ಪ್ರೊಡ್ಯುಸರ್ ರಮೇಶ್ ರೈ ಕುಕ್ಕುವಳ್ಳಿ, ಧರ್ಮದೈವ ಚಿತ್ರದ […]

ಬಾಂಗ್ಲಾದ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ದ ಧ್ವನಿ ಎತ್ತದ ,ಕಾಂಗ್ರೆಸ್ ಎಡಪಕ್ಷಗಳಿಗೆ ಪ್ಯಾಲೆಸ್ತೇನ್ ಬೇಗ ಕಾಣುತ್ತದೆ; ಡಾ.ಭರತ್ ಶೆಟ್ಟಿ ವೈ

Friday, November 8th, 2024
Bharath-Y-Shetty

ಮಂಗಳೂರು : ಪ್ಯಾಲಸ್ತೇನ್ ಪರ ಹೋರಾಟ ಮಾಡುವ ಮೊದಲು ಇಸ್ರೇಲ್ ಮೇಲೆ ಉಗ್ರರು ನಡೆಸಿದ ನರಮೇಧ, ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುವ ದೌರ್ಜನ್ಯದ ಬಗ್ಗೆಯೂ ಕಾಂಗ್ರೆಸ್, ಎಡಪಕ್ಷಗಳು ಕನಿಕರ ತೋರಿ ಖಂಡಿಸುವ ಕೆಲಸ ಮಾಡಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಛಾಟಿ ಬೀಸಿದ್ದಾರೆ. ಬಾಂಗ್ಲಾ ದೇಶದಲ್ಲಿ ಹಿಂದೂಗಳನ್ನು ಹತ್ಯೆ ಮಾಡಿ ಅವರ ಆಸ್ತಿ ,ಮನೆಗೆ ಬೆಂಕಿ ಹಾಕಿದಾಗಲೂ ಈ ಎಡ ಪಕ್ಷಗಳಿಗೆ ಕನಿಕರ ಬಂದಿಲ್ಲ.ಮೌನವಾಗಿ ವೀಕ್ಷಿಸಿ ಸಂಭ್ರಮಿಸುತ್ತಿದ್ದಾರೆ. ರೈತರ ಮೇಲೆ ,ದೇಶದ ಜನರನ್ನು ಬೀದಿಗೆ ತಳ್ಳುತ್ತಿರುವ […]

ಮಕ್ಕಳ ಮಾರಾಟ, ಖರೀದಿ: 5 ವರ್ಷ ಜೈಲು ಶಿಕ್ಷೆ

Friday, November 8th, 2024
child-traffiking

ಮಂಗಳೂರು : ಮಕ್ಕಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಮಕ್ಕಳನ್ನು ಮಾರುವ ಹಾಗೂ ಕೊಳ್ಳುವವರಿಗೆ ಬಾಲನ್ಯಾಯ ಕಾಯ್ದೆ-2015 ರ ಸೆಕ್ಷನ್ 80 ಮತ್ತು 81 ರನ್ವಯ 5 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ಗಳ ದಂಡ ವಿಧಿಸಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಎಚ್ಚರಿಕೆ ನೀಡಿದೆ. ಇಂತಹ ಅಪರಾಧಗಳಲ್ಲಿ ಆಸ್ಪತ್ರೆಯವರು ಶಾಮೀಲಾದರೆ 3 ರಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಈ ಸಂಬಂಧ ದಕ್ಷಿಣ ಕನ್ನಡ ಮಕ್ಕಳ ರಕ್ಷಣಾ ಘಟಕ […]

ಅಕ್ರಮ ಮರಳುಗಾರಿಕೆ: ನೀರಿನಲ್ಲಿ ಮುಳುಗಿಸಿಟ್ಟ 7 ದೋಣಿಗಳ ಪತ್ತೆ

Friday, November 8th, 2024
Illegal Boats

ಮಂಗಳೂರು : ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ. ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟೀ ಕಾರ್ಯಾಚರಣೆ ನಡೆಸಿ ಗುರುಪುರ ಅಡ್ಡೂರು ಸಮೀಪ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ 9 ದೋಣಿಗಳನ್ನು ವಶಪಡಿಸಲಾಯಿತು. ಇದಲ್ಲದೆ, ಅಕ್ರಮ ಮರಳುಗಾರಿಕೆ ನಡೆಸಲು ಉಪಯೋಗಿಸುತ್ತಿದ್ದ 7 ದೋಣಿಗಳನ್ನು ನೀರಿನ ಅಡಿಯಲ್ಲಿ ಮುಳುಗಿಸಿಟ್ಟಿರುವುದು ದಾಳಿ ಸಂದರ್ಭದಲ್ಲಿ ಪತ್ತೆಯಾಗಿದೆ. ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಅವರ ಮಾರ್ಗದರ್ಶನದಲ್ಲಿ ನಡೆದ […]

ಕನ್ನಡ ರಥಕ್ಕೆ ಮಂಗಳೂರಿನಲ್ಲಿ ಸ್ವಾಗತ

Friday, November 8th, 2024
Kannada-Ratha

ಮಂಗಳೂರು : ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ನಿಮಿತ್ತ ಕನ್ನಡ ಜ್ಯೋತಿ ಹೊತ್ತ ರಥಯಾತ್ರೆ ಗುರುವಾರ ಮಂಗಳೂರು ನಗರಕ್ಕೆ ಆಗಮಿಸಿತು. ನಗರದ ಪುರಭವನ ಆವರಣಕ್ಕೆ ಕನ್ನಡ ರಥ ಆಗಮಿಸಿದಾಗ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಅತಿದೊಡ್ಡ ನುಡಿಹಬ್ಬವಾಗಿದೆ. ಶ್ರೀಮಂತ ಇತಿಹಾಸವನ್ನು ಹೊಂದಿರುವ ಕನ್ನಡ ಭಾಷೆಯು ಸಾಹಿತ್ಯ ಲೋಕದಲ್ಲಿ ಆಳವಾದ ಬೇರನ್ನು ಹೊಂದಿದೆ. ಮಂಡ್ಯದಲ್ಲಿ ನಡೆಯಲಿರುವ […]

‘ಪಿಎಂ-ವಿದ್ಯಾಲಕ್ಷ್ಮಿ’ ಯೋಜನೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸು: ಸಂಸದ ಕ್ಯಾ. ಚೌಟ

Thursday, November 7th, 2024
Modi-Loan

ಮಂಗಳೂರು: ಕೇಂದ್ರ ಸರ್ಕಾರ ಪ್ರಾರಂಭಿಸುತ್ತಿರುವ ಹೊಸ ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯು ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಆರ್ಥಿಕ ಸಮಸ್ಯೆಯಿಂದ ಉನ್ನತ ಶಿಕ್ಷಣ ಮುಂದುವರಿಸಲು ಸಾಧ್ಯವಾಗದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಬಹು ದೊಡ್ಡ ವರದಾನವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಪಿಎಂ ವಿದ್ಯಾಲಕ್ಷ್ಮಿ ಎನ್ನುವ ಬಹಳ ಉಪಯುಕ್ತ ಯೋಜನೆಗೆ ಅನುಮೋದನೆ ನೀಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ ಸಂಸದರು,” ಪ್ರಧಾನಮಂತ್ರಿ ವಿದ್ಯಾಲಕ್ಷ್ಮಿ ಯೋಜನೆ ರಾಷ್ಟ್ರೀಯ ಶಿಕ್ಷಣ […]