ಸಿಎಂ ಬಿ.ಎಸ್​ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಂಪುಟ ಸದ್ಯದಲ್ಲೇ ವಿಸ್ತರಣೆ

Tuesday, December 24th, 2019
BSY

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಂಪುಟ ಸದ್ಯದಲ್ಲೇ ವಿಸ್ತರಣೆಯಾಗಲಿದೆ. ಸಚಿವ ಸಂಪುಟ ವಿಸ್ತರಣೆ ಮಾಡುವಂತೆ ಸಿಎಂ ಯಡಿಯೂರಪ್ಪಗೆ ನೂತನ ಶಾಸಕರು ಒತ್ತಡ ಹಾಕುತ್ತಿದ್ದಾರೆ. ಹಾಗಾಗಿ ಮುಂದಿನ ವರ್ಷ ಜನವರಿ ಮೊದಲ ವಾರದಲ್ಲೇ ಸಚಿವ ಸಂಪುಟ ಮಾಡುವ ನಿರ್ಧಾರ ಸಿಎಂ ಬಿ.ಎಸ್ ಯಡಿಯೂರಪ್ಪ ಕೈಗೊಂಡಿದ್ದಾರೆ ಎನ್ನಲಾಗಿದೆ. ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಬಿಜೆಪಿ ಹೈಕಮಾಂಡ್ ಜತೆ ಚರ್ಚಿಸುವ ಸಲುವಾಗಿ ವಾರಾಂತ್ಯಕ್ಕೆ ಸಿಎಂ ಬಿ.ಎಸ್ ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ. ಕೇಂದ್ರ ಗೃಹ ಸಚಿವ […]

ಉಪಚುನಾವಣೆಯಲ್ಲಿ ನಾನು ಸೋತಿರಬಹುದು, ಹಾಗಂತ ನಾನು ಸತ್ತಿಲ್ಲ : ಎಚ್​. ವಿಶ್ವನಾಥ್ ಗುಡುಗು

Wednesday, December 18th, 2019
H.-Vishwanath

ಹುಣಸೂರು : ಉಪಚುನಾವಣೆಯಲ್ಲಿ ನಾನು ಸೋತಿರಬಹುದು. ಹಾಗಂತ ನಾನು ಸತ್ತಿಲ್ಲ. ರಾಜಕೀಯವಾಗಿ, ಸಾರ್ವಜನಿಕವಾಗಿ ಅಭಿವೃದ್ಧಿ ವಿಚಾರದಲ್ಲಿ ಬದುಕಿದ್ದೇನೆ ಎಂದು ಹುಣಸೂರು ಪರಾಜಿತ ಬಿಜೆಪಿ ಅಭ್ಯರ್ಥಿ ಎಚ್. ವಿಶ್ವನಾಥ್ ತಿಳಿಸಿದ್ದಾರೆ. ಸೋಲಿನ ಬಳಿಕ ಮಾತನಾಡಿದ ಅವರು, ಬಿಜೆಪಿ ಸೇರಲು ನಾನು ಹಣ ತಿಂದಿದ್ದೇನೆ ಎಂದು ಕೆಲವರು ಅಪಪ್ರಚಾರ ನಡೆಸುತ್ತಿದ್ದಾರೆ. ಸತ್ಯವಂತರಂತೆ ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಹಣ ತಿಂದವನಲ್ಲ. ತಿನ್ನಿಸಿದವನು. ಯಾರ ಅನ್ನಕ್ಕೂ ಕೈ ಹಾಕಿಲ್ಲ ಎಂದು ಗುಡುಗಿದರು. ನಾನು ಯಾರ ಅನ್ನವನ್ನು ಕಿತ್ತುಕೊಂಡಿಲ್ಲ. 85ಲಕ್ಷ ಮಕ್ಕಳಿಗೆ […]

ನೀರಾವರಿ ಖಾತೆಯೇ ಬೇಕೆಂದು ಕೇಳಿಲ್ಲ : ದೆಹಲಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

Wednesday, December 18th, 2019
basavaraj

ನವದೆಹಲಿ : ನೀರಾವರಿ ಖಾತೆ ಪಡೆಯಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಸ್ಪರ್ಧೆ ಇದೆ ಎನ್ನುವ ಮಾತು ಕೇಳಿ ಬಂದಿತ್ತು. ಈ ವಿಚಾರವಾಗಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದು, ನಾನು ನೀರಾವರಿ ಖಾತೆಯೇ ಬೇಕೆಂದು ಕೇಳಿಲ್ಲ ಎಂದಿದ್ದಾರೆ. ಗೃಹ ಖಾತೆ ಬೇಡ, ಬೇರೆ ಯಾವುದಾದರೂ ಖಾತೆ ನೀಡಿ ಎಂದು ಬಿಎಸ್ವೈ ಎದುರು ಬೊಮ್ಮಾಯಿ ಬೇಡಿಕೆ ಇಟ್ಟಿದ್ದರು ಎನ್ನುವ ಮಾತು ಕೇಳಿ ಬಂದಿತ್ತು. ನಂತರ ಬೊಮ್ಮಾಯಿ ನೀರಾವರಿ ಖಾತೆ ಕೇಳಿದ್ದಾರೆ ಎನ್ನಲಾಗಿತ್ತು. ಈಗ […]

ಕಾಂಗ್ರೆಸ್ ವಿರುದ್ಧ ಸಚಿವ ಸಿ.ಟಿ.ರವಿ ಗಂಭೀರ ಆರೋಪ

Monday, December 16th, 2019
CT-Ravi

ತುಮಕೂರು : “ಕಾಂಗ್ರೆಸ್ನವರು ತಾಲಿಬಾನಿಗಳಿಗೆ ಸಹಕಾರ ನೀಡುತ್ತಿದ್ದಾರೆ. ಪೌರತ್ವ ಕಾಯ್ದೆ ವಿಚಾರವಾಗಿ ಒಂದು ಪಿತೂರಿ ನಡೆಯುತ್ತಿದೆ. ಆ ಪಿತೂರಿಯಲ್ಲಿ ತಾಲಿಬಾನಿಗಳು, ಕಾಂಗ್ರೆಸ್ಸಿಗರು, ಕಮ್ಯೂನಿಸ್ಟರು ಒಟ್ಟಾಗಿ ಪಿತೂರಿ ಭಾಗ ಆಗಿರೋದು ದುರದೃಷ್ಟಕರ,” ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಗಂಭೀರ ಆರೋಪ ಮಾಡಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪಾಕಿಸ್ತಾನದಿಂದ ಆಫ್ಘಾನಿಸ್ತಾನದಿಂದ ಧಾರ್ಮಿಕ ಕಾರಣಕ್ಕೆ, ಭಯೋತ್ಪಾದಕ ಕಾರಣಕ್ಕೆ ಬಂದವರು ನಿರಾಶ್ರಿತರು. ಅವರಿಗಿದ್ದಿದ್ದು ಮೂರೇ ದಾರಿ ಸಾವು, ಮತಾಂತರ, ಪೂರ್ವಜನರನ್ನ ತೊರೆಯುವುದು. ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶದಿಂದ ಮತೀಯ ಕಾರಣಕ್ಕೆ ಬಂದವರು ನಿರಾಶ್ರಿತರು. […]

ಹೊಸಪೇಟೆ ಸೋಲಿನ ಪರಾಮರ್ಶೆ ಸಭೆಯಲ್ಲಿ ಕೈ ಕಾರ್ಯಕರ್ತರ ಆಕ್ರೋಶ

Friday, December 13th, 2019
Balaari

ಬಳ್ಳಾರಿ : ವಿಜಯನಗರ ಕ್ಷೇತ್ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಹಿನ್ನೆಲೆ ಹೊಸಪೇಟೆಯ ಕಾಂಗ್ರೆಸ್ ಕಚೇರಿಯಲ್ಲಿ ಜರುಗಿದ ಸಭೆಯಲ್ಲಿ ಕೈ ಕಾರ್ಯಕರ್ತರು ಆಕ್ರೋಶಗೊಂಡು ಬ್ಯಾನರ್ ಹರಿದುಹಾಕಿದ್ದಾರೆ. ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ವೇದಿಕೆಗೆ ಹಾಕಲಾಗಿದ್ದ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹಾಗೂ ಜಿಲ್ಲಾಧ್ಯಕ್ಷ ಬಿ.ವಿ.ಶಿವಯೋಗಿ ಇರುವ ಬ್ಯಾನರ್ ಹರಿದು ಹಾಕಿ ತಮ್ಮ ಆಕ್ರೋಶವನ್ನ ಹೊರ ಹಾಕಿದರು. ಸದ್ಯ ವಿಜಯನಗರ ಉಪ ಚುನಾವಣೆಯ ನಂತರ ಬಳ್ಳಾರಿ ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲು ಎನ್ನುವಂತಾಗಿದೆ. ವಿಜಯನಗರ ಚುನಾವಣೆಯ ಸೋಲಿನ […]

ಸಿದ್ದರಾಮಯ್ಯನವರಿಗೆ ಮರ್ಯಾದೆ ಇದ್ದರೆ ಕ್ಷಮೆ ಕೇಳಬೇಕು : ಸೊಗಡು ಶಿವಣ್ಣ

Tuesday, December 10th, 2019
shivanna

ತುಮಕೂರು : ಸಿದ್ದರಾಮಯ್ಯನವರಿಗೆ ನಾಡಿನ ಜನ ಗೃಹ ಬಂಧನದ ಶಿಕ್ಷೆ ಕೊಟ್ಟಿದ್ದಾರೆ. ಹಾಗಾಗಿ ಮರ್ಯಾದೆ ಇದ್ದರೆ ಇವರು ನಾಡಿನ ಜನರ ಕ್ಷಮೆ ಕೇಳಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯರ ವಿರುದ್ದ ಮಾಜಿ ಸಚಿವ ಸೊಗಡು ಶಿವಣ್ಣ ಗುಡುಗಿದ್ದಾರೆ. ಸಿದ್ದರಾಮಯ್ಯನವರು ಮಾತೆತ್ತಿದ್ರೆ ಯಡಿಯೂರಪ್ಪನವರಿಗೆ ಟೀಕೆ ಮಾಡುತ್ತಿದ್ದರು. ಜೈಲಿಗೆ ಹೋಗಿದ್ರು ಜೈಲಿಗೆ ಹೋಗಿದ್ರು ಎಂದು ಹೊದಲೆಲ್ಲಾ ಹೇಳುತ್ತಿದ್ರು. ಇವತ್ತು ಕರ್ನಾಟಕ ಜನ ದುರಹಂಕಾರಿ ಸಿದ್ದರಾಮಯ್ಯ ಹೋಗಬೇಕು ಎಂದು ಸಿಎಂ ಯಡಿಯೂರಪ್ಪನವರ ಪರ ತೀರ್ಪು ಕೊಟ್ಟಿದ್ದಾರೆ ಎಂದು ಹೇಳಿದರು. ರಾಜೀನಾಮೆ ಕೊಡುವುದರ […]

ಉಪಚುನಾವಣೆಯಲ್ಲಿ ಸೋಲಿಗೆ ಕಾರಣವೇನು ಎಂಬ ಬಗ್ಗೆ ಶೀಘ್ರದಲ್ಲೇ ಬಹಿರಂಗಪಡಿಸುತ್ತೇನೆ; ಡಿಕೆ ಶಿವಕುಮಾರ್​​

Tuesday, December 10th, 2019
DK-Shiv-Kumar

ಬೆಂಗಳೂರು : ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣ ಏನು? ಯಾಕೆ ನಮಗೆ ಹಿನ್ನೆಡೆಯಾಯಿತು ಎಂಬ ಬಗ್ಗೆ ಶೀಘ್ರದಲ್ಲಿಯೇ ಬಹಿರಂಗ ಪಡಿಸುತ್ತೇನೆ ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಫಲಿತಾಂಶದ ಕುರಿತು ಇಂದು ಪ್ರತಿಕ್ರಿಯಿಸಿದ ಅವರು, ಚುನಾವಣಾ ಸೋಲಿನ ಬಗ್ಗೆ ಈಗಲೇ ಏನು ಹೇಳುವುದಿಲ್ಲ. ಆದರೆ, ಈ ಸೋಲಿಗೆ ಕಾರಣ ಏನು, ಯಾಕೆ ಹೀಗಾಯ್ತು ಎಂಬ ಬಗ್ಗೆ ಎಲ್ಲವನ್ನು ಸವಿವರವಾಗಿ ಹೇಳುತ್ತೇನೆ. ನಾಡಿನ ಜನರ ಮುಂದೆ ಎಲ್ಲಿ ಏನಾಯ್ತು, ಹೇಗಾಯ್ತು ಎಂಬುದನ್ನು ತಿಳಿಸುತ್ತೇನೆ. ಆದರೆ, […]

ಶರತ್ ಬಚ್ಚೇಗೌಡರಿಗೆ ಬಿಜೆಪಿ ಪಕ್ಷದೊಳಗೆ ಪ್ರವೇಶ ಇಲ್ಲ : ಎಂಟಿಬಿ ನಾಗರಾಜ್ ಮನವಿಗೆ ಸ್ಪಂದಿಸಿದ ಬಿಎಸ್​ವೈ

Tuesday, December 10th, 2019
BSY

ಬೆಂಗಳೂರು : ಹೊಸಕೋಟೆಯಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ಎಂಟಿಬಿ ನಾಗರಾಜ್ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಶರತ್ ಬಚ್ಚೇಗೌಡ ಅವರನ್ನು “ನಾ ಇರುವವರೆಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳಿಸುವ ಮಾತೇ ಇಲ್ಲ” ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಂಟಿಬಿ ನಾಗರಾಜ್ ಅವರಿಗ ಮಾತು ನೀಡಿದ್ದಾರೆ ಎಂದು ತಿಳಿದುಬಂದಿದೆ. ಶರತ್ ಬಚ್ಚೇಗೌಡ ಚಿಕ್ಕಬಳ್ಳಾಪುರ ಸಂಸದ ಹಿರಿಯ ಬಿಜೆಪಿ ನಾಯಕ ಬಿ.ಎನ್. ಬಚ್ಚೇಗೌಡ ಅವರ ಮಗ. ಬಚ್ಚೇಗೌಡ ಒಪ್ಪಿಗೆ ಸೂಚಿಸಿದ ನಂತರವೇ ಎಂಟಿವಿ ನಾಗರಾಜ್ ಅವರನ್ನು ಬಿಜೆಪಿ ಪಕ್ಷಕ್ಕೆ […]

ಉಪಚುನಾವಣೆ : ಬಿಜೆಪಿ-12 ಸ್ಥಾನ, ಕಾಂಗ್ರೆಸ್ -2, ಪಕ್ಷೇತರ-1, ಜೆಡಿಎಸ್-0

Monday, December 9th, 2019
yediyurappa

ಬೆಂಗಳೂರು: ರಾಜ್ಯದಲ್ಲಿ ನಡೆದ ಉಪಚುನಾವಣೆ ಫಲಿತಾಂಶ ಹೊರಬಿದ್ದಿದೆ. ಆಡಳಿತಾರೂಢ ಬಿಜೆಪಿ 12 ಸ್ಥಾನಗಳನ್ನು ಪಡೆದು, ಜೆಡಿಎಸ್ ಸೂನ್ಯ,  ಪಕ್ಷೇತರ-1  ಹಾಗೂ ಕಾಂಗ್ರೆಸ್ ಕೇವಲ 2 ಸ್ಥಾನಗಳ ಮೂಲಕ ಭಾರೀ ಹಿನ್ನಡೆಯನ್ನು ಪಡೆದಿದೆ. ಬಿಜೆಪಿ ಸರಕಾರ ರಚನೆಗೆ ಕಾರಣವಾದ  ಅನರ್ಹ ಶಾಸಕರ ಭವಿಷ್ಯವನ್ನು ನಿರ್ಧರಿಸಬಲ್ಲ ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು, 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಆಡಳಿತಾರೂಢ ಬಿಜೆಪಿ ಸರ್ಕಾರ ಸೇಫ್ ಆಗಿದೆ. ಹಿರೇಕೂರಿನಲ್ಲಿ ಬಿಸಿ ಪಾಟೀಲ್ ಅವರು ಕಾಂಗ್ರೆಸ್ ಅಭ್ಯರ್ಥಿ ಬಿ.ಹೆ.ಬನ್ನಿಕೋಡ್ ವಿರುದ್ಧ ಮತಗಳ ಅಂತರದಲ್ಲಿ […]

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರಾಜೀನಾಮೆ

Tuesday, November 26th, 2019
Devendra-Fadnavis

ಮುಂಬೈ:  ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ದೇವೇಂದ್ರ ಫಡ್ನವಿಸ್ ಬಹುಮತ ಇಲ್ಲದ ಕಾರಣ ತಮ್ಮ ಸ್ಥಾನಕ್ಕೆ ಎರಡನೇ ಬಾರಿಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಡಿಸಿಎಂ ಅಜಿತ್ ಪವಾರ್ ರಾಜೀನಾಮೆ ಬೆನ್ನಲ್ಲೇ ನ.26 ರಂದು ಮಧ್ಯಾಹ್ನ 3:30 ಕ್ಕೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಸಿಎಂ ದೇವೇಂದ್ರ ಫಡ್ನವಿಸ್ ರಾಜೀನಾಮೆ ನೀಡುವ ಘೋಷಣೆ ಮಾಡಿದ್ದರು. ಎನ್ ಸಿಪಿಯ ಅಜಿತ್ ಪವಾರ್ ಅವರ ಬಣದ ಶಾಸಕರ ಬೆಂಬಲ ಹೊಂದಿರುವುದಾಗಿ ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟು ಶನಿವಾರದಂದು ಧಿಡೀರ್ ಬೆಳವಣಿಗೆಯಲ್ಲಿ ದೇವೇಂದ್ರ ಫಡ್ನವೀಸ್ ಹಾಗೂ […]