ಬೆಂಗಳೂರಿನ ರೆಸಾರ್ಟ್ ನಲ್ಲಿ ಕಾಂಗ್ರೆಸ್ ನಾಯಕರ ಹೈಡ್ರಾಮಾ : ದಿಗ್ವಿಜಯ್ ಸಿಂಗ್ ಪೊಲೀಸ್ ವಶಕ್ಕೆ

Wednesday, March 18th, 2020
congress

ಬೆಂಗಳೂರು : ಇಲ್ಲಿನ ರೆಸಾರ್ಟ್ ನಲ್ಲಿ ವಾಸ್ತವ್ಯವಿರುವ ಮಧ್ಯಪ್ರದೇಶ ಕೈ ನಾಯಕರ ಮನವೊಲಿಕೆಗೆ ಬಂದ ದಿಗ್ವಿಜಯ್ ಸಿಂಗ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೂಲಕ ಹಲವು ಪ್ರಹಸನಗಳಿಗೆ ಬುಧವಾರ ಬೆಳಿಗ್ಗೆ ಬೆಂಗಳೂರು ಸಾಕ್ಷಿಯಾಯಿತು. ಇಲ್ಲಿನ ಯಲಹಂಕ ಬಳಿಯ ರೆಸಾರ್ಟ್ ನಲ್ಲಿರುವ ಕಾಂಗ್ರೆಸ್ ಶಾಸಕರ ಮನವೊಲಿಕೆಗೆ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೇರಿದಂತೆ ಆಗಮಿಸಿದ್ದರು. ಆದರೆ ರೆಸಾರ್ಟ್ ಗೆ ಪೊಲೀಸ್ […]

ಬಿಜೆಪಿಗೆ ಸೇರಿರುವ ಜ್ಯೋತಿರಾದಿತ್ಯ ಸಿಂಧಿಯಾ, ಭೋಪಾಲ್ ನಲ್ಲಿ ಭರ್ಜರಿ ರೋಡ್ ಶೋ ಹಾಗೂ ಸಮಾವೇಶ

Saturday, March 14th, 2020
BJP

ಭೋಪಾಲ್: ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿರುವ ಜ್ಯೋತಿರಾದಿತ್ಯ ಸಿಂಧಿಯಾ, ಮಧ್ಯಪ್ರದೇಶ ರಾಜಧಾನಿ ಭೋಪಾಲ್ ನಲ್ಲಿ ಈಗಾಗಲೇ ಭರ್ಜರಿ ರೋಡ್ ಶೋ ಹಾಗೂ ಸಮಾವೇಶ ನಡೆಸಿ ತಮ್ಮ ತಾಕತ್ತು ಪ್ರದರ್ಶಿಸಿದ್ದಾರೆ. ಆದರೆ ಸಿಂಧಿಯಾ ಬಿಜೆಪಿ ಮಡಲಿಲ್ಲಿರುವುದನ್ನು ಸಹಿಸದ ಕಾಂಗ್ರೆಸ್, ಮೇಲ್ನೋಟಕ್ಕೆ ಅವರ ವಿರುದ್ಧ ಪಿತೂರಿ ನಡೆಸುತ್ತಿರುವಂತೆ ತೋರುತ್ತಿದೆ. ಸಿಂಧಿಯಾ ಬಿಜೆಒಪಿ ಸೇರಿದ ಮರುದಿನವೇ ಅವರ ವಿರುದ್ಧದ ಹಳೆಯ ಪ್ರಕರಣಕ್ಕೆ ಮರುಜೀವ ನೀಡಿದ್ದು ಇದಕ್ಕೆ ಸಾಕ್ಷಿ. ಇಷ್ಟೇ ಅಲ್ಲ ಸಿಂಧಿಯಾ ರೋಡ್ ಶೋ ವೇಳೆ ಕೆಲವು ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ […]

ಎತ್ತಿನಹೊಳೆ ಯೋಜನೆ : ರೈತರಿಗೆ ಶೀಘ್ರದಲ್ಲೇ ಭೂ ಪರಿಹಾರ; ರಮೇಶ್‌ ಜಾರಕಿಹೊಳಿ ಭರವಸೆ

Saturday, March 14th, 2020
ramesh

ಬೆಂಗಳೂರು : ಎತ್ತಿನಹೊಳೆ ಯೋಜನೆ ಅನುಷ್ಠಾನಕ್ಕಾಗಿ ಭೂ ಸ್ವಾಧೀನ ಮಾಡಿಕೊಂಡಿರುವ ರೈತರಿಗೆ ಶೀಘ್ರದಲ್ಲೇ ಭೂ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಭರವಸೆ ನೀಡಿದರು. ಅರಸೀಕೆರೆಯ ಜೆಡಿಎಸ್‌ ಶಾಸಕ ಕೆ.ಎನ್‌.ಶಿವಲಿಂಗೇಗೌಡ ಅವರು ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿಉತ್ತರ ನೀಡಿದ ಸಚಿವರು ಎತ್ತಿನಹೊಳೆ ಯೋಜನೆ ಅನುಷ್ಠಾನಕ್ಕಾಗಿ ರೈತರಿಂದ ಭೂ ಸ್ವಾಧೀನಪಡಿಸಿಕೊಂಡಿದ್ದು ಅವರಿಗೆ ಪರಿಹಾರ ನೀಡುವುದು ಬಾಕಿ ಇದೆ. ಈ ಸಂಬಂಧ ತಕ್ಷಣವೇ ಸಭೆ ಕರೆದು ಸೂಕ್ತ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು. […]

ಮಧ್ಯಪ್ರದೇಶದ 22 ಕಾಂಗ್ರೆಸ್‌ ಶಾಸಕರಿಗೆ ಸ್ಪೀಕರ್‌ ನೋಟಿಸ್‌ ಜಾರಿ

Friday, March 13th, 2020
Congress

ಭೋಪಾಲ್ ‌: ಮಧ್ಯಪ್ರದೇಶ ವಿಧಾನ ಸಭೆಯ ಸದಸ್ಯತ್ವ ತೊರೆದಿರುವ ಕಾಂಗ್ರೆಸ್‌ನ 22 ಶಾಸಕರಿಗೆ ವಿಧಾನಸಭಾ ಸ್ಪೀಕರ್‌ ಎನ್‌.ಪಿ. ಪ್ರಜಾಪತಿ ನೋಟಿಸ್‌ ಜಾರಿಗೊಳಿಸಿದ್ದಾರೆ. ಮಧ್ಯಪ್ರದೇಶ ವಿಧಾನಸಭೆಯ ಪ್ರಧಾನ ಕಾರ್ಯದರ್ಶಿ ಎ.ಪಿ. ಸಿಂಗ್‌ ಈ ವಿಷಯ ತಿಳಿಸಿದ್ದಾರೆ. ‘ಶುಕ್ರವಾರ ಸ್ಪೀಕರ್‌ ಮುಂದೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ. ವಿಚಾರಣೆಯಲ್ಲಿ, ತಮ್ಮ ರಾಜೀನಾಮೆ ನಿರ್ಧಾರ ಸ್ವಯಂಪ್ರೇರಿತವೋ ಅಥವಾ ಒತ್ತಡದಿಂದ ಕೈಗೊಂಡ ನಿರ್ಧಾರವೋ ಎಂಬುದರ ಬಗ್ಗೆ ಸ್ಪಷ್ಟವಾಗಿ ವಿವರಿಸುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ’ ಎಂದು ಅವರು ಹೇಳಿದ್ದಾರೆ. ವಿಶ್ವಾಸಮತಕ್ಕೆ ಮನವಿ: 22 ಶಾಸಕರ ರಾಜೀನಾಮೆ ಯಿಂದ […]

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್‌ ನೇಮಕ

Wednesday, March 11th, 2020
dkshi

ಬೆಂಗಳೂರು : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜ್ಯದಲ್ಲಿ ಪ್ರಬಲ ಸಮುದಾಯದಲ್ಲೊಂದಾದ ಒಕ್ಕಲಿಗ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವ ನಿಟ್ಟಿನಲ್ಲಿ ಡಿ.ಕೆ.ಶಿವಕುಮಾರ್‌ಗೆ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಲಿಂಗಾಯತ ಸಮುದಾಯದ ಹಾಗೂ ಶಾಸಕಾಂಗ ನಾಯಕ ಸಿದ್ದರಾಮಯ್ಯ ಬಣದ ಎಂ.ಬಿ.ಪಾಟೀಲ್ ಆಸೆಗೆ ತಣ್ಣೀರು ಎರಚಿದಂತಾಗಿದೆ. ಈಶ್ವರ್ ಖಂಡ್ರೆ ಜೊತೆಗೆ ಸತೀಶ್ ಜಾರಕಿಹೊಳಿ ಹಾಗೂ ಸಲೀಮ್ ಅಹಮದ್ ಅವರೂ ಸಹ ಕೆಪಿಸಿಸಿಗೆ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ (ಲಿಂಗಾಯತ), ಸತೀಶ್ ಜಾರಕಿಹೊಳಿ (ವಾಲ್ಮೀಕಿ ಸಮುದಾಯ), ಸಲೀಂ ಅಹಮದ್ (ಅಲ್ಪಸಂಖ್ಯಾತ) […]

ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Wednesday, March 11th, 2020
BJP

ನವದೆಹಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ತ್ಯಜಿಸಿದ್ದ ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂಧಿಯಾ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ನವದೆಹಲಿಯ ಪಕ್ಷದ ಪ್ರದಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಪಕ್ಷದ ಶಾಲು ಹೊದಿಸಿ ಸಿಂಧಿಯಾ ಅವರನ್ನು ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಪರಿವಾರ ಸೇರುತ್ತಿರುವುದಕ್ಕೆ ಸಂತಸವಾಗುತ್ತಿದೆ ಎಂದು ಹೇಳಿದರು. ಸಿಂಧಿಯಾ ಅವರ ಅಜ್ಜಿ ರಾಜಮಾತಾ ಸಿಂಧಿಯಾ ಜನಸಂಘ ಹಾಗೂ ಬಿಜೆಪಿಯ […]

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಆಯ್ಕೆ

Wednesday, March 11th, 2020
dk-shivkumar

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಅವರನ್ನು ಹೈಕಮಾಂಡ್‌ ನೇಮಕ ಮಾಡಿದೆ. ಬುಧವಾರ ಈ ಮಹತ್ವದ ಘೋಷಣೆ ಮಾಡಿದ್ದು, ಮೂವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಕಾರ್ಯಾಧ್ಯಕ್ಷರಾಗಿ ಲಿಂಗಾಯತ ಸಮುದಾಯದ ಈಶ್ವರ್ ಖಂಡ್ರೆ, ಅಲ್ಪಸಂಖ್ಯಾತ ಸಮುದಾಯ ಸಲೀಮ್ ಅಹಮ್ಮದ್ ಹಾಗೂ ವಾಲ್ಮೀಕಿ ಸಮುದಾಯದ ಸತೀಶ್ ಜಾರಕಿಹೊಳಿಯನ್ನು ನೇಮಕ ಮಾಡಲಾಗಿದೆ. ಈ ಮೂವರು ಸಿದ್ದರಾಮಯ್ಯ ಆಪ್ತರಾಗಿದ್ದಾರೆ. ಡಿಕೆ ಶಿವಕುಮಾರ್‌ಗೆ ಅಧ್ಯಕ್ಷ ಸ್ಥಾನ ನೀಡುದಕ್ಕೆ ಸಿದ್ದರಾಮಯ್ಯ ಬಣದ ಆಕ್ಷೇಪವಿತ್ತು. ಒಂದು ವೇಳೆ ಅಧ್ಯಕ್ಷ ಸ್ಥಾನ ನೀಡುವುದಾದರೆ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ […]

“ತಂದೆಯ ನಿರ್ಧಾರದ ಕುರಿತು ಹೆಮ್ಮೆಯಿದೆ” : ಜ್ಯೋತಿರಾದಿತ್ಯ ಸಿಂಧಿಯಾ ಪುತ್ರ ಮಹಾನಾರ್ಯಮನ್ ಸಿಂಧಿಯಾ

Wednesday, March 11th, 2020
sindhiya

ಭೋಪಾಲ್ : ಪಕ್ಷ ತೊರೆದಿರುವ ಮಾಜಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜ್ಯೋತಿರಾದಿತ್ಯ ಸಿಂಧಿಯಾ ನಡೆಯನ್ನು, ಹಲವರು ಬೆಂಬಲಿಸಿದರೆ ಇನ್ನೂ ಕೆಲವರು ಟೀಕಿಸಿದ್ದಾರೆ. ಸಿಂಧಿಯಾ ಅವರ ಎರಡನೇ ರಾಜಕೀಯ ಇನ್ನಿಂಗ್ಸ್ ಹೇಗಿರುತ್ತದೆ ಎಂಬುದನ್ನು ಕಾದು ನೋಡಲು ಪರ-ವಿರೋಧಿಗಳೂ ಕಾತರದಿಂದ ಕಾಯುತ್ತಿದ್ದಾರೆ. ಈ ಮಧ್ಯೆ ತಮ್ಮ ತಂದೆಯ ನಿರ್ಧಾರಕ್ಕೆ ಬೆಂಬಲ ಸೂಚಿಸಿರುವ ಜ್ಯೋತಿರಾದಿತ್ಯ ಸಿಂಧಿಯಾ ಪುತ್ರ ಮಹಾನಾರ್ಯಮನ್ ಸಿಂಧಿಯಾ, ತಂದೆಯ ನಿರ್ಧಾರದ ಕುರಿತು ಹೆಮ್ಮೆಯಿದೆ ಎಂದು ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಹಾನಾರ್ಯಮನ್ ಸಿಂಧಿಯಾ, ತಂದೆಯ ದೃಢ ನಿರ್ಧಾರಕ್ಕೆ […]

ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು : ನಾಳೆ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿಗೆ ಸೇರ್ಪಡೆ

Wednesday, March 11th, 2020
jyothiradhithya

ಬೆಂಗಳೂರು : ಕಾಂಗ್ರೆಸ್ ತೊರೆದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆಪ್ತ ಜ್ಯೋತಿರಾದಿತ್ಯ ಸಿಂಧಿಯಾ ಸದ್ಯದಲ್ಲೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ನಾಳೆ ಅಂದರೆ ಗುರುವಾರ ದೆಹಲಿಯಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲೇ ಸಿಂಧಿಯಾ ಕಮಲದ ಕೈ ಹಿಡಿಯಲಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ತೊರೆದ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ. ಮಂಗಳವಾರ ಬೆಳಗ್ಗೆಯೇ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ […]

ತೆವಲಿನ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿಗೆ ಚೆನ್ನಾಗಿಯೇ ಗೊತ್ತಿದೆ : ಕೃಷಿ ಸಚಿವ ಬಿ.ಸಿ ಪಾಟೀಲ್‌ ತಿರುಗೇಟು

Tuesday, March 10th, 2020
bc-patil

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಳಸುವಂತಹ ಹಗುರವಾದ ಪದಗಳನ್ನಾಗಲೀ ಅವರು ಹೇಳಿರುವಂತೆ ತೆವಲು ಭಾಷೆಯನ್ನಾಗಲೀ ತಾವು ಬಳಸುವುದಿಲ್ಲ ಎಂದು ಕೃಷಿ ಸಚಿವರಾದ ಬಿ.ಸಿ‌ಪಾಟೀಲ್ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕೃಷಿ ಸಚಿವರು, ತೆವಲಿನ ಬಗ್ಗೆ ಕುಮಾರಸ್ವಾಮಿ ಅವರಿಗೆ ಬಹಳ ಚೆನ್ನಾಗಿಯೇ ಗೊತ್ತಿದೆ ಅನಿಸುತ್ತದೆ ಎಂದರು. 2006-07 ರಲ್ಲಿ ತಾವು ಅಷ್ಟು ಕೆಲಸ ಮಾಡಿಕೊಂಡು ಹೋಗಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ. ಅದು ನನ್ನ ಮನೆಗೆ ಕೊಟ್ಟ ದುಡ್ಡಲ್ಲ […]