ಕಾಂಗ್ರೆಸ್​ಗೆ ಜ್ಯೋತಿರಾಧಿತ್ಯ ಸಿಂಧಿಯಾ ರಾಜೀನಾಮೆ, ಬಿಜೆಪಿ ಸೇರ್ಪಡೆ ಸಾಧ್ಯತೆ

Tuesday, March 10th, 2020
jyothiradhithya

ನವದೆಹಲಿ : ಕಳೆದೆರಡು ದಿನಗಳಿಂದ ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು ಕಾಂಗ್ರೆಸ್ಗೆ ತಲೆನೋವಾಗಿದ್ದು, ಕಮಲ್ನಾಥ್ ನೇತೃತ್ವದ ಸರ್ಕಾರ ಯಾವುದೇ ಕ್ಷಣದಲ್ಲೂ ಬೀಳುವ ಸಾಧ್ಯತೆಯಿದೆ. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾರನ್ನು ಭೇಟಿ ಮಾಡಿರುವ ಕಾಂಗ್ರೆಸ್ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಕಾಂಗ್ರೆಸ್ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ರಾಹುಲ್ ಗಾಂಧಿಯವರ ಆಪ್ತ ವಲಯದಲ್ಲಿದ್ದ ಮತ್ತೊಬ್ಬ ನಾಯಕ ಕಾಂಗ್ರೆಸ್ ತೊರೆದಿದ್ದಾರೆ. ಜತೆಗೆ ಬಿಜೆಪಿಯನ್ನು ಇಂದು ಸಂಜೆಯೇ ಸೇರುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಅಮಿತ್ ಶಾ […]

ಮಧ್ಯಪ್ರದೇಶ ಸರ್ಕಾರ ಉರುಳಿಸಲು ಬಿಜೆಪಿಗೆ ಆಸಕ್ತಿಯಿಲ್ಲ : ಬಿಜೆಪಿ ಹಿರಿಯ ಮುಖಂಡ ಶಿವರಾಜ್ ಸಿಂಗ್ ಚೌಹಾಣ್

Tuesday, March 10th, 2020
shivaraj-singh-chawhan

ಭೋಪಾಲ್ : ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ, ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ಮುಖಂಡ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ರಾಜ್ಯದ ರಾಜಕೀಯ ಬಿಕ್ಕಟ್ಟು ಕಾಂಗ್ರೆಸ್ಸಿನ ಆಂತರಿಕ ವಿಚಾರ, ಈ ಕುರಿತು ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದ್ದಾರೆ. ಸಿಎಂ ಕಮಲ್ ನಾಥ್ ಸರ್ಕಾರವನ್ನು ಉರುಳಿಸಲು ಬಿಜೆಪಿ ಆಸಕ್ತಿ ಹೊಂದಿಲ್ಲ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ನಾಯಕರ ನಡುವೆ ನಡೆಯುತ್ತಿರುವ ಜಗಳದಿಂದಾಗಿ ಸರ್ಕಾರ ತನ್ನ ಅಸ್ಥಿತ್ವ ಕಳೆದುಕೊಳ್ಳುತ್ತಿದೆ ಎಂದು ಅವರು ತಿಳಿಸಿದರು. ಮಧ್ಯಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಹಠಾತ್‌ ಬೆಳವಣಿಗೆಯಲ್ಲಿ […]

2.38 ಲಕ್ಷ ಕೋಟಿ ರೂ. ಬಜೆಟ್ ಗಾತ್ರದ ಬಜೆಟ್ ಮಂಡಿಸಿದ ಸಿಎಂ ಬಿ ಎಸ್ ಯಡಿಯೂರಪ್ಪ

Thursday, March 5th, 2020
bsy

ಬೆಂಗಳೂರು : ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಈ ಬಾರಿ 2,37,893 ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಕಳೆದ ಬಾರಿಯ ಸರ್ಕಾರ ಮಂಡಿಸಿದ್ದ ಬಜೆಟ್ ಗಾತ್ರದಕ್ಕಿಂತ ಈ ಬಾರಿ 3 ಸಾವಿರ ಕೋಟಿ ಹೆಚ್ಚು ಇದೆ. ಮಹದಾಯಿ ಯೋಜನೆ ಮೊದಲಾದ ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಗಳಿಗೆ ಹೆಚ್ಚು ಒತ್ತುಕೊಡಲಾಗಿದೆ. ಹಾಗೆಯೇ, ಸಿದ್ದರಾಮಯ್ಯ ಸರ್ಕಾರದ ಬಹುತೇಕ ಯೋಜನೆಗಳನ್ನು ಮುಂದುವರಿಸಲಾಗುತ್ತಿದೆ. ಭಾಗ್ಯಲಕ್ಷ್ಮೀ ಯೋಜನೆ, ಮಕ್ಕಳಿಗೆ ಬೈಸಿಕಲ್ ವಿತರಣೆ ಇತ್ಯಾದಿ ಯೋಜನೆಗಳನ್ನು ಮುಂದುವರಿಸಲು ಬಜೆಟ್ನಲ್ಲಿ ನಿರ್ಧರಿಸಲಾಗಿದೆ. ಪ್ರಧಾನಿ ಮೋದಿ ಆಶಯದಂತೆ […]

ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ : ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದ ಸಿದ್ದರಾಮಯ್ಯ

Monday, March 2nd, 2020
siddaramaiah

ಬೆಂಗಳೂರು : ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಆಡಳಿತ ಪಕ್ಷದ ವಿರುದ್ಧ ಹರಿಹಾಯಲು ವಿರೋಧ ಪಕ್ಷಗಳು ಸಿದ್ಧವಾಗಿವೆ. ಇಂದು ಬೆಳಗ್ಗೆ ರಾಜ್ಯಪಾಲ ವಜುಭಾಯಿ ವಾಲಾ ಅವರ ಭಾಷಣದ ಮೂಲಕ ಚರ್ಚೆ ಆರಂಭವಾಗಲಿದೆ. ಎರಡು ದಿನಗಳ ಚರ್ಚೆಯ ಬಳಿಕ ಮಾರ್ಚ್ 5ರಂದು ಬಜೆಟ್ ಮಂಡನೆಯಾಗಲಿದೆ. ಅಧಿವೇಶನದ ಬೆನ್ನಲ್ಲೇ ಸಿದ್ದರಾಮಯ್ಯ ಇಂದು ಬೆಳಗ್ಗೆ 9 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ (ಸಿಎಲ್ಪಿ) ಕರೆದಿದ್ದಾರೆ. ಅಧಿವೇಶನದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗಿರುವ ಕಾಂಗ್ರೆಸ್ […]

ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ದಿವಾಕರ್ ಪಾಂಡೇಶ್ವರ, ಉಪಮೇಯರ್ ವೇದಾವತಿ

Friday, February 28th, 2020
meyar

ಮಂಗಳೂರು : ಇಲ್ಲಿನ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಕಂಟೋನ್ಮೆಂಟ್‌ ವಾರ್ಡ್‌ನ ದಿವಾಕರ ಪಾಂಡೇಶ್ವರ ಹಾಗೂ ನೂತನ ಉಪಮೇಯರ್ ಆಗಿ ಕುಳಾಯಿ ವಾರ್ಡ್‌ನ ವೇದಾವತಿಯವರು ಆಯ್ಕೆಯಾಗಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಮೇಯರ್‌, ಉಪಮೇಯರ್‌ ಹಾಗೂ ಸ್ಥಾಯೀ ಸಮಿತಿ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆಯಿತು. 60 ಕಾರ್ಪೋರೇಟರ್‌ಗಳು ಹಾಗೂ ಶಾಸಕ ವೇದವ್ಯಾಸ ಕಾಮತ್, ಶಾಸಕ ಭರತ್ ಶೆಟ್ಟಿ, ವಿಧಾನ ಪರಿಷತ್‌ ಸದಸ್ಯ ಐವನ್ ಡಿಸೋಜರನ್ನು ಸೇರಿಸಿ ಒಟ್ಟು 63 ಮತಗಳಿದ್ದು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು […]

ದೊರೆಸ್ವಾಮಿಯವರಿಗೆ ಕ್ಷಮೆ ಕೇಳದಿದ್ದರೆ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಬಿಜೆಪಿ ಶಾಸಕ ಯತ್ನಾಳ್‌ಗೆ ಎಚ್‌.ಕೆ.ಪಾಟೀಲ್‌ ಎಚ್ಚರಿಕೆ

Friday, February 28th, 2020
h-k-pateel

ಗದಗ : ದೊರೆಸ್ವಾಮಿ ಅವರ ಬಗ್ಗೆ ಯತ್ನಾಳ್ ಅವಹೇಳನಕಾರಿ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಎಚ್ ಕೆ ಪಾಟೀಲ್ ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೊರೆಸ್ವಾಮಿ ನಮ್ಮ ರಾಜ್ಯ ಕಂಡಂತಹ ಅಪರೂಪದ ಹೋರಾಟಗಾರ. ಅವರು ಸ್ವಾತಂತ್ರ್ಯ ಹೋರಾಟಗಾರರಾಗಿ, ಪತ್ರಕರ್ತರಾಗಿ ಕರ್ನಾಟಕದ ಬಗ್ಗೆ, ಕನ್ನಡ ಭಾಷೆಯ ಬಗ್ಗೆ ಹೋರಾಟವನ್ನು, ಹೋರಾಟದ ಬದುಕನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ಸಮಾಜಕ್ಕೆ ಮಾರ್ಗದರ್ಶನ ಮಾಡ್ತಾ ಸರಕಾರದಲ್ಲಿ ಆಗಿರುವ ಅನ್ಯಾಯಗಳನ್ನು ಸರಿಪಡಿಸುವುದರಲ್ಲಿ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರು ಪಾಕಿಸ್ತಾನ ಪರ […]

ಯತ್ನಾಳ್ ಶಾಸಕ ಸ್ಥಾನ ವಜಾಗೊಳಿಸಲು ಕೊಡಗು ಕಾಂಗ್ರೆಸ್ ಆಗ್ರಹ

Thursday, February 27th, 2020
suresh

ಮಡಿಕೇರಿ : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ಗೌರವಕ್ಕೆ ದಕ್ಕೆ ತರುವ ರೀತಿಯ ಹೇಳಿಕೆಯನ್ನು ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕೆಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಈ.ಸುರೇಶ್ ಒತ್ತಾಯಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗೌರವಿಸದ ಬಿಜೆಪಿ ಪಕ್ಷದ ಶಾಸಕರು ಇದೀಗ ಸ್ವಾತಂತ್ರ್ಯ ಹೋರಾಟಗಾರರನ್ನು ಕೂಡ ಕೀಳಾಗಿ ಕಾಣುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ದೊರೆಸ್ವಾಮಿ ಅವರು ಪ್ರಸ್ತುತ ಪ್ರಗತಿಪರ ಚಿಂತಕರು, […]

ಬಜೆಟ್​ ಅಧಿವೇಶನದಂದು ಸಂವಿಧಾನ ಕುರಿತು ಎಲ್ಲಾ ಸದಸ್ಯರಿಂದ ಭಾಷಣ : ಸಿಎಂ ಬಿಎಸ್​ ಯಡಿಯೂರಪ್ಪ

Wednesday, February 26th, 2020
bsy

ಕೊಪ್ಪಳ : ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಎಲ್ಲಾ ಶಾಸಕರು ಸಂವಿಧಾನದ ಕುರಿತು ಮಾತನಾಡಲಿದ್ದು, ಇದೊಂದು ಐತಿಹಾಸಿಕ ಅಧಿವೇಶನ ಆಗಿರಲಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು. ಇಲ್ಲಿನ ಕುಕನೂರಿನಲ್ಲಿ ಮಾತನಾಡಿದ ಅವರು, ಸಂವಿಧಾನ ಕುರಿತು ಶಾಸಕರು ಮಾತನಾಡಲು ನೆರವಾಗಲು ಕನ್ನಡ ಅನುವಾದ ಪ್ರತಿ ಮುದ್ರಿಸಿ ಹಂಚಲಾಗುವುದು. ಇದರಿಂದ ಸಂವಿಧಾನವನ್ನು ಓದಿಕೊಂಡು ಬರಲು ಸಹಾಯಕವಾಗಲಿದೆ. ಬಜೆಟ್ ಮುನ್ನ ಅಂದರೆ ಮಾರ್ಚ್ 3 ಮತ್ತು 4ರಂದು ಎಲ್ಲ ಶಾಸಕರು ಸಂವಿಧಾನದ ಕುರಿತು ಭಾಷಣ ಮಾಡಲಿದ್ದಾರೆ ಎಂದರು. ಇದೇ ಮೊದಲ […]

ಬಳ್ಳಾರಿ : ವಿಧಾನ ಪರಿಷತ್‌ ಸದಸ್ಯ ಸಿಎಂ ಇಬ್ರಾಹಿಂ ವಿರುದ್ಧ ಸಚಿವ ವಿ.ಸೋಮಣ್ಣ ವಾಗ್ದಾಳಿ

Tuesday, February 25th, 2020
sommanna

ಬಳ್ಳಾರಿ : ವಿಧಾನ ಪರಿಷತ್‌ ಸದಸ್ಯ ಸಿಎಂ ಇಬ್ರಾಹಿಂ ವಿರುದ್ಧ ವಸತಿ ಸಚಿವ ವಿ.ಸೋಮಣ್ಣ ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿಯ ಮುಂಡರಗಿ ಪ್ರದೇಶ ವ್ಯಾಪ್ತಿಯಲ್ಲಿಂದು ವಸತಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಇಬ್ರಾಹಿಂ ಯಾವತ್ತಾದರೂ ನಿಜ ಹೇಳಿದ್ದಾರೆಯೇ? ಅವರು ಯಾವತ್ತಾದರೂ ಒಳ್ಳೆಯದನ್ನು ಮಾಡಿದ್ದಾರೆಯೇ? ನಮ್ಮೊಂದಿಗೆ ಅವರೂ ಕೂಡ ಇದ್ದರು. ಮೊದಲು ನಶೆ ಪುಡಿ ತಿಕ್ಕುತ್ತಿದ್ದರು. ಈಗ ವಯಸ್ಸಾಗಿದೆ ಅಲ್ವಾ, ನಶೆ ಬಿಟ್ಟಿರಬಹುದು. ಅದಕ್ಕೆ ಪಿತ್ತ ನೆತ್ತಿಗೇರಿರಬಹುದು ಎಂದು ಛೇಡಿಸಿದ್ದರು. ಇಬ್ರಾಹಿಂ ಅವರು ಹಾಕುವ […]

ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Tuesday, February 25th, 2020
BJP

ಮಂಗಳೂರು : ನೂತನ ಜಿಲ್ಲಾಧ್ಯಕ್ಷರ ಪದಗ್ರಹಣವೆಂದರೆ ಅಧಿಕಾರ ಸ್ವೀಕಾರ ಮಾತ್ರವಲ್ಲ; ಮುಂದಿನ ಗ್ರಾ. ಪಂ. ಚುನಾವಣೆಯಲ್ಲಿ ಪಕ್ಷ ಅಭೂತಪೂರ್ವ ಜಯ ದಾಖ ಲಿಸುವುದಲ್ಲದೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ 8 ಶಾಸಕ ಸ್ಥಾನಗಳನ್ನು ಗೆಲ್ಲುವ ಪ್ರತಿಜ್ಞೆಯನ್ನು ಸ್ವೀಕರಿಸುವ ಕಾರ್ಯಕ್ರಮವೂ ಹೌದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದರು. ಕುದ್ಮುಲ್ ರಂಗರಾವ್‌ ಪುರಭವನದಲ್ಲಿ ಸೋಮವಾರ ಜರಗಿದ ಬಿಜೆಪಿ ದಕ್ಷಿಣ ಕನ್ನಡ ನೂತನ ಜಿಲ್ಲಾಧ್ಯಕ್ಷ ಸುದರ್ಶನ್‌ ಮೂಡುಬಿದಿರೆ ಅವರ ಪದಗ್ರಹಣದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. […]