ಸಿದ್ದರಾಮಯ್ಯ, ಕುಮಾರಸ್ವಾಮಿ ಅಧಿಕಾರ ಕಳೆದುಕೊಂಡು ಹತಾಶೆಯಲ್ಲಿದ್ದಾರೆ : ಆರೋಗ್ಯ ಸಚಿವ ಶ್ರೀರಾಮುಲು ಟೀಕೆ

Friday, February 7th, 2020
health-minister-ariramulu

ಚಿಕ್ಕಮಗಳೂರು : ಅಧಿಕಾರ ಕಳೆದುಕೊಂಡು ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಹತಾಶರಾಗಿ ಮಾತನಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟೀಕಿಸಿದ್ದಾರೆ. ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಅದಗೆಟ್ಟು ಹೋಗಿದೆ ಎಂಬ ಸಿದ್ದಾರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅಧಿಕಾರ ಕಳೆದುಕೊಂಡು ಹತಾಶರಾಗಿದ್ದಾರೆ, ಮತ್ತೊಂದು ಕಡೆ ಕುಮಾರಸ್ವಾಮಿ ಹತಾಶರಾಗಿ ಏನೇನು ಮಾತಾನಾಡುತ್ತಿದ್ದಾರೆ. ಇವರು ಮೈತ್ರಿ ಸರ್ಕಾರ ನಡೆಸೋಕೆ ಆಗದೇ ಸರ್ಕಾರ ಬೀಳಿಸಿಕೊಂಡ್ರು, ಈಗ ಅಧಿಕಾರ ಕಳೆದುಕೊಂಡು ಹತಾಶರಾಗಿ ಮಾತಾನಾಡುತ್ತಿದ್ದಾರೆ ಎಂದು ರಾಮುಲು ಸಿದ್ದು ಹಾಗೂ ಕುಮಾರಸ್ವಾಮಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಇನ್ನು, ಸಿದ್ದರಾಮಯ್ಯ […]

ಬಿಜೆಪಿಯಲ್ಲಿ ಮೂಲ, ವಲಸಿಗ ಎಂಬುದೇ ಇಲ್ಲ : ಶ್ರೀರಾಮುಲು ಸ್ಪಷ್ಟನೆ

Thursday, February 6th, 2020
sriramulu

ಮಡಿಕೇರಿ : ಸಚಿವ ಸಂಪುಟ ಪುನರ್ ರಚನೆ ಕಸರತ್ತಿನ ಬಗ್ಗೆ ಮಡಿಕೇರಿಯಲ್ಲಿ ಪ್ರತಿಕ್ರಿಯಿಸಿದ ಸಚಿವ ಶ್ರೀರಾಮುಲು, ಮುಖ್ಯಮಂತ್ರಿಗಳು ಯಾವುದೇ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಮರ್ಥರಿದ್ದಾರೆ. ಈ ಮೊದಲೇ ಭರವಸೆ ನೀಡಿದ್ದಂತೆ ಗೆದ್ದ ಶಾಸಕರಿಗೆ ಮಂತ್ರಿ ಸ್ಥಾನ ನೀಡಲಾಗಿದೆ. ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಮೂಲ ಅಥವಾ ವಲಸಿಗ ಎಂಬುದೆಲ್ಲಾ ಬಿಜೆಪಿಯಲ್ಲಿ ಇಲ್ಲವೇ ಇಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.  

ಮುಂದಿನ ಬಾರಿಗೆ ಜನರು ಅಧಿಕಾರ ನೀಡಿದರೆ ದೆಹಲಿ ವಾಯು ಮಾಲಿನ್ಯ ನಿಯಂತ್ರಿಸುತ್ತೇವೆ : ಮುಖ್ಯಮಂತ್ರಿ ಕೇಜ್ರಿವಾಲ್​

Thursday, February 6th, 2020
aravind

ನವದೆಹಲಿ : ಮೊದಲ ಅವಧಿಯ ಆಡಳಿತದಲ್ಲಿ ಶಿಕ್ಷಣ, ಆರೋಗ್ಯ ಹಾಗೂ ರಕ್ಷಣೆಗೆ ಆದ್ಯತೆ ನೀಡಿದ ನಮ್ಮ ಸರ್ಕಾರ ಮುಂದಿನ ಅವಧಿಯಲ್ಲಿ ಅಧಿಕಾರಕ್ಕೆ ಬಂದರೆ ಸ್ವಚ್ಛತೆ ಹಾಗೂ ಮಾಲಿನ್ಯ ನಿಯಂತ್ರಣಕ್ಕೆ ಮುಂದಾಗುತ್ತೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ನಮ್ಮ ಪಕ್ಷ ಅಭಿವೃದ್ಧಿ ವಿಚಾರಗಳನ್ನು ಪ್ರಸ್ತಾಪಿಸಿ ಪ್ರಚಾರ ಮಾಡುತ್ತಿದ್ದರೆ. ಬಿಜೆಪಿ ನಿಂದನೆ ಹಾಗೂ ಹಿಂಸಾಚಾರದ ವಿಚಾರದ ಮೂಲಕ ಮತ ಯಾಚಿಸುತ್ತಿದೆ ಎಂದು ಅವರು ಅಕ್ರೋಶ ವ್ಯಕ್ತಪಡಿಸಿದರು. ಬಿಜೆಪಿಗೆ ಅಭಿವೃದ್ಧಿ ಬೇಕಿಲ್ಲ. ಅವರಿಗೆ ಹಿಂದು ಹಾಗೂ ಮುಸ್ಲಿಮರ ಬಗ್ಗೆ […]

ಸಂಪುಟ ವಿಸ್ತರಣೆ : ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನೂತನ ಹತ್ತು ಮಂದಿ ಶಾಸಕರು

Thursday, February 6th, 2020
Raj-Bhawan

ಬೆಂಗಳೂರು : ಉಪಚುನಾವಣೆಯಲ್ಲಿ ಗೆದ್ದ ಹತ್ತು ಮಂದಿ ಶಾಸಕರು ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲ ನೂತನ ಸಚಿವರಿಗೆ ಪ್ರಮಾಣ ವಚನ ಭೋಧಿಸಿದರು. ಗೋಕಾಕ್ ಶಾಸಕ ರಮೇಶ್‌ ಜಾರಕಿಹೊಳಿ, ವಿಜಯನಗರ ಶಾಸಕ ಆನಂದ್‌ ಸಿಂಗ್‌, ಕಾಗವಾಡ ಶಾಸಕ ಶ್ರೀಮಂತ ಪಾಟೀಲ್‌, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್‌, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್‌, ಯಶವಂತಪುರ ಶಾಸಕ ಎಸ್‌.ಟಿ. ಸೋಮಶೇಖರ್‌, ಕೆ.ಆರ್. ಪುರಂ ಶಾಸಕ ಬೈರತಿ ಬಸವರಾಜು, ಮಹಾಲಕ್ಷ್ಮೀ ಲೇಔಟ್ ಶಾಸಕ ಕೆ. […]

ರಾಜಕೀಯದಲ್ಲಿ ಇದೆಲ್ಲ ಸಹಜ, ಮುಂದಿನ ದಿನಗಳಲ್ಲಿ ಸಚಿವನಾಗುವ ನಿರೀಕ್ಷೆ ಇದೆ : ಮಾಜಿ ಶಾಸಕ ಎಚ್. ವಿಶ್ವನಾಥ್ ವಿಶ್ವಾಸ

Thursday, February 6th, 2020
h-vishwanath

ಬೆಂಗಳೂರು : ನೂತನ ಸಚಿವರ ಪಟ್ಟಿ ಪ್ರಕಟವಾಗುತ್ತಿದ್ದಂತೆ ಬಿಜೆಪಿಯಲ್ಲಿ ಒಳಗಿಂದೊಳಗೆ ಅಸಮಾಧಾನ ತಲೆದೋರಿದೆ. ಮಂತ್ರಿ ಸ್ಥಾನದಿಂದ ವಂಚಿತರಾಗಿರುವ ಎಚ್. ವಿಶ್ವನಾಥ್ ತಮ್ಮ ಅಸಮಾಧಾನದ ನಡುವೆಯೂ ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿರುವವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗಿದ್ದವರು ಸಚಿವರಾಗುತ್ತಿರುವುದು ಸಂತೋಷ ತಂದಿದೆ. ನೂತನ ಸಚಿವರಿಂದ ಅಭಿವೃದ್ಧಿ ಸಾಧ್ಯವಾಗಲಿ. ಸಂದರ್ಭ, ಸಮಯ ಬಂದಾಗ ನನಗೂ ಸ್ಥಾನ ಸಿಗುತ್ತದೆ. ರಾಜಕಾರಣದಲ್ಲಿ ಇದೆಲ್ಲ ಸಹಜ. ಮುಂದಿನ ದಿನಗಳಲ್ಲಿ ಸಚಿವನಾಗುವ ನಿರೀಕ್ಷೆ ಇದೆ ಎಂದು ಮಾಜಿ ಶಾಸಕ ಎಚ್. ವಿಶ್ವನಾಥ್ ಹೇಳಿದ್ದಾರೆ. ಜೆಡಿಎಸ್ ತೊರೆದು […]

ಲೋಕಸಭೆಯಲ್ಲಿ ಗದ್ದಲ ಸೃಷ್ಟಿಸಿದ ಅನಂತ ಕುಮಾರ್​ ಹೆಗಡೆ ವಿವಾದಾತ್ಮಕ ಹೇಳಿಕೆ : ಕ್ಷಮೆಗೆ ಪಟ್ಟು ಹಿಡಿದ ಪ್ರತಿಪಕ್ಷಗಳು

Tuesday, February 4th, 2020
loka-sabhe

ನವದೆಹಲಿ : ಗಾಂಧೀಜಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಲೋಕಸಭೆಯಲ್ಲಿ ಭಾರೀ ಆಕ್ರೋಶ ವ್ಯಕ್ತವಾಯಿತು. ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿದ್ದ ಸಂಸದರು ಈ ಕುರಿತು ಕ್ಷಮೆಯಾಚಿಸಬೇಕು ಎಂದು ಪ್ರತಿಪಕ್ಷಗಳು ಪಟ್ಟು ಹಿಡಿದವು. ಸದಾ ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದ ಹೆಗಡೆ ಈಗ ಗಾಂಧೀಜಿ ಕುರಿತು ಅವಹೇಳನ ಹೇಳಿಕೆ ನೀಡುತ್ತಿದ್ದಾರೆ. ಈ ಕುರಿತು ಎಲ್ಲೆಡೆ ಆಕ್ಷೇಪ ವ್ಯಕ್ತವಾದರೂ ಅವರು ಕ್ಷಮೆಯಾಚಿಸಿಲ್ಲ. ಪಕ್ಷ ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. […]

ಮಹಾತ್ಮ ವಿರುದ್ಧ ಹೆಗಡೆ ನಿಂದನೆ : ದೆಹಲಿಯಲ್ಲಿ ಅನಂತಕುಮಾರ್ ಭೇಟಿ ಮಾಡಿದ ನಳಿನ್​ ಕುಮಾರ್​​ ಕಟೀಲ್

Tuesday, February 4th, 2020
nalin

ನವದೆಹಲಿ : ಗಾಂಧೀಜಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಂಸದ ಅನಂತ್ಕುಮಾರ್ ಹೆಗಡೆ ನಿವಾಸಕ್ಕೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದ್ದರು. ಗಾಂಧೀಜಿ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಹಿನ್ನೆಲೆ, ಬಿಜೆಪಿ ಹೈ ಕಮಾಂಡ್ ಹೆಗಡೆಯನ್ನು ತರಾಟೆಗೆ ತೆಗೆದುಕೊಂಡಿದೆ. ಈ ಹಿನ್ನೆಲೆ ಲೋಧಿ ಎಸ್ಟೇಟ್ನಲ್ಲಿರುವ ಅನಂತ ಕುಮಾರ್ ನಿವಾಸಕ್ಕೆ ತೆರಳಿ ಕಟೀಲ್ ಚರ್ಚೆ ನಡೆಸಿದ್ದಾರೆ. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗಾಂಧೀಜಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ‌ ವಿಷಯ ಚರ್ಚಿಸಿದ್ದೇನೆ. ಈಗಾಗಲೇ […]

ವಿಶ್ವನಾಥ್ ಹಳ್ಳಿ ಹಕ್ಕಿಯಲ್ಲ. ಪಕ್ಷದಿಂದ ಪಕ್ಷಕ್ಕೆ ಹಾರುವ ಹಕ್ಕಿ ಅಂತ ಎಂದು ವ್ಯಂಗ್ಯವಾಡಿದ ಮಾಜಿ ಸಂಸದ ಆರ್.ಧೃವ ನಾರಾಯಣ

Monday, February 3rd, 2020
druva-narayan

ಮೈಸೂರು : ಮೈತ್ರಿ ಸರ್ಕಾರದ ಪತನದ ಕುರಿತು ಪುಸ್ತಕ ಬರೆಯುವ ಮಾಜಿ ಸಚಿವ ಹೆಚ್.ವಿಶ್ವನಾಥ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಸಂಸದ ಆರ್.ಧೃವ ನಾರಾಯಣ ನಾನು ಈಗಾಗಲೇ ಹೇಳಿದ್ದೇನೆ ವಿಶ್ವನಾಥ್ ಹಳ್ಳಿ ಹಕ್ಕಿಯಲ್ಲ. ಪಕ್ಷದಿಂದ ಪಕ್ಷಕ್ಕೆ ಹಾರುವ ಹಕ್ಕಿ ಅಂತ ಎಂದು ವ್ಯಂಗ್ಯವಾಡಿದರು. ಮೈಸೂರಿನಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ವಿಶ್ವನಾಥ್ ಅವರಿಗೆ ಯಾವುದೇ ನೈತಿಕತೆಯಿಲ್ಲ. ಇದೊಂದು ಬ್ಲಾಕ್ ಮೇಲ್ ಮಾಡುವ ತಂತ್ರ. ಕಾಂಗ್ರೆಸ್ ಪಕ್ಷ ಅವರಿಗೆ ಎಲ್ಲವನ್ನು ಕೊಟ್ಟಿತ್ತು. ಸಚಿವರನ್ನಾಗಿಯೂ ಕೂಡ ಮಾಡಿದ್ದರು. ಕಾಂಗ್ರೇಸ್ ಪಕ್ಷಕ್ಕೆ ದ್ರೋಹ […]

“ಯಾವುದೇ ಕಾರಣಕ್ಕೂ ಬಿಜೆಪಿ ಸರ್ಕಾರವನ್ನು ಬೀಳೋಕೆ ಬಿಡಲ್ಲ” : ಸುರೇಶ್ ಗೌಡ

Saturday, February 1st, 2020
suresh-gowda

ಮಂಡ್ಯ : ಒಂದೆಡೆ ಆಪರೇಷನ್ ಕಮಲದಿಂದಾಗಿ ಕುಗ್ಗಿರುವ ಜೆಡಿಎಸ್ ವರ್ಚಸ್ಸನ್ನು ಮತ್ತಷ್ಟು ಹೆಚ್ಚಿಸುವ ಸಲುವಾಗಿ ಪಕ್ಷದ ವರಿಷ್ಠರು ಜೆಡಿಯು ಉಚ್ಛಾಟಿತ ನಾಯಕ ಪ್ರಶಾಂತ್ ಕಿಶೋರ್ ಅವರನ್ನು ಪಕ್ಷಕ್ಕೆ ಕರೆತರುವ ಪ್ರಯತ್ನ ನಡೆಸುತ್ತಿದ್ದರೆ, ಮತ್ತೊಂದೆಡೆ ಸ್ವತಃ ಜೆಡಿಎಸ್ ಶಾಸಕರು ಬಹಿರಂಗವಾಗಿ ಬಿಜೆಪಿ ಪಕ್ಷಕ್ಕೆ ಬೆಂಬಲ ಸೂಚಿಸುವ ಮೂಲಕ ಮುಂದಿನ ದಿನಗಳಲ್ಲಿ ಮತ್ತಷ್ಟು ಜನ ಶಾಸಕರು ಪಕ್ಷ ತೊರೆಯುವ ಸೂಚನೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಎಂಬುದು ಕಳೆದ ಮೂರ್ನಾಲ್ಕು ತಿಂಗಳಿಂದ ಕಗ್ಗಂಟಾಗಿದೆ. ಸಚಿವ ಸ್ಥಾನಕ್ಕೆ ಮೂಲ ಬಿಜೆಪಿಗರು […]

ಕೋಮು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಎಂಪಿ ರೇಣುಕಾಚಾರ್ಯ ವಿರುದ್ಧ ದೂರು ದಾಖಲು

Friday, January 31st, 2020
renukacharya

ದಾವಣಗೆರೆ : ಕೋಮು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ವಿರುದ್ಧ ದೂರು ದಾಖಲಿಸಲಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಪರ ಸಮಾವೇಶದಲ್ಲಿ ಮಾತನಾಡಿದ ಅವರು, ಮುಸ್ಲಿಮರು ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಬದಲು ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟುಕೊಳ್ಳುತ್ತಾರೆ. ಇದಕ್ಕಾಗಿ ನಿಮಗೆ ಮಸೀದಿ ಬೇಕೆ ಎಂದಿದ್ದರು. ಇವರ ಹೇಳಿಕೆ ವಿರುದ್ಧ ಮುಸ್ಲಿಂ ಸಮುದಾಯ ಪೊಲೀಸರಿಗೆ ದೂರು ನೀಡಿದ್ದರು. ದೂರು ಬಂದ ಹಿನ್ನೆಲೆ ಕೋಮು ಭಾವನೆ ಕೆರಳಿಸಿದ ಆರೋಪದ ಮೇಲೆ ಐಪಿಸಿ ಸೆಕ್ಷನ್ 153 A, 295 A […]