17 ಶಾಸಕರಿಂದಲೇ ಬಿಜೆಪಿ ಅಧಿಕಾರಕ್ಕೆ ಬಂದಿರೋದು : ಎಂಟಿಬಿ ನಾಗರಾಜ್​

Friday, January 31st, 2020
MTB-Nagraj

ಹೊಸಕೋಟೆ : ಸಿಎಂ ಬಿಎಸ್ವೈ ಸಚಿವ ಸಂಪುಟದಲ್ಲಿ ಸೋತವರಿಗೆ ಮಂತ್ರಿಸ್ಥಾನ ಸಿಗುವುದಿಲ್ಲ ಎಂದು ಹೇಳಿದವರ ವಿರುದ್ಧ ಹೊಸಕೋಟೆ ಪರಾಜಿತ ಅಭ್ಯರ್ಥಿ ಎಂಟಿಬಿ ನಾಗರಾಜ್ ಕಿಡಿಕಾರಿದ್ದಾರೆ. ” 17 ಶಾಸಕರ ರಾಜೀನಾಮೆಯಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ರಾಜೀನಾಮೆಗೂ ಮೊದಲು ಸಿಎಂ ಬಿಎಸ್ ಯಡಿಯೂರಪ್ಪ ಜೊತೆ ಹಲವು ಬಾರಿ ಚರ್ಚೆ ನಡೆದಿದೆ. ಅಲ್ಲಿ ನಡೆದಿರುವ ಚರ್ಚೆ ಮಾತುಕತೆ ಎಲ್ಲರಿಗೂ ತಿಳಿದಿದೆ. ಇಲ್ಲಿ ಸೋಲು ಗೆಲುವಿನ ಪ್ರಶ್ನೆ ಬರುವುದಿಲ್ಲ,” ಎಂದು ತಿರುಗೇಟು ನೀಡಿದ್ದಾರೆ. ಹೊಸಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,” 17 […]

ಬಿಜೆಪಿ ಮತ್ತು ಆರ್‌ಎಸ್‌ಎಸ್ ಮುಕ್ತ ಭಾರತ ನಿರ್ಮಾಣ : ಮಾಜಿ ಕಾನೂನು ಸಚಿವ ಎಂ.ಸಿ.ನಾಣಯ್ಯ ಕರೆ

Friday, January 31st, 2020
upavasa

ಮಡಿಕೇರಿ : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧವಾಗಿ ಪ್ರಗತಿಪರ ಜನಾಂದೋಲನ ವೇದಿಕೆ ವತಿಯಿಂದ ನಗರದ ಗಾಂಧಿ ಮಂಟಪದ ಮುಂಭಾಗ ಐದು ದಿನಗಳ ಕಾಲ ನಡೆದ ಉಪವಾಸ ಸತ್ಯಾಗ್ರಹವನ್ನು, ಮಾನವ ಪ್ರೀತಿಯ ಸಂದೇಶದೊಂದಿಗೆ ಮಾನವ ಸರಪಳಿ ನಿರ್ಮಿಸಿ ಕೊನೆಹಾಡಲಾಯಿತು. ಗಣರಾಜ್ಯೋತ್ಸವದ ದಿನವಾದ ಜ.26 ರಿಂದ ಆರಂಭಗೊಂಡ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡ ವೇದಿಕೆಯ ಸಂಚಾಲಕ ವಿ.ಪಿ. ಶಶಿಧರ್, ಕಾರ್ಮಿಕ ಮುಖಂಡ ಪಿ.ಆರ್. ಭರತ್, ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ನೆರವಂಡ ಉಮೇಶ್ ಮತ್ತು ವೆಲ್‌ಫೇರ್ […]

ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಬಿಜೆಪಿಗೆ ಸೇರ್ಪಡೆ

Wednesday, January 29th, 2020
saina

ನವದೆಹಲಿ : ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ಸೈನಾ ನೆಹ್ವಾಲ್ ಅವರಿಗೆ ಬಿಜೆಪಿಗೆ ಶಾಲನ್ನು ಹಾಕುವ ಮೂಲಕ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ 29 ವರ್ಷದ ಸೈನಾ, ನಾನು ನರೇಂದ್ರ ಮೋದಿ ಅವರಿಂದ ಪ್ರೇರಣೆಗೊಂಡು ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ ಎಂದು ತಿಳಿಸಿದರು. ನಾನು ದೇಶಕ್ಕಾಗಿ ಹಲವು ಪದಕಗಳನ್ನು ಗೆದ್ದುಕೊಂಡಿದ್ದೇನೆ. ನಾನು ಕಠಿಣ ಪರಿಶ್ರಮ ಪಡುವ ವ್ಯಕ್ತಿಯಾಗಿದ್ದು, ಕಠಿಣ ಪರಿಶ್ರಮ ಪಡುವ ವ್ಯಕ್ತಿಗಳನ್ನು ನಾನು ಇಷ್ಟ ಪಡುತ್ತೇನೆ. ಪ್ರಧಾನಿ ನರೇಂದ್ರ […]

ಪಕ್ಷ ಬೆಳೆಸುವಲ್ಲಿ ಪಾಟ್ಕರ್ ಪಾತ್ರ ಸ್ಮರಿಸಿದ ಯಡಿಯೂರಪ್ಪ : ಬಿಜೆಪಿ ಹಿರಿಯ ಮುಖಂಡ ಡಾ.ಪಾಟ್ಕರ್ ಮನೆಗೆ ಸಿಎಂ ಭೇಟಿ

Tuesday, January 28th, 2020
patkar

ಮಡಿಕೇರಿ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಡಿಕೇರಿಯಲ್ಲಿರುವ ಬಿಜೆಪಿ ಹಿರಿಯ ಮುಖಂಡ ಡಾ.ಎಂ.ಜಿ.ಪಾಟ್ಕರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮಡಿಕೇರಿಯ ರೋಟರಿ ಸಭಾಂಗಣ ಬಳಿಯಲ್ಲಿನ ಡಾ.ಎಂ.ಜಿ.ಪಾಟ್ಕರ್ ಮನೆಗೆ ತೆರಳಿದ ಮುಖ್ಯಮಂತ್ರಿ ಯಡಿಯೂರಪ್ಪ, ಹಲವಾರು ವಷ೯ಗಳ ಹಿಂದಿನಿಂದಲೂ ಕೊಡಗಿನಲ್ಲಿ ಬಿಜೆಪಿಯನ್ನು ಪ್ರಬಲವಾಗಿ ಸಂಘಟಿಸುವಲ್ಲಿ ಕಾರಣರಾದ ಡಾ.ಎಂ.ಜಿ.ಪಾಟ್ಕರ್ ದಂಪತಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಕೊಡಗಿನಲ್ಲಿ ಬಿಜೆಪಿಗೆ ಕಛೇರಿ ಇಲ್ಲದ ವಷ೯ಗಳಲ್ಲಿ ಡಾ.ಪಾಟ್ಕರ್ ತಮ್ಮ ಮನೆಯಲ್ಲಿಯೇ ಪಕ್ಷದ ಬೆಳವಣಿಗೆಗೆ ಅವಕಾಶ ಕಲ್ಪಿಸಿದ್ದರು. ಕೊಡಗಿನಲ್ಲಿ ಬಿಜೆಪಿ ಸಂಘಟಿಸುವಲ್ಲಿಯೂ ಡಾ.ಪಾಟ್ಕರ್ ಅವರ ಪಾತ್ರ ಮುಖ್ಯವಾದದ್ದು […]

ಬೆಂಗಳೂರು : ಜನವರಿ 31ರಂದು ಬಿ.ಎಸ್​ ಯಡಿಯೂರಪ್ಪ ಸಂಪುಟ ವಿಸ್ತರಣೆ ಸಾಧ್ಯತೆ

Tuesday, January 28th, 2020
BSY

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಚಿವ ಸಂಪುಟ ವಿಸ್ತರಣೆಯದ್ದೇ ತಲೆನೋವಾಗಿದೆ. ವಿವಿಧ ಕಾರಣಗಳಿಂದ ವಿಳಂಬವಾಗುತ್ತಲೇ ಇರುವ ಸಂಪುಟ ವಿಸ್ತರಣೆಯ ದಿನವನ್ನು ಯಡಿಯೂರಪ್ಪ ಜ. 29ಕ್ಕೆ ಫಿಕ್ಸ್ ಮಾಡಿದ್ದರು. ಈಗ ಅದು ಜ. 31ಕ್ಕೆ ಹೋಗಿದೆ. ಶುಕ್ರವಾರ ಸಂಪುಟ ವಿಸ್ತರಣೆಯಾಗುವುದು ಬಹುತೇಕ ಖಚಿತವೆನ್ನಲಾಗಿದೆ. ಆದರೆ, ಹೈಕಮಾಂಡ್ ಒಪ್ಪಿಗೆ ಮೇಲೆ ಎಲ್ಲವೂ ನಿಂತಿದೆ. ಸಂಪುಟ ವಿಸ್ತರಣೆಗೆ ಸಂಭಾವ್ಯ ಸಚಿವರ ಪಟ್ಟಿಯನ್ನು ಯಡಿಯೂರಪ್ಪ ಈಗಾಗಲೇ ಬಿ.ಎಲ್. ಸಂತೋಷ್ ಮೂಲಕ ಹೈಕಮಾಂಡ್ಗೆ ತಲುಪಿಸಿದ್ಧಾರೆ. ಈ ಪಟ್ಟಿಗೆ ಹೈಕಮಾಂಡ್ ಕೂಡ ಒಪ್ಪಿತ್ತೆಂಬ […]

ಶಾಸಕ ರೇಣುಕಾಚಾರ್ಯರನ್ನು ಸಸ್ಪೆಂಡ್ ಮಾಡಿ : ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತೀವ್ರ ವಾಗ್ದಾಳಿ

Thursday, January 23rd, 2020
renukacharya

ಬೆಂಗಳೂರು : ಮುಸ್ಲಿಂರಿಗೆ ಬಂದಿರುವ ಅನುದಾನವನ್ನು ನಾನು ಖರ್ಚು ಮಾಡಲ್ಲ ಎಂಬ ವಿವಾದಿತ ಹೇಳಿಕೆ ನೀಡಿದ್ದ ಶಾಸಕ ರೇಣುಕಾಚಾರ್ಯ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಶಾಸಕ ರೇಣುಕಾಚಾರ್ಯರನ್ನು ಈ ಕೂಡಲೇ ಸಸ್ಪಂಡ್ ಮಾಡಬೇಕು. ವೋಟ್ ಹಾಕಿದವರಿಗೆ ಮಾತ್ರ ಕೆಲಸ ಮಾಡಬೇಕಾ? ಅವರು ಎಷ್ಟು ಸಾರಿ ಸೋತಿದ್ದಾರೆ ಅದಕ್ಕೆ ಅಲ್ಪ ಅಸಂಖ್ಯಾತರೇ ಕಾರಣನಾ? ವೋಟ್ ಹಾಕಿದವರಿಗೆ ಮಾತ್ರ ಕೆಲಸ ಅನ್ನೋ ಮಾತು ಖಂಡನೀಯ ಎಂದು […]

ಸಮಾಜಘಾತುಕ ಶಕ್ತಿಗಳ ಬಲ ಹೆಚ್ಚಾಗಲು ಹಿಂದಿನ ಸರ್ಕಾರ ಕಾರಣ : ಡಿಸಿಎಂ ಅಶ್ವಥ್ ನಾರಾಯಣ್ ಆರೋಪ

Thursday, January 23rd, 2020
DCM Ashwath Narayan

ಮೈಸೂರು : ರಾಜ್ಯದಲ್ಲಿ ಬಾಂಬ್ ಪತ್ತೆಯಂತಹ ಪ್ರಕರಣಗಳಿಗೆ ಹಿಂದಿನ ಸರ್ಕಾರಗಳೇ ಕಾರಣ. ಸಮಾಜಘಾತುಕ ಶಕ್ತಿಗೆ ಕಡಿವಾಣ ಹಾಕೋದು ಬಿಟ್ಟು ಪ್ರೋತ್ಸಾಹ ಕೊಟ್ಟ ಪರಿಣಾಮ ಇಂತಹ ಘಟನೆಗಳು ನಡೆಯುತ್ತಿವೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಡಿಸಿಎಂ, ಹಿಂದಿನ ಸರ್ಕಾರ ಸಮಾಜಘಾತುಕ ಕೆಲಸ ಮಾಡುತ್ತಿದ್ದವರ ಮೇಲಿನ ಕೇಸ್‍ಗಳನ್ನ ವಾಪಸ್ ತೆಗೆದುಕೊಂಡಿದ್ದಾರೆ. ಅದಕ್ಕೆ ಅವರೆಲ್ಲಾ ಕಾನೂನು ಮೀರಿ ದೊಡ್ಡ ಶಕ್ತಿಯಾಗಿ ನಿಂತಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಇಂದು ಈ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದರು. ನಮ್ಮ ಸರ್ಕಾರ ಎಲ್ಲವನ್ನು ನಿಯಂತ್ರಣ […]

ಕೆಪಿಸಿಸಿ ಪಟ್ಟಕ್ಕಾಗಿ ಡಿ.ಕೆ ಶಿವಕುಮಾರ್ ಹಾಗೂ ಎಂ.ಬಿ ಪಾಟೀಲ್ ನಡುವೆ ತೀವ್ರ ಪೈಪೋಟಿ

Wednesday, January 22nd, 2020
KPCC

ಬೆಂಗಳೂರು : ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಯಾರಿಗೆ ಕೊಡಬೇಕು ಎಂಬ ಬಗ್ಗೆ ಮಹತ್ವದ ನಿರ್ಧಾರಕ್ಕೆ ಬರಲು ಹೈಕಮಾಂಡ್ ಪರದಾಡುತ್ತಿದೆ. ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಎಂ.ಬಿ ಪಾಟೀಲ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದ್ದು, ಯಾರಿಗೆ ಪಕ್ಷದ ಹೊಣೆಗಾರಿಕೆ ವಹಿಸಿದರೆ ಅನುಕೂಲಕರ ಎನ್ನುವ ಬಗ್ಗೆಯೂ ಕೂಲಂಕಷವಾಗಿ ಅಧ್ಯಯನ ನಡೆಸಲು ಸಮಿತಿಯಿಂದ ವರದಿ ಪಡೆದಿತ್ತು. ಹೈಕಮಾಂಡ್ ಸಮಿತಿ ವರದಿ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆಸಿಕೊಂಡು ಚರ್ಚೆ ನಡೆಸಿದ ಸೋನಿಯಾ ಗಾಂಧಿ, ಅಂತಿಮವಾಗಿ ಡಿ.ಕೆ ಶಿವಕುಮಾರ್ […]

ಬೆಂಗಳೂರು : ಸಿದ್ದರಾಮಯ್ಯ ವಿರುದ್ಧವೇ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ

Tuesday, January 21st, 2020
siddaramaiah

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ನಾಯಕತ್ವಕ್ಕಾಗಿ ಪಕ್ಷದ ನಾಯಕರ ನಡುವಿನ ಮುಸುಕಿನ ಗುದ್ದಾಟ ಈಗ ಬೀದಿಗೆ ಬಂದಿದ್ದು, ಎರಡು ಹುದ್ದೆ ವಿಭಜನೆಗೆ ವಿರೋಧಿಸಿದ್ದ ಸಿದ್ದರಾಮಯ್ಯ ವಿರುದ್ಧ ಪರಮೇಶ್ವರ್‌, ಡಿ.ಕೆ.ಶಿವಕುಮಾರ್‌ ಬಹಿರಂಗವಾಗಿಯೇ ತಿರುಗೇಟು ನೀಡಿದ್ದಾರೆ. ಹೊಸ ಬೆಳವಣಿಗೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಕಾರ್ಯಕರ್ತರು ಪಕ್ಷದ ಕಚೇರಿ ಮುಂದೆಯೇ ಪ್ರತಿಭಟನೆ ಮಾಡುವ ಮೂಲಕ ನಾಯಕತ್ವದ ಗಲಾಟೆಯನ್ನು ಬೀದಿಗೆ ತಂದಿದ್ದಾರೆ. ಇದರ ಹಿಂದೆ ಡಿ.ಕೆ.ಶಿವಕುಮಾರ್‌ ಆಪ್ತರು ಸೇರಿಕೊಂಡಿದ್ದಾರೆಂದು ಆರೋಪಿಸಲಾಗಿದೆ. ಶಾಸಕಾಂಗ ಪಕ್ಷದ ನಾಯಕ ಹಾಗೂ ಪ್ರತಿಪಕ್ಷದ ನಾಯಕ ಎರಡು ಹುದ್ದೆಗಳು ಪ್ರತ್ಯೇಕವಾಗಬೇಕೆಂದು ಪರಮೇಶ್ವರ್‌ […]

ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಜ. 27 ರಂದು ಮಂಗಳೂರಿಗೆ

Tuesday, January 21st, 2020
kendra-sachiva

ಮಂಗಳೂರು : ಸಿಎಎ ಮತ್ತು ಎನ್‌ಆರ್‌ಸಿ ಪರವಾಗಿ ದ.ಕ. ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜ. 27ರ ಮಧ್ಯಾಹ್ನ ಮಂಗಳೂರಿನಲ್ಲಿ ನಡೆಯಲಿರುವ ಬೃಹತ್‌ ಸಮರ್ಥನಾ ಸಮಾವೇಶದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಭಾಗವಹಿಸುವ ನಿರೀಕ್ಷೆಯಿದೆ. ಕೂಳೂರಿನ ಗೋಲ್ಡ್‌ಪಿಂಚ್‌ ಮೈದಾನದಲ್ಲಿ ಮಧ್ಯಾಹ್ನ 3ರ ಸುಮಾರಿಗೆ ಸಮಾವೇಶ ನಡೆಸಲು ಸಿದ್ಧತೆ ನಡೆಸಲಾಗಿದ್ದು, ಈ ಕುರಿತ ಅಂತಿಮ ತಯಾರಿ ಮಾಡಲಾಗುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅಥವಾ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ […]