ಕೊಡಗು ಕಾಂಗ್ರೆಸ್ ಹೀನಾಯ ಸ್ಥಿತಿಯಲ್ಲಿದೆ : ಜೆಡಿಎಸ್ ಅಲ್ಪಸಂಖ್ಯಾತರ ಘಟಕ ಟೀಕೆ

Tuesday, January 14th, 2020
isaq-khan

ಮಡಿಕೇರಿ : ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷರ ವಿರುದ್ಧ ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಈ.ಸುರೇಶ್ ಅವರು ನೀಡಿರುವ ಹೇಳಿಕೆ ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿರುವ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್, ಜಿಲ್ಲಾ ಕಾಂಗ್ರೆಸ್ಸಿಗರು ಇತರ ಪಕ್ಷಗಳ ಬಗ್ಗೆ ಮಾತನಾಡುವ ಮೊದಲು ಕಾಂಗ್ರೆಸ್‌ನ ಈಗಿನ ಸ್ಥಿತಿ ಹೀನಾಯವಾಗಿದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳುವುದು ಸೂಕ್ತವೆಂದು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ಸಿಗಿಲ್ಲವೆಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಈ ದೇಶವನ್ನು […]

ಶಾಸಕ ಕೆ.ಮಹದೇವ್‌ರವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಅರಿವಿಲ್ಲ : ಮಾಜಿ ಸಚಿವ ಕೆ.ವೆಂಕಟೇಶ್‌

Monday, January 13th, 2020
venkatesh

ಪಿರಿಯಾಪಟ್ಟಣ : ವಸೂಲಿ ಧಂದೆಯಲ್ಲಿ ಮುಳುಗಿರುವ ಶಾಸಕ ಕೆ.ಮಹದೇವ್‌ ಅವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಅರಿವಿಲ್ಲ ಎಂದು ಮಾಜಿ ಸಚಿವ ಕೆ.ವೆಂಕಟೇಶ್‌ ಹರಿಹಾಯ್ದರು. ಭಾನುವಾರ ಆಯೋಜಿಸಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಶಾಸಕ ಕೆ.ಮಹದೇವ್‌ಗೆ ಸಾಮಾನ್ಯ ಜ್ಞಾನವಿಲ್ಲ: ಕಳೆದ ಮೂರು ವರ್ಷಗಳ ಹಿಂದೆ ಅಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಜಲಸಂಪನ್ಮೂಲ ಸಚಿವರಾಗಿದ್ದ ಎಂ.ಬಿ.ಪಾಟೀಲ್‌ ಅವರನ್ನು ತಾಲೂಕಿನ ಮುತ್ತಿನ ಮುಳುಸೋಗೆ ಗ್ರಾಮಕ್ಕೆ ಕರೆತಂದು 300 ಕೋಟಿ ರೂ. ವೆಚ್ಚದಲ್ಲಿ 150 ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ […]

130ಕೋಟಿ ಜನರ ಪೌರತ್ವವನ್ನು ಉಳಿಸುವುದಕ್ಕಾಗಿ ಕಾಯ್ದೆ ಜಾರಿ : ಶಾಸಕ ಕೆ.ಜಿ.ಬೋಪಯ್ಯ ಸ್ಪಷ್ಟನೆ

Monday, January 13th, 2020
BJP-Meeting

ಮಡಿಕೇರಿ : ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಈ ದೇಶದಲ್ಲಿರುವ 130 ಕೋಟಿ ಜನತೆಯ ಪೌರತ್ವವನ್ನು ಉಳಿಸುವುದಕ್ಕಾಗಿ ಜಾರಿಗೆ ತರಲಾಗುತ್ತಿದೆಯೇ ಹೊರತು ಯಾವುದೇ ಧರ್ಮದವರ ಪೌರತ್ವವನ್ನು ಕಸಿದುಕೊಳ್ಳುವುದಕ್ಕಲ್ಲ ಎಂದು ಶಾಸಕ ಹಾಗೂ ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಸ್ಪಷ್ಟಪಡಿಸಿದ್ದಾರೆ. ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ನಗರದ ಬಾಲಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪ್ರಬುದ್ಧರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪೌರತ್ವ ಕಾಯ್ದೆ ಸಂವಿಧಾನದ ಆಶಯಗಳಿಗೆ ವಿರುದ್ಧವಾದುದು ಎಂದು ಕಾಂಗ್ರೆಸ್ ಹಾಗೂ ಎಡಪಕ್ಷಗಳು ಆರೋಪಿಸುತ್ತಿರುವ […]

ಜಿಲ್ಲಾ ಕಾಂಗ್ರೆಸ್ ನಿಲುವಿಗೆ ಜೆಡಿಎಸ್ ಆಕ್ಷೇಪ

Saturday, January 11th, 2020
ಜಿಲ್ಲಾ ಕಾಂಗ್ರೆಸ್ ನಿಲುವಿಗೆ ಜೆಡಿಎಸ್ ಆಕ್ಷೇಪ

ಮಡಿಕೇರಿ : ಕೇಂದ್ರದ ಪೌರತ್ವ ಕಾಯ್ದೆ ವಿರುದ್ಧ ಜ.11 ರಂದು ಮಡಿಕೇರಿಯಲ್ಲಿ ಜಾತ್ಯತೀತ ಮತ್ತು ಪಕ್ಷಾತೀತವಾಗಿ ಜನಾಂದೋಲನ ಸಭೆ ನಡೆಯಲಿದ್ದು, ಈ ಸಮಾವೇಶದಲ್ಲಿ ಬಿಜೆಪಿಯೇತರವಾದ ಎಲ್ಲಾ ಪಕ್ಷಗಳು ಪ್ರಮುಖ ಪಾತ್ರ ವಹಿಸಲಿವೆ. ಆದರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಕಾಂಗ್ರೆಸ್ ಪಕ್ಷ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಹೇಳಿಕೆ ನೀಡಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೋಮುವಾದಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯಿಂದ […]

ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಕ್ರಮಕ್ಕೆ ಮನ್ಸೂರ್ ಅಲಿ ಒತ್ತಾಯ

Tuesday, January 7th, 2020
Manzoor-Ali

ಮಡಿಕೇರಿ : ಮುಸಲ್ಮಾರ ವಿರುದ್ಧ ಪ್ರಚೋದನಾಕಾರಿ ಭಾಷಣ ಮಾಡಿರುವ ಶಾಸಕ ಸೋಮಶೇಖರ್ ರೆಡ್ಡಿ ಅವರು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಸಮಾಜದಲ್ಲಿ ಒಡಕು ಮೂಡಿಸಲು ಯತ್ನಿಸಿದ್ದಾರೆ ಎಂದು ಆರೋಪಿಸಿರುವ ಜಾತ್ಯತೀತ ಜನತಾದಳದ ಜಿಲ್ಲಾ ಮುಖಂಡ ಮನ್ಸೂರ್ ಅಲಿ, ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ದೇಶದ ಸಂವಿಧಾನದ ಆಶಯದಂತೆ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಜನರಿಂದ ಆಯ್ಕೆಯಾಗಿ ಬಂದಿರುವ ಶಾಸಕರು ಬೇಜವಬ್ದಾರಿ ವರ್ತನೆ ತೋರಿದ್ದಾರೆ ಎಂದು ಟೀಕಿಸಿದ್ದಾರೆ. ಒಗ್ಗಟ್ಟಿನ ಸಮಾಜದಲ್ಲಿ ಅಶಾಂತಿ ಮೂಡಿಸಿ ರಾಜಕೀಯ ಲಾಭ ಪಡೆಯಲು ಹವಣಿಸಿದ […]

ಬಳ್ಳಾರಿ : ಶಾಸಕ ಜಿ.ಸೋಮಶೇಖರ ರೆಡ್ಡಿ ಬಂಧನಕ್ಕೆ ಕಾಂಗ್ರೆಸ್ ಜಿಲ್ಲಾ ಮುಖಂಡರ ಒತ್ತಾಯ

Monday, January 6th, 2020
ballari

ಬಳ್ಳಾರಿ : ಪ್ರಚೋದನಕಾರಿ ಭಾಷಣ ಮಾಡಿದ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಜಿಲ್ಲಾ ಮುಖಂಡರು ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹಾಗೂ ಎಸ್ಪಿ ಕಚೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾಗೆ ಸೋಮವಾರ ಮನವಿ ಸಲ್ಲಿಸಿದರು. ಬಳ್ಳಾರಿಯಲ್ಲಿ ಹಿಂದು ಮುಸ್ಲಿಮರು ಸಹೋದರರಂತೆ ಇದ್ದು, ರೆಡ್ಡಿ ಪ್ರಚೋದನಕಾರಿ ಹೇಳಿಕೆ ನೀಡಿ ಕಿಡಿ ಹೊತ್ತಿಸಿದ್ದಾರೆ. ಇದರಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದ್ದು, ಕೂಡಲೇ ಸೋಮಶೇಖರ ರೆಡ್ಡಿ ಅವರನ್ನು ಬಂಧಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ವಿಪ ಸದಸ್ಯ ಕೆ.ಸಿ. […]

ಮಹಾರಾಷ್ಟ್ರದಲ್ಲಿರುವ ಕನ್ನಡಿಗರಿಗೆ ತೊಂದರೆಯಾದರೆ ತಕ್ಕ ಪಾಠ ಕಲಿಸಬೇಕಾಗುತ್ತೆ : ಲಕ್ಷ್ಮಣ ಸವದಿ ಎಚ್ಚರಿಕೆ

Wednesday, January 1st, 2020
lakshman

ಬೆಂಗಳೂರು : ಪ್ರಸ್ತುತ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರ ಭಾರೀ ಚರ್ಚೆಯಲ್ಲಿದೆ. ಈ ಬಗ್ಗೆ ಡಿಸಿಎಂ ಲಕ್ಷ್ಮಣ ಸವದಿ ಪ್ರತಿಕ್ರಿಯೆ ನೀಡಿದ್ದು, ಗಡಿ ರಕ್ಷಣೆಗೆ ಕೆಲವೇ ದಿನಗಳಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಸದಸ್ಯರೊಬ್ಬರನ್ನು ನೇಮಕ ಮಾಡಲಿದ್ದಾರೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅನಾವಶ್ಯಕ ಹೇಳಿಕೆ ಕೊಟ್ಟಿದ್ದಾರೆ. ಗಡಿ ವಿವಾದದ ಕುರಿತು ರಾಜ್ ಠಾಕ್ರೆ ಹೇಳಿಕೆ ಕೊಟ್ಟಿದ್ದರು. ಅದನ್ನು ಈಗ ಉದ್ದವ್ ಠಾಕ್ರೆಗೆ ನೆನಪು ಮಾಡಿಕೊಡುತ್ತಿದ್ದಾರೆ. ಅನಾವಶ್ಯಕವಾಗಿ ಗೊಂದಲ ಸೃಷ್ಟಿಸಿ […]

ಸಿಎಂ ಬಿಎಸ್​ವೈ ವಿದೇಶ ಪ್ರವಾಸ ಹಿನ್ನೆಲೆ : ಜನವರಿ ತಿಂಗಳಲ್ಲಿ ನಡೆಯಬೇಕಿದ್ದ ಜಂಟಿ ಅಧಿವೇಶನ ಮುಂದೂಡಿಕೆ

Friday, December 27th, 2019
BSY

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿದೇಶ ಪ್ರವಾಸ ತೆರಳುತ್ತಿರುವ ಹಿನ್ನೆಲೆಯಲ್ಲಿ ಜನವರಿ ತಿಂಗಳಲ್ಲಿ ನಡೆಯಬೇಕಿದ್ದ ಜಂಟಿ ಅಧಿವೇಶನವನ್ನು ಮುಂದೂಡಲಾಗಿದೆ. ಸಿಎಂ ಬಿಎಸ್ವೈ ಜನವರಿ 20ರಿಂದ 24ರವರೆಗೆ ಸ್ವಿಟ್ಜರ್ಲೆಂಡ್ ಪ್ರವಾಸಕ್ಕೆ ತೆರಳಲಿದ್ದಾರೆ. ಸ್ವಿಟ್ಜರ್ಲೆಂಡ್ನಲ್ಲಿ ನಡೆಯಲಿರುವ ಆರ್ಥಿಕ ಸಮ್ಮೇಳನದಲ್ಲಿ ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ. ಈ ಸಮ್ಮೇಳನದಲ್ಲಿ ಎಲ್ಲಾ ರಾಜ್ಯಗಳ ಸಿಎಂಗಳು ಭಾಗಿಯಾಗಲಿದ್ದಾರೆ. ಸಿಎಂ ಅವರ ಸ್ವಿಟ್ಜರ್ಲೆಂಡ್ ಪ್ರವಾಸದಿಂದಾಗಿ ಜನವರಿ 20ರಂದು ನಿಗದಿಯಾಗಿದ್ದ ಜಂಟಿ ಅಧಿವೇಶನವನ್ನು ಜನವರಿ 27ಕ್ಕೆ ಮುಂದೂಡಲಾಗಿದೆ. ಬಿಜೆಪಿ ಸರ್ಕಾರ ಮೊದಲು ಜನವರಿ 20ರಂದು ಜಂಟಿ ಅಧಿವೇಶನ ನಡೆಸಲು ತೀರ್ಮಾನ […]

ಸಿಎಎ ನೆಪದಲ್ಲಿ ಕಾಂಗ್ರೆಸ್ ಪಕ್ಷವು ಕೇಂದ್ರ ಮತ್ತು ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಲು ಮುಂದಾಗಿದೆ : ಸಚಿವ ಸಿ.ಟಿ.ರವಿ

Thursday, December 26th, 2019
CT-Ravi

ಮಂಗಳೂರು : ಸಿಎಎ ನೆಪದಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಸಂಚು ರೂಪಿಸಿದೆ ಎಂದು ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಆರೋಪಿಸಿದ್ದಾರೆ. ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸಿ.ಟಿ.ರವಿ ಅವರು, ತ್ರಿವಳಿ ತಲಾಖ್, 370ನೆ ವಿಧಿ ರದ್ದು, ಬಾಬರಿ ಮಸ್ಜಿದ್ ತೀರ್ಪು ಇತ್ಯಾದಿ ಸಂದರ್ಭ ದೇಶಾದ್ಯಂತ ಗಲಭೆಯಾಗಬಹುದು ಎಂದು ಕಾಂಗ್ರೆಸ್ಸಿಗರು ಭಾವಿಸಿದ್ದರು. ಆದರೆ, ಎಲ್ಲೂ ಏನೂ ಆಗಿಲ್ಲ. ಈ ಮಧ್ಯೆ ಸಿಎಎ ಅನುಷ್ಠಾನಕ್ಕೆ ಸಿದ್ಧತೆ ನಡೆಯತೊಡಗಿದಾಗ ಕಾಂಗ್ರೆಸ್ […]

ಕೇರಳದಲ್ಲಿ ಸಿಎಂ ಯಡಿಯೂರಪ್ಪಗೆ ಕಪ್ಪು ಬಾವುಟ ಪ್ರದರ್ಶನ : ಎಸ್​​​ಎಫ್​​ಐ ಮತ್ತು ಕಾಂಗ್ರೆಸ್​​ನ ಐವರು ಬಂಧನ​​

Thursday, December 26th, 2019
BSY

ತಿರುವನಂತಪುರಂ : ಕೇರಳದಲ್ಲಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಕಾರು ಅಡ್ಡಗಟ್ಟಿ ಕಪ್ಪು ಬಾವುಟ ಪ್ರದರ್ಶಿಸಲು ಯತ್ನಿಸಿದ ಆರೋಪದ ಮೇಲೆ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ ಮತ್ತು ಕಾಂಗ್ರೆಸ್ನ ಐವರು ಕಾರ್ಯಕರ್ತರ ಬಂಧನವಾಗಿದೆ. ಸಿಪಿಐನ ಭಾರತೀಯ ವಿದ್ಯಾರ್ಥಿ ಫೆಡರೇಶನ್‌(ಎಸ್‌ಎಫ್‌ಐ)ನ ಮೂವರು ಮತ್ತು ಯುವ ಕಾಂಗ್ರೆಸ್ನ ಇಬ್ಬರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ಧಾರೆ. ಕಳೆದ ಎರಡು ದಿನಗಳ ಹಿಂದೆ ಸೋಮವಾರ(ಡಿ.23) ರಾತ್ರಿ ಕೇರಳದ ತಿರುವನಂತಪುರಂ ಪ್ರವೇಶಿಸುತ್ತಿದ್ದಂತೆ ಸಿಎಂ ಯಡಿಯೂರಪ್ಪನವರ ಕಾರಿಗೆ ಅಡ್ಡ […]