ಮೂರನೆಯ ಮದುವೆಯ ಸಿದ್ಧತೆಯಲ್ಲಿದ್ದಾರೆ ಮೆಗಾಸ್ಟಾರ್​ ಚಿರಂಜೀವಿ ಪುತ್ರಿ ಶ್ರೀಜಾ

Wednesday, January 4th, 2023
Srija

ಬೆಂಗಳೂರು : ಮೆಗಾಸ್ಟಾರ್​ ಚಿರಂಜೀವಿ ಪುತ್ರಿ ಶ್ರೀಜಾ ಎರಡು ಮದ್ವೆ ಆಗಿ ಸಂಸಾರ ಸರಿ ಆಗದೆ ಇಬ್ಬರಿಂದಲೂ ದೂರವಾಗಿ ಈಗ ಮೂರನೆಯ ಮದುವೆಯ ಸಿದ್ಧತೆಯಲ್ಲಿದ್ದಾರೆ ಎಂಬ ಸುದ್ದಿ ಇದೆ. ಚಿರಂಜೀವಿ ಅವರ ಕಿರಿಯ ಮಗಳು ಶ್ರೀಜಾ ಅವರು ಸದ್ಯ ಇದೇ ವಿಷಯಕ್ಕೆ ಸುದ್ದಿಯಾಗಿದ್ದಾರೆ. ಕೆಲ ವಾಹಿನಿ ಹಾಗೂ ವೆಬ್‌ಸೈಟ್ ವರದಿಗಳ ಪ್ರಕಾರ ಶ್ರೀಜಾ ಮೂರನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗಳು ಕೇಳಿ ಬಂದಿವೆ. ಇದೇನೂ ಹೊಸ ಸುದ್ದಿಯಲ್ಲ. ಕೆಲ ತಿಂಗಳಿನಿಂದ ಈ ಸುದ್ದಿ ಸಿನಿರಂಗದಲ್ಲಿ ಹರಿದಾಡುತ್ತಲೇ ಇದೆ. ಅದರೆ […]

ಕಾಂತಾರ ಸಿನೆಮಾ ನಟಿ ಸಪ್ತಮಿಗೌಡ ಕಟೀಲು, ಕೊರಗಜ್ಜನ ಆದಿಸ್ಥಳಕ್ಕೆ ಭೇಟಿ

Wednesday, November 16th, 2022
saptami-gowda

ಮಂಗಳೂರು : ಕಾಂತಾರ ಸಿನೆಮಾ ನಟಿ ಸಪ್ತಮಿಗೌಡ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಇವರನ್ನು ದೇವಳದ ವತಿಯಿಂದ ಪ್ರಧಾನ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ವಸ್ತ್ರ ಪ್ರಸಾದ ನೀಡಿ ಗೌರವಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಪ್ತಮಿ ಗೌಡ ಕಾಂತಾರ ಯಶಸಿಸ್ಸಿನ ಬಗ್ಗೆ ಹೆಮ್ಮೆ ಇದೆ, ತುಳುನಾಡಿನ ದೈವಾರಾಧನೆ ಬಗ್ಗೆ ನನಗೆ ಮೊದಲು ತಿಳಿದಿರಲಿಲ್ಲ, ಕಾಂತಾರಾ ಚಿತ್ರದ ನಂತರ ತಿಳಿದುಕೊಂಡೆ, ಕಾಂತಾರ ಚಿತ್ರದ ಬಳಿಕ ಬೇರೆ ಬೇರೆ ನಿನಿಮಾಗಳ ಮಾತುಕತೆ ನಡೆಯುತ್ತಿದೆ, ತುಳುವಲ್ಲಿ […]

ಚಿತ್ರರಂಗದ ಕಾರ್ಮಿಕರಿಗೂ ಪ್ಯಾಕೇಜ್ ಘೋಷಿಸಲು ಸಿಎಂಗೆ ಮನವಿ

Friday, May 21st, 2021
KFCC

ಬೆಂಗಳೂರು : ಕೋವಿಡ್ ನಿಂದಾಗಿ ಲಾಕ್ ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ ಚಿತ್ರರಂಗದ ಕಾರ್ಮಿಕರು, ತಂತ್ರಜ್ಞರು, ಸಹ ಹಾಗೂ ಸಹಾಯಕ ನಿರ್ದೇಶಕರಿಗೂ ಸರ್ಕಾರ ಪ್ಯಾಕೇಜ್ ಘೋಷಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಇಂದು ಮುಖ್ಯಮಂತ್ರಿಗಳನ್ನ ಭೇಟಿ ಮಾಡಿದ ಚಲನಚಿತ್ರ ಕಾರ್ಮಿಕ ಒಕ್ಕೂಟದ ಗೌರವಾಧ್ಯಕ್ಷ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಸಾ ರಾ ಗೋವಿಂದು, ವಾಣಿಜ್ಯ ಮಂಡಳಿಯ ಗೌರವ ಕಾರ್ಯದರ್ಶಿ ಎನ್ ಎಂ ಸುರೇಶ್, ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಹಾಗೂ ನಟಿ […]

ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿಯನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ ಸಿಸಿಬಿ ಪೊಲೀಸರು

Wednesday, September 16th, 2020
sanjana

ಬೆಂಗಳೂರು : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ  ನಟಿ ಸಂಜನಾ ಗಲ್ರಾನಿ ಇಂದು ಪರಪ್ಪನ ಅಗ್ರಹಾರ ಜೈಲಿನೊಳಗೆ ಸೇರಿದ್ದಾರೆ. ಅಲ್ಲಿ  ಹೋಗುವ ವೇಳೆಯೂ  ಗೇಟ್  ಚಿಕ್ಕದಾಯಿತು ಎಂದು  ಹೇಳಿದ್ದಾರೆ. ಸಂಜನಾ, ಜೈಲಿಗೆ ಎಂಟ್ರಿ ಕೊಡುವಾಗ ಇಷ್ಟು ಚಿಕ್ಕ ಗೇಟ್‍ನಲ್ಲಿ ನಾನು ಹೋಗಲ್ಲ ಎಂದು ಹಠಕ್ಕೆ ಬಿದ್ದಿದ್ದರು. ಈ ವೇಳೆ ಅಲ್ಲಿನ ಸಿಬ್ಬಂದಿ ಒಳಗೆ ಹೋಗಿ ಎಂದು ಹೇಳಿದ್ದಾರೆ. ನಂತರ ಒಂದು ನಿಮಿಷದ ಬಳಿಕ ಸಂಜನಾ ಒಳಗೆ ಹೋಗಿದ್ದಾರೆ. ಸಂಜನಾ ಜೊತೆಗೆ ವೀರೇನ್ ಖನ್ನಾ ಮತ್ತು ರವಿಶಂಕರ್ ನನ್ನೂ ಕೂಡ ಸಿಸಿಬಿ […]

ಗಾಂಜಾ ಸೇವನೆ ತಪ್ಲಲ್ಲ. ಗಾಂಜಾ ಗಿಡ ತುಳಸಿ ಗಿಡಕ್ಕೆ ಸಮ ಎಂದ ನಟಿ ವಿರುದ್ಧ ಎಫ್‍ಐಆರ್

Friday, September 4th, 2020
ಗಾಂಜಾ ಸೇವನೆ ತಪ್ಲಲ್ಲ. ಗಾಂಜಾ ಗಿಡ ತುಳಸಿ ಗಿಡಕ್ಕೆ ಸಮ ಎಂದ ನಟಿ ವಿರುದ್ಧ ಎಫ್‍ಐಆರ್

ಬೆಂಗಳೂರು :  ಗಾಂಜಾ ತುಳಸಿ ಗಿಡ ಇದ್ದಂತೆ ಎಂದು ವಿವಾದಿತ ಹೇಳಿಕೆ ನೀಡಿದ್ದ ನಟಿ ನಿವೇದಿತಾ ವಿರುದ್ಧ ಇಲ್ಲಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲು ಮಾಡಲಾಗಿದೆ. ಗಾಂಜಾ ಸೇವನೆ ತಪ್ಲಲ್ಲ. ಗಾಂಜಾ ಗಿಡ ತುಳಸಿ ಗಿಡಕ್ಕೆ ಸಮ ಎಂದು ನಿವೇದಿತಾ ಹೇಳಿದ್ದರು. ಈ ಹೇಳಿಕೆ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಆರೋಪಿಸಿ ಎ.ದೀಪಕ್ ಎಂಬುವರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ನೀಡಿದ್ದ ದೂರು ಆಧರಿಸಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಸಿಸಿಬಿ ವಶಕ್ಕೆ

Friday, September 4th, 2020
ragini

ಬೆಂಗಳೂರು: ಸ್ಯಾಂಡಲ್ ವುಡ್  ನಟಿ ರಾಗಿಣಿ ದ್ವಿವೇದಿ ಅವರನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಶಕ್ಕೆ ಪಡೆದಿದೆ. ಇಂದು ಬೆಳ್ಳಂಬೆಳಗ್ಗೆ 6.35ಕ್ಕೆ ಸಿಸಿಬಿ ಇನ್ಸ್ ಪೆಕ್ಟರ್ ಅಂಜುಮಾಲಾ ಅವರ ನೇತೃತ್ವದಲ್ಲಿ ರಾಗಿಣಿ ಅವರ ಯಲಹಂಕದ ಜ್ಯುಡಿಷಿನಲ್ ಲೇಔಟ್ ನಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಸತತ 3 ಗಂಟೆ ಶೋಧ ಕಾರ್ಯ ಬಳಿಕ ಮನೆ ಕೀ, ಕಾರು ಕೀ, ಮೊಬೈಲ್ ಅನ್ನು ವಶಕ್ಕೆ ಪಡೆದು ರಾಗಿಣಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳಿಂದ ಮಾಹಿತಿ […]

ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ?

Wednesday, August 12th, 2020
sanjaydatt

ಮುಂಬೈ: ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಬಾಲಿವುಡ್ ನಟ ಸಂಜಯ್ ದತ್  ಅವರು ಈಗ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಸಂಜಯ್ ದತ್ ಅವರನ್ನು ಇಲ್ಲಿನ ಲೀಲಾವತಿ ಆಸ್ಪತ್ರೆಗೆ ಉಸಿರಾಟದ ತೊಂದರೆಯಿಂದ  ದಾಖಲಿಸಲಾಗಿತ್ತು. ಇಂದು ಟ್ವೀಟ್ ಮಾಡಿದ್ದ ಸಂಜಯ್ ದತ್, ವೃತ್ತಿಯಿಂದ ಸ್ವಲ್ಪ ಸಮಯ ವಿರಾಮ ಪಡೆದುಕೊಳ್ಳುತ್ತಿರುವುದಾಗಿ ತಿಳಿಸಿದ್ದರು. ಇದೀಗ ಟ್ವೀಟ್ ಮಾಡಿರುವ ಫಿಲ್ಮ್ ಇನ್ಫಾರ್ಮೇಶನ್ ಮುಖ್ಯ ಸಂಪಾದಕ ಕೋಮಲ್ ನಹ್ತಾ “ಸಂಜಯ್ ದತ್ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ” ಎಂದಿದ್ದಾರೆ. ಆದರೆ ಈ ಬಗ್ಗೆ ಸಂಜಯ್ ದತ್ ಕುಟುಂಬ ಅಧಿಕೃತ […]

ಜು.31ರಂದು  ಕನ್ನಡ -ತಮಿಳು ದ್ವಿಭಾಷೆಯಲ್ಲಿ ವಿನೂತನ ಚಿತ್ರ `ಹವಾಲ’ ಒಟಿಟಿಯಲ್ಲಿ ಬಿಡುಗಡೆ

Sunday, July 19th, 2020
hawala

ಮಂಗಳೂರು: ಕೊರೋನಾ ಲಾಕ್‌ಡೌನ್ ಸಿನಿಮಾ ರಂಗಕ್ಕೂ ಬಲವಾದ ಪೆಟ್ಟು ನೀಡಿದೆ. ಆದರೆ ಚಿತ್ರತಂಡದ ಹುಮ್ಮಸ್ಸು ಮಾತ್ರ ಕಡಿಮೆಯಾಗಿಲ್ಲ. ಚಿತ್ರ ಪ್ರೇಮಿಗಳಿಗಾಗಿ ವಿನೂತನವಾದ ಕಥಾ ಹಂದರ ಹೊಂದಿದ `ಹವಾಲ’ ಚಿತ್ರ ನಿರ್ಮಾಣಗೊಂಡಿದ್ದು, ಇದೇ ಜು.31 ರಂದು ವರ್ಲ್ಡ್ ಪ್ರೀಮಿಯರ್ (ಒಟಿಟಿ)ನಲ್ಲಿ ಕನ್ನಡ ಮತ್ತು ತಮಿಳು ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ. ಶಶಿ ಕುಮಾರ್ ಪಂಡಿತ್ ಅರ್ಪಿಸುವ ಈ ಚಿತ್ರದ ನಿರ್ಮಾಣವನ್ನು ನಿರ್ಮಾಪಕ ಪುತ್ತೂರಿನ ಪ್ರವೀಣ್ ಶೆಟ್ಟಿ ಮಾಡಿದ್ದು, ಚಿತ್ರ ಭೂಗತ ಲೋಕದ ಅತ್ಯದ್ಭುತವಾದ ರೋಚಕ ಕಥೆಯನ್ನೊಳಗೊಂಡಿದೆ. ಸೋಚ್ ಸಿನಿಮಾಸ್ ಇವರ […]

ಮಾಜಿ ಪ್ರೇಯಸಿ ಅಂಕಿತಾ ಎಂಗೇಜ್‌ಮೆಂಟ್ ಫೋಟೋ ನೋಡಿ ಆತ್ಮಹತ್ಯೆ ಮಾಡಿಕೊಂಡರೇ ಸುಶಾಂತ್ ?

Sunday, June 14th, 2020
shushanth

ಮುಂಬೈ : ನಟ ಸುಶಾಂತ್ ಸಿಂಗ್ ರಜಪೂತ್  ಅವರ ಮಾಜಿ ಪ್ರೇಯಸಿ ಅಂಕಿತಾ ಲೋಖಂಡೆಗೆ ಕೆಲ ದಿನಗಳ ಹಿಂದಷ್ಟೇ ಎಂಗೇಜ್‌ಮೆಂಟ್ ಆಗಿದೆ ಎಂಬ ಮಾಹಿತಿ ಹರಡಿದ ನಂತರ  ಕೆಲ ದಿನಗಳಿಂದ ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆಯಾದರೂ, ಆ ಖಿನ್ನತೆಗೆ ನಿಜ ಕಾರಣವೇನು ಎಂಬುದು ಗೊತ್ತಾಗಿಲ್ಲ,  ಅಷ್ಟರಲ್ಲೇ ಸುಶಾಂತ್ ಅವರ ಅಂತ್ಯವಾಗಿದೆ. ‘ಪವಿತ್ರ ರಿಷ್ತಾ’ದಲ್ಲಿ ಸುಶಾಂತ್ ಮತ್ತು ಅಂಕಿತಾ ಒಟ್ಟಿಗೆ ನಟಿಸಿದ್ದರು. ಆನಂತರ ಇಬ್ಬರ ನಡುವೆ ಉತ್ತಮ ಒಡನಾಟ ಬೆಳೆದಿತ್ತು. ಆರಂಭದಲ್ಲಿದ್ದ ಸ್ನೇಹ ಆ ಬಳಿಕ ಪ್ರೀತಿಗೆ ತಿರುಗಿತು. ಅನೇಕ ವರ್ಷಗಳ […]

ಚಿತ್ರ ನಟ ಚಿರಂಜೀವಿ ಸರ್ಜಾ ವಿಧಿವಶ

Sunday, June 7th, 2020
chiranjevi-shaarja

ಬೆಂಗಳೂರು: ಸರ್ಜಾ ಕುಟುಂಬದ ಕುಡಿ ಕನ್ನಡದ ನಾಯಕ ನಟ ಚಿರಂಜೀವಿ ಸರ್ಜಾ ಅವರು ಉಸಿರಾಟದ ತೊಂದರೆಯಿಂದ ನಗರದ ಸಾಗರ್ ಅಪೋಲೊ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಭಾನುವಾರ  ಹೃದಯಾಘಾತ ದಿಂದ ಕೊನೆಯುಸಿರೆಳಿದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಚಿರಂಜೀವಿ ಸರ್ಜಾಗೆ ನಿನ್ನೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು . ಇಂದು ಮಧ್ಯಾಹ್ನ 3:00 ಗಂಟೆಗೆ ಅಪಾಯಿಂಟ್ಮೆಂಟ್ ಇತ್ತು. ಇಂದು ಮಧ್ಯಾಹ್ನ 3 ಗಂಟೆ ವೇಳೆಗೆ ಮನೆಯಲ್ಲಿ ಚಿರಂಜೀವಿ ಕುಸಿದು ಬಿದ್ದಿದ್ದರು. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ನಟ ಚಿರಂಜೀವಿ ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ಸಮಸ್ಯೆ  ಕಾಣಿಸಿಕೊಂಡಿದ್ದರಿಂದ ನಿಯಮಗಳಂತೆ […]