ಏಷಿಯನ್ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಶರಣ್ಯ ಮಹೇಶ್

Saturday, August 21st, 2010
ಏಷಿಯನ್ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಶರಣ್ಯ ಮಹೇಶ್

ಮಂಗಳೂರು : 14ನೇ ಏಷಿಯನ್ ಸ್ಪೀಡ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಶರಣ್ಯ ಮಹೇಶ್ ಕುರಿತು ಇಂದು ಬೆಳಗ್ಗೆ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಡಾ||ಜೆಸ್ಸಿ ಮರಿಯಾ ಡಿ ಸೋಜಾ, ಮಂಗಳೂರು ರೋಲರ್ ಸ್ಕೇಟಿಂಗ್ ಕ್ಲಬ್ ಸದಸ್ಯೆಯಾದ ಶರಣ್ಯ ಮಹೇಶ್ ಜುಲೈ 19 ರಿಂದ 25 ರವರೆಗೆ ಚೈನೀಸ್ ತೈಪೇ ಯಲ್ಲಿ ನಡೆದ 14ನೇ ಏಷಿಯನ್ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ್ದರು. ಈ ಸ್ಪರ್ಧಾಕೂಟದಲ್ಲಿ 15 ಕ್ಕಿಂತಲೂ ಹೆಚ್ಚು ದೇಶಗಳು ಭಾಗವಹಿಸಿದ್ದವು. […]