ಏರ್‌ ಇಂಡಿಯಾ ದುರಂತ

Saturday, August 21st, 2010
ಏರ್‌ ಇಂಡಿಯಾ ದುರಂತ

ದುಬೈಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ, ಮಂಗಳೂರಿನ ಕೆಂಜಾರು ಬಳಿಯಿರುವ ಬಜ್ಪೆ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿರುವಾಗ ನಿಯಂತ್ರಣ ತಪ್ಪಿದ್ದರಿಂದ ಅಪಘಾತಕ್ಕೀಡಾಗಿ 158 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ದುಬೈಯಿಂದ ಮಂಗಳೂರಿಗೆ ಬೆಳಿಗ್ಗೆ 6.30 ಗಂಟೆಗೆ ಆಗಮಿಸಿದ ಏರ್‌ಇಂಡಿಯಾ ವಿಮಾನ, ಲ್ಯಾಂಡಿಂಗ್ ಮಾಡುವ ಸಂದರ್ಭದಲ್ಲಿ ಅಕಸ್ಮಿಕವಾಗಿ ನಿಯಂತ್ರಣ ತಪ್ಪಿ ತಗ್ಗುಪ್ರದೇಶಕ್ಕೆ ನುಗ್ಗಿ, ನಂತರ ಸ್ಫೋಟಗೊಂಡಿತು ಎಂದು ಏರ್‌ ಇಂಡಿಯಾ ಮೂಲಗಳು ತಿಳಿಸಿವೆ.