ಅಲೆಮಾರಿ ಸಮುದಾಯಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ನಿಗಮ ರಚಿಸಲು ತೀರ್ಮಾನ

Saturday, October 8th, 2022
Nigama

ಬೆಂಗಳೂರು : ಅವಕಾಶ ವಂಚಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಲು ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಹಾಗೂ ಎಸ್ಸಿ ಎಸ್ಟಿ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ನಿಗಮ ರಚಿಸಲು ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಚಿವ ಸಂಪುಟ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ತಳಸಮುದಾಯಗಳಿಗೆ ಮೀಸಲಾತಿ ಪೂರ್ಣಪ್ರಮಾಣದಲ್ಲಿ ಮುಟ್ಟಿಲ್ಲ ಎಂದು ನ್ಯಾ.ನಾಗಮೋಹನ್ ದಾಸ್ ಸಮಿತಿ ವರದಿ ಹೇಳಿದ್ದು, ಇವರಿಗೆ ನ್ಯಾಯ […]

ಎತ್ತಿನ ಹೊಳೆ ಯೋಜನೆ ಪೂರ್ಣಗೊಳಿಸುವ ಜವಾಬ್ದಾರಿ ನಮ್ಮದು : ಬಸವರಾಜ ಬೊಮ್ಮಾಯಿ

Tuesday, June 7th, 2022
bommai

ಬೆಂಗಳೂರು : ಎತ್ತಿನಹೊಳೆ ಯೋಜನೆ 2012 ರಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಕುಡಿಯುವ ನೀರಿನ ಕೊರತೆ ನೀಗಿಸಲೆಂದು ರೂಪುಗೊಂಡಿತು. ಎತ್ತಿನ ಹೊಳೆ ಯೋಜನೆ ಪೂರ್ಣಗೊಳಿಸುವ ಜವಾಬ್ದಾರಿ ನಮ್ಮದು. ಭೂ ಸ್ವಾಧೀನ ಕಾರ್ಯಕ್ಕೆ ಹಣವನ್ನು ಬಿಡುಗಡೆ ಮಾಡಲಾಗಿದೆ. ಈ ಪ್ರಕ್ರಿಯೆ ಮುಗಿದ ಕೂಡಲೇ ಕಾಮಗಾರಿಗಳು ತ್ವರಿತಗೊಳಿಸಿ ಬಯಲುಸೀಮೆಗೆ ನೀರನ್ನು ತರುವ ಕೆಲಸ ಮಾಡಲಾಗುವುದು. ಒಂದೂವರೆ ವರ್ಷದಲ್ಲಿ 24 ಟಿಎಂಸಿ ನೀರಿನ ಬಳಕೆ ಮಾಡಲು ಸಾಧ್ಯವಾಗಲಿದೆ. ಹೊಸಕೋಟೆಗೂ ಎತ್ತಿನಹೊಳೆ ನೀರು ತಲುಪಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ […]

ಅಬಕಾರಿ ಸುಂಕದಲ್ಲಿ ಭಾರಿ ಇಳಿಕೆ ಪೆಟ್ರೋಲ್, ಡೀಸೆಲ್ ದರ ಇಳಿಕೆ, ಗ್ಯಾಸ್ ಸಿಲಿಂಡರ್‌ಗೆ ಸಬ್ಸಿಡಿ

Saturday, May 21st, 2022
nirmala-seetharaman

ನವದೆಹಲಿ: ಕೇಂದ್ರ ಸರ್ಕಾರ ಇಂಧನ ಅಬಕಾರಿ ಸುಂಕದಲ್ಲಿ ಭಾರಿ ಇಳಿಕೆ ಮಾಡಿದ್ದು, ಪರಿಣಾಮ ಪೆಟ್ರೋಲ್ ಬೆಲೆ .9.5ರೂ, ಡೀಸೆಲ್ ದರ 7 ರೂ ಇಳಿಕೆಯಾಗಿದೆ. ಈ ಕುರಿತು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿಚಿ ನೀಡಿದ್ದು, ಇಂಧನ ಬೆಲೆಗಳ ಮೇಲಿನ ಕೇಂದ್ರ ಅಬಕಾರಿ ಸುಂಕದಲ್ಲಿ ತೀವ್ರ ಕಡಿತವನ್ನು ಘೋಷಿಸಲಾಗಿದೆ. ಪೆಟ್ರೋಲ್ ಬೆಲೆ 9.5 ರಷ್ಟು ಮತ್ತು ಡೀಸೆಲ್ 7 ರಷ್ಟು ಅಗ್ಗವಾಗಲಿದೆ. ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 8 ಮತ್ತು ಡೀಸೆಲ್‌ಗೆ […]

ಪಾವಗಡ ಖಾಸಗಿ ಬಸ್ಸ್ ದುರಂತದಲ್ಲಿ ಮೃತರ ಸಂಖ್ಯೆ ಏರಿಕೆ

Saturday, March 19th, 2022
Pavgad-Bus-Accident

ತುಮಕೂರು: ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದ ಬಳಿ  ಖಾಸಗಿ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಕನಿಷ್ಠ ಎಂಟು ಮೃತಪಟ್ಟು ಮೂವತ್ತೈದು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಬಸ್ಸಿನಲ್ಲಿ 100ಕ್ಕೂ ಹೆಚ್ಚು ಪ್ರಯಾಣಿಕರಿದ್ದರೆ 30ಕ್ಕೂ ಅಧಿಕ ಮಂದಿ ಬಸ್ಸಿನ ಮೇಲೆ ಕುಳಿತು ಸಾಗುತ್ತಿದ್ದರು. ಬೆಳಗ್ಗೆ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳು, ಆಫೀಸಿಗೆ ಜನರು ಹೋಗುವ ಹೊತ್ತು. ಈ ದಾರಿಯಲ್ಲಿ ಸಂಚಾರಕ್ಕೆ ಬೇರೆ ಸಾರಿಗೆ ಸೌಕರ್ಯಗಳಿಲ್ಲದ ಕಾರಣ ಸಿಕ್ಕಿದ್ದ ಎಸ್ ವಿಟಿ ಬಸ್ಸಿನಲ್ಲಿ ಸಾಧ್ಯವಾದಷ್ಟು ಜನ ಹತ್ತಿದ್ದರು, […]

ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿಗೆ ಚತುರ್ಥಪರ್ಯಾಯದ ಸಂಭ್ರಮ

Tuesday, January 18th, 2022
Paryaya

ಉಡುಪಿ:  ಉಡುಪಿ ಶ್ರೀ ಕೃಷ್ಣ ಮಠದ ಶ್ರೀ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಶ್ರೀಪಾದರು  ತನ್ನ ಚತುರ್ಥಪರ್ಯಾಯದ ಗದ್ದುಗೆಯನ್ನೇರಿದರು. ಉಡುಪಿ ಶ್ರೀಕೃಷ್ಣ ಮಠದ ಪೂಜಾಧಿಕಾರ ಹಸ್ತಾಂತರ ಸಮಾರಂಭದಲ್ಲಿ, ಪ್ರಸ್ತುತ ಪರ್ಯಾಯ ಪೀಠಾಧಿಪತಿಗಳಾದ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ, ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿಗೆ ಪೊಡವಿಗೊಡೆಯ ಶ್ರೀಕೃಷ್ಣನ ಪೂಜಾಧಿಕಾರವನ್ನು ವಿಧ್ಯುಕ್ತವಾಗಿ ಹಸ್ತಾಂತರಿಸಿದರು. 2 ವರ್ಷಕ್ಕೊಮ್ಮೆ ನಡೆಯುವ ಈ ಸಮಾರಂಭದಲ್ಲಿ ಮಂಗಳವಾರ  ನಸುಕಿನ ಜಾವ 5.25ಕ್ಕೆ ಶ್ರೀಕೃಷ್ಣಮಠ ಪ್ರವೇಶ ಮಾಡಿ ದೇವರ ದರ್ಶನ ಪಡೆದ ಶ್ರೀಗಳಿಗೆ ಪರ್ಯಾಯ ಅದಮಾರು ಮಠದ ಶ್ರೀ […]

ಧರ್ಮಸ್ಥಳದಲ್ಲಿ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Wednesday, November 10th, 2021
dharmasthala

ಧರ್ಮಸ್ಥಳ : ಕರಾವಳಿ ಮೂಲಕ ನಮ್ಮ ದೇಶಕ್ಕೆ ವಿದೇಶೀಯರ ಅಕ್ರಮ ಪ್ರವೇಶ ತಡೆಗಟ್ಟಲು ಹಾಗೂ ಶಾಂತಿ, ಸುವ್ಯವಸ್ಥೆ ಕಾಪಾಡಲು ಸದೃಢ ಕರಾವಳಿ ಕಾವಲು ಪಡೆ ಮೂಲಕ ಬಿಗಿ ಬಂದೋಬಸ್ತ್ ಮಾಡಲಾಗುವುದು. ಈ ಬಗ್ಯೆ ಈಗಾಗಲೆ 30 ಬೋಟ್‌ಗಳನ್ನು ಖರೀದಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಅವರು ಮಂಗಳವಾರ ಧರ್ಮಸ್ಥಳದಲ್ಲಿ ಎರಡು ಕೋಟಿ ಮೂವತ್ತು ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಸೆಟಲೈಟ್ ಫೋನ್ ಬಳಕೆ ಹಾಗೂ […]

ಕೊರೋನಾ ಮಹಾಮಾರಿಯ ಭಯ ಮತ್ತು ಚಿಂತೆಯನ್ನು ದೂರಮಾಡಲು ‘ಮನಸ್ಸಿಗೆ ಸ್ವಯಂಸೂಚನೆ’ಗಳನ್ನು ನೀಡಿ ಮತ್ತು ನಿಶ್ಚಿಂತೆಯಿಂದಿರಿ !

Saturday, May 22nd, 2021
dyana

ಇಂದು ಇಡೀ ದೇಶ ಕೊರೋನಾ ಮಹಾಮಾರಿಯ 2ನೇಯ ಅಲೆಯಿಂದ ತತ್ತರಿಸಿ ಹೋಗಿದೆ. ವರ್ತಮಾನ ಪತ್ರಿಕೆ, ಟಿವಿ ಚಾನೆಲ್ ಗಳ ಕೊರೋನಾ ವಾರ್ತೆ, ಸಾಮಾಜಿಕ ಜಾಲತಾಣಗಳ ಕೊರೋನಾ ಘಟನೆಗಳ ವಿಡಿಯೋ ನೋಡಿ, ಅಥವಾ ಆಕ್ಸಿಜನ್ ಕೊರತೆ, ಬೆಡ್ ಸಿಗದೇ, ನರಳಿ ಸಾಯುವ ವಿಚಾರಗಳು, ಅಥವಾ ನೆಚ್ಚಿನ ಕುಟುಂಬದವರು, ಸ್ನೇಹಿತರ ಅಗಲಿಕೆಯಿಂದ ಜನಸಾಮಾನ್ಯರಲ್ಲಿ ಭಯ, ಚಿಂತೆ, ನಿರಾಶೆ, ಆತ್ಮಹತ್ಯೆಯ ವಿಚಾರಗಳು ಇಂದು ಹೆಚ್ಚಾಗಿದೆ. ಪರಿಣಾಮವಾಗಿ ಕೊರೋನಾ ಸೋಂಕಿನ ಜೊತೆಗೆ ಅದರ ಭಯದಿಂದಲೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಜನರ […]

ಭಾರತೀಯ ವಿಮಾನಯಾನ ಸಂಸ್ಥೆ ಏರ್ ಇಂಡಿಯಾದ 10 ವರ್ಷಗಳ ಡೇಟಾ ಸೋರಿಕೆ, 45 ಲಕ್ಷ ಪ್ರಯಾಣಿಕರ ವೈಯಕ್ತಿಕ ಮಾಹಿತಿ ಹ್ಯಾಕ್

Saturday, May 22nd, 2021
AirIndia

ನವದೆಹಲಿ : ಏರ್ ಇಂಡಿಯಾದ ಡೇಟಾ ಸೋರಿಕೆಯಾಗಿದ್ದು, ಕಳೆದ 10 ವರ್ಷಗಳ ಸುಮಾರು 45 ಲಕ್ಷ ಏರ್ ಇಂಡಿಯಾ ಪ್ರಯಾಣಿಕರ ವೈಯಕ್ತಿಕ ಮಾಹಿತಿಯನ್ನು ಹ್ಯಾಕ್ ಮಾಡಲಾಗಿದೆ ಎಂದು  ಸಂಸ್ಥೆ ಹೇಳಿಕೊಂಡಿದೆ. ಡೇಟಾ  ಸರ್ವರ್ ಅನ್ನು ತಂತ್ರಜ್ಞಾನ ಪೂರೈಕೆ ಸಂಸ್ಥೆ ಎಸ್‌ಐಟಿಎ(ಸಿಟಾ) ನಿರ್ವಹಣೆ ಮಾಡುತ್ತಿದ್ದು, ಏರ್ ಇಂಡಿಯಾದ ‘ಡಾಟಾ ಪ್ರೊಸೆಸರ್ ಆಫ್ ಪ್ಯಾಸೆಂಜರ್ ಸರ್ವಿಸ್ ಸಿಸ್ಟಂ’ನಲ್ಲಿ ಸೈಬರ್ ದಾಳಿಯಾಗಿ ಸುಮಾರು 45 ಲಕ್ಷ ಪ್ರಯಾಣಿಕರ ವೈಯಕ್ತಿಕ ಮಾಹಿತಿ ಹ್ಯಾಕ್ ಮಾಡಲಾಗಿದೆ ಎಂದು ಹೇಳಿದೆ. ಆಗಸ್ಟ್ 26, 2011 ಮತ್ತು ಫೆಬ್ರವರಿ 20, 2021 […]

ಮನೆಯಲ್ಲಿಯೇ ಕೋವಿಡ್ ಪರೀಕ್ಷೆ ಮಾಡಿಕೊಳ್ಳುವ ಕೋವಿಸೆಲ್ಫ್ ಕಿಟ್

Thursday, May 20th, 2021
coviself-kit

ನವದೆಹಲಿ : ಪುಣೆ ಮೂಲದ ಮೈಲಾಬ್ ಡಿಸ್ಕವರಿ ಸೊಲ್ಯೂಷನ್ಸ್ ಲಿಮಿಟೆಡ್ ಕೋವಿಡ್-19 ಪರೀಕ್ಷೆಯನ್ನು ಮನೆಯಲ್ಲಿಯೇ ನಡೆಸುವ ಕ್ಷಿಪ್ರ ಆಂಟಿಜೆನ್ ಪರೀಕ್ಷೆ (ಆರ್‌ಎಟಿ)  ಮಾಡುವ  ಕಿಟ್‌ ತಯಾರಿಸಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಗುರುವಾರ ಈ ಕಿಟ್ ಗೆ ಅನುಮೋದನೆ ನೀಡಿದೆ. ಕೋವಿಸೆಲ್ಫ್ ಟಿಎಂ (ಪ್ಯಾಥೊಕ್ಯಾಚ್) ಕೋವಿಡ್-19 ಒಟಿಸಿ ಆಂಟಿಜೆನ್ ಎಲ್ಎಫ್ ಸಾಧನ ಎಂದೂ ಕರೆಯಲ್ಪಡುವ ಸ್ವಯಂ-ಪರೀಕ್ಷೆಯ ಕೋವಿಸೆಲ್ಫ್ ಕಿಟ್ ಇದಾಗಿದೆ. ಆರ್‌ಎಟಿಗಳನ್ನು ಹೇಗೆ ಮತ್ತು ಯಾರು ಬಳಸಬಹುದು ಎಂಬುದರ ಕುರಿತು ವಿವರವಾದ ಮಾರ್ಗಸೂಚಿಗಳನ್ನು ಹೊರಡಿಸಿದ ಐಸಿಎಂಆರ್, ರೋಗಲಕ್ಷಣಗಳುಳ್ಳ ವ್ಯಕ್ತಿಗಳಲ್ಲಿ ಮತ್ತು ಪ್ರಯೋಗಾಲಯ-ದೃಢಪಡಿಸಿದ […]

‘ಕೊರೋನಾ ಕಾಲ’ದಲ್ಲಿ ‘ಮಾನಸಿಕ ಆರೋಗ್ಯ’ ಕಾಪಾಡಿಕೊಳ್ಳೋದು ಹೇಗೆ.?

Saturday, May 1st, 2021
Covid Vaccine

ಬೆಂಗಳೂರು : ಸಾಂಕ್ರಾಮಿಕ ರೋಗದಂತಹ ಬಿಕ್ಕಟ್ಟಿನ ಸಮಯದಲ್ಲಿ ಮಾನಸಿಕ ಆರೋಗ್ಯದ ಸಮಸ್ಯೆಗಳು ತೀರಾ ಸಾಮಾನ್ಯ. ಕೋವಿಡ್ 2ನೇ ಅಲೆಯ ಇಂದಿನ ಪರಿಸ್ಥಿತಿಯಲ್ಲಿ ಕೊರೋನಾಗೆ ತುತ್ತಾಗುವ ಭೀತಿಯು ಜನರಲ್ಲಿ ಅತೀ ಒತ್ತಡವನ್ನು ಹಾಗು ತಡೆದುಕೊಳ್ಳಲು ಆಗದಂತಹ ಆತಂಕವನ್ನು ಹುಟ್ಟು ಹಾಕಿದೆ. ಇಂತಹ ಸಂದರ್ಭದಲ್ಲೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳೋದು ಬಹುಮುಖ್ಯವಾಗಿದೆ. ಹಾಗಾದ್ರೇ.. ಅದನ್ನು ಹೇಗೆ ಕಾಪಾಡಿಕೊಳ್ಳೋದು ಅಂತ ಆಪ್ತ ಸಮಾಲೋಚಕರು ಹಾಗೂ ಮನೋಚಿಕಿತ್ಸಕರಾದಂತ ಡಾ. ಗಿರಿಧರರಾವ್ ಹವಲ್ದಾರ್ ಅವರ ಸಲಹೆಯನ್ನು ಮುಂದೆ ಓದಿ.. ಕೋವಿಡ್ ಕುರಿತಾದ ಗೊಂದಲ, ಅನುಮಾನಗಳು, ರೋಗ […]