ಕಮ್ಯೂನಿಸ್ಟ್‌ ಪಕ್ಷದ ಹಿರಿಯ ಮುಖಂಡ ಬೇವಿಂಜೆ ವಿಷ್ಣು ಕಕ್ಕಿಲ್ಲಾಯ ನಿಧನ

Tuesday, June 5th, 2012
Bv Kakkilaya

ಮಂಗಳೂರು : ಕಮ್ಯೂನಿಸ್ಟ್‌ ಪಕ್ಷದ ಹಿರಿಯ ಮುಖಂಡ ಬೇವಿಂಜೆ ವಿಷ್ಣು ಕಕ್ಕಿಲ್ಲಾಯ (93) ಅವರು ಸೋಮವಾರ ಮುಂಜಾನೆ 2.30ಕ್ಕೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಸ್ವಾತಂತ್ರ್ಯ ಹೋರಾಟಗಾರರಾಗಿ, ಕರ್ನಾಟಕ ಏಕೀಕರಣ ಚಳವಳಿಯ ರೂವಾರಿಗಳಲ್ಲಿ ಓರ್ವರಾಗಿ, ರಾಜ್ಯಸಭೆ ಮತ್ತು ಕರ್ನಾಟಕ ಶಾಸನ ಸಭೆಗಳ ಸದಸ್ಯರಾಗಿ, ರೈತ ಕಾರ್ಮಿಕ ಮುಖಂಡರಾಗಿ, ಕಮ್ಯೂನಿಸ್ಟ್‌ ಪಕ್ಷದ ಮುಖಂಡರಾಗಿ, ನವಕರ್ನಾಟಕ ಪ್ರಕಾಶನ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾಗಿ ಅವರು ನಾಡಿಗೆ ಸಲ್ಲಿಸಿದ ಸೇವೆ ಅಪಾರ. ಕಕ್ಕಿಲ್ಲಾಯ ಅವರು ಡಾ| ಶ್ರೀನಿವಾಸ ಕಕ್ಕಿಲ್ಲಾಯ ಸಹಿತ ನಾಲ್ವರು […]

ನಗರದಲ್ಲಿ ಕಾನೂನು ಸಾಕ್ಷರತಾ ರಥ ಹಾಗೂ ಸಂಚಾರಿ ಜನತಾ ನ್ಯಾಯಾಲಯ ಅಭಿಯಾನಕ್ಕೆ ಚಾಲನೆ

Sunday, June 3rd, 2012
kanoon Saksharata Ratha

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಪೊಲೀಸ್‌ ಇಲಾಖೆ, ಜಿಲ್ಲಾ ಪಂಚಾಯತ್‌, ಮಂಗಳೂರು ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರಿಗೆ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ತಾಲೂಕಿನಲ್ಲಿ ಹಮ್ಮಿಕೊಂಡಿರುವ ಕಾನೂನು ಸಾಕ್ಷರತಾ ರಥ ಹಾಗೂ ಸಂಚಾರಿ ಜನತಾ ನ್ಯಾಯಾಲಯ ಅಭಿಯಾನವನ್ನು ಅವರು ಶನಿವಾರ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಅಶೋಕ್‌ […]

ಹೆಚ್ಚುವರಿ ಆಟೋ ತಂಗುದಾಣಕ್ಕೆ ರಿಕ್ಷಾ ಬಂದ್‌, ಮಹಾನಗರಪಾಲಿಕೆ ಕಚೇರಿ ಚಲೋ

Saturday, May 26th, 2012
Auto Strick

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಆಟೋ ರಿಕ್ಷಾ ಚಾಲಕರ ಸಂಘ, ಜಿಲ್ಲಾ ಆಟೋ ರಿಕ್ಷಾ ಚಾಲಕರ ಅಶೋಸಿಯೇಷನ್, ರಾಜ್ಯ ಆಟೋ ರಿಕ್ಷಾ ಚಾಲಕರ ಫೆಡರೇಷನ್, ಮೈನ್ಯಾರಿಟೀಸ್ ಆಟೋ ಡ್ರೈವರ್ಸ್ ಆಶೋಶಿಯೇಶನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಆಶ್ರಯದಲ್ಲಿ ಶುಕ್ರವಾರ ನಗರದಲ್ಲಿ ರಿಕ್ಷಾ ನಿಲುಗಡೆಗೆ ಸುಸಜ್ಜಿತ ತಂಗುದಾಣಗಳ ವ್ಯವಸ್ಥೆ ಕಲ್ಪಿಸ ಬೇಕು ಎಂದು ಆಗ್ರಹಿಸಿ ಮಂಗಳೂರು ಮಹಾನಗರ ಆಟೋ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಐವನ್‌ ಡಿ’ಸೋಜಾ ನೇತೃತ್ವದಲ್ಲಿ ರಿಕ್ಷಾ ಬಂದ್‌ ಮತ್ತು ಮಹಾನಗರಪಾಲಿಕೆ ಕಚೇರಿ ಚಲೋ ಕಾರ್ಯಕ್ರಮ […]

ಪಿಯುಸಿ ಫಲಿತಾಂಶಃ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ

Thursday, May 24th, 2012
PUC Result

ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದ್ದು,ಶೇ. 86.1 ಫಲಿತಾಂಶ ಲಭಿಸಿದೆ. ಉಡುಪಿ ದ್ವಿತೀಯ (ಶೇ.85.32) ಸ್ಥಾನ ಹಾಗೂ ಕೊಡಗು ತೃತೀಯ ಸ್ಥಾನ ಪಡೆದಿದ್ದು, ಯಾದಗಿರಿ ಶೇ.32.21ಫಲಿತಾಂಶ ಪಡೆದು ಕೊನೆಯ ಸ್ಥಾನ ಪಡೆದಿದೆ. ರಾಜ್ಯದಲ್ಲಿ ಈ ಬಾರಿ ಪಿಯುಸಿಯಲ್ಲಿ ಒಟ್ಟು ಶೇ.57.03ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಇದು ಕಳೆದ ವರ್ಷಕ್ಕಿಂತ ಶೇ.8.01ರಷ್ಟು ಹೆಚ್ಚಳವಾಗಿದೆ. ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂದರೆ ಎಂ.ದೀಪಾ ಮಲ್ಲೇಶ್ವರದ ಎಂಇಎಸ್ ಕಿಶೋರ ವಿದ್ಯಾಲಯದ ವಿದ್ಯಾರ್ಥಿನಿ 593 […]

ಯುವಜನರು ಶುದ್ಧ ಹೊಸ ರಾಜಕೀಯ ಪರ್ವಕ್ಕೆ ನಾಂದಿ ಹಾಡಲು ಮುಂದಾಗಿ : ಡಿವಿಎಸ್

Wednesday, May 23rd, 2012
BjpYuva Jagruti samavesha

ಮಂಗಳೂರು : ರಾಜ್ಯ ಬಿಜೆಪಿ ಯುವಮೋರ್ಚಾ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಮಂಗಳವಾರ ನಡೆದ ಬೃಹತ್‌ ಯುವ ಜಾಗೃತಿ ಸಮಾವೇಶವನ್ನು ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಅನುರಾಧ್‌ ಠಾಕೂರ್‌ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ವಿಶೇಷ ಅಹ್ವಾನಿತರಾಗಿದ್ದ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಮಾತನಾಡಿ ದೇಶ 60 ವರ್ಷಗಳ ಅನಂತರ ಇನ್ನೊಂದು ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಜ್ಜಾಗಿದೆ. ವ್ಯಾಪಕ ಭ್ರಷ್ಟಾಚಾರ, ಭಯೋತ್ಪಾದನೆ, ಲವ್‌ ಜೆಹಾದ್‌, ನಕ್ಸಲ್‌, ಕಪ್ಪು ಹಣದಂತಹ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಕಂಡುಕೊಳ್ಳುವ ಇಚ್ಛಾಶಕ್ತಿ ಕೇಂದ್ರದ ಯುಪಿಎ […]

ಎಸ್ಸೆಸ್ಸೆಲ್ಸಿ ಫಲಿತಾಂಶ ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆಯ ವಿದ್ಯಾರ್ಥಿನಿಯರಿಗೆ ಅತಿ ಹೆಚ್ಚು ಅಂಕ

Thursday, May 17th, 2012
ಎಸ್ಸೆಸ್ಸೆಲ್ಸಿ ಫಲಿತಾಂಶ ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆಯ ವಿದ್ಯಾರ್ಥಿನಿಯರಿಗೆ ಅತಿ ಹೆಚ್ಚು ಅಂಕ

ಬೆಂಗಳೂರು : 2012ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಗುರುವಾರ ಪ್ರಕಟಿಸಿದ್ದು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿ, ಈ ಬಾರಿ ಶೇ.81.16ರಷ್ಟು ಬಾಲಕಿಯರು ಉತ್ತೀರ್ಣರಾಗಿ ಮೇಲುಗೈ ಸಾಧಿಸಿದ್ದು, ಶೇ.71.73ರಷ್ಟು ಬಾಲಕರು ತೇರ್ಗಡೆಯಾಗಿದ್ದಾರೆ. ಇದು ಕಳೆದ ಬಾರಿಗಿಂತ ಶೇ.2.23ರಷ್ಟು ಫಲಿತಾಂಶ ಹೆಚ್ಚಳವಾದಂತಾಗಿದೆ ಎಂದು ವಿವರಿಸಿದರು. ಪ್ರತಿವರ್ಷದಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ 76.13ರಷ್ಟು ಮಂದಿ ತೇರ್ಗಡೆಯಾಗಿದ್ದಾರೆ. ಈ ಬಾರಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ಶಿರಸಿ ದ್ವಿತೀಯ […]

ಪ್ರತಿ ಮನೆಗೂ ನೀರಿನ ಮೀಟರ್‌ ಕಡ್ಡಾಯಗೊಳಿಸಿ : ಎ.ಜಿ. ಕೊಡ್ಗಿ

Wednesday, May 9th, 2012
Ag Kodgi Mcc

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಮೂರನೇ ಹಣಕಾಸು ಆಯೋಗದ ಶಿಫಾರಸುಗಳ ಅನುಷ್ಠಾನಗಳ ಪರಿಶೀಲನಾ ಸಭೆಯು ಹಣಕಾಸು ಆಯೋಗದ ಶಿಫಾರಸುಗಳ ಅನುಷ್ಠಾನ ಆಯೋಗದ ಅಧ್ಯಕ್ಷ ಎ.ಜಿ. ಕೊಡ್ಗಿಯವರ ಅಧ್ಯಕ್ಷತೆಯಲ್ಲಿ ಪಾಲಿಕೆಯ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಕುಡಿಯಲು ಉಪಯೋಗಿಸಬೇಕಾದ ನೀರನ್ನು ಶ್ರೀಮಂತರು ಕೃಷಿ ಮತ್ತಿತರ ಉದ್ದೇಶಗಳಿಗೂ ಬಳಸುತ್ತಿರುವುದು ಕಂಡುಬರುತ್ತಿದೆ. ನೀರಿನ ದುರುಪಯೋಗ ತಡೆದು ಎಲ್ಲರಿಗೂ ಮೀಟರ್‌ ಕಡ್ಡಾಯಗೊಳಿಸಲು ಪಾಲಿಕೆ ಕಠಿನ ಕ್ರಮ ಕೈಗೊಳ್ಳಬೇಕು. ಪಾಲಿಕೆಯ ವ್ಯಾಪ್ತಿಯಲ್ಲಿ ಹಲವೆಡೆ ಬಡವರ ಹೆಸರಿನಲ್ಲಿ ಕುಡಿಯುವ ನೀರಿನ ಅಪವ್ಯಯವಾಗುತ್ತಿದೆ ಎಂದು ಎ.ಜಿ. ಕೊಡ್ಗಿ […]

ಶಿಘ್ರದಲ್ಲೇ ಡಿ.ವಿ.ಸದಾನಂದ ಗೌಡರ ಸಂಪುಟ ವಿಸ್ತರಣೆ

Monday, May 7th, 2012
Dv Sadananada Gowda

ಬೆಂಗಳೂರು : ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಇನ್ನು ಒಂದು ವಾರದಲ್ಲೇ ಸಂಪುಟ ವಿಸ್ತರಣೆ ಮಾಡುವುದಾಗಿ ಸೋಮವಾರ ಮತ್ತೊಮ್ಮೆ ಹೇಳಿದ್ದಾರೆ. ಸುಮಾರು 21 ಖಾತೆಗಳ ಹೊರೆಯನ್ನು ಹೊಂದಿರುವ ಅವರು ಖಾತೆ ಹಂಚಿಕೆಯ ಮೂಲಕ ತಮ್ಮ ಮೇಲಿರುವ ಜವಾಬ್ದಾರಿಯನ್ನು ಕಡಿಮೆ ಮಾಡಲು ಮುಂದಾಗಿದ್ದಾರೆ. ಸಂಪುಟ ಪುನಾರಚನೆ, ಖಾತೆ ಹಂಚಿಕೆ ಸಂಬಂಧ ಪಕ್ಷದ ಹೈಕಮಾಂಡ್ ಜೊತೆ ಚರ್ಚಿಸಿ ವಿಸ್ತರಿಸುವುದಾಗಿ ಸಿಎಂ ವಿಶ್ವಾಸದಿಂದ ಹೇಳಿದ್ದಾರೆ. ಸುಮಾರು 21 ಖಾತೆಗಳ ಭಾರ ಹೊರುವುದು ಸುಲಭವಲ್ಲ. ಎಲ್ಲ ಖಾತೆಗಳಿಗೆ ನ್ಯಾಯ ಒದಗಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ […]

ಕೊಲ್ಲೂರಿನಲ್ಲಿ ಚಂಡಿಕಾ ಹೋಮ, ಸುಹಾಸಿನಿ ಪೂಜೆ ಸಲ್ಲಿಸಿದ : ವಿಜಯ ಮಲ್ಯ

Monday, April 30th, 2012
Vijaya Mallya Kolluru

ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭಾನುವಾರ ಆಗಮಿಸಿದ ವಿಜಯ ಮಲ್ಯ ಅವರು ಚಂಡಿಕಾ ಹೋಮ, ಸುಹಾಸಿನಿ ಪೂಜೆ ಹಾಗೂ ಮಹಾ ಪೂಜೆಯಲ್ಲಿ ಪಾಲ್ಗೊಂಡರು. ಅನಂತರ ವೀರಭದ್ರ ದೇವರ ದರ್ಶನ ಪಡೆದು ದೇವಳದ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿದರು. ದೇವಳದ ಸಮಗ್ರ ಅಭಿವೃದ್ಧಿಗೆ ಕಾಣಿಕೆ ರೂಪದಲ್ಲಿ ನೆರವು ನೀಡಲು ಸದಾಸಿದ್ಧನಿದ್ದೇನೆ. ಶ್ರೀ ದೇವಿಯ ಅನುಗ್ರಹದಿಂದ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುತ್ತಿದೆ ಎಂದು ಹೇಳಿದರು. ಈ ಹಿಂದೆ ಧ್ವಜಸ್ತಂಭ ನಿರ್ಮಾಣಕ್ಕೆ ಕಾಣಿಕೆ ರೂಪವಾಗಿ ನೆರವು ನೀಡಿರುವುದನ್ನು ಸ್ಮರಿಸಿದರಲ್ಲದೆ ಶ್ರೀ ದೇವಿಯ […]

ದ.ಕನ್ನಡ ಸಾಹಿತ್ಯ ಪರಿಷತ್‌ ಗೆ ಜಿಲ್ಲಾಧ್ಯಕ್ಷರಾಗಿ ಪ್ರದೀಪ್‌ ಕುಮಾರ್‌ ಕಲ್ಕೂರ ಪುನರಾಯ್ಕೆ

Monday, April 30th, 2012
Pradeep Kumar Kalkura

ಮಂಗಳೂರು: ದ.ಕನ್ನಡ ಸಾಹಿತ್ಯ ಪರಿಷತ್‌ ಗೆ ಭಾನುವಾರ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ ಅವರು 106 ಮತಗಳಿಂದ ಜಯಸಾಧಿಸಿ, ಸತತ ನಾಲ್ಕನೇ ಬಾರಿಗೆ ಜಿಲ್ಲಾಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಕಲ್ಕೂರ ಅವರು 464 ಮತಗಳು ಗಳಿಸಿದರೆ ಅವರ ಸಮೀಪದ ಪ್ರತಿಸ್ಪರ್ಧಿ, ಮಂಗಳೂರು ತಾಲೂಕು ಕಸಪಾ ನಿಕಟಪೂರ್ವ ಅಧ್ಯಕ್ಷ ಸರ್ವೋತ್ತಮ ಅಂಚನ್‌ ಅವರು 358 ಮತಗಳನ್ನು ಪಡೆದುಕೊಂಡಿದ್ದಾರೆ. ಇನ್ನೋರ್ವ ಅಭ್ಯರ್ಥಿ ಹರೀಶ್‌ ಬಂಟ್ವಾಳ್‌ ಅವರು 149 ಮತಗಳನ್ನು ಗಳಿಸಿದ್ದಾರೆ. ದ.ಕ. ಜಿಲ್ಲೆಯಲ್ಲಿ ಒಟ್ಟು 1932 ಮತದಾರರ ಪೈಕಿ […]