ನಟ ದುನಿಯಾ ವಿಜಯ್‌‌‌ ವಿರುದ್ಧ ಎಫ್‌ಐಆರ್

Thursday, May 31st, 2018
duniya-vijay

ಬೆಂಗಳೂರು: ನಟ ದುನಿಯಾ ವಿಜಯ್‌‌‌ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಮಾಸ್ತಿಗುಡಿ ನಿರ್ಮಾಪಕ ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರು ವಿಜಯ್ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಮಾಸ್ತಿಗುಡಿ ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಮುಳುಗಿ ಖಳ ನಟರಾದ ಅನಿಲ್ ಹಾಗೂ ಉದಯ್ ಸಾವನ್ನಪ್ಪಿದ್ದರು. ಚಿತ್ರದ ನಿರ್ಮಾಪಕ ಸುಂದರ್ ಪಿ. ಗೌಡ ಪ್ರಕರಣದ ವಿಚಾರಣೆಗೆ ಬರದ ಹಿನ್ನೆಲೆ ರಾಮನಗರ ಜೆಎಂಎಫ್‌‌‌ಸಿ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಸುಂದರ್‌‌ನನ್ನು ಬಂಧಿಸಲು […]

ರೆಬೆಲ್ ಸ್ಟಾರ್ ಅಂಬರೀಶ್@ 66…ಅಭಿಮಾನಿಗಳಿಂದ ಅಂಬಿ ಅದ್ಧೂರಿ ಹುಟ್ಟುಹಬ್ಬ ಆಚರಣೆ

Tuesday, May 29th, 2018
ambareesh

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಇಂದು 66ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಿನ್ನೆ ತಾನೇ ಪುತ್ರ ಅಭಿಷೇಕ್‌ ಮೊದಲ ಚಿತ್ರ ‘ಅಮರ್‌‌‌‌‌’ ಮುಹೂರ್ತ ನೆರವೇರಿದ್ದರಿಂದ ಡಬಲ್ ಖುಷಿಯಲ್ಲಿದ್ದಾರೆ ಅಂಬಿ. ನಿನ್ನೆ ರಾತ್ರಿಯಿಂದಲೇ ಅಭಿಮಾನಿಗಳು ಮೆಚ್ಚಿನ ನಟನಿಗೆ ಶುಭಾಶಯ ಕೋರಲು ಅಂಬರೀಶ್ ಅವರ ಜೆಪಿ ನಗರ ನಿವಾಸದ ಮುಂದೆ ಕೇಕ್‌‌‌‌, ಹೂವಿನ ಹಾರ, ಸೇಬಿನ ಹಾರದೊಂದಿಗೆ ಜಮಾಯಿಸಿದ್ದರು. ಯಾರಿಗೂ ನಿರಾಸೆ ಮಾಡದೆ ಮಂಡ್ಯದ ಗಂಡು ಅಭಿಮಾನಿಗಳೊಂದಿಗೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡರು. ಮಹಿಳಾ ಅಭಿಮಾನಿಗಳು ಕೂಡಾ ನಿನ್ನೆ ಅಂಬಿಗೆ ಶುಭ ಕೋರಲು […]

ಇಂದೇ ಸಾಲಮನ್ನಾ ಘೋಷಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಎಸ್.ಯಡಿಯೂರಪ್ಪ

Friday, May 25th, 2018
yedeyurappa

ಬೆಂಗಳೂರು: ಇಂದಿನ ಅಧಿವೇಶನದಲ್ಲಿ ರೈತರ ಸಾಲ ಮನ್ನಾ ಘೋಷಣೆ ಮಾಡಲಿಲ್ಲವೆಂದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದರು. ವಿಧಾನಸಭೆ ಕಲಾಪಕ್ಕೆ ತೆರಳುವ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಈಗ ಬಹುಮತ ಇಲ್ಲ ಸಾಲಮನ್ನಾ ಮಾಡಲಾಗಲ್ಲ ಎಂಬ ಮಾತುಗಳನ್ನು ಆಡುತ್ತಿದ್ದಾರೆ, ಆದರೆ ನಾವು ಹಾಗಾಗಲು ಬಿಡುವುದಿಲ್ಲ ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದರು. ಜೆಡಿಎಸ್-ಕಾಂಗ್ರೆಸ್ ಶಾಸಕರಿಗೆ ವಿಪ್ ಜಾರಿ, ಉಲ್ಲಂಘಿಸುವಂತಿಲ್ಲ ‘ಬಿಜೆಪಿಯ ಎಲ್ಲ ಶಾಸಕರು ಸಿಂಹದ ಮರಿಗಳಂತೆ ವಿಧಾನಸಭೆಯಲ್ಲಿ ಕೂತು ಸರ್ಕಾರದ […]

ರಾಜ್ಯದ 25ನೇ ಸಿಎಂ ಆಗಿ ಎಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ!

Wednesday, May 23rd, 2018
pramana-vachana

ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಮೂರನೇ ಪುತ್ರ, ಎಚ್ ಡಿ ಕುಮಾರಸ್ವಾಮಿ (58) ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಮೇ 23ರಂದು 4.32 ನಿಮಿಷದ ಸುಮಾರಿಗೆ ದೇವರು ಹಾಗೂ ಕನ್ನಡ ನಾಡಿನ ಜನರೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ವಿಧಾನಸೌಧದ ಮುಂಭಾಗದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯ ನೂತನ ಸರ್ಕಾರದ ಪದಗ್ರಹಣವಾಗಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಾಳಯದಲ್ಲಿ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಕಂಡು ಬಂದಿತ್ತು. ಮಳೆಯ ಕಣ್ಣಾಮುಚ್ಚಾಲೆಯ ನಡುವೆ ಕಿವಿಗಡಕಿಚ್ಚಿನ ಶಬ್ದ, […]

37 ಜನರನ್ನ ಇಟ್ಟುಕೊಂಡು ರೈತರ ಸಂಪೂರ್ಣ ಸಾಲ ಮನ್ನಾ ಸಾಧ್ಯವೇ: ಹೆಚ್‌.ಡಿ.ದೇವೇಗೌಡ

Wednesday, May 23rd, 2018
devegowda

ಬೆಂಗಳೂರು: ರೈತರ ಸಂಪೂರ್ಣ ಸಾಲ ಮನ್ನಾದ ಬಗ್ಗೆ ನಿಯೋಜಿತ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಗೊಂದಲದ ಹೇಳಿಕೆ ನೀಡಿದ ಬೆನ್ನಲ್ಲೇ ಮಾಜಿ ಪಿಎಂ ಹೆಚ್‌.ಡಿ.ದೇವೇಗೌಡ ನೀಡಿರುವ ಹೇಳಿಕೆ ರೈತರ ಸಾಲ ಮನ್ನಾ ಕನಸನ್ನು ಭಗ್ನಗೊಳಿಸುವಂತಿದೆ. ಕೇವಲ 37 ಶಾಸಕರನ್ನು ಇಟ್ಟುಕೊಂಡು ಸಾಲ ಮನ್ನಾ ಸಾಧ್ಯವೇ ಎಂದು ದೇವೇಗೌಡರು ಪ್ರಶ್ನಿಸಿದ್ದಾರೆ. ಪದ್ಮಾನಾಭನಗರ ನಿವಾಸದಲ್ಲಿ ಮಾತನಾಡಿದ ಅವರು, ಸಾಲ ಮನ್ನಾ ಮಾಡಲು ನಮಗೆ ಪೂರ್ಣ ಬಹುಮತ ಸಿಕ್ಕಿದೆಯಾ? 37 ಜನರನ್ನ ಇಟ್ಟುಕೊಂಡು ಸಾಲ ಮನ್ನಾ ಮಾಡಲು ಆಗುತ್ತಾ? ಸಮನ್ವಯ ಸಮಿತಿಯಲ್ಲಿ ಚರ್ಚಿಸಿ ಮಾಡಬೇಕಷ್ಟೆ […]

ಜನ ನಮ್ಮನ್ನು ತಿರಸ್ಕರಿಸಿದ್ದಾರೆ… ಸಾಲ ಮನ್ನಾಕ್ಕೆ ಸ್ವಲ್ಪ ದಿನ ಕಾಯಿರಿ: ಹೆಚ್‌.ಡಿ. ಕುಮಾರಸ್ವಾಮಿ

Tuesday, May 22nd, 2018
chikmagaluru

ಚಿಕ್ಕಮಗಳೂರು: ಮುಖ್ಯಮಂತ್ರಿ ಸ್ಥಾನವನ್ನು ಅಷ್ಟು ಸುಲಭವಾಗಿ ನಿಭಾಯಿಸಲು ಸಾಧ್ಯವಿಲ್ಲ ಎಂಬುದು ನನಗೆ ಗೊತ್ತಿದೆ. ನನ್ನ ಜೀವನದಲ್ಲಿ ಇದೊಂದು ದೊಡ್ಡ ಸವಾಲು ಎಂದು ನಿಯೋಜಿತ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಹೇಳಿದರು. ಶೃಂಗೇರಿಯಲ್ಲಿ ಮಾತನಾಡಿದ ಅವರು, ಜನತೆಯಲ್ಲಿಯೂ ಯಾರು ರಾಜ್ಯ ಆಳುತ್ತಾರಾ ಎಂಬ ಅನುಮಾನ ಇದೆ. ತಾಯಿ ಶಾರದಾಂಬೆಯ ಆಶೀರ್ವಾದದಿಂದ ಎಲ್ಲವೂ ಸುಗಮ ಆಗುತ್ತೆ ಎಂಬ ನಂಬಿಕೆ ಇದೆ. ಕಾಂಗ್ರೆಸ್ ಪಕ್ಷದಲ್ಲಿ ಡಿಸಿಎಂ ಸ್ಥಾನಕ್ಕೆ ಪೈಪೋಟಿ ವಿಚಾರದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಈ ಬಗ್ಗೆ ಸಂಜೆ ಚರ್ಚೆ ನಡೆಸಿ […]

ಪ್ರಮಾಣವಚನಕ್ಕೂ ಮುನ್ನ ಹೆಚ್‌ಡಿಕೆ ಕುಟುಂಬದಿಂದ ಚಾಮುಂಡೇಶ್ವರಿಗೆ ವಿಶೇಷ ಪೂಜೆ

Tuesday, May 22nd, 2018
kumardevegowda

ಮೈಸೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ನಾಡ ಅಧಿ ದೇವತೆ ಚಾಮುಂಡೇಶ್ವರಿಗೆ ನಿಯೋಜಿತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಾಳೆ ಸಂಜೆ 4.30ಕ್ಕೆ ವಿಧಾನಸೌಧದ ಮುಂಭಾಗದಲ್ಲಿ ಪ್ರಮಾಣ ಸ್ವೀಕರಿಸುವ ಸಮಾರಂಭ ನಿಗದಿಯಾಗಿದ್ದು, ಇದಕ್ಕೂ ಮುನ್ನ ನಾಡ ಅಧಿ ದೇವತೆ ಚಾಮುಂಡಿ ತಾಯಿಗೆ ಬೆಳಗ್ಗೆ 8.45ರ ಶುಭ ಲಗ್ನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಲಲಿತ್ ಮಹಲ್ ಹೆಲಿಪ್ಯಾಡ್‌‌ಗೆ ಆಗಮಿಸಲಿರುವ ಕುಮಾರಸ್ವಾಮಿ, ನಂತರ ಅಲ್ಲಿಂದ ನೇರವಾಗಿ ನಾಡ ಅಧಿ ದೇವತೆ ಶ್ರೀ ಚಾಮುಂಡೇಶ್ವರಿಯತ್ತ ಪ್ರಯಾಣ ಬೆಳೆಸಲಿದ್ದಾರೆ. […]

ಹತಾಶೆಯಲ್ಲಿ ಕಾಂಗ್ರೆಸ್ಸಿಗರು… ಬಿಜೆಪಿಗೆ ಬಹುಮತ ಸಿಗುವುದು ಖಚಿತ: ಶ್ರೀರಾಮುಲು

Saturday, May 19th, 2018
shri-ramulu

ಬೆಂಗಳೂರು: ಸೋಲುವ ಹತಾಶೆಯಲ್ಲಿ ಕಾಂಗ್ರೆಸ್ಸಿಗರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇಂದು ಸಂಜೆ ಸ್ಪಷ್ಟ ಬಹುಮತ ಸಾಬೀತುಪಡಿಸಿ, ಸರ್ಕಾರವನ್ನು ರಚಿಸಲಿದ್ದೇವೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಭರವಸೆ ವ್ಯಕ್ತಪಡಿಸಿದ್ದಾರೆ. ವಿಧಾನಸಭೆಯಲ್ಲಿ ಬಹುಮತ ಸಾಬೀತಿಗೆ ಕ್ಷಣಗಣನೆ ಆರಂಭವಾಗಿರುವ ಮಧ್ಯೆ ಟ್ವೀಟ್ ಮಾಡಿರುವ ಶ್ರೀರಾಮುಲು, ಬಹುಮತ ಸಾಬೀತು ಪಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸೋಲುವ ಹತಾಶೆಯಲ್ಲಿ ಕಾಂಗ್ರೆಸ್ಸಿಗರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ.ಇಂದು ಸಂಜೆ ಬಿಜೆಪಿಗೆ ಸ್ಪಷ್ಟ ಬಹುಮತ ಸಾಬೀತು ಆಗಲಿದೆ ಮತ್ತು ಸರ್ಕಾರವನ್ನು ರಚಿಸಲಿದ್ದೇವೆ ಆ ಮೂಲಕ ಕರ್ನಾಟಕವನ್ನು ಅಭಿವೃದ್ಧಿಯ ಪಥದಲ್ಲಿ ಒಯ್ಯಲಿದ್ದೇವೆ. […]

3 ದಿನದ ಮುಖ್ಯಮಂತ್ರಿ ಶ್ರೀಯುತ ಯಡಿಯೂರಪ್ಪನವರ ಅಧಿಕಾರಾವಧಿ ಇಂದಿಗೆ ಕೊನೆಗೊಳ್ಳಲಿದೆ: ಸಿದ್ದರಾಮಯ್ಯ

Saturday, May 19th, 2018
congress

ಬೆಂಗಳೂರು: ರಾಜ್ಯ ವಿಧಾನಸಭೆಯ ಕಲಾಪ ಆರಂಭವಾಗುತ್ತಿದ್ದಂತೆಯೇ ರಾಜಕಾರಣಿಗಳು ಮತ್ತು ಜನರ ಕುತೂಹಲ, ಉದ್ವೇಗ ಹೆಚ್ಚಾಗಿದೆ. ಆದರೆ, ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರ ಅಧಿಕಾರದ ಅವಧಿ ಇಂದೇ ಮುಕ್ತಾಯವಾಗಲಿದೆ. ಅವರು ಮೂರು ದಿನಗಳ ಮಟ್ಟಿಗಿನ ಮುಖ್ಯಮಂತ್ರಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಕಲಾಪ ಆರಂಭಕ್ಕೂ ಮುನ್ನ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಹುಮತವಿಲ್ಲದೆಯೇ ಸಂವಿಧಾನ ಬಾಹಿರವಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವುದು ನಾಡಿನ ಮತದಾರರ ಆಶಯಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ. ಇಂದು ಸಂಜೆ ಜನಾಭಿಪ್ರಾಯಕ್ಕೆ ಜಯ ದೊರೆಯಲಿದೆ ಎಂಬ ವಿಶ್ವಾಸವಿರುವುದಾಗಿ ಹೇಳಿಕೊಂಡಿದ್ದಾರೆ. […]

ದೇವರ, ರೈತರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಿಎಸ್‌ವೈ

Thursday, May 17th, 2018
yedeyurappa

ಬೆಂಗಳೂರು: ಬಿ.ಎಸ್‌.ಯಡಿಯೂರಪ್ಪ ಅವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ದೇವರ ಮತ್ತು ರೈತರ ಹೆಸರಲ್ಲಿ ಬಿಎಸ್‌ವೈ ಪದಗ್ರಹಣ ಮಾಡಿದರು. ರಾಜ್ಯಪಾಲ ವಜುಭಾಯ್ ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಜಗದೀಶ್ ಶೆಟ್ಟರ್, ಈಶ್ವರಪ್ಪ, ಶ್ರೀರಾಮುಲು, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಸೇರಿದಂತೆ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಮುಖ್ಯಮಂತ್ರಿಯಾಗಿ ಬಿಎಸ್‌ವೈ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತು.