ವಿಶ್ವೇಶ್ವರ ಭಟ್ ವಿಜಯ ಕರ್ನಾಟಕಕ್ಕೆ ರಾಜೀನಾಮೆ

Wednesday, December 8th, 2010
ವಿಶ್ವೇಶ್ವರ ಭಟ್

ಬೆಂಗಳೂರು  : ವಿಜಯ ಕರ್ನಾಟಕ ದಿನಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬುಧವಾರ ಮಧ್ಯಾಹ್ನ ಅವರು ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ಆಡಳಿತ ವರ್ಗಕ್ಕೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದು, ರಾಜೀನಾಮೆ ಅಂಗೀಕೃತವಾಗಿದೆ ಎಂದು ವಿಶ್ವಸನೀಯವಾಗಿ ಗೊತ್ತಾಗಿದೆ. ಕಳೆದ ಹತ್ತು ವರ್ಷಗಳಿಂದ ಸಂಪಾದಕರಾಗಿ ಪತ್ರಿಕೆಯ ಚುಕ್ಕಾಣಿ ಹಿಡಿದು ವಿಜಯ ಕರ್ನಾಟಕವನ್ನು ಮುನ್ನಡೆಸಿದ್ದ ಭಟ್ಟರ ರಾಜೀನಾಮೆ ನಿರ್ಧಾರ ಪತ್ರಿಕೆಯ ಅಸಂಖ್ಯಾತ ಓದುಗರನ್ನು ಮತ್ತು ಅವರ ಅಭಿಮಾನಿ ವರ್ಗವನ್ನು ಬೆಚ್ಚಿಬೀಳಿಸಿದೆ. ಅಲ್ಲದೆ, ಸಮರ್ಥವಾದ […]

ಡಿ.9 ಕ್ಕೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಮಂಗಳೂರಿಗೆ, ಬಿಗು ಬಂದೋಬಸ್ತ್, ನಗರದಲ್ಲಿ ವಾಹನ ಸಂಚಾರ ನಿಷೇಧ

Tuesday, December 7th, 2010
ಡಿ.9 ಕ್ಕೆ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಮಂಗಳೂರಿಗೆ

ಮಂಗಳೂರು : ನೆಹರೂ ಮೈದಾನದಲ್ಲಿ ಡಿಸೆಂಬರ್ 9 ರಂದು ನಡೆಯುವ ವಿಶ್ವಕೊಂಕಣಿ ಏಕತಾ ದಿವಸ್ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಭಾಗವಹಿಸಲಿದ್ದಾರೆ. ಅಂದು ಅವರು 11.30 ಗಂಟೆಗೆ ಬಜಪೆ ವಿಮಾಣ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಡಿಸೆಂಬರ್ 8 ರಂದು ಉಡುಪಿಯ ಮಣಿಪಾಲ್ ಯುನಿವರ್ಸಿಟಿಯ ಪದವಿ ಪ್ರಧಾನ ಸಮಾರಂಭದಲ್ಲೂ ಪಾಲ್ಗೊಳ್ಳಲಿದ್ದು ಅಂದು ಸಂಜೆ 3.50ಕ್ಕೆ ಬಜ್ಪೆ ವಿಮಾನ ನಿಲ್ದಾಣಕ್ಕೆ ಬಂದು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಬಜ್ಪೆಗೆ ತೆರಳಲಿದ್ದಾರೆಂದು ಮಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಘ್ ಇಂದು ಅವರ ಕಛೇರಿಯಲ್ಲಿ […]

ಜಿಲ್ಲೆಯ ಎಲ್ಲ ಕಲ್ಲುಕೋರೆಯ ಕಾರ್ಮಿಕರ ಬಗ್ಗೆ ವರದಿ ನೀಡಲು ಏಳು ದಿನಗಳ ಕಾಲಮಿತಿ

Sunday, December 5th, 2010
ಜಿಲ್ಲಾಧಿಕಾರಿ ಸುಬೋಧ್ ಯಾದವ್

ಮಂಗಳೂರು :  ಕಾರ್ಮಿಕ ಇಲಾಖೆ ಕಂದಾಯ ಮತ್ತು ಗಣಿವಿಜ್ಞಾನ ಇಲಾಖೆಯ ಸಹಕಾರದಿಂದ ಜಿಲ್ಲೆಯ ಎಲ್ಲ ಕಲ್ಲುಕೋರೆಯಲ್ಲಿರುವ ಕಾರ್ಮಿಕ ವ್ಯವಸ್ಥೆಯ ಬಗ್ಗೆ ಏಳುದಿನಗಳೊಳಗೆ ಸಮಗ್ರ ಮಾಹಿತಿ ಸಂಗ್ರಹಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಶ್ರೀ ಸುಬೋಧ್ ಯಾದವ್ ಅವರು ಕಾರ್ಮಿಕ ಇಲಾಖೆ ಅಧಿಕಾರಿ ಶ್ರೀ ಅಪ್ಪಯ್ಯ ಶಿಂಧಿಹಟ್ಟಿ ಅವರಿಗೆ ಸೂಚನೆ ನೀಡಿದರು. ಅಧಿಕಾರಿಗಳು ಮಾನವಹಕ್ಕು ಆಯೋಗದ ನಿರ್ದೇಶನದಂತೆ ಜೀತಪದ್ಧತಿ ಹಾಗೂ ಬಾಲಕಾರ್ಮಿಕ ವ್ಯವಸ್ಥೆಯ ನಿರ್ಮೂಲನಕ್ಕೆ ಸಾಕಷ್ಟು ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡು ಕಾನೂನನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿದ್ದರೆ ವಿಟ್ಲದಲ್ಲಿ ವರದಿಯಾದ ಜೀತಪದ್ಧತಿಗೆ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಶು ಮರಣ ಪ್ರಮಾಣ ಇಳಿಕೆ-ಸುಭೋದ್ ಯಾದವ್

Saturday, December 4th, 2010
ಶಿಶು ಮರಣ ಪ್ರಕರಣ ಪರಿಶೀಲನಾ ಪದ್ಧತಿ

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮರ್ಪಕ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದಿಂದಾಗಿ ಒಂದು ಸಾವಿರ ಶಿಶುಗಳ ಜನನದಲ್ಲಿ ಶಿಶು ಮರಣ ಪ್ರಮಾಣ 10-11 ಕ್ಕೆ ಇಳಿದಿದೆಯೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶ್ರೀ ಸುಭೋದ್ ಯಾದವ್ ತಿಳಿಸಿದ್ದಾರೆ. ಅವರು ಇಂದು ನಗರದ ವೆನ್ ಲಾಕ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಯುನಿಸೆಫ್ ವತಿಯಿಂದ ಆಯೋಜಿಸಿದ್ದ ಶಿಶು ಮರಣ ಪ್ರಕರಣ ಪರಿಶೀಲನಾ ಪದ್ಧತಿ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ದಕ್ಷಿಣಕನ್ನಡ ಜಿಲ್ಲೆ […]

ಸಶಕ್ತ ಕಾರ್ಯನಿರ್ವಹಣೆಗೆ ಸಂಪನ್ಮೂಲ ಕ್ರೋಢೀಕರಣ ಅಗತ್ಯ: ಎ ಜೆ ಕೂಡ್ಗಿ

Friday, December 3rd, 2010
ಎ ಜೆ ಕೂಡ್ಗಿ

ಮಂಗಳೂರು  : ಅಧಿಕಾರ ವಿಕೇಂದ್ರೀಕರಣ ಪರಿಣಾಮಕಾರಿ ಅನುಷ್ಠಾನಕ್ಕೆ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಗಳು ಸ್ವತಂತ್ರವಾಗಿ ಸಂಪನ್ಮೂಲ ಕ್ರೋಢೀಕರಿಸಲು ಅವಕಾಶ ಕಲ್ಪಿಸಬೇಕೆಂದು 3ನೇ ರಾಜ್ಯ ಹಣಕಾಸು ಆಯೋಗ ಶಿಫಾರಸ್ಸುಗಳ ಅನುಷ್ಠಾನ ಕಾರ್ಯಪಡೆ ಅಧ್ಯಕ್ಷರಾದ ಶ್ರೀ ಎ.ಜೆ. ಕೂಡ್ಗಿ ಅವರು ತಿಳಿಸಿದ್ದಾರೆ. ಅವರಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನಲ್ಲಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡುತ್ತಾ, 3ನೇ ಹಣಕಾಸು ಆಯೋಗ ಸ್ಥಳೀಯ ಸಂಸ್ಥೆಗಳ ಸಬಲೀಕರಣಕ್ಕೆ ಶಿಫಾರಸ್ಸು ಮಾಡಿರುವುದಾಗಿ ಹೇಳಿದರು. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಯಥೇಚ್ಛವಾಗಿ ಹಣದ ನೆರವು […]

ಅಂಗವಿಕಲರಲ್ಲೂ ವಿಶೇಷ ಪ್ರತಿಭೆ ಇದೆ: ಪಾಲೆಮಾರ್

Friday, December 3rd, 2010
ಜೆ. ಕೃಷ್ಣ ಪಾಲೆಮಾರ್

ಮಂಗಳೂರು: ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್ ಮಂಡಳಿ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು, ಅಂಗವಿಕಲರ ಹಾಗೂ ಹಿರಿಯ ನಾಗರಿಕ ಕಲ್ಯಾಣ ಇಲಾಖೆ, ಅಂಗವಿಕಲರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ದ.ಕ ಹಾಗೂ ಲಯನ್ಸ್ ಕ್ಲಬ್ ಮಂಗಳೂರು, ಗಾಂಧಿನಗರ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ 2010′ ಕಾರ್ಯಕ್ರಮವನ್ನು ಇಂದು, ಬೆಳಿಗ್ಗೆ ನಗರದ ಪುರಭವನದಲ್ಲಿ ಆಚರಿಸಲಾಯಿತು. ಸಮಾರಂಭದ ಉದ್ಘಾಟನೆಯನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಜೆ. ಕೃಷ್ಣ ಪಾಲೆಮಾರ್ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. […]

ಪರ್ಯಾಯ ಇಂಧನ ಸಂಶೋಧನೆಗಳು ಪರಿಸರಕ್ಕೆ ಧಕ್ಕೆ ಆಗದಂತಿರಲಿ -ಪ್ರೊ. ಮೋಹನ್ ಕುಮಾರ್

Thursday, December 2nd, 2010
ಮೋಹನ್ ಕುಮಾರ್

ಮಂಗಳೂರು : ಹೆಚ್ಚುತ್ತಿರುವ ಜನಸಂಖ್ಯೆಗೆ ತಕ್ಕಂತೆ ಇಂಧನಗಳ ಬಳಕೆ ಸಹ ಹೆಚ್ಚುತ್ತಿದ್ದು,ಇದೊಂದು ಆತಂಕಕಾರಿ ಬೆಳವಣಿಗೆಯಾಗಿದ್ದು,ಸಾಂಪ್ರದಾಯಿಕ ಇಂಧನಗಳ ಬದಲಿಗೆ ಪರ್ಯಾಯ ಇಂಧನಗಳನ್ನು ವಿಶೇಷವಾಗಿ ಜೈವಿಕ ಇಂಧನಗಳ ಸಂಶೋಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳುಆಸಕ್ತಿ ವಹಿಸಿದ್ದು,ಈ ದಿಸೆಯಲ್ಲಿ ಸಂಶೋಧನೆಗಳು ಪರಿಸರಕ್ಕೆ ಹಾನಿಯಾಗದಂತೆ ಎಚ್ಚರ ವಹಿಸಬೇಕೆಂದು ಬೆಂಗಳೂರಿನ ಭಾರತೀಯವಿಜ್ಞಾನ ಸಂಸ್ಥೆಯ ಮುಖ್ಯಸ್ಥರಾದ ಪ್ರೊ.ಮೋಹನ್ ಕುಮಾರ್ ತಿಳಿಸಿದ್ದಾರೆ. ಅವರು ಇಂದು ಮಂಗಳೂರಿನ ಕರ್ನಾಟಕ ಬ್ಯಾಂಕ್ ನ ಸಭಾಂಗಣದಲ್ಲಿ ಕರಾವಳಿಅಭಿವೃದ್ಧಿ ಪ್ರಾಧಿಕಾರ ಮಂಗಳೂರು ಜೈವಿಕ ಇಂಧನ ಕಾರ್ಯಪಡೆ,ಬೆಂಗಳೂರು ಇವರ ಆಶ್ರಯದಲ್ಲಿ ಜೈವಿಕ ಇಂಧನ ಸಂಶೋಧನೆ  […]

ಕರಾವಳಿ ಕರ್ನಾಟಕದ ಪ್ರಥಮ ಪ್ರವಾಸಿ ವಸ್ತು ಪ್ರದರ್ಶನ ಉದ್ಘಾಟನೆ

Thursday, December 2nd, 2010
ಪ್ರಥಮ ಪ್ರವಾಸ ವಸ್ತು ಪ್ರದರ್ಶನ ಉದ್ಘಾಟನೆ

ಮಂಗಳೂರು: ಕರಾವಳಿ ಕರ್ನಾಟಕದ ಪ್ರಥಮ ಪ್ರವಾಸಿ ಮತ್ತು ಪ್ರದರ್ಶನ ಮಂಗಳೂರು ಟ್ರಾವೆಲ್ ಮಾರ್ಟ್ ನ್ನು ಇಂದು ಬೆಳಿಗ್ಗೆ ಮಿಲಾಗ್ರಿಸ್ ಹಾಲ್ ಪಳ್ನೀರ್ , ಮಂಗಳೂರು ಇಲ್ಲಿ ಉದ್ಘಾಟಿಸಲಾಯಿತು. ಪ್ರವಾಸಿ ವಸ್ತು ಪ್ರದರ್ಶನ ಮಳಿಗೆಯನ್ನು ಮಂಗಳೂರು ಪಶ್ಚಿಮ ವಲಯ ಐಜಿಪಿ ಅಲೋಕ್ ಮೋಹನ್ (ಐಪಿಎಸ್) ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮಂಗಳೂರು ದೇಶದಲ್ಲಿ ಪ್ರಮುಖವಾಗಿ ಬೆಳೆಯುತ್ತಿರುವ ಪ್ರದೇಶ ಇಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ 25 ಕ್ಕಿಂತಲೂ ಹೆಚ್ಚು ಪಂಚತಾರ ಹೊಟೇಲುಗಳಿವೆ. ಇದರಿಂದಾಗಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಾಕಷ್ಟು ಅವಕಾಶವಿದೆ. ನಾವು […]

ಹೆಚ್.ಐ.ವಿ ಬಗ್ಗೆ ಭಯ ಬೇಡ, ತಿಳುವಳಿಕೆ ಬೇಕು : ಡಾ. ಓ. ಆರ್. ಶ್ರೀರಂಗಪ್ಪ

Wednesday, December 1st, 2010
ಡಾ. ಓ. ಆರ್. ಶ್ರೀರಂಗಪ್ಪ

ಮಂಗಳೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ದ.ಕ ಇದರ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವ ವಿದ್ಯಾನಿಲಯ ವ್ಯಾಪ್ತಿಯ ಎಲ್ಲಾ ಕಾಲೇಜುಗಳ ರೆಡ್ ರಿಬ್ಬನ್ ಕ್ಲಬ್ಗಳು ಮತ್ತು ಸ್ಕೂಲ್ ಆಫ್ ಸೋಷಿಯಲ್ ವರ್ಕ್ಸ್, ರೋಶನಿ ನಿಲಯ, ಮಂಗಳೂರು ವತಿಯಿಂದ ಇಂದು ನಗರದ ರೋಶನಿ ನಿಲಯದಲ್ಲಿ ವಿಶ್ವ ಏಡ್ಸ್ ದಿನಾಚರಣೆಯು ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ. ಡಾ. ಓ. ಆರ್. ಶ್ರೀರಂಗಪ್ಪ, ಜಿಲ್ಲಾ […]

ಸಹ್ಯಾದ್ರಿ ಆರೋಗ್ಯ ವಿಜ್ಞಾನ ಅಧ್ಯಯನ ಶಿಕ್ಷಣ ಸಂಸ್ಥೆಯಿಂದ ವಿಶ್ವ ಏಡ್ಸ್ ದಿನಾಚರಣೆ

Wednesday, December 1st, 2010
ಸಹ್ಯಾದ್ರಿ ಆರೋಗ್ಯ ವಿಜ್ಞಾನ ಅಧ್ಯಯನ ಶಿಕ್ಷಣ ಸಂಸ್ಥೆ ಮಂಗಳೂರು

ಮಂಗಳೂರು: ಸಹ್ಯಾದ್ರಿ ಆರೋಗ್ಯ ವಿಜ್ಞಾನ ಅಧ್ಯಯನ ಶಿಕ್ಷಣ ಸಂಸ್ಥೆ ಮಂಗಳೂರು ಇದರ ವತಿಯಿಂದ ನಗರದ ಪುರಭವನದಲ್ಲಿ ವಿಶ್ವ ಏಡ್ಸ್ ದಿನಾಚರಣೆಯನ್ನು  ಇಂದು ಬೆಳಿಗ್ಗೆ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ದ.ಕ ಸಂಸದ. ನಳಿನ್ ಕುಮಾರ್ ಕಟೀಲು, ನೆರವೇರಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಅವರು ಏಡ್ಸ್ ರೋಗಿಗಳಿಗೆ ಆತ್ಮ ಸ್ಥೈರ್ಯ ತುಂಬುವ ಕಾರ್ಯ ಆಗಬೇಕು, ಸಾಮಾಜಿಕ ಜಾಗೃತಿಯೊಂದಿಗೆ. ತ್ಯಾಗ, ಸಮರ್ಪಣಾಭಾವ ಮತ್ತು ಸಾಮಾಜಿಕ ಕಳಕಳಿ ಶಿಕ್ಷಣ ಸಂಸ್ಥೆಗಳಿಗೆ ಇರಬೇಕು ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಎ.ಜೆ ಮೆಡಿಕಲ್ ಕಾಲೇಜಿನ  ಚರ್ಮ […]