ಬಂಟ ಕ್ರೀಡೋತ್ಸವ ಉದ್ಘಾಟನೆ

Sunday, September 13th, 2015
Bunts Sports

ಮಂಗಳೂರು: ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಶ್ರೀ ಸಾರ್ವಜನಿಕ ಗಣೇಶೋತ್ಸವದ ವತಿಯಿಂದ ಮಂಗಳೂರಿನ ಬಂಟ್ಸ್ ಹಾಸ್ಟೆಲಿನಲ್ಲಿರುವ ಶ್ರೀ ರಾಮಕೃಷ್ಣ ಕಾಲೇಜಿನ ಆವರಣದಲ್ಲಿ ಬಂಟಕ್ರೀಡೋತ್ಸವ ಭಾನುವಾರ ಜರಗಿತು. ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಅವರು ಕ್ರೀಡೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಕ್ರೀಡೋತ್ಸವ ಯಶಸ್ವಿಯಾಗಲಿ ಎಂದು ಹಾರೈಸಿದರು. ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸಿಎ ಶಾಂತರಾಮ ಶೆಟ್ಟಿ ಅವರು ಮಾತನಾಡಿ, ಕ್ರೀಡೆಯಿಂದ ಆರೋಗ್ಯ […]

ಅತ್ತಾವರ ಘಟನೆ ಪೊಲೀಸರನ್ನು ಆರೋಪ ಮಾಡುವುದು ಸರಿಯಲ್ಲ – ಮುರುಗನ್‌

Thursday, August 27th, 2015
6muruga

ಮಂಗಳೂರು : ಅತ್ತಾವರದಲ್ಲಿ ಆ. 24 ರಂದು ಹಿಂದೂ ಯುವತಿಯನ್ನು ಕಾರಿನಲ್ಲಿ ಕರೆದೊಯ್ದ ಯುವಕ ಶಾಕಿರ್‌ನನ್ನು ಅರೆ ನಗ್ನಗೊಳಿಸಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ಒಟ್ಟು 13 ಮಂದಿಯನ್ನು ಬಂಧಿಸಲಾಗಿದ್ದು, ಅವರಿಗೆ ಸೆ. 7 ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಸ್ತುತ ಅವರನ್ನು ಬಳ್ಳಾರಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸ್‌ ಆಯುಕ್ತ ಎಸ್‌. ಮುರುಗನ್‌ ಆ. 26 ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಪ್ರಕರಣಕ್ಕೆ ಸಂಬಂಧಿಸಿ ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ದೂರು ಮತ್ತು ಪ್ರತಿ ದೂರುಗಳೆರಡರ […]

ಬಿ.ಬಿ.ಎಂ.ಪಿ.ಬಿಜೆಪಿ ಗೆಲುವು – ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸಂಭ್ರಮಾಚರಣೆ

Wednesday, August 26th, 2015
bbmp

ಮಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿ.ಬಿ.ಎಂ.ಪಿ.)ಯ ಚುನಾವಣೆಯಲ್ಲಿ, ಬಿಜೆಪಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಮಂಗಳೂರು ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಗೆಲುವಿನ ಸಂಭ್ರಮಾಚರಣೆಯನ್ನು ಮಂಗಳವಾರ ಆಚರಿಸಿದರು. ರಾಜ್ಯಉಪಾಧ್ಯಕ್ಷರು ಸುಲೋಚನಾ ಜಿ.ಕೆ.ಭಟ್ ,ಕೆ. ಮೋನಪ್ಪ ಭಂಡಾರಿ, ಜಿಲ್ಲಾ ಉಪಾಧ್ಯಕ್ಷರು ಸುರೇಶ್‌ಚಂದ್ರ ಶೆಟ್ಟಿ, ನಿತಿನ್ ಕುಮಾರ್, ಮಂಗಳೂರು ನಗರ ದಕ್ಷಿಣ ಮಂಡಲ ರವಿಶಂಕರ ಮಿಜಾರ್, ಸುಧೀರ್ ಶೆಟ್ಟಿ ಕಣ್ಣೂರು ವೇದವ್ಯಾಸ್ ಕಾಮತ್ ,ಭಾಸ್ಕರ್ ಚಂದ್ರ ಶೆಟ್ಟಿ, ಸತೀಶ್ ಪ್ರಭು,ಶ್ರೀನಿವಾಸ್ ಶೇಟ್, ಶ್ರೀಮತಿ ಕಾತ್ಯಾಯನಿ ಸೀತಾರಾಮ್ , ಶ್ರೀಮತಿ ರೂಪಾ […]

ಜನಪರ ಯೋಜನೆಗಳ ಕುರಿತು ಹೆಚ್ಚಿನ ಅರಿವು ಮೂಡಿಸಲು ಜಿ.ಪಂ. ಅಧ್ಯಕ್ಷರ ಸೂಚನೆ

Wednesday, August 12th, 2015
KDP

ಮಂಗಳೂರು :-ಸಮಾಜದಲ್ಲಿನ ಅಸಮಾನತೆ ಮೇಲು ಕೀಳು ಭಾವನೆಗಳನ್ನು ಹೊಗಲಾಡಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ಅನೇಕ ಜನಪರ ಯೋಜನೆಗಳನ್ನು ಜನರಿಗೆ ತಿಳಿಸುವಲ್ಲಿ ಸಂಬಂಧಿಸಿದ ಯೋಜನೆಗಳ ಅನುಷ್ಠಾನಾಧಿಕಾರಿಗಳು ಮುತುವರ್ಜಿ ವಹಿಸುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾತಿಮ್ಮಪ್ಪ ಗೌಡ ಅವರು ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ದಿ ಕಾರ್ಯಕ್ರಮಗಳ ಮಾಸಿಕ ಸಮೀಕ್ಷಾ ಸಭೆ ಅಧ್ಯಕ್ಷತೆ ವಹಿಸಿ ಪ್ರಗತಿ ಪರಿಶೀಲಿಸಿದರು. ಜನಪ್ರತಿನಿಧಿಗಳು ಇಂದು ಒಬ್ಬರು ನಾಳೆ ಮತ್ತೊಬ್ಬರು ಬರುತ್ತಾರೆ. ಆದರೆ ಅಧಿಕಾರಿಗಳು ಎಲ್ಲಾ […]

ಶತಾಯುಷಿ, ಕರ್ನಾಟಕ ಏಕೀಕರಣ ಚಳುವಳಿಯ ಮುಂಚೂಣಿಯ ನಾಯಕ, ಕಯ್ಯಾರ ಕಿಞ್ಞಣ್ಣ ರೈ ಇನ್ನು ನೆನಪು ಮಾತ್ರ

Tuesday, August 11th, 2015
Kayyara Kinhanna Rai

ಕಾಸರಗೋಡು: ಮಹಾಕವಿ, ಹಿರಿಯ ಸಾಹಿತಿ, ಬಹುಭಾಷಾ ವಿದ್ವಾಂಸ, ಸ್ವಾತಂತ್ರ್ಯ ಹೋರಾಟಗಾರ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಮುಂಚೂಣಿಯ ನಾಯಕ, ಕಾಸರಗೋಡು ವಿಲೀನೀಕರಣ ಕ್ರಿಯಾಸಮಿತಿಯ ಪ್ರಧಾನ ಸಂಚಾಕ, ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈರವರು, ಕಾಸರಗೋಡಿನ ಬದಿಯಡ್ಕ ಗ್ರಾಮದ ಮನೆಯಲ್ಲಿ ತನ್ನ 101ನೆಯ ಇಳಿ ವಯಸ್ಸಿನಲ್ಲಿ ಭಾನುವಾರ ನಿಧನರಾದರು. ಅಖಿಲಭಾರತ ಮಟ್ಟದಲ್ಲಿ ಜರುಗಿದ 66 ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಕಯ್ಯಾರ ಕಿಞ್ಞಣ್ಣ ರೈ ಕೇರಳ ರಾಜ್ಯದಲ್ಲಿರುವ ಕಾಸರಗೋಡು ತಾಲೂಕಿನ ಪೆರಡಾಲ ಗ್ರಾಮದಲ್ಲಿ ದುಗ್ಗಪ್ಪ ರೈ-ದೈಯಕ್ಕೆ ದಂಪತಿಗಳ ಮಗನಾಗಿ […]

ಪಿಲಿಕುಳ ಕೆರೆಗೆ 20,000 ಮೀನುಗಳ ಬಿಡುಗಡೆ

Tuesday, August 4th, 2015
pilikula fish

ಮಂಗಳೂರು : ಪಿಲಿಕುಳ ದೋಣಿ ವಿಹಾರದ ಸುಮಾರು ೭ ಎಕೆರೆ ವಿಸ್ತೀರ್ಣದ ವಿಶಾಲವಾದ ಕೆರೆಯಲ್ಲಿ ಸುಮಾರು 20,000 ಮೀನುಮರಿಗಳನ್ನು ಯುವ ಸಬಲೀಕರಣ, ಕ್ರೀಡೆ ಮತ್ತು ಮೀನುಗಾರಿಕೆ ರಾಜ್ಯ ಸಚಿವ ಕೆ ಅಭಯಚಂದ್ರ ಜೈನ್ ಅವರ ನೇತೃತ್ವದಲ್ಲಿ ಭಾನುವಾರ ನೀರಿಗೆ ಬಿಡಲಾಯಿತು. ಈ ಸಂದರ್ಭದಲ್ಲಿ ದ.ಕ ಜಿಲ್ಲಾಧಿಕಾರಿ ಎ. ಬಿ ಇಬ್ರಾಹಿಂ, ಜಿಲ್ಲಾ ಪಂಚಾಯತಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ.ಐ. ಶ್ರೀವಿದ್ಯಾ, ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಎಸ್ ಎ ಪ್ರಭಾಕರ ಶರ್ಮ, ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ […]

ನಗರದ ಪೊಲೀಸ್ ಆಯುಕ್ತರಾಗಿ ಎನ್ಎಸ್ ಮೇಘರಿಕ್

Friday, July 31st, 2015
N S Megharikh

ಬೆಂಗಳೂರು : ಬೆಂಗಳೂರು ನಗರಕ್ಕೆ ಹೊಸ ಪೊಲೀಸ್ ಆಯುಕ್ತರನ್ನು ನೇಮಿಸಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಶುಕ್ರವಾರ ಸಂಜೆ ಆದೇಶ ಹೊರಡಿಸಿದೆ. ಎಂಎನ್ ರೆಡ್ಡಿ ಅವರಿಗೆ ಡಿಜಿಪಿಯಾಗಿ ಬಡ್ತಿ ನೀಡಲಾಗಿದೆ. ಎನ್.ಎನ್ ಮೇಘರಿಕ್ ಅವರು ನೂತನ ಪೊಲೀಸ್ ಆಯುಕ್ತರಾಗಿ ವರ್ಗಾವಣೆಗೊಂಡಿದ್ದಾರೆ. ಬಿಬಿಎಂಪಿ ಚುನಾವಣೆ ಮುಗಿಯುವವರೆಗೂ ಪ್ರಮುಖ ಹುದ್ದೆಯಲ್ಲಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡದೇ. ಹಾಲಿ ಇರುವ ಸ್ಥಾನದಲ್ಲೇ ಮುಂದುವರೆಸಬೇಕು ಎಂದು ಚುನಾವಣಾ ಆಯೋಗ ಸರ್ಕಾರಕ್ಕೆ ಸೂಚಿಸಿತ್ತು. ಹೀಗಾಗಿ ಗೊಂದಲಕ್ಕೆ ಬಿದ್ದಿದ್ದ ಸರ್ಕಾರ ಕೊನೆಗೂ ಧೈರ್ಯ ಮಾಡಿ ಹಿರಿಯ ಐಪಿಎಸ್ […]

ನ್ಯಾಯವಾದಿಯೊಬ್ಬರ ಮೇಲೆ ಹಲ್ಲೆ, ಕದ್ರಿ ಇನ್ಸ್ ಪೆಕ್ಟರ್ ಟಿ.ಡಿ ನಾಗರಾಜ್ ಅಮಾನತು

Friday, July 31st, 2015
Advacate protest

ಮಂಗಳೂರು: ಪೊಲೀಸ್ ಆಯುಕ್ತ ಎಸ್.ಮುರುಗನ್ ನ್ಯಾಯವಾದಿಯೊಬ್ಬರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಕದ್ರಿ ಇನ್ಸ್ ಪೆಕ್ಟರ್ ಟಿ.ಡಿ ನಾಗರಾಜ್ ಅವರನ್ನು ಇಂದು ಅಮಾನತು ಮಾಡಿರುವುದಾಗಿ ತಿಳಿದು ಬಂದಿದೆ. ಶುಕ್ರವಾರ ನ್ಯಾಯವಾದಿ ಉತ್ತಮ್ ರೈ ತಮ್ಮ ಕಕ್ಷಿದಾರನ ಜೊತೆಗೆ ಕೇಸ್ ಸಂಬಂಧಿಸಿ ಠಾಣೆಗೆ ಹೋದಾಗ ನಾಗರಾಜ್ ಅವರು ರೈ ಅವರೊಂದಿಗೆ ಅನೂಚಿತವಾಗಿ ನಡೆದುಕೊಂಡದ್ದಲ್ಲದೇ ಹಲ್ಲೆ ಮಾಡಿದ್ದಾಗಿ ದೂರಿದ್ದಾರೆ. ಅದಕ್ಕಾಗಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಪಿ.ಚೆಂಗಪ್ಪ ನೇತೃತ್ವದಲ್ಲಿ ಕದ್ರಿ ಠಾಣೆ ಮುಂದೆ ನ್ಯಾಯವಾದಿಗಳು ಧರಣಿ ನಡೆಸಿ ಇನ್ಸ್ ಪೆಕ್ಟರ್ […]

ಮಾತೃಸಂಘದಿಂದ ಗ್ರಾ.ಪಂ.ಚುನಾವಣೆಯಲ್ಲಿ ಆಯ್ಕೆಯಾದ ಬಂಟ ಸದಸ್ಯರಿಗೆ ಅಭಿನಂದನೆ

Monday, July 20th, 2015
Bunts

ಮಂಗಳೂರು : ಬಂಟರ ಯಾನೆ ನಾಡವರ ಮಾತೃಸಂಘ ದ.ಕ. ವತಿಯಿಂದ ದ.ಕನ್ನಡ ಹಾಗೂ ಉಡುಪಿ ಜಿಲ್ಲೆಯ ಗ್ರಾಮಪಂಚಾಯತ್‌ಗಳಿಗೆ ಇತ್ತೀಚೆಗೆ ಜರಗಿದ ಚುನಾವಣೆಯಲ್ಲಿ ಆಯ್ಕೆಯಾದ ಬಂಟ ಸಮಾಜದ ಸದಸ್ಯರಿಗೆ ಅಭಿನಂದನಾ ಸಮಾರಂಭ ರವಿವಾರ ಬಂಟ್ಸ್‌ ಹಾಸ್ಟೆಲ್‌ನ ಎ.ಬಿ. ಶೆಟ್ಟಿ ಸಭಾಂಗಣದಲ್ಲಿ ಜರಗಿತು. ಕರ್ನಾಟಕದ ಮಾಜಿ ಸಚಿವ ಹಾಗೂ ಮಾಜಿ ಲೋಕಸಭಾ ಸದಸ್ಯ ಶ್ರೀ ಜಯಪ್ರಕಾಶ ಹೆಗ್ಡೆ ಅವರು ದೀಪ ಬೆಳಗಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ತಮ್ಮ ಮೇಲಿರುವ ಹೊಣೆಗಾರಿಕೆ ಅರಿತುಕೊಂಡು ಜನರ ನಿರೀಕ್ಷೆಗಳಿಗೆ ಪೂರಕ […]

ವಿಶೇಷ ಮಕ್ಕಳಿಗೆ ವೈದ್ಯಕೀಯ ಮೌಲ್ಯಾಂಕನ ಶಿಬಿರ

Friday, July 17th, 2015
Seminar for special children

ಮಂಗಳೂರು : ದ.ಕ.ಜಿ.ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಮಂಗಳೂರು ಉತ್ತರ ವಲಯ ಮತ್ತು ಸ್ಕಂದ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಹಾಗೂ ರೋಟರಿ ಕ್ಲಬ್ ನಾರ್ತ್ ಗಾಂಧಿನಗರ ಇವರ ಸಹಯೋಗದಲ್ಲಿ ಸರ್ವ ಶಿಕ್ಷಣ ಅಭಿಯಾನದ ವತಿಯಿಂದ ಭಾನುವಾರ ರೋಟರಿ ಬಾಲಭವನ ಗಾಂಧಿನಗರ ಇಲ್ಲಿ ವಿಶೇಷ ಮಕ್ಕಳಿಗೆ ವೈದ್ಯಕೀಯ ಮೌಲ್ಯಾಂಕನ ಶಿಬಿರವನ್ನು ಏರ್ಪಡಿಸಲಾಯಿತು. ಈ ಶಿಬಿರದಲ್ಲಿ ಕಾರ್ಪೊರೇಟರ್ ಶ್ರೀಮತಿ ಜಯಂತಿ ಆಚಾರ್, ಶ್ರೀಮತಿ ರಾಜಲಕ್ಷ್ಮಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಂಗಳೂರು ಉತ್ತರವಲಯ, ಸಮನ್ವಯಾಧಿಕಾರಿಗಳಾದ […]