ಕೋವಿಡ್ ಸೋಂಕಿನ 2ನೇ ಅಲೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ – ಡಾ. ರಾಜೇಂದ್ರ ಕೆ.ವಿ
Saturday, January 16th, 2021ಮಂಗಳೂರು : ಕೋವಿಡ್ ಸೋಂಕಿನ ಎರಡನೇ ಅಲೆ ಉಂಟಾಗದಂತೆ ತಡೆಯಲು ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದರು. ವಿದೇಶಗಳಲ್ಲಿ ಈಗಾಗಲೇ ಕೊರೋನಾದ ಎರಡನೇ ಅಲೆ ಬಾಧಿಸಿ ಹೆಚ್ಚು ಜನರು ಸೋಂಕಿತರಾಗಿದ್ದಾರೆ. ಈ ವರೆಗೆ ನಮ್ಮ ದೇಶದಲ್ಲಿ ಎರಡನೇ ಅಲೆ ಕಂಡುಬಂದಿರುವುದಿಲ್ಲ ಆದರೂ ಸಹ ನಿರ್ಲಕ್ಷ್ಯ ವಹಿಸದೇ ಕೊರೊನಾ ಎರಡನೇ ಅಲೆಯನ್ನು […]