ಸ್ವಾಮಿ ವಿವೇಕಾನಂದರ ಚಿಂತನೆಯ ನಿಜವಾದ ವಾರಿಸುದಾರರು ಎಡಪಂಥೀಯರು ಮಾತ್ರ – ಡಾ. ಎನ್ ಇಸ್ಮಾಯಿಲ್

Thursday, February 6th, 2025
Dr. N-Ismail

ಮಂಗಳೂರು : ಸ್ವಾಮಿ ವಿವೇಕಾನಂದರು 19ನೇ ಶತಮಾನದ ಭಾರತೀಯ ಪುನರುಜ್ಜೀವನ ಆಂದೋಲನದ ಪ್ರಮುಖ ನೇತಾರರಲ್ಲಿ ಒಬ್ಬರಾಗಿದ್ದರೆ ವಿನಃ ಹಿಂದುತ್ವವಾದಿಗಳು ಪ್ರತಿಪಾದಿಸುತ್ತಿರುವಂತೆ ಕೇವಲ ಸಂಕುಚಿತ ದ್ರಷ್ಠಿಯ ಹಿಂದುತ್ವದ ನೇತಾರರಾಗಿರಲಿಲ್ಲ. ಪ್ರಗತಿಪರ ಚಿಂತನೆಯ ಜಾತ್ಯತೀತ ಭಾವನೆಯ ಅತ್ಯಂತ ಮಾನವೀಯ ಮನಸ್ಸಿನ ವಿವೇಕಾನಂದರು ಭವ್ಯ ಭಾರತದ ಬಗ್ಗೆ ಆಳವಾದ ಚಿಂತನೆ ನಡೆಸಿದ್ದರು.ಆ ಮೂಲಕ ವಿವೇಕಾನಂದರ ಚಿಂತನೆಯ ನಿಜವಾದ ವಾರಿಸುದಾರರು ಎಡಪಂಥೀಯರೇ ಹೊರತು ಬಲಪಂಥೀಯ ಹಿಂದುತ್ವವಾದಿ ಶಕ್ತಿಗಳಲ್ಲ ಎಂದು ಪ್ರಗತಿಪರ ಚಿಂತಕರೂ, ನಿವ್ರತ್ತ ಪ್ರಾಂಶುಪಾಲರಾದ ಡಾ.ಎನ್ ಇಸ್ಮಾಯಿಲ್ ರವರು ಅಭಿಪ್ರಾಯ ಪಟ್ಟರು. ಅವರು […]

ದೆಹಲಿಯಲ್ಲಿ ಇಎಸ್ಐಸಿ ಡಿಜಿಯನ್ನು ಭೇಟಿಯಾದ ಸಂಸದ ಕ್ಯಾ. ಚೌಟ

Thursday, February 6th, 2025
capt-brijesh chowta

ನವದೆಹಲಿ: ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ನವದೆಹಲಿಯಲ್ಲಿ ಇಂದು ಇಎಸ್ಐಸಿ ಪ್ರಧಾನ ಕಚೇರಿಯ ಮಹಾ ನಿರ್ದೇಶಕ ಅಶೋಕ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿ ಮಂಗಳೂರಿನ ಇಎಸ್ಐ ಆಸ್ಪತ್ರೆ ಎದುರಿಸುತ್ತಿರುವ ಮೂಲಸೌಕರ್ಯ ಕೊರತೆ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದಾರೆ. ಕ್ಯಾ. ಚೌಟ ಅವರು ಇತ್ತೀಚೆಗೆ ಮಂಗಳೂರಿನ ಇಎಸ್ಐ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದಾಗ ಅಲ್ಲಿ ದೂರದ ಊರುಗಳಿಂದ ಚಿಕಿತ್ಸೆಗೆ ಬಂದ ರೋಗಿಗಳು ಸರ್ವರ್ ಸಮಸ್ಯೆ ಸೇರಿದಂತೆ ಹಲವು ರೀತಿ ತೊಂದರೆ ಅನುಭವಿಸುತ್ತಿರುವುದು […]

ಉಜಿರೆಯ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿಗೆ ರಾಷ್ಟ್ರಮಟ್ಟದ ಮಾನ್ಯತೆ

Thursday, February 6th, 2025
SDM-Ujire

ಉಜಿರೆ: 2025ರ ಫೆಬ್ರವರಿ 4 ರಂದು ನವದೆಹಲಿಯಲ್ಲಿ ನಿರ್ಮಾಣಭವನದಲ್ಲಿ ನಡೆದ ಸಭೆಯಲ್ಲಿ ಉಜಿರೆಯಲ್ಲಿರುವ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು ಮಾಡಿದ ಸೇವೆ, ಸಾಧನೆ ಮತ್ತು ಶಿಕ್ಷಣದ ಗುಣಮಟ್ಟಕ್ಕೆ ರಾಷ್ಟçಮಟ್ಟದ ಮಾನ್ಯತೆ ಲಭಿಸಿದೆ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಕ್ಕೆ ಕೇಂದ್ರ ನಿಯಂತ್ರಣದ ನಿಯಮ ಜಾರಿಗೊಳಿಸುವಂತೆ ಕೋರಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ ಮನವಿ ಮಾಡಿದ್ದು ಇದಕ್ಕೆ ಕೇಂದ್ರ ಆಯುಷ್ ಮಂಡಲ ಸಂಪೂರ್ಣ ಸಮ್ಮತಿ ನೀಡಿದೆ. ಕೇಂದ್ರ ಸರ್ಕಾರದ ಆಯುಷ್ ಸಚಿವ ಪ್ರತಾಪರಾವ್ ಗಣಪತ್ ರಾವ್ […]

ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರ ಲೋಕಾರ್ಪಣೆ, ಶ್ರೀ ಒಡಿಯೂರು ರಥೋತ್ಸವ ತುಳುನಾಡ ಜಾತ್ರೆ

Thursday, February 6th, 2025
ananda-mantapa

ಬಂಟ್ವಾಳ : ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಒಡಿಯೂರು ರಥೋತ್ಸವ ತುಳುನಾಡ ಜಾತ್ರೆ ಅಂಗವಾಗಿ ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರ ಲೋಕಾರ್ಪಣೆ, ತುಳು ಸಾಹಿತ್ಯ ಸಮ್ಮೇಳನ ಫೆಬ್ರವರಿ 6 ರಂದು ನಡೆಯಿತು. ಫೆಬ್ರವರಿ 6ರಂದು ಬೆಳಗ್ಗೆ ದೀಪೋಜ್ವಲನ ಮೂಲಕ ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರ ಲೋಕಾರ್ಪಣೆಯನ್ನು ಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ನೆರವೇರಿಸಿದರು. ಸಾಧ್ವಿ ಮಾತಾನಂದಮಯೀ ದಿವ್ಯ ಸಾನ್ನಿಧ್ಯದಲ್ಲಿ ಗಣ್ಯರು ಉಪಸ್ಥಿತರಿದ್ದರು. ಮಧ್ಯಾಹ್ನ ನಡೆದ ತುಳು ಸಾಹಿತ್ಯ ಸಮ್ಮೇಳನವನ್ನು ಪರಮ ಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ […]

ಮಾಡೂರು ಶ್ರೀ ಪಾಡಂಗರ ಭಗವತಿ ಕ್ಷೇತ್ರಕ್ಕೆ ಭವ್ಯ ಶೋಭಾಯಾತ್ರೆಯಲ್ಲಿ ಸಾಗಿಬಂದ ಹಸಿರು ಹೊರೆಕಾಣಿಕೆ

Thursday, February 6th, 2025
Madooru-Bhagavati

ಮಂಗಳೂರು : ಮಾಡೂರು ಶ್ರೀ ಪಾಡಂಗರ ಭಗವತಿ ಕ್ಷೇತ್ರದಲ್ಲಿ ಫೆಬ್ರವರಿ 5 ರಿಂದ 10ರ ವರೆಗೆ ನಡೆಯುವ ಪುನರ್ ಪ್ರತಿಷ್ಠಾ ಬ್ರಹ್ಮಕಲಶಶೋತ್ಸವದ ಪ್ರಯುಕ್ತ ಹಸಿರು ಹೊರೆಕಾಣಿಕೆ ಶೋಭಾಯಾತ್ರೆ ಫೆಬ್ರವರಿ 5 ರಂದು ಬೀರಿ ಶ್ರೀ ಗಣೇಶ ಮಂದಿರದಿಂದ ಕುಣಿತ ಭಜನೆಯೊಂದಿಗೆ ವಿಜೃಂಭಣೆಯಿಂದ ನಡೆಯಿತು. ಉದ್ಯಾವರ ಅರಸು ಮಂಜಿಷ್ಣಾರ್ ದೈವಗಳ ಅಣ್ಣ ದೈವದ ಪಾತ್ರಿ ರಾಜ ಬೆಳ್ಚಪ್ಪಾಡರು ಶೋಭಾಯಾತ್ರೆ ಮೆರವಣಿಗೆಯನ್ನು ದೀಪಬೆಳಗಿಸುವುದರ ಮೂಲಕ ಚಾಲನೆ ನೀಡಿ ಶುಭಾಂಸನೆ ಗೈದರು. ಪುನರ್ ಪ್ರತಿಷ್ಠಾ ಬ್ರಹ್ಮಕಲಶಶೋತ್ಸಕ್ಕೆ ವಿವಿಧ ಕಡೆಗಳಿಂದ ಬಂದ ತರಕಾರಿ, […]

ಸುರತ್ಕಲ್: ನೀರಿನ ಸಮಸ್ಯೆಯ ವಿರುದ್ಧ ಸಾರ್ವಜನಿಕರ ಪ್ರತಿಭಟನೆ

Thursday, February 6th, 2025
surathkal-water

ಸುರತ್ಕಲ್: ಸುರತ್ಕಲ್ ಪರಿಸರದಲ್ಲಿ ಹಲವಾರು ತಿಂಗಳುಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು. ಮಂಗಳೂರು ಮಹಾನಗರ ಪಾಲಿಕೆಗೆ ಸಮಿತಿ ವತಿಯಿಂದ ಹಲವು ಬಾರಿ ಮನವಿಯನ್ನು ಸಲ್ಲಿಸಿಯು ಯಾವುದೇ ರೀತಿಯ ಸ್ಪಂದನೆ ಸಿಗದ ಕಾರಣ ಪಾಲಿಕೆ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತಾಡಿದ ಸಂಘಟನೆಯ ಅಧ್ಯಕ್ಷ ಮುಹಮ್ಮದ್ ಹುಸೇನ್ ಅವರು, “ನೀರಿನ ಸಮಸ್ಯೆಯಿಂದಾಗಿ ಮೂರು ನಾಲ್ಕು ದಿನಗಳಿಂದ ಸ್ನಾನ ಮಾಡದೇ ಜನರು ಸಮಸ್ಯೆ […]

“ಫೆ.22ರಂದು ಹೊಂಬೆಳಕು ಎರಡನೇ ಆವೃತ್ತಿಯ ಕಾರ್ಯಕ್ರಮ“ -ಮಂಜುನಾಥ ಭಂಡಾರಿ

Wednesday, February 5th, 2025
Hombelaku

ಮಂಗಳೂರು: “ಫೆ.22ರಂದು ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಗ್ರಾಮ ಸ್ವರಾಜ್ ಪ್ರತಿಷ್ಠಾನದ ಆಶ್ರಯದಲ್ಲಿ ಎರಡನೇ ಆವೃತ್ತಿಯ “ಹೊಂಬೆಳಕು“ ಕಾರ್ಯಕ್ರಮ ಏರ್ಪಡಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 355 ಗ್ರಾಮ ಪಂಚಾಯತ್ ನ 6082 ಮಂದಿ ಚುನಾಯಿತ ಸದಸ್ಯರಿದ್ದಾರೆ. 2000-2500 ಮಂದಿ ಪಂಚಾಯತ್ ನೌಕರರಿದ್ದಾರೆ. ಅವರೆಲ್ಲರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯತಿಗಳ ಸಹಕಾರದೊಂದಿಗೆ ಹೊಂಬೆಳಕು ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ“ ಎಂದು ವಿಧಾನ ಪರಿಷತ್ ಶಾಸಕ ಹಾಗೂ ಸಂಘಟನೆಯ ಅಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ಪತ್ರಿಕಾಗೋಷ್ಟಿಯಲ್ಲಿ […]

ಕಬಕ ಗ್ರಾಮದ ಮುರ ಬಳಿ ರಸ್ತೆ ಅಪಘಾತದಲ್ಲಿ ಕ್ಯಾಮರಾ ಮೆನ್ ಚೇತನ್ ಕುಮಾರ್ (44) ಸಾವು

Wednesday, February 5th, 2025
chethan-kemminje

ಪುತ್ತೂರು : ಪುತ್ತೂರು ತಾಲೂಕಿನ ಕಬಕ ಗ್ರಾಮದ ಬಳಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಫೆ.4ರಂದು ನಡೆದಿದೆ. ಪುತ್ತೂರಿನಿಂದ ಕಬಕ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಬಕ ಗ್ರಾಮದ ಮುರ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಆಟೋ ಚಲಾಯಿಸಿಕೊಂಡು ಬಂದು ಮೋಟಾರ್ ಸೈಕಲ್ (ನೋಂದಣಿ ಸಂಖ್ಯೆ ಕೆಎ-19-ಎಲ್-2082)ಗೆ ಮೊಹಮ್ಮದ್ ತೌಫಿಕ್ ಎಂಬಾತ ಚಲಾಯಿಸುತ್ತಿದ್ದ ಆಟೋ ರಿಕ್ಷಾ (ನೋಂದಣಿ ಸಂಖ್ಯೆ ಕೆಎ-21-ಬಿ-4611) ಡಿಕ್ಕಿ ಹೊಡೆದಿದೆ. ಸವಾರ […]

“ಫೆ.22ರಂದು ಹೊಂಬೆಳಕು ಎರಡನೇ ಆವೃತ್ತಿಯ ಕಾರ್ಯಕ್ರಮ“ -ಮಂಜುನಾಥ ಭಂಡಾರಿ

Wednesday, February 5th, 2025
Hombelaku

ಮಂಗಳೂರು: “ಫೆ.22ರಂದು ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಗ್ರಾಮ ಸ್ವರಾಜ್ ಪ್ರತಿಷ್ಠಾನದ ಆಶ್ರಯದಲ್ಲಿ ಎರಡನೇ ಆವೃತ್ತಿಯ “ಹೊಂಬೆಳಕು“ ಕಾರ್ಯಕ್ರಮ ಏರ್ಪಡಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 355 ಗ್ರಾಮ ಪಂಚಾಯತ್ ನ 6082 ಮಂದಿ ಚುನಾಯಿತ ಸದಸ್ಯರಿದ್ದಾರೆ. 2000-2500 ಮಂದಿ ಪಂಚಾಯತ್ ನೌಕರರಿದ್ದಾರೆ. ಅವರೆಲ್ಲರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯತಿಗಳ ಸಹಕಾರದೊಂದಿಗೆ ಹೊಂಬೆಳಕು ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ“ ಎಂದು ವಿಧಾನ ಪರಿಷತ್ ಶಾಸಕ ಹಾಗೂ ಸಂಘಟನೆಯ ಅಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ಪತ್ರಿಕಾಗೋಷ್ಟಿಯಲ್ಲಿ […]

ಮಂಗಳೂರು ಶ್ರೀ ವೆಂಕಟರಮಣ ದೇವರ ರಥೋತ್ಸವ

Wednesday, February 5th, 2025
Venkataramana-Rathotsava

ಮಂಗಳೂರು : ರಥೋತ್ಸವ ಪ್ರಯುಕ್ತ ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪ್ರಾತಃ ಕಾಲ ಮಹಾಪ್ರಾರ್ಥನೆ ಬಳಿಕ ಪ್ರಧಾನ ಶ್ರೀ ವೀರ ವೆಂಕಟೇಶ್ ದೇವರ ಸಹಿತ ಪರಿವಾರ ದೇವರುಗಳಿಗೆ ಶತಕಲಶಾಭಿಷೇಕ , ಗಂಗಾಭಿಷೇಕ , ಕನಕಾಭಿಷೇಕ ಶ್ರೀ ಸಂಸ್ಥಾನ ಕಾಶೀಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ನಡೆಯಿತು. ಬಳಿಕ ಯಜ್ಞ ಮಂಟಪದಲ್ಲಿ ಪೂರ್ಣಾಹುತಿ , ಸಾಯಂಕಾಲ ೫ : ೦೦ ಗಂಟೆಗೆ ಸರಿಯಾಗಿ ಶ್ರೀದೇವರು ಸ್ವರ್ಣ ಪಲ್ಲಕಿಯಲ್ಲಿ ವಿರಾಜಮಾನರಾಗಿ ರಥಾರೂಡರಾದರು. ರಥಾರೋಹಣಬಳಿಕ ಶ್ರೀಗಳವರಿಂದ ಪೂಜೆ […]