ವೀಕೆಂಡ್ ಕರ್ಫ್ಯೂ : ಮಂಗಳೂರಲ್ಲಿ ವಿರಳವಾಗಿ ಬಸ್ ಸಂಚಾರ, ಜೊತೆಗೆ ಜನ ಸಂಚಾರವು ಇದೆ

Saturday, January 8th, 2022
Mangalore Weekend

ಮಂಗಳೂರು : ದ.ಕ. ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಮಧ್ಯೆಯೂ ಬಸ್ಸುಗಳ ಸಂಚಾರವಿದೆ. ನಗರದ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಜನ ಸಂಚಾರವು ಇದೆ. ಆದರೆ ಅನಗತ್ಯ ಸಂಚಾರ ನಡೆಸಿರುವ ವಾಹನಗಳನ್ನು ಮಂಗಳೂರು ಪೊಲೀಸರು ತಡೆ ಹಿಡಿದಿದ್ದಾರೆ. ಕ್ಲಾಕ್ ಟವರ್ ಬಳಿ ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಸಕಾರಣವಿಲ್ಲದೆ ವಾಹನಗಳಲ್ಲಿ ಸಂಚಾರ ಮಾಡುವವರನ್ನು ತಡೆದು ದಂಡ ಹಾಕುವ ಪ್ರಕ್ರಿಯೆ ಪೊಲೀಸರಿಂದ ನಡೆಯುತ್ತಿದೆ. ನಗರದಲ್ಲಿ ಬೆಳಗ್ಗೆಯಿಂದ ಸುಮಾರು 25ಕ್ಕೂ‌ಅಧಿಕ ದ್ವಿಚಕ್ರ ವಾಹನ  ಗಳನ್ನು ಜಪ್ತಿ ಮಾಡಿ. ಮಾಸ್ಕ್ […]

ಕೊರಗಜ್ಜ ದೈವದ ವೇಷ-ಭೂಷಣ ಧರಿಸಿ ಅಪಮಾನ ಮಾಡಿದ ಮದುಮಗ- ವಿಹೆಚ್‌‌ಪಿ, ಬಜರಂಗದಳದ ಕಾರ್ಯಕರ್ತರ ಪ್ರತಿಭಟನೆ

Friday, January 7th, 2022
Koragajja-daiva

ವಿಟ್ಲ : ಮದುವೆ ಮನೆಯಲ್ಲಿ ನಡೆದ  ಔತಣಕೂಟದಲ್ಲಿ ಮದುಮಗನೊಬ್ಬ ಹಿಂದೂಗಳ ಆರಾಧ್ಯ ದೈವ ಕೊರಗಜ್ಜನಿಗೆ ಅಪಮಾನ ಮಾಡಿದ್ದಾನೆ ಎಂದು ಆರೋಪಿಸಿ  ಮದುಮಗಳ ಮನೆಗೆ ವಿಹೆಚ್‌ಪಿ, ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ವಿಟ್ಲದ ಸಾಲೆತ್ತೂರಿನಲ್ಲಿರುವ ಮದುಮಗಳ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ವಿಟ್ಲ ಪ್ರಖಂಡ ವಿಹೆಚ್‌‌ಪಿ, ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ತಾಲೂಕಿನ ಉಪ್ಪಳದ ಯುವಕನೊಂದಿಗೆ ನಿಕಾಹ್ ಮಧ್ಯಾಹ್ನ ವೇಳೆಗೆ ನಡೆದಿದ್ದು, ಸಂಜೆ ವೇಳೆ ಔತಣಕೂಟವನ್ನು ಏರ್ಪಡಿಸಿದ್ದರು. ಔತಣಕೂಟಕ್ಕೆ ತಡರಾತ್ರಿ ಆಗಮಿಸಿದ ವರನ ಬಳಗ ವಧುವಿನ […]

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆನ್‌ಲೈನ್ ಬುಕ್ಕಿಂಗ್‌ ಸೇವೆಗಳು ರದ್ದು

Friday, January 7th, 2022
dharmasthala

ಮಂಗಳೂರು  : ಕೋವಿಡ್-19 ರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಮಾರ್ಗಸೂಚಿಯನ್ನು ಪ್ರಕಟಿಸಿದ ಮೇರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಜಿಲ್ಲಾಡಳಿತದ ಮುಂದಿನ ಆದೇಶದ ವರೆಗೆ ಆನ್‌ಲೈನ್ ಬುಕ್ಕಿಂಗ್‌ಗಳಾದ ವಸತಿ, ತುಲಾಭಾರ ಮತ್ತು ಉತ್ಸವಾದಿ ಸೇವೆಗಳನ್ನು ರದ್ದುಪಡಿಸಲಾಗಿದೆ ಹಾಗೂ ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿ ದೇವಸ್ಥಾನದ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇತರ ದಿನಗಳಲ್ಲಿ ಜಿಲ್ಲಾಡಳಿತದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ವೀಕೆಂಡ್ ಕರ್ಫ್ಯೂ ಹಾಗೂ ಕೊರೋನಾ ನಿರ್ಬಂಧಗಳನ್ನು ವಿರೋಧಿಸಿ ಪ್ರತಿಭಟನಾ ಪ್ರದರ್ಶನ

Friday, January 7th, 2022
cpim Protest

ಮಂಗಳೂರು : ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ವಿಧಿಸಿದ ವೀಕೆಂಡ್ ಕರ್ಫ್ಯೂ ಹಾಗೂ ಕೋವಿಡ್ ನಿರ್ಬಂಧಗಳನ್ನು ವಿರೋಧಿಸಿ ಹಾಗೂ ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ದೂಡಿದ ರಾಜ್ಯ ಸರ್ಕಾರದ ವಿರುದ್ಧ CPIM ನೇತ್ರತ್ವದಲ್ಲಿ ಮಂಗಳೂರು ನಗರದಲ್ಲಿಂದು (07-01-2021) ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ರಾಜ್ಯ ಸರಕಾರದ ಅವೈಜ್ಞಾನಿಕ ಕ್ರಮಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ CPIM ದ.ಕ.ಜಿಲ್ಲಾ ಕಾರ್ಯದರ್ಶಿ ಕೆ.ಯಾದವ ಶೆಟ್ಟಿಯವರು,‍ *ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬೊಮ್ಮಯಿ […]

ಡಾ. ಆರ್. ಎನ್. ಶೆಟ್ಟಿಯವರು ಸಂಕಲ್ಪದಂತೆ ನಿರ್ಮಿಸಿದ ನೂತನ ಬ್ರಹ್ಮರಥದ ಪುರಪ್ರವೇಶ

Thursday, January 6th, 2022
Brahmaratha

ಕುಂದಾಪುರ  : ಡಾ. ಆರ್. ಎನ್. ಶೆಟ್ಟಿಯವರು ಸಂಕಲ್ಪದಂತೆ ನಿರ್ಮಿಸಿದ ನೂತನ ರಥದ ಪುರಪ್ರವೇಶ ಕಾರ್ಯಕ್ರಮ ಗುರುವಾರ ಸಂಜೆ ಅತ್ಯಂತ ಅದ್ದೂರಿಯಾಗಿ ನಡೆಯಿತು. ಮಹತ್ಹೋಭಾರ ಶ್ರೀ ಮುರುಡೇಶ್ವರನ ಭಾವಚಿತ್ರವನ್ನು ಇರಿಸಿ ಆರತಿ ಬೆಳಗಿದ ಆರ್. ಎನ್. ಶೆಟ್ಟಿಯವರ ಪುತ್ರ ಸುನಿಲ್ ಶೆಟ್ಟಿಯವರು ರಥವನ್ನು ಬರಮಾಡಿಕೊಂಡರು. ಧಾರ್ಮಿಕ ವಿಧಿ ವಿದಾನಗಳನ್ನು ದೇವಸ್ಥಾನದ ಮುಖ್ಯ ಅರ್ಚಕರಾದ ಜಯರಾಮ ಅಡಿಗಳ್ ನೆರವೇರಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅರ್ಚಕ ಶಿವರಾಮ ಅಡಿಗಳ್ ಮುಂತಾದವರು ಉಪಸ್ಥಿತರಿದ್ದರು. ಮಹಿಳೆಯರಿಂದ ಪೂರ್ಣಕುಂಭ, ಮಹಿಳೆಯರ ಭಜನಾ ತಂಡ, ನಂತರ ವಿವಿಧ […]

ವಿದ್ಯಾರ್ಥಿನಿ ಮುಂದೆ ನಗ್ನ ದೇಹ ಪ್ರದರ್ಶನ – ಯುವಕನ ಬಂಧನ

Thursday, January 6th, 2022
posco act

ಕಾಸರಗೋಡು :  ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮುಂದೆ ಬೈಕ್ ನಲ್ಲಿ ಬಂದ ಯುವಕನೋರ್ವ ನಗ್ನ ದೇಹ ಪ್ರದರ್ಶಿಸಿದ ಘಟನೆ ನಡೆದಿದ್ದು , ಈತನ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಆರೋಪಿ ಅಜಾನೂರು ರಾವಣೇಶ್ವರ ನಿವಾಸಿ ರಾಜೇಂದ್ರನ್ (35)ನನ್ನು ಬೇಕಲ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ರಿಮಾಂಡ್ ವಿಧಿಸಿದೆ.

ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ಕುರಿತ ಸ್ಫೋಟಕ ಮಾಹಿತಿ ಬಹಿರಂಗ

Thursday, January 6th, 2022
Deepthi Marla

ಬೆಂಗಳೂರು :  ಉಳ್ಳಾಲದಲ್ಲಿ ರಾಷ್ಟ್ರೀಯ ತನಿಖಾ ದಳ ಬಂಧಿಸಿರುವ ದಂತ ವೈದ್ಯೆ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ಕುರಿತ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಪ್ರಕರಣದಲ್ಲಿ ಹನಿಟ್ರ್ಯಾಪ್, ಮತಾಂತರ ಹಾಗೂ ಉಗ್ರ ಸಂಘಟನೆಯ ಒಡನಾಟವಿರುವ ಮಾಹಿತಿ ಹೊರಬಿದ್ದಿದೆ. ಮಾಜಿ ಶಾಸಕ ಇದನಬ್ಬರ ಮೊಮ್ಮಗನ ಮದುವೆ ಆದ ಬಳಿಕ ಇಸ್ಲಾಂಗೆ ಮತಾಂತರವಾಗಿದ್ದ ದೀಪ್ತಿ ಮಾರ್ಲ ಕ್ರೋನಿಕಲ್ ಫೌಂಡೇಶನ್ ಎಂಬ ಇನ್ಸ್ಟಾಗ್ರಾಂ ಪೇಜ್‌ನಲ್ಲಿ ಯುವಕರನ್ನ ಮತಾಂತರಕ್ಕೆ ಪ್ರೇರೇಪಿಸುತ್ತಿದ್ದಳಂತೆ. ಬಳಿಕ ಮತಾಂತರಗೊಂಡ ಯುವಕರನ್ನ ಇಸ್ಲಾಮಿಕ್‌ ಸ್ಟೇಟ್‌ ಉಗ್ರ ಸಂಘಟನೆಗೆ ಸೇರಿಸುತ್ತಿದ್ದಳು ಎಂದು ಎನ್‌ಐಎ ಪ್ರಾಥಮಿಕ‌ […]

ಪಾಂಡೇಶ್ವರ ಮಹಿಳಾ ಠಾಣೆಯ 26 ಪೊಲೀಸ್ ಅಧಿಕಾರಿಗಳ ವರ್ಗಾವಣೆ, 6 ಮಂದಿ ಅಮಾನತು

Thursday, January 6th, 2022
shashikumar

ಮಂಗಳೂರು : ಪಾಂಡೇಶ್ವರದಲ್ಲಿರುವ ಮಹಿಳಾ ಠಾಣೆಯ 32 ಪೊಲೀಸ್ ಅಧಿಕಾರಿಗಳನ್ನು ಮತ್ತು  ಸಿಬ್ಬಂದಿಯನ್ನು ವರ್ಗಾವಣೆ (ಆರು ಮಂದಿ ಅಮಾನತು ಸೇರಿ) ಮಾಡಲಾಗಿದೆ. ಠಾಣೆಗೆ ಇಬ್ಬರು ಪಿಎಸ್‌ಐ, ಒಬ್ಬರು ಎಚ್‌ಸಿ ಹಾಗೂ 16 ಪಿಸಿಗಳು ಸೇರಿ 20 ಮಂದಿಯ ಹೊಸ ತಂಡವನ್ನು ನೇಮಕ ಮಾಡಿ ಪೊಲೀಸ್ ಆಯಕ್ತ ಎನ್. ಶಶಿಕುಮಾರ್ ಆದೇಶ ನೀಡಿದ್ದಾರೆ. ಕೆಲ ಸಿಬ್ಬಂದಿ ನಡುವೆ ಗುಂಪುಗಾರಿಕೆ, ಭಿನ್ನಾಭಿಪ್ರಾಯಮತ್ತು ಠಾಣೆಯಲ್ಲಿಯೇ ಮದ್ಯಪಾನ ಮಾಡಿರುವುದು ಈ ಬದಾಲಾವಣೆಗೆ ಕಾರಣ ಎನ್ನಲಾಗಿದೆ. ಈ ಬಗ್ಗೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದು, […]

ವೀಕೆಂಡ್ ಕರ್ಫ್ಯೂನಲ್ಲಿ ಏನೆಲ್ಲಾ ಇದೆ ಎಂಬ ಮಾಹಿತಿ ಇಲ್ಲಿದೆ

Wednesday, January 5th, 2022
weekend-curfew

ಮಂಗಳೂರು : ಐಟಿ ಕೈಗಾರಿಕೆಗಳು, ಇತರ ಕೈಗಾರಿಕೆಗಳು, ಬೀದಿಬದಿ ವ್ಯಾಪಾರ, ಆಹಾರ ದಿನಸಿ, ಹಣ್ಣುಹಂಪಲುಗಳು, ಡೈರಿ, ಹಾಲಿನ ಬೂತ್ ಗಳು, ಪಡಿತರ, ಆಹಾರ ಪೂರೈಕೆ ಮಾಡುವ ಸಂಸ್ಥೆಗಳು ವೀಕೆಂಡ್ ಕರ್ಫ್ಯೂನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು  ದ.ಕ. ಜಿಲ್ಲೆಯಲ್ಲಿ ಈ ವಾರದ ವೀಕೆಂಡ್‌ನಲ್ಲಿ ಹೊರಾಂಗಣದಲ್ಲಿ 200 ಜನರಿಗೆ (ಒಳಾಂಗಣ 100) ಸೀಮಿತಗೊಳಿಸಿ ಮದುವೆ, ಯಕ್ಷಗಾನ ಸೇರಿದಂತೆ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ನಡೆಸಲು ಅವಕಾಶವಿರಲಿದೆ ಎಂದರು. ಮದುವೆ, ಯಕ್ಷಗಾನ ಸೇರಿದಂತೆ ಪೂರ್ವ ನಿಗದಿತ […]

ಕುಂದಾಪುರ ಮೂಲದ ಹುಡುಗನನ್ನು ಮದುವೆಯಾದ ಚಿತ್ರ ನಟಿ ಶುಭಾ ಪೂಂಜಾ

Wednesday, January 5th, 2022
Subha Poonja

ಉಡುಪಿ : ಚಿತ್ರ ನಟಿ ಶುಭಾ ಪೂಂಜಾ ಕುಂದಾಪುರ ಮೂಲದ ಸುಮಂತ್ ಮಹಾಬಲ ಜೊತೆ ಶಿರ್ವ ಸಮೀಪದ ಮಜಲಬೆಟ್ಟು ಬೀಡುವಿನ ನಿವಾಸದಲ್ಲಿ ಬುಧವಾರ ಹಸೆಮಣೆ ಏರಿದ್ದಾರೆ. ಈ ವಿಚಾರವನ್ನು ಶುಭಾ ಪೂಂಜಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ‘ಇಂದು ನಾನು ಮತ್ತು ಸುಮಂತ್ ಮಹಾಬಲ ಗುರು ಹಿರಿಯರ, ಕುಟುಂಬ ಮತ್ತು ಆತ್ಮೀಯ ಸ್ನೇಹಿತರ ಸಮ್ಮುಖದಲ್ಲಿ ನಮ್ಮ ಊರು ಮಜಲಬೆಟ್ಟು ಬೀಡುವಿನಲ್ಲಿ ಸರಳ ವಿವಾಹವಾದೆವು. ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆ ಗಳು ನಮ್ಮ ಮೇಲಿರಲಿ’ ಎಂದು ಹೇಳಿಕೊಂಡಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಇವರು ಸರಳವಾಗಿ ವಿವಾಹ […]