ಸೋಷಿಯಲ್‌ ಮೀಡಿಯಾದಲ್ಲಿ ರಾಜ್ಯಾಧ್ಯಕ್ಷರ ವಿರುದ್ದ ಅತೃಪ್ತ ಆತ್ಮ ಹಾಗೂ ಕಾಣದ ಕೈಗಳು ಕೆಲಸ ಮಾಡುತ್ತಿವೆ : ಸುದರ್ಶನ್‌ ಮೂಡುಬಿದಿರೆ

Thursday, December 16th, 2021
Social Media

ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ಬರೆಯುವವರು ಪೇಮೆಂಟ್‌ ಕೊಡುತ್ತಾರೆ ಎಂದು ಬರೆಯುವವರು.  ಸೋಷಿಯಲ್‌ ಮೀಡಿಯಾದಲ್ಲಿ ಬರೆದ ಮಾತ್ರಕ್ಕೆ ರಾಜೀನಾಮೆ ಕೊಡಲು ಅದು ಭಿಕ್ಷೆ ಅಲ್ಲ,  ಸಂಘಟನೆ ಒಡೆಯುವುದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್‌ ಮೂಡುಬಿದಿರೆ ಹೇಳಿದ್ದಾರೆ. ನಗರದ  ಖಾಸಗಿ ಹೋಟೆಲಿನಲ್ಲಿ  ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬಗ್ಗೆ ಅವಹೇಳನ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು ಸೋಷಿಯಲ್‌ ಮೀಡಿಯಾದಲ್ಲಿ ದುರ್ಬಲ ರಾಜಾಧ್ಯಕ್ಷ ಎಂದು ಹೇಳಿಕೆ ಕೊಟ್ಟ ಕೂಡಲೇ ಅವರು ದುರ್ಬಲವಾಗುವುದಿಲ್ಲ. […]

ಬೆಳ್ತಂಗಡಿ ತಾಲೂಕುಗಳಲ್ಲಿ ಡಿ.17ರ ಮಧ್ಯರಾತ್ರಿ 12ರ ತನಕ ಸೆಕ್ಷನ್ 144ರಡಿ ನಿಷೇಧಾಜ್ಞೆ

Thursday, December 16th, 2021
pfi-protest

ಮಂಗಳೂರು: ಪಿಎಫ್‌ಐ ಸಂಘಟನೆ ಕಾರ್ಯಕರ್ತರು ಕಾನೂನು ಕೈಗೆತ್ತಿಕೊಳ್ಳುವ ಸನ್ನಿವೇಶ ನಿರ್ಮಾಣ ಮಾಡಿರುವುದರಿಂದ  ಪುತ್ತೂರು ಉಪವಿಭಾಗವಾದ ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕುಗಳಲ್ಲಿ ಡಿ.17ರ ಮಧ್ಯರಾತ್ರಿ 12ರ ತನಕ ಸೆಕ್ಷನ್ 144ರಡಿ ನಿಷೇಧಾಜ್ಞೆ ವಿಧಿಸಿ ಪುತ್ತೂರು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್ ಆದೇಶ ಹೊರಡಿಸಿದ್ದಾರೆ. ಪುತ್ತೂರು, ಕಡಬ, ಬೆಳ್ಳಾರೆ, ಸವಣೂರು, ಬೆಳ್ತಂಗಡಿ, ಸುಳ್ಯ, ಬಂಟ್ವಾಳ ಕಡೆಯಿಂದ ಪಿಎಫ್‌ಐ ಸಂಘಟನೆ ಕಾರ್ಯಕರ್ತರು ಉಪ್ಪಿನಂಗಡಿಗೆ ಆಗಮಿಸಿ ಕಾನೂನು ಕೈಗೆತ್ತಿಕೊಳ್ಳುವ ಸನ್ನಿವೇಶ ನಿರ್ಮಾಣ ಮಾಡಿದ್ದು, ಮುಂದುವರಿದು ಉಪವಿಭಾಗ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ […]

ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಚುನಾಯಿಸಿದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಗೆ ಕೃತಜ್ಞತೆಗಳು : ಮಂಜುನಾಥ ಭಂಡಾರಿ

Tuesday, December 14th, 2021
Manjunatha-Bhandary

ಮಂಗಳೂರು : ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ, ಕರ್ನಾಟಕ ವಿಧಾನ ಪರಿಷತ್ ಸದಸ್ಯನಾಗಿ ಆರಿಸಿದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಗೆ ನನ್ನ ತುಂಬು ಹೃದಯದ ಧನ್ಯವಾದಗಳು. ನನ್ನ ಮೇಲೆ ಅಭಿಮಾನ ಮತ್ತು ನಂಬಿಕೆ ಇಟ್ಟು ದಕ್ಷಿಣ ಕನ್ನಡ ಮತ್ತು ಉಡುಪಿ ಸ್ಥಳೀಯ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿ ನನ್ನ ಗೆಲುವಿಗೆ ಸಹಕರಿಸಿದ  ಪಕ್ಷದ ಎಲ್ಲಾ ನಾಯಕರುಗಳಿಗೆ ನಾನು ಆಭಾರಿಯಾಗಿದ್ದೇನೆ. ಪಕ್ಷದ ನಾಯಕರು ನನ್ನ ಮೇಲಿಟ್ಟ ನಂಬಿಕೆ ಮತ್ತು ಅಭಿಮಾನ […]

ವಾಯ್ಸ್ ಮೆಸೇಜ್ ಕಳುಹಿಸಿ ಬಸ್ಸು ಮಾಲೀಕ ಆತ್ಮಹತ್ಯೆ

Tuesday, December 14th, 2021
Narayana Rai

ಸುಳ್ಯ :  ಅವಿನಾಶ್ ಮೋಟಾರ್ಸ್ ಮಾಲೀಕ ಸುಳ್ಯದ  ನಾರಾಯಣ ರೈ(73) ಸೋಮವಾರ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಸೌಖ್ಯದ ಹಿನ್ನೆಲೆಯಲ್ಲಿ ತನಗೆ ಬದುಕಲು ಕಷ್ಟವಾಗುತ್ತಿದೆ. ಮನೆಯವರಿಗೂ ಕಷ್ಟ ಕೊಡಲು ಮನಸ್ಸಿಲ್ಲ, ಹೀಗಾಗಿ ನಿಮ್ಮನ್ನೆಲ್ಲ ಬಿಟ್ಟು ಹೋಗುತ್ತಿದ್ದೇನೆ. ನನ್ನ ಮರಣದ ಕಾರಣದಿಂದ ಬಸ್ಗಳ ಓಡಾಟ ನಿಲ್ಲಿಸಬಾರದು. ಕಪ್ಪು ಫ್ಲ್ಯಾಗ್ ಹಾಕಿ ಬಸ್ ಓಡಿಸಬೇಕು’ ಎಂದು ಡೆತ್ ನೋಟ್ ಬರೆದಿದ್ದರು. ಸಾವಿಗೂ ಮೊದಲು ತನ್ನ ತಂಗಿಗೆ ಧ್ವನಿ ಸಂದೇಶ ಕಳುಹಿಸಿದ್ದರು. ಮೃತದೇಹದ ಪಕ್ಕದಲ್ಲಿ ಡೆತ್ನೋಟ್ ಪತ್ತೆಯಾಗಿದೆ. ಕೆಲವು ತಿಂಗಳ […]

ದ.ಕ. ಮತ್ತು ಉಡುಪಿ ಜಿಲ್ಲೆ ವಿಧಾನ ಪರಿಷತ್‌ನ ಚುನಾವಣೆ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮಂಜುನಾಥ ಭಂಡಾರಿಗೆ ಜಯ

Tuesday, December 14th, 2021
Manjunatha Bhandary SrinivasaPoojary

ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಸ್ಥಳೀಯಾಡಳಿತದ ವಿಧಾನ ಪರಿಷತ್‌ನ  ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ, ಹಾಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಇಬ್ಬರೂ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಜಯ ಗಳಿಸಿದ್ದಾರೆ. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಖಾತೆ ಸಚಿವರಾಗಿರುವ ಕೋಟ ಶ್ರೀನಿವಾಸ 3,672 ಮತಗಳನ್ನು ಗಳಿಸಿ ಮತ್ತೊಮ್ಮೆ ರಾಜ್ಯ ಶಾಸಕಾಂಗದ ‘ಮೇಲ್ಮನೆ’ ಪ್ರವೇಶಿಸಿದ್ದಾರೆ. ಮಂಜುನಾಥ ಭಂಡಾರಿ 2,079 ಮತಗಳನ್ನು ಗಳಿಸಿ ಮೊದಲ ಬಾರಿ […]

ಗಾಂಜಾ ಸಾಗಿಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಬಂಧನ

Monday, December 13th, 2021
Ganja students

ಮಂಗಳೂರು : ತೊಕ್ಕೊಟ್ಟು ಸಮೀಪದ ಬಗಂಬಿಲ ಎಂಬಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಉಳ್ಳಾಲ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಂಧಿತರನ್ನು ಕೇರಳ ತ್ರಿಶ್ಶೂರ್‌ನ ಆದರ್ಶ್ ಜ್ಯೋತಿ (22) ಮತ್ತು ಕೊಟ್ಟಾಯಂನ ಯೋಯಲ್ ಜೋಯ್ಸ್ (22) ಎಂದು ಗುರುತಿಸಲಾಗಿದೆ. ಆದರ್ಶ್ ಬಿಡಿಎಸ್ ಮತ್ತು ಯೋಯಲ್ ನರ್ಸಿಂಗ್ ವಿದ್ಯಾರ್ಥಿಗಳು ಎಂದು ಪ್ರಕರಣ ದಾಖಲಿಸಿರುವ ಪೊಲೀಸರು ತಿಳಿಸಿದ್ದಾರೆ. ಸೋಮವಾರ ಬಗಂಬಿಲ ಪರಿಸರದಲ್ಲಿ ಇವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಪೊಲೀಸರು ತಪಾಸಣೆ ನಡೆಸಿದರು. ಈ ವೇಳೆ ಸುಮಾರು 220 ಗ್ರಾಂ ತೂಕದ ಗಾಂಜಾ ಇವರ […]

ಶ್ರೀ ವೀರ ವೆಂಕಟೇಶ ದೇವರ ಅನ್ನಪೂರ್ಣೆ ( ಪಾಕ ಶಾಲೆ ) ಯ ಉದ್ಘಾಟನೆ

Monday, December 13th, 2021
Annapoorne

ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ನವೀಕೃತ ಅನ್ನಪೂರ್ಣೆ ( ಪಾಕ ಶಾಲೆ ) ಯ ಉದ್ಘಾಟನಾ ಸಮಾರಂಭವು ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ನೆರವೇರಿತು . ಪ್ರಾರಂಭದಲ್ಲಿ ಶ್ರೀಗಳವರು ಬಂಟ್ವಾಳ್ ಮೊಕ್ಕಾಂ ನಿಂದ ಆಗಮಿಸಿದ್ದು ಶ್ರೀಗಳವರಿಗೆ ಮಂಗಳೂರು ಪೇಟೆಯ ವತಿಯಿಂದ ಪೂರ್ಣ ಕುಂಭ ಸ್ವಾಗತ ನೀಡಲಾಯಿತು . ಶ್ರೀಗಳವರಿಂದ ಶ್ರೀ ವೀರ ವೆಂಕಟೇಶ ದೇವರ ಸನ್ನಿಧಿಯಲ್ಲಿ ಮಹಾ ಪ್ರಾರ್ಥನೆ ನಡೆಯಿತು ಇದೇ ಸಂದರ್ಭದಲ್ಲಿ ಬಳಿಕ ಬರುವ ವರ್ಷ […]

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಜಿಲ್ಲಾಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಅವರಿಗೆ ಅಭಿನಂದನೆ

Monday, December 13th, 2021
MP Ravindranath

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಜಿಲ್ಲಾಧ್ಯಕ್ಷರಾದ ಡಾ.ಎಂ.ಪಿ.ಶ್ರೀನಾಥ್ ಅವರನ್ನು ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಮತ್ತು ದ.ಕ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಪರವಾಗಿ ಅವರ ಪದಗ್ರಹಣ ಸಮಾರಂಭದಲ್ಲಿ ಅಭಿನಂದಿಸಿ ಸನ್ಮಾನಿಸಿತು. ಈ ಸಂದರ್ಭ ದಕ್ಷಿಣ ಕನ್ನಡ ಚುಸಾಪ ಜಿಲ್ಲಾಧ್ಯಕ್ಷ ಹರೀಶ್ ಸುಲಾಯ ಒಡ್ಡಂಬೆಟ್ಟು, ಮಂಗಳೂರು ಚುಸಾಪ ಹಾಗೂ ಉಡುಪಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕಾ.ವೀ  ಕೃಷ್ಣದಾಸ್, ಉಪಾಧ್ಯಕ್ಷೆ ಅರುಣಾ ನಾಗರಾಜ್,ಮಾಲತಿ ಶೆಟ್ಟಿ ಮಾಣೂರು,ಗೋಪಾಲಕೃಷ್ಣ ಶಾಸ್ತ್ರಿ, […]

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದ ಕಿಚ್ಚ ಸುದೀಪ್ ಕುಟುಂಬ

Sunday, December 12th, 2021
kicha-sudeep

ಸುಬ್ರಹ್ಮಣ್ಯ : ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕುಟುಂಬ ಸಮೇತರಾಗಿ ಭೇಟಿ ನೀಡಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು. ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ಹಾಗೂ ನಾಗಪ್ರತಿಷ್ಠಾ ಕಾರ್ಯವನ್ನು ನೆರವೇರಿಸಿದರು. ನಂತರ ಸುದೀಪ್ ಪತ್ನಿ ಪ್ರಿಯಾ, ಮಗಳು ಸಾನ್ವಿಯೊಂದಿಗೆ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರನ್ನ ಭೇಟಿ ಮಾಡಿ ಆಶೀರ್ವಾದ ಪಡೆದರು.  

ಮಹಿಳಾ ಗ್ರಾಹಕಿಗೆ ಚಪ್ಪಲಿ ತೋರಿಸುವುದಾಗಿ ಹೇಳಿ ಭುಜ ಮತ್ತು ಎದೆ ಮುಟ್ಟಿ ಲೈಂಗಿಕ ಕಿರುಕುಳ, ಆರೋಪಿ ಬಂಧನ

Sunday, December 12th, 2021
shamshudin

ಮುಲ್ಕಿ : ಚಪ್ಪಲಿ ಖರೀದಿಗೆ ಹೋಗಿದ್ದ ಮಹಿಳಾ ಗ್ರಾಹಕಿ ಯೊಬ್ಬರನ್ನು ಚಪ್ಪಲಿ ತೋರಿಸುವುದಾಗಿ ಹೇಳಿ ಭುಜ ಮತ್ತು ಎದೆಯ ಭಾಗಕ್ಕೆ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಭಾನುವಾರ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಅಂಗಡಿ ಮಾಲಕ ಸಂಶುದ್ದೀನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾನುವಾರ  ಮಧ್ಯಾಹ್ನ ಮುಲ್ಕಿ ಠಾಣಾ ವ್ಯಾಪ್ತಿಯ ತಾಳಿಪಾಡಿ ಗ್ರಾಮದ ಕಿನ್ನಿಗೋಳಿ ಎಂಬಲ್ಲಿರುವ ಚಪ್ಪಲಿ ಅಂಗಡಿಯಲ್ಲಿ ಅದರ ಮಾಲಿಕರು ಮಹಿಳಾ ಗ್ರಾಹಕಿಗೆ ವಿವಿಧ ಚಪ್ಪಲಿಗಳನ್ನು ತೋರಿಸಿದ್ದು ಮಹಿಳಾ ಗ್ರಾಹಕಿ ಗೆ ಅವರು ತೋರಿಸಿದ […]