ಕಲ್ಲೇಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಿಂದ ವಿಧಾನ ಪರಿಷತ್ ಚುನಾವಣಾ ಪ್ರಚಾರ

Monday, December 6th, 2021
BJP-MLC

ಪುತ್ತೂರು : ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯು ಇಲ್ಲಿನ ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ಜರುಗಿತು. ಸಭೆಯಲ್ಲಿ ದಿಕ್ಸೂಚಿ ಭಾಷಣ ಮಾಡಿದ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, “ಕೋಟ ಶ್ರೀನಿವಾಸ ಪೂಜಾರಿ ಅವರು ಪಂಚಾಯತ್ ರಾಜ್ ವ್ಯವಸ್ಥೆಯ ಬಗ್ಗೆ ಹೆಚ್ಚಿನ ಅಧ್ಯಯನ ಮಾಡಿದವರು. ಧಾರ್ಮಿಕ ದತ್ತಿ ಇಲಾಖೆಗೆ ಕೋಟ ಮಂತ್ರಿಯಾದಾಗ ಹಳ್ಳಿ ಹಳ್ಳಿಯ ಸಣ್ಣಪುಟ್ಟ ದೇವಸ್ಥಾನಗಳಿಗೂ ಅನುದಾನ ನೀಡಿದರು. ಸಾಮೂಹಿಕ ವಿವಾಹ […]

ಪುತ್ತೂರಿನ ಮಾಜಿ ಶಾಸಕ ಉರಿಮಜಲು ರಾಮ್ ಭಟ್ ನಿಧನ

Monday, December 6th, 2021
Ram bhat

ಮಂಗಳೂರು: ಪುತ್ತೂರಿನ ಮಾಜಿ ಶಾಸಕ ಉರಿಮಜಲು ರಾಮ್ ಭಟ್(92) ಸೋಮವಾರ ನಿಧನರಾಗಿದ್ದಾರೆ. ಬಿಜೆಪಿ ಭೀಷ್ಮ ಎಂದು ಜನಜನಿತರಾಗಿದ್ದ ಅವರು. ಏಳು ಬಾರಿ‌ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಎರಡು ಬಾರಿ ಶಾಸಕರಾಗಿದ್ದರು. ವಯೋಸಹಜ ಅನಾರೋಗ್ಯಕ್ಕೆ ತುತ್ತಾಗಿ ರಾಮ್ ಭಟ್ ಅವರನ್ನು ಕೆಲ ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಿಸಿದ್ದರೂ ಮತ್ತೆ ಮನೆಗೆ ಕರೆ ತರಲಾಗಿತ್ತು. ಇಂದು ಮನೆಯಲ್ಲೇ ವಿಧಿವಶರಾಗಿದ್ದಾರೆ. ರಾಮ್ ಭಟ್ ಜನಸಂಘದ ಪ್ರಭಾವಿ ನಾಯಕರಾಗಿ, ಬಿಜೆಪಿಯ ಮುಂಚೂಣಿ ನಾಯಕರಾಗಿದ್ದರು.

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಚುನಾವಣಾ ಪೂರ್ವ ಸಿದ್ಧತಾ ಸಭೆ

Monday, December 6th, 2021
Manjunath Bhandary

ಮಂಗಳೂರು  : ವಿಧಾನ ಪರಿಷತ್ತಿಗೆ ದ.ಕ. ಸ್ಥಳೀಯ ಪ್ರಾಧಿಕಾರ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಅವರ ಗೆಲುವಿಗೆ ಸಂಬಂಧಿಸಿ ಚುನಾವಣಾ ಪೂರ್ವ ಸಿದ್ಧತಾ ಸಭೆ ಸೋಮವಾರ ನಗರದ ಓಶಿಯನ್ ಪರ್ಲ್ ಹೊಟೇಲ್ ಸಭಾಂಗಣದಲ್ಲಿ ಜರಗಿತು. ಡಿ. 4 ರಂದು ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎಲ್ಲಾ 13 ವಿಧಾನ ಸಭಾಕ್ಷೇತ್ರಗಳ ಎರಡೆರಡು ಬ್ಲಾಕ್‌ಗಳ ಅಧ್ಯಕ್ಷರು ಮತ್ತು ಪಕ್ಷದ ವೀಕ್ಷಕರ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಸೋಮವಾರದ ಈ ಸಭೆ ಜರಗಿದ್ದು, ಎಲ್ಲಾ 13 […]

ಧರ್ಮಸ್ಥಳ ವಸತಿ ಛತ್ರದ ನಿವೃತ್ತ ಪ್ರಬಂಧಕ ಸುರೇಂದ್ರ ಬಲ್ಲಾಳ್ ನಿಧನ

Monday, December 6th, 2021
Surendra Ballal

ಉಜಿರೆ: ಧರ್ಮಸ್ಥಳ ಗ್ರಾಮದ ನಿವಾಸಿ ಸುರೇಂದ್ರ ಬಲ್ಲಾಳ್ (66) ಸೋಮವಾರ ಹೃದಯಾಘಾತದಿಂದ ನಿಧನರಾದರು. ಅವರು ಕಬಡ್ಡಿ ಆಟಗಾರರಾಗಿದ್ದು ಹಲವಾರು ಪಂದ್ಯಗಳಲ್ಲಿ ಭಾಗವಹಿಸಿ ಬಹುಮಾನ ಗಳಿಸಿದ್ದರು. ಧರ್ಮಸ್ಥಳದಲ್ಲಿ ದೇವಸ್ಥಾನದ ವಸತಿ ಛತ್ರದಲ್ಲಿ ಪ್ರಬಂಧಕರಾಗಿ ಅವರು ಮೂವತ್ತು ವರ್ಷ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಅವರಿಗೆ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

ಕಾಲೇಜು ವಿದ್ಯಾರ್ಥಿಗಳಿಂದ ಪೊಲೀಸರಿಗೆ ಇಂಟರ್ ಲಾಕ್ ಹಾಗೂ ಕಲ್ಲಿನಿಂದ ಹಲ್ಲೆ, 9 ಮಂದಿ ಆರೋಪಿಗಳ ಬಂಧನ

Friday, December 3rd, 2021
Gujjarakere Attack

ಮಂಗಳೂರು: ಯೆನೆಪೋಯ ಕಾಲೇಜಿನ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು  ರಕ್ಷಣೆಗೆ ಧಾವಿಸಿದ ಪೊಲೀಸ್ ಸಿಬ್ಬಂದಿ ಮೇಲೆಯೂ ಹಲ್ಲೆ  ಮಡಿದ ಘಟನೆ ನಡೆದಿದೆ. ಈ ಪ್ರಕರಣಗಳಲ್ಲಿ 9 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದಿತ್ಯ, ಕೆನ್ ಜಾನ್ಸನ್, ಮುಹಮ್ಮದ್, ಅಬ್ದುಲ್ ಶಾಹಿದ್, ವಿಮಲ್, ಫಹಾದ್, ಅಬು ತಹರ್, ಮುಹಮ್ಮದ್ ನಾಸಿಫ್, ಆದರ್ಶ ಎಂದು ಗುರುತಿಸಲಾಗಿದ್ದು, ಒಟ್ಟು 16 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಏಳು ಮಂದಿ ವಿದ್ಯಾರ್ಥಿಗಳು ಹಾಗೂ ಐದು ಮಂದಿ ಪೊಲೀಸರು ಗಾಯಗೊಂಡಿದ್ದಾರೆ. […]

ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿದರೆ ಬಹುಮತ ಪಡೆಯುವುದು ಕಷ್ಟವಲ್ಲ : ಕೋಟ ಶ್ರೀನಿವಾಸ್ ಪೂಜಾರಿ

Friday, December 3rd, 2021
Kota Srinivasa Poojary

ಮಂಗಳೂರು  : ಭಾರತೀಯ ಜನತಾ ಪಾರ್ಟಿ ಮೂಲ್ಕಿ ಮೂಡಬಿದ್ರೆ ಮಂಡಲ ಕಟೀಲು ಮತ್ತು ಬಜಪೆ ಮಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯು ಇಲ್ಲಿನ ಎಕ್ಕಾರು ಬಂಟರ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಲಾಯಿತು. ಮೂಲ್ಕಿ ಮೂಡಬಿದ್ರೆ ಮಂಡಲ ಅಧ್ಯಕ್ಷ ಸುನಿಲ್ ಆಳ್ವ ಅವರು ಅತಿಥಿಗಳನ್ನು ಸ್ವಾಗತಿಸಿದರು. ಬಳಿಕ ಮಾತಾಡಿದ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು, “ವಿಧಾನ ಪರಿಷತ್ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ನಾವು […]

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ, ಸಾಹಿತ್ಯ ಸಮ್ಮೇಳನದ 89 ನೆ ಅಧಿವೇಶನ

Friday, December 3rd, 2021
Dharmasthala-Deepothsava

ಉಜಿರೆ: ದೀಪ ಬೆಳಕಿನ ಸಂಕೇತ. ಲಕ್ಷದೀಪೋತ್ಸವ ಕೇವಲ ಉತ್ಸವ ಅಲ್ಲ. ಶಿಕ್ಷಣ, ಮಾಹಿತಿ ಮತ್ತು ಜಾಗೃತಿಯೊಂದಿಗೆ ಭಕ್ತಿ ಮತ್ತು ಶರಣಾಗತಿ ಮೂಲಕ ದೇವರಿಗೆ ಕೃತಜ್ಞತೆ ಸಲ್ಲಿಸುವ ಉತ್ಸವವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು. ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂದರ್ಭದಲ್ಲಿ ಆಯೋಜಿಸಿದ ಸಾಹಿತ್ಯ ಸಮ್ಮೇಳನದ 89ನೆ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದರು. ದೇವರಿಗೆ ದೀಪ ಹಚ್ಚುವುದು ಭಾರತೀಯ ಸಂಸ್ಕೃತಿಯ ಲಕ್ಷಣವಾಗಿದೆ. ಲಕ್ಷದೀಪೋತ್ಸವ ಸಂಸ್ಕೃತಿ ಉಳಿಸುವ, ಅಜ್ಞಾನದ […]

ಕೆನರಾ ಬ್ಯಾಂಕಿನ ಕರೆನ್ಸಿ ಚೆಸ್ಟ್ ನಲ್ಲಿ ನಕಲಿ ನೋಟುಗಳು

Thursday, December 2nd, 2021
Canara Bank

ಉಡುಪಿ : ದುಷ್ಕರ್ಮಿಗಳು 44 ನಕಲಿ ನೋಟುಗಳನ್ನು ಉಡುಪಿ ಕೋರ್ಟ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕಿನ ಕರೆನ್ಸಿ ಚೆಸ್ಟ್ ನಲ್ಲಿ  ಹಾಕಿರುವುದು ಪತ್ತೆಯಾಗಿವೆ. ಕೆನರಾ ಬ್ಯಾಂಕ್ ಕರೆನ್ಸಿ ಚೆಸ್ಟ್ ನಲ್ಲಿ ಜು.14ರಿಂದ ಜು.15ರವರೆಗೆ ಆರ್‌ಬಿಐ ಡಿಪಾರ್ಟಮೆಂಟ್ ಬೆಂಗಳೂರು ಇವರು ಪರಿವೀಕ್ಷಣೆ ಮಾಡುವ ಸಂದರ್ಭದಲ್ಲಿ 2018ರ ನ.17ರಿಂದ 2021ರ ಆ.31ರವರೆಗೆ ವಿವಿಧ ಶಾಖೆಗಳಿಂದ ಕೆನರಾ ಬ್ಯಾಂಕ್ ಕರೆನ್ಸಿ ಚೆಸ್ಟ್ ಗೆ 44 ಖೋಟಾ ನೋಟುಗಳು ಬಂದಿರುವುದು ತಿಳಿದು ಬಂದಿದೆ. ದುಷ್ಕರ್ಮಿಗಳು ನಕಲಿ ನೋಟುಗಳನ್ನು ತಯಾರಿ ಮಾಡಿ, ನೈಜ ನೋಟು ಗಳಂತೆ […]

ಧರ್ಮಸ್ಥಳ ಲಕ್ಷ ದೀಪೋತ್ಸವ: ರಾಜ್ಯಪಾಲರಿಂದ 89 ನೆ ಸರ್ವಧರ್ಮ ಸಮ್ಮೇಳನ ಅಧಿವೇಶನ ಉದ್ಘಾಟನೆ

Thursday, December 2nd, 2021
Dharmasthala-Deepothsava4

ಉಜಿರೆ: ತಮ್ಮ ಧರ್ಮದ ಮರ್ಮವನ್ನರಿತು ಇತರ ಧರ್ಮಗಳನ್ನೂ ಗೌರವಿಸಿದಾಗ ಸಾಮಾಜಿಕ ಸಾಮರಸ್ಯದೊಂದಿಗೆ ವಿಶ್ವಶಾಂತಿ ಸಾಧ್ಯವಾಗುತ್ತದೆ ಎಂದು ಗೌರವಾನ್ವಿತ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಹೇಳಿದರು. ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂದರ್ಭದಲ್ಲಿ ಗುರುವಾರ ಆಯೋಜಿಸಿದ ಸರ್ವಧರ್ಮ ಸಮ್ಮೇಳನದ 89 ನೆ ಅಧಿವೇಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬದುಕು ಮತ್ತು ಬದುಕಲು ಬಿಡು ಎಂಬುದು ಜೈನಧರ್ಮದ ಶ್ರೇಷ್ಠ ತತ್ವವಾಗಿದೆ. ಸತ್ಯ, ಅಹಿಂಸೆ, ತ್ಯಾಗ, ಪರರ ಸೇವೆಯಿಂದ ಜೀವನ ಪಾವನವಾಗುತ್ತದೆ ಎಂದು ಭಗವಾನ್ ಮಹಾವೀರರು ಬೋಧಿಸಿದ್ದಾರೆ. ಸಾಧಿಸಿ ತೋರಿಸಿದ್ದಾರೆ. ಲೋಕಸಭೆಯಲ್ಲಿ ಹಾಗೂ ಸರ್ವೋಚ್ಛ […]

ಅಹಂಕಾರ ನಿರಸನವೇ ಸಾಮರಸ್ಯಕ್ಕೆ ದಾರಿ : ಡಾ. ಧನಂಜಯ ಕುಂಬ್ಳೆ

Wednesday, December 1st, 2021
Kanaka Jayanthi

ಮಂಗಳೂರು: ವ್ಯಕ್ತಿ ಅಹಂಕಾರ, ಜಾತಿ, ಮತಗಳ ಅಹಂಕಾರವನ್ನು ಮೀರುವುದೇ ಸಾಮರಸ್ಯದ ಸಾಮಾಜಿಕ ವಾತಾವರಣ ಸೃಷ್ಟಿಗಿರುವ ದಾರಿ. ಕನಕ ಸಾಹಿತ್ಯ ಅಂತಹ ಸಾಮರಸ್ಯದ ಸಂದೇಶಗಳನ್ನು ಕೌಟುಂಬಿಕ, ಅಧ್ಯಾತ್ಮಿಕ ಮತ್ತು ಸಾಮಾಜಿಕ ನೆಲೆಗಳಲ್ಲಿ ಸಾರಿದೆ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಸಂಶೋಧನ ಕೇಂದ್ರದ ಸಂಯೋಜಕ ಡಾ. ಧನಂಜಯ ಕುಂಬ್ಳೆ ಹೇಳಿದರು. ಬುಧವಾರ ಹಂಪನಕಟ್ಟೆಯ ಮಿಲಾಗ್ರಿಸ್ ಕಾಲೇಜಿನ ಕನ್ನಡ ವಿಭಾಗ ಮತ್ತು  ಆಂತರಿಕ ಗುಣಮಟ್ಟ ಖಾತರಿ ಕೋಶ ಏರ್ಪಡಿಸಿದ ಕನಕದಾಸ ಜಯಂತಿ ಪ್ರಯುಕ್ತ ಏರ್ಪಡಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಕನಕದಾಸರ […]