ಗುರುವಾಯನಕೆರೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಚುನಾವಣಾ ಪ್ರಚಾರ

Wednesday, December 1st, 2021
election campaign

ಮಂಗಳೂರು: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯು ಕುವೆಟ್ಟು ಮತ್ತು ಕಣಿಯೂರು ಮಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಸಭಾಭವನದಲ್ಲಿ ನೆರವೇರಿತು. ಸಭೆಯನ್ನು ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು, “ಕೋಟ ಶ್ರೀನಿವಾಸ ಪೂಜಾರಿಯವರು ದಣಿವರಿಯದ ನಾಯಕ. ಮುಜರಾಯಿ ಖಾತೆಯನ್ನು ಯಶಸ್ವಿಯಾಗಿ ನಿರ್ವಹಿಸಿದ ಇವರು ಈಗ ಸಮಾಜ ಕಲ್ಯಾಣ ಇಲಾಖೆ ಮೂಲಕ ಸಮಾಜದ […]

ಕಂದಾವರ ಪಂಚಾಯತ್‌ ಅಧ್ಯಕ್ಷರ ಮೇಲೆ ಹಲ್ಲೆ ಮಾಡಿದ ಪಿಡಿಒ, ಗ್ರಾಮಸ್ಥರಿಂದ ಪ್ರತಿಭಟನೆಗೆ ಕರೆ

Tuesday, November 30th, 2021
Umesha Kandavara

ಮಂಗಳೂರು :   ಕಂದಾವರ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಂಚಾಯತ್ ಅಧ್ಯಕ್ಷರ ಮೇಲೆ ಹಲ್ಲೆ ಮಾಡಿರುವ ಘಟನೆಯನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ. ಕಂದಾವರ ಪಂಚಾಯತ್‌ ಅಧ್ಯಕ್ಷ ಉಮೇಶ್ ಮೂಲ್ಯ ಹಲ್ಲೆಗೊಳಗಾದವರು. ಈ ನೆಲೆಯಲ್ಲಿ ಪಂಚಾಯತ್ ಸದಸ್ಯರು ಪಂಚಾಯತ್ ಕಚೇರಿಯ ಮುಂಭಾಗ ಪಿಡಿಒ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬುಧವಾರ ಬೆಳಿಗ್ಗೆ ಗ್ರಾಮಸ್ಥರು ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ.

ವಿದ್ಯಾರ್ಥಿ ದೆಸೆಯಲ್ಲೇ ಚಾರಿತ್ರಿಕ ಜೀವನಕ್ಕೆ ಬುನಾದಿ ರೂಪಿಸಿಕೊಳ್ಳಿ: ಡಾ. ಕುಮಾರ್

Tuesday, November 30th, 2021
Alvas Nss

ಮೂಡುಬಿದಿರೆ: ಪೋಷಕರು, ಶಿಕ್ಷಕರು ವಿದ್ಯಾರ್ಥಿಗಳಿಗೆ ದಾರಿ ತೋರಿಸಬಹುದು ಆದರೆ ವಿದ್ಯಾರ್ಥಿಗಳೇ ತಮ್ಮ ಭವಿಷ್ಯದ ಶಿಲ್ಪಿಗಳು. ವಿದ್ಯಾರ್ಥಿ ದಿಸೆಯಿಂದಲೇ ತಮ್ಮ ಚಾರಿತ್ರಿಕ ಜೀವನಕ್ಕೆ ಬುನಾದಿ ರೂಪಿಸಿಕೊಳ್ಳಬೇಕು ಎಂದು ದ.ಕ. ಜಿಲ್ಲಾಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹೇಳಿದರು. ಆಳ್ವಾಸ್ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಆಳ್ವಾಸ್  ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2021-22 ಸಾಲಿನ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಎನ್‌ಎಸ್‌ಎಸ್ ಧ್ಯೇಯಗಳನ್ನು ಅಳವಡಿಸಿಕೊಳ್ಳವ ಮೂಲಕ ಉತ್ತಮ ವೈಯಕ್ತಿಕ ಬದುಕನ್ನು ರೂಪಿಸಿಕೊಳ್ಳುವುದರೊಂದಿಗೆ ಸಾಮಾಜಿಕ ಜವಾಬ್ದಾರಿಯಿಂದ ಜೀವನದ ನಡೆಸಬಹುದು.  ಇದರಿಂದ […]

ಕೋವಿಡ್ ಸೋಂಕು ತಡೆಯುವಲ್ಲಿ ಏರ್ ಪೋಟ್೯, ಎನ್ ಎಂ ಪಿ ಟಿ ಪಾತ್ರ ಅತಿ ಮುಖ್ಯ: ಡಿಸಿ ಡಾ. ರಾಜೇಂದ್ರ ಕೆ.ವಿ

Tuesday, November 30th, 2021
DC

ಮಂಗಳೂರು  : ಜಿಲ್ಲೆಯಲ್ಲಿ  ಕೋವಿಡ್ ಸೋಂಕು ಹಾಗೂ ಇತ್ತೀಚೆಗೆ ಹೊರ ರಾಷ್ಟ್ರಗಳಲ್ಲಿ ವರದಿಯಾಗುತ್ತಿರುವ ಅದರ ರೂಪಾಂತರಿಯನ್ನು  ತಡೆಗಟ್ಟುವಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ನವ ಮಂಗಳೂರು ಬಂದರು ಟ್ರಸ್ಟ್ ನ ಪಾತ್ರ ಅತಿ ಮುಖ್ಯವಾಗಿದ್ದು,  ಕೋವಿಡ್ ಸೋಂಕಿತರ  ಪತ್ತೆಗಾಗಿ ಅತ್ಯಂತ ಎಚ್ಚರಿಕೆಯ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಸಂಬಂಧಿಸಿದವರಿಗೆ ಸೂಚಿಸಿದರು. ಅವರು, ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನ.30ರ  ಮಂಗಳವಾರ ಜಿಲ್ಲೆಯ ಚೆಕ್ ಪೋಸ್ಟ್ ಗಳಲ್ಲಿ ಅಂತರಾಷ್ಟ್ರೀಯ ಹಾಗೂ ಹೊರ ರಾಜ್ಯಗಳಿಂದ ಆಗಮಿಸುವ […]

ಮಂಗಳೂರು ವಿವಿ ಯುವ ರೆಡ್ ಕ್ರಾಸ್ ಘಟಕಕ್ಕೆ ರಾಜ್ಯ ಪ್ರಶಸ್ತಿ

Tuesday, November 30th, 2021
Red Cross

ಮಂಗಳೂರು: ಯುವ ರೆಡ್ಕ್ರಾಸ್ನ ಚಟುವಟಿಕೆಗಳು ಮತ್ತು ಎಲ್ಲಾ ಹಂತಗಳಲ್ಲಿ ಯುವ ರೆಡ್ ಕ್ರಾಸ್ ನ್ನು ಬಲಪಡಿಸುವಲ್ಲಿ ನೀಡುವ ಬೆಂಬಲವನ್ನು ಗುರುತಿಸಿ ನೀಡಲಾಗುವ ʼಬೆಸ್ಟ್ ಪರ್ಫಾರ್ಮಿಂಗ್ ಯುನಿವರ್ಸಿಟಿʼ ಎಂಬ 2019-20 ನೇ ಸಾಲಿನ ಪ್ರಶಸ್ತಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್ ಕ್ರಾಸ್ ವಿಭಾಗವು ಭಾಜನವಾಗಿದೆ. ಮಂಗಳವಾರ ಬೆಂಗಳೂರಿನ ರಾಜಭವನದ ಗ್ಲಾಸ್ ಹೌಸ್ ನಲ್ಲಿ ನಡೆದ ರೆಡ್ ಕ್ರಾಸ್ ವಾರ್ಷಿಕ ಸಾಮಾನ್ಯ ಸಭೆಯ ಸಂದರ್ಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ತಾವರ್ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ವಿತರಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ […]

ಚಳಿಗಾಲದ ಅಧಿವೇಶನದಲ್ಲಿ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡಿ : ತುಳುವೆರೆ ಪಕ್ಷ

Monday, November 29th, 2021
Shailesh

ಬೆಳ್ತಂಗಡಿ : ತುಳುವರ ಶತಮಾನದ ಬೇಡಿಕೆ ತುಳು ಭಾಷೆಗೆ ಸ್ಥಾನಮಾನ ಮತ್ತು ತುಳು ರಾಜ್ಯ ರಚನೆ ಆದರೆ ಆಳುವ ಸರ್ಕಾರಗಳ ದಿವ್ಯ ನಿರ್ಲಕ್ಷ ಇಂದು ತುಳು ಭಾಷೆಯನ್ನು ಅಳಿವಿನ ಅಂಚಿಗೆ ತಂದು ನಿಲ್ಲಿಸಿದೆ. ನಿರಂತರ ನಿರ್ಲಕ್ಷದಿಂದಾಗಿ ತುಳುವರು ನಮ್ಮನ್ನು ಆಳಿದ ರಾಷ್ಟ್ರೀಯ ಪಕ್ಷಗಳ ಮೇಲೆ ನಂಬಿಕೆಯನ್ನು ಕಳೆದುಕೊಂಡಿದ್ದಾರೆ. ಕರ್ನಾಟಕ ಮತ್ತು ಕೇರಳ ರಾಜ್ಯಗಳ ಅಧಿಕೃತ ಭಾಷೆಯ ಸ್ಥಾನಮಾನದ ಬೇಡಿಕೆಗೆ ನಮ್ಮ ಶಾಸಕರುಗಳು ಮತ್ತು ಸಚಿವರುಗಳು ಸ್ಪಂದಿಸುತ್ತಿಲ್ಲ ಹಾಗೂ ತುಳುವರ ಬೇಡಿಕೆಗೆ ತದ್ವಿರುದ್ದವಾಗಿ ತುಳುನಾಡಿನಲ್ಲಿ ಕನ್ನಡ ಹೇರಿಕೆಯಲ್ಲಿ ನಿರತರಾಗಿದ್ದಾರೆ, […]

ಧರ್ಮಸ್ಥಳ ಲಕ್ಷದೀಪೋತ್ಸವ : ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ

Monday, November 29th, 2021
Dharmasthala-Deepothsava1

ಉಜಿರೆ: ತ್ಯಾಗ ಮತ್ತು ಸೇವೆಯ ಮೂಲಕ ಮಾಡುವ ಸತ್ಕಾರ್ಯಗಳಿಂದ ಪುಣ್ಯ ಸಂಚಯದೊಂದಿಗೆ ಶಾಂತಿ, ಸಂತೋಷ ಹಾಗೂ ನೆಮ್ಮದಿ ಸಿಗುತ್ತದೆ. ಜನರ ಪ್ರೀತಿ-ವಿಶ್ವಾಸವೇ ಧರ್ಮಸ್ಥಳದ ಅಮೂಲ್ಯ ಆಸ್ತಿಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಲಕ್ಷದೀಪೋತ್ಸವದ ಪ್ರಥಮ ದಿನವಾದ ಕಾರ್ತಿಕ ಸೋಮವಾರ ಉಜಿರೆಯಿಂದ ಧರ್ಮಸ್ಥಳಕ್ಕೆ ಬಂದ ಸುಮಾರು ಹತ್ತು ಸಾವಿರಕ್ಕೂ ಮಿಕ್ಕಿದ ಪಾದಯಾತ್ರಿಗಳನ್ನು ಅಮೃತವರ್ಷಿಣಿ ಸಭಾ ಭವನದಲ್ಲಿ ಉದ್ದೇಶಿಸಿ ಅವರು ಮಾತನಾಡಿದರು. ಬದುಕಿನಲ್ಲಿ ಸಿಗುವ ಅನುಭವದಿಂದ ಪ್ರಗತಿ ಸಾಧ್ಯವಾಗುತ್ತದೆ. ತಾನು ಧರ್ಮಸ್ಥಳದ ವತಿಯಿಂದ ಸದಾ ಲೋಕ […]

ಪೆಪ್ಪರ್ ಸ್ಪ್ರೇ ಮಾಡಿ 24 ಗ್ರಾಂ ತೂಕದ ಚಿನ್ನದ ಸರ ಎಗರಿಸಿದ ಮಂಗಳಮುಖಿ ಬಂಧನ

Monday, November 29th, 2021
Mangalamukhi-Abhishek

ಮಂಗಳೂರು : ಬೈಕ್ ಸವಾರನನ್ನು ತಡೆದು ನಿಲ್ಲಿಸಿ ಚಿನ್ನದ ಸರವನ್ನು ಸುಲಿಗೆಗೈದ ಮಂಗಳಮುಖಿಯನ್ನು ಕದ್ರಿ ಠಾಣೆಯ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಮೂಲತಃ ಮೈಸೂರಿನ ಪ್ರಸ್ತುತ ಬೆಂಗಳೂರಿನ ನಿವಾಸಿ ಅಭಿಷೇಕ್ ಯಾನೆ ಗೊಂಬೆ ಯಾನೆ ಅನಾಮಿಕ (27) ಬಂಧಿತ ಆರೋಪಿ. ಈ ಮಂಗಳಮುಖಿ ನಗರದ ನಂತೂರು ಸಮೀಪ  ಗಣೇಶ್ ಶೆಟ್ಟಿ ಎಂಬವರು ಎರಡು ತಿಂಗಳ ಹಿಂದೆ ತನ್ನ ಬೈಕ್‌ನಲ್ಲಿ  ಬಿಎಸ್‌ಎನ್‌ಎಲ್ ಎಕ್ಸೇಂಜ್ ಬಳಿಯ ರಸ್ತೆಯಲ್ಲಿ ತೆರಳುತ್ತಿದ್ದಾಗ ಹಠಾತ್ ಆಗಿ ಅಡ್ಡ ಬಂದ ಮಂಗಳಮುಖಿ ಗಣೇಶ್ ಶೆಟ್ಟಿಯ ಮುಖಕ್ಕೆ ಪೆಪ್ಪರ್ ಸ್ಪ್ರೇ […]

ಗ್ರಾಮ ಪಂಚಾಯತ್ ಸದಸ್ಯ ಶಂಕಿತ ಇಲಿ ಜ್ವರದಿಂದ ಸಾವು

Sunday, November 28th, 2021
Mahesh

ಸುಳ್ಯ  : ಗೋಳಿತ್ತೊಟ್ಟು ಗ್ರಾಮ ಪಂಚಾಯತ್ ಸದಸ್ಯ ಶಂಕಿತ ಇಲಿ ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತರನ್ನು  ಡೆಬ್ಬೇಲಿ ನಿವಾಸಿ ಮಹೇಶ್ (27)  ಎಂದು ಗುರುತಿಸಲಾಗಿದೆ. ಮಹೇಶ್‌ ಅವರಿಗೆ ಕೆಲ ದಿನದ ಹಿಂದೆ ತೀವ್ರ ಜ್ವರ ಕಾಣಿಸಿಕೊಂಡಿತ್ತು. ಜ್ವರ ಉಲ್ಬಣಗೊಂಡ ಹಿನ್ನೆಲೆ ನ.26ರಂದು ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ನಂತರ ರಾತ್ರಿ ವೇಳೆ ಅಲ್ಲಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಅವರು ನ.27ರಂದು ಮೃತಪಟ್ಟಿದ್ದಾರೆ ಎಂದು ತಿಳಿದು […]

ಡಿ. ವೀರೇಂದ್ರ ಹೆಗ್ಗಡೆ : ದೃಷ್ಟಿ – ಸೃಷ್ಟಿ ಗ್ರಂಥ ಲೋಕಾರ್ಪಣೆ

Sunday, November 28th, 2021
Dristi

ಉಜಿರೆ: ನಾನು ಯಾವುದೇ ರೀತಿಯ ಕೃತಕ ಮುಖವಾಡವಿಲ್ಲದೆ ಸ್ವಾಭಾವಿಕವಾಗಿ, ಸಹಜವಾಗಿ ಬದುಕುತ್ತಿದ್ದೇನೆ. ಇಂದಿನ ಪುಸ್ತಕ ಬಿಡುಗಡೆ ಸಮಾರಂಭವು ಕನ್ನಡಿಯ ಎದುರು ನಿಂತು ನನ್ನನ್ನು ನಾನು ಅವಲೋಕನ ಮಾಡುವಂತೆ ಮಾಡಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಭಾನುವಾರ ಧರ್ಮಸ್ಥಳದಲ್ಲಿ ಹೆಗ್ಗಡೆಯವರ ನಿವಾಸದಲ್ಲಿ ಡಾ. ಎಮ್. ಪ್ರಭಾಕರ ಜೋಶಿ ಬರೆದ ಲೇಖನಗಳ ಸಂಕಲನ ಡಿ. ವೀರೇಂದ್ರ ಹೆಗ್ಗಡೆ : ದೃಷ್ಟಿ – ಸೃಷ್ಟಿ ಗ್ರಂಥ ಎಂಬ ಗ್ರಂಥದ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು. ನಾವು ನಿತ್ಯವೂ […]