ನಂದಿನಿ ಉತ್ಪನ್ನಗಳ ಬ್ರಾಂಡ್ ಅಂಬಾಸಿಡರ್ ಆಗಿ ಉಚಿತ ಸೇವೆ ನೀಡಿದ್ದ ಪುನೀತ್ ರಾಜ್ ಕುಮಾರ್

Friday, October 29th, 2021
Nandini Puneeth

ಮಂಗಳೂರು : ಕರ್ನಾಟಕದ ರಾಜ್ಯದ ಜನಪ್ರಿಯ ಚಲನಚಿತ್ರ ನಟರಾದ ಪುನೀತ್ ರಾಜ್ ಕುಮಾರ್ ರವರ ಅಕಾಲಿಕವಾಗಿ ವಿಧಿವಶವಾಗಿರುವುದು ಹೈನುಗಾರರಿಗೆ ಅಪಾರವಾದ ದು:ಖವನ್ನು ತಂದಿದೆ. ಕರ್ನಾಟಕ ರಾಜ್ಯದ ನಾಡು ನುಡಿ, ಸಂಸ್ಕ್ರತಿಯ ಅಭಿವೃದ್ಧಿಗೆ ಸದಾ ಹೋರಾಟ ಮಾಡುತ್ತಿದ್ದು ವಿಶೇಷವಾಗಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಅಭಿವೃದ್ಧಿಗೆ ಅನುಕೂಲವಾಗುವಂತೆ ನಂದಿನಿ ಉತ್ಪನ್ನಗಳ ಬ್ರಾಂಡ್ ಅಂಬಾಸಿಡರ್ ಆಗಿ ಉಚಿತ ಸೇವೆ ನೀಡುವ ಮೂಲಕ ಹೈನುಗಾರರಿಗೆ ಸೇವೆ ನೀಡಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸುತ್ತೇವೆ. ಮೃತರ ಕುಟುಂಬಕ್ಕೆ ದು:ಖವನ್ನು ಭರಿಸುವ ಶಕ್ತಿಯನ್ನು ಪರಮಾತ್ಮನು […]

ತುಳುನಾಡು ರಾಜ್ಯ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ತುಳುವೆರೆ ಪಕ್ಷದಿಂದ ಮನವಿ ಸಲ್ಲಿಕೆ

Friday, October 29th, 2021
Narendra Modi

ಮಂಗಳೂರು : ದಕ್ಷಿಣ ಭಾರತದ ಪ್ರಮುಖ ಭಾಷೆಗಳಾದ ತುಳು, ತಮಿಳ್, ತೆಲುಗು, ಕನ್ನಡ, ಮಲಯಾಲಂ ಇವುಗಳನ್ನು ಪಂಚ ದ್ರಾವಿಡ ಭಾಷೆಗಳೆನ್ನುತ್ತಾರೆ. ತುಳು ಭಾಷೆ ದ್ರಾವಿಡ ಮೂಲದಿಂದ ಸ್ವತಂತ್ರವಾದ ಅತ್ಯಂತ ಹಳೆಯ ಭಾಷೆಯಾಗಿದೆ ಎಂದು ಭಾಷಾ ತಜ್ಙರು ತಿಳಿಸಿದ್ದಾರೆ. ತುಳು ಭಾಷೆಯು ಸ್ವಂತ ಲಿಪಿಯನ್ನು ಹೊಂದಿದ್ದು ಸಾಹಿತ್ಯ ಕ್ಷೇತ್ರದಲ್ಲು ಸಮೃದ್ದವಾಗಿದೆ. ತುಳು ಲಿಪಿಯಲ್ಲಿ ಬರೆದಂತಹ ಗ್ರಂಥಗಳಿದ್ದು, ಶಿಲಾ ಶಾಸನಗಳು ಪತ್ತೆಯಾಗಿದೆ. ಸ್ವತಂತ್ರ ಭಾರತದಲ್ಲಿ ತಮಿಳು, ತೆಲುಗು, ಕನ್ನಡ, ಮಲಯಾಲಂ ಭಾಷೆಗಳು ಸಂವಿಧಾನದ ೮ನೇ ಪರಿಚ್ಛೇದಕ್ಕೆ ಸೇರಿ ರಾಷ್ಟ್ರೀಯ ಸ್ಥಾನಮಾನವು […]

ತಣ್ಣೀರುಬಾವಿ ತೀರದಲ್ಲಿ ಸಂಭ್ರಮದ ಲಕ್ಷ ಕಂಠಗಳ ಗೀತ ಗಾಯನ

Friday, October 29th, 2021
Geetha Gayana

ಮಂಗಳೂರು : ರಾಜ್ಯ ಸರಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕನ್ನಡಕ್ಕಾಗಿ ನಾವು ಅಭಿಯಾನದಲ್ಲಿ ಅ. 28ರ ಗುರುವಾರ ಬೆಳಿಗ್ಗೆ 11 ಗಂಟೆಗೆ ತಣ್ಣೀರುಬಾವಿ ಬೀಚ್‍ನಲ್ಲಿ ಕನ್ನಡ ಭಾಷೆಯ ಮಹತ್ವ ಸಾರುವ ಲಕ್ಷ ಕಂಠಗಳ ಸಮೂಹ ಗೀತ ಗಾಯನವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗೀತಗಾಯನ ಕಾರ್ಯಕ್ರಮವನ್ನು ಡೊಂಗರಕೇರಿಯ ಕೆನರಾ ಪ್ರೌಢಶಾಲೆ, ಕೊಡಿಯಾಲ್ ಬೈಲ್‍ನ ಶಾರದ ವಿದ್ಯಾಲಯ, ಸುರತ್ಕಲ್‍ನ ಗೋವಿಂದ ದಾಸ್ ಪಿಯು ಕಾಲೇಜು, ರಥಬೀದಿಯ ಸರಕಾರಿ […]

ಕಾರ್ಕಳ ದ ವಿವಿಧೆಡೆ ಲಕ್ಷ ಕಂಠಗಳ ಗೀತ ಗಾಯನ

Thursday, October 28th, 2021
Geetha Gayana

ಕಾರ್ಕಳ : ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವರಾದ ವಿ ಸುನಿಲ್ ಕುಮಾರ್‌ರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿರುವ ವಿನೂತನ, ವಿಭಿನ್ನವಾದ ಮಾತಾಡ್ ಮಾತಾಡ್ ಕನ್ನಡ, ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ ಇಂದು ಕಾರ್ಕಳ ದಾದ್ಯಂತ ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮವು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ನಡೆಯಿತು. ಉಡುಪಿ ಜಿಲ್ಲೆಯಾದ್ಯಂತ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ ಮತ್ತು ಮಲ್ಪೆ ಕಡಲ ತೀರ ಸೇರಿದಂತೆ […]

ಯೂಟ್ಯೂಬ್ ವೀಡಿಯೋ ನೋಡಿ ಹೆರಿಗೆ, ಪ್ರಿಯಕರನ ಬಂಧನ

Thursday, October 28th, 2021
YouTube Baby

ತಿರುವನಂತಪುರ:  ಪ್ರಿಯಕರನಿಂದ ಗರ್ಭಿಣಿಯಾದ  17 ವರ್ಷದ ಹುಡುಗಿಯೊಬ್ಬಳು ಯೂಟ್ಯೂಬ್ ವೀಡಿಯೋಗಳ ಸಹಾಯದಿಂದ ಮನೆಯಲ್ಲಿ ತಾನೇ ಹೆರಿಗೆ ಮಾಡಿಕೊಂಡು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಅಕ್ಟೋಬರ್ 20ರಂದು ಹುಡುಗಿ ಮಗುವಿಗೆ ಜನ್ಮ ನೀಡಿದ್ದು, ಯೂಟ್ಯೂಬ್ ವೀಡಿಯೋಗಳನ್ನು ಮಾರ್ಗದರ್ಶಿಯಾಗಿ ಬಳಸಿಕೊಂಡು ಹೊಕ್ಕಳಬಳ್ಳಿಯನ್ನು ಕತ್ತರಿಸಿಕೊಂಡಿದ್ದಾಳೆ. ಸಂಪೂರ್ಣ ಹೆರಿಗೆ ಪ್ರಕ್ರಿಯೆಯನ್ನು ಹುಡುಗಿ ಯಾವುದೇ ಹೊರಗಿನವರ ಸಹಾಯ ಪಡೆಯದೇ ತಾನೇ ಮಾಡಿಕೊಂಡಿದ್ದಾಳೆ ಎಂಬ ವಿಚಾರ ತನಿಖೆ ವೇಳೆ ಪೊಲೀಸರಿಗೆ ತಿಳಿದುಬಂದಿದೆ. ಸದ್ಯ ಮಂಜೇರಿಯ ಸರ್ಕಾರಿ ವೈದ್ಯಕೀಯ ಕಾಲೇಜು […]

ತೋಟದ ಕೆಲಸಕ್ಕೆ ಬಂದ ದಲಿತ ಬಾಲಕಿಯ ಅತ್ಯಾಚಾರ, ಬಂಧನಕ್ಕೊಳಗಾದ ಆರೋಪಿ ಆಸ್ಪತ್ರೆಗೆ ದಾಖಲು

Thursday, October 28th, 2021
Kudkadi Narayana Rai

ಪುತ್ತೂರು : ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣದ ಆರೋಪಿ  ಕುದ್ಕಾಡಿ ನಾರಾಯಣ ರೈ ಬಂಧನದ ಬೆನ್ನಲ್ಲೇ  ಅನಾರೋಗ್ಯ ಕಾರಣ ನೀಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೋಟದ ಕೆಲಸಕ್ಕೆ ಹೋಗುತ್ತಿದ್ದಾಗ ಅತ್ಯಾಚಾರ ನಡೆಸಿದ್ದಾರೆ ಎಂದು ಬಾಲಕಿ ಆರೋಪಿಸಿರುವ ನಾರಾಯಣ ರೈ ಅವರನ್ನು ಎರಡು ದಿನ ಪೊಲೀಸರ ವಶಕ್ಕೆ ಒಪ್ಪಿಸಿ ಪುತ್ತೂರು ಸೆಷನ್ಸ್ ನ್ಯಾಯಾಲಯ ಆದೇಶಿಸಿತ್ತು. ಆದೇಶದ ಬೆನ್ನಲ್ಲೇ ಅನಾರೋಗ್ಯದ ಹಿನ್ನೆಲೆ ನ್ಯಾಯಾಲಯದ ಅನುಮತಿಯೊಂದಿಗೆ ನಾರಾಯಣ ರೈ ಪುತ್ತೂರು ಸರ್ಕಾರಿ ಆಸ್ಪತ್ರೆಗೆ […]

ಹಂಪನಕಟ್ಟೆ ಯಲ್ಲಿ ಸಿದ್ಧಗೊಳ್ಳಲಿದೆ 95 ಕೋಟಿ ರೂ. ವೆಚ್ಚದ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌

Thursday, October 28th, 2021
old Bus stand

ಮಂಗಳೂರು: ಹಂಪನಕಟ್ಟೆ ಹಳೆ ಬಸ್‌ ನಿಲ್ದಾಣದ 1.55 ಎಕರೆ ಪ್ರದೇಶದಲ್ಲಿ ಖಾಸಗಿ ಸಾರ್ವಜನಿಕ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಸುಮಾರು 95 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಗೊಳ್ಳಲಿರುವ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ (ಎಂಎಲ್‌ಸಿಪಿ) ಕಮ್‌ ರಿಟೈಲ್‌ ಮಳಿಗೆಗಳಿಗೆ ನ.2ರಂದು ಚಾಲನೆ ಸಿಗಲಿದೆ. ದಶಕದ ಹಿಂದೆ ರೂಪಿಸಿದ್ದ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ (ಎಂಎಲ್‌ಸಿಪಿ) ಕಮ್‌ ರಿಟೈಲ್‌ ಸ್ಪೇಸ್‌ ‘ಸರಕಾರದ ಮೇಲೆ ಯಾವುದೇ ಒತ್ತಡ ಹಾಕದೇ ಪಿಪಿಪಿ ಮಾದರಿಯಲ್ಲಿ ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ಎಂಎಲ್‌ಸಿಪಿ ಯೋಜನೆ ರೂಪಿಸಲು […]

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಆರೋಪಿಗೆ ಸಹಕರಿಸಿದ ವ್ಯಕ್ತಿಯ ಬಂಧನ

Thursday, October 28th, 2021
Anantha Bhat

ಮಂಗಳೂರು : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಮುಖ ಆರೋಪಿ ರಾಜೇಶ್ ಭಟ್ ಎಂಬವರು ತಲೆಮರೆಸಿಕೊಳ್ಳಲು ಸಹಕರಿಸಿದ ಅಪರಾಧದ ಮೇರೆಗೆ ಅವರ ಸಹಾಯಕರಾದ ಕೆ ಅನಂತ ಭಟ್, ಪ್ರಾಯ(48), ಬೊಂದೇಲ್, ಮಂಗಳೂರು ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಮಹಿಳಾ ಪೊಲೀಸ್ ಠಾಣಾ ಮೊ ನಂ: 78/2021 ರಲ್ಲಿ ಬುಧವಾರ ಸಂಜೆ ವೇಳೆಗೆ ಕೆ ಅನಂತ ಭಟ್ ಎಂಬವರನ್ನು ಪ್ರಕರಣದ ತನಿಖಾಧಿಕಾರಿಯವರು ದಸ್ತಗಿರಿ ಮಾಡಿರುತ್ತಾರೆ. ಬಂಧಿತ ಆರೋಪಿ ಈ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ ಭಟ್ ಎಂಬವರು […]

ಏಕಮುಖ ರಸ್ತೆಯ ವಿರುದ್ದ ಜೆ.ಡಿ.ಎಸ್ ಪ್ರತಿಭಟನೆ

Wednesday, October 27th, 2021
jds Protest

ಮಂಗಳೂರು : ನಗರದ ಎ.ಬಿ.ಶೆಟ್ಟಿ ವೃತ್ತದಿಂದ ಓಲ್ಟ್ ಕೇಂಟ್ ರಸ್ತೆಗೆ ಏಕಮುಖ ವಾಹನ ಸಂಚಾರಕ್ಕೆ ವಿರೋಧವಾಗಿ ಮಂಗಳೂರು ದಕ್ಷಿಣ ವಿಧಾನ ಸಭಾಕ್ಷೇತ್ರದ ಜೆ.ಡಿ.ಎಸ್ ವತಿಯಿಂದ ಪ್ರತಿಭಟನೆ ಪ್ರದರ್ಶನ ನಡೆಸಿತು. ಪ್ರತಿಭಟನೆಯನ್ನ ಉದ್ದೇಶಿಸಿ ಮಾತನಾಡಿದ ಪಕ್ಷದ ನಾಯಕರಾದ ಸುಶೀಲ್ ನೊರೊನ್ಹಾ ಈ ಒಂದು ದೀಡಿರ್ ರಸ್ತೆ ಮಾರ್ಪಡಿನಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗಿದ್ದು ಈ ನಿರ್ಧಾರವನ್ನು ಕೂಡಲೇ ಕೈ ಬಿಡಬೇಕೆಂದು ಸಂಬಧಪಟ್ಟ ಅಧಿಕಾರಿಗಳಿಗೆ ಒತ್ತಾಯಿಸಿದರು. ಅಲ್ಲದೆ ಸ್ಮಾರ್ಟಸಿಟಿ ಯೋಜನೆಗೆ ಕೇಂದ್ರ ಹಾಗು ರಾಜ್ಯ ಸರಕಾರದಿಂದ ಸುಮಾರು ಐನೂರು ಕೋಟಿ ಹಣ […]

ಸತ್ತ ವ್ಯಕ್ತಿಗೆ ಎರಡನೇ ಡೋಸ್ ಕೋವಿಡ್ ಲಸಿಕೆ, ಮಗನ ಮೊಬಲೈ ಗೆ ಎಸ್ಎಂಎಸ್

Wednesday, October 27th, 2021
Covid-vaccine

ವಿಟ್ಲ : ಸತ್ತ ವ್ಯಕ್ತಿಗೆ ಕೋವಿಡ್ ಲಸಿಕೆಯ ಎರಡನೇ ಡೋಸ್ ನೀಡಲಾಗಿದೆ ಎಂಬ ಎಸ್ಎಂಎಸ್ ಮಗನ ಮೊಬೈಲ್ಗೆ ಬಂದ ಘಟನೆ ನಡೆದಿದೆ. ಆರು ತಿಂಗಳ ಹಿಂದೆಯೇ  ಮಾಣಿ ಸಮೀಪದ ಮಿತ್ತೂರು ಅಕ್ಕರೆ ನಿವಾಸಿ ಹಸೈನಾರ್ ಎಂಬುವರು 2001ರ ಏ.27 ರಂದು ಮೃತಪಟ್ಟಿದ್ದರು. ಆದರೆ, ಅ.14ರಂದು ಅವರಿಗೆ ಎರಡನೇ ಡೋಸ್ ನೀಡಲಾಗಿದೆ ಎಂಬ ಎಸ್ಎಂಎಸ್ ಮಗನ ಮೊಬೈಲ್ಗೆ ಬಂದಿದೆ. ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾರ್ಚ್ 24ರಂದು ಮೃತ ಹಸೈನಾರ್ ಅವರಿಗೆ ಪ್ರಥಮ ಡೋಸ್ ನೀಡಲಾಗಿತ್ತು. ಎರಡನೇ ಡೋಸ್ ಪಡೆಯುವ ಮೊದಲೇ […]