ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭಗೊಂಡ 1ರಿಂದ 5ನೇ ತರಗತಿ ಪ್ರಾಥಮಿಕ ತರಗತಿಗಳು

Monday, October 25th, 2021
School Reopen

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು ಒಂದೂವರೆ ವರ್ಷ ಮುಚ್ಚಿದ್ದ ಶಾಲೆಗಳು ಮತ್ತೆ ಆರಂಭಗೊಂಡಿದೆ.  1ರಿಂದ 5ನೇ ತರಗತಿ ಮಕ್ಕಳು ಮತ್ತೆ ಶಾಲೆಯತ್ತ ಹೆಜ್ಜೆ ಹಾಕಿದ್ದಾರೆ. ಸೋಮವಾರ ಕಿರಿಯ ಪ್ರಾಥಮಿಕ ಶಾಲೆಗಳು ಪುನಾರಂಭ ಗೊಂಡಿದೆ. ಜಿಲ್ಲೆಯಲ್ಲಿ 1ರಿಂದ 5ನೇ ತರಗತಿ‌ ವರೆಗಿನ 1,57,563 ಮಕ್ಕಳಿದ್ದು, ಮೊದಲ ದಿನ ಶಾಲೆಗೆ ಆಗಮಿಸಿದ್ದಾರೆ. ಹಾಜರಾತಿ ಕಡ್ಡಾಯ ಇಲ್ಲದಿದ್ದರೂ ಮಕ್ಕಳು ಉತ್ಸುಕರಾಗಿಯೇ ತರಗತಿಗಳಿಗೆ ಹಾಜರಾದರು. ಶನಿವಾರವೇ ಶಾಲಾ ಕೊಠಡಿಗಳು ಆವರಣವನ್ನು ಸ್ಯಾನಿಟೈಸ್ ಮಾಡಿ ಇಡಲಾಗಿತ್ತು. ಸೋಮವಾರ ಮುಂಜಾನೆ ಎಂದಿಗಿಂತ ಬೇಗ ಆಗಮಿಸಿದ ಶಿಕ್ಷಕರು […]

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ 54ನೇ ವರ್ಷದ ಪಟ್ಟಾಭಿಷೇಕ ವರ್ಧಂತಿ, ಹೊಸ ಯೋಜನೆಗಳ ಪ್ರಕಟ

Sunday, October 24th, 2021
Veerendra Heggade

ಉಜಿರೆ: ಧಾರವಾಡದಲ್ಲಿ ಎಸ್.ಡಿ.ಎಂ. ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ. ಎರಡು ವರ್ಷದೊಳಗೆ ಪ್ರಾರಂಭ, ಆರು ಕೋಟಿ ರೂ. ವೆಚ್ಚದಲ್ಲಿ ನಾಲ್ಕು ಆಸ್ಪತ್ರೆಗಳಿಗೆ ಸಿ.ಟಿ. ಸ್ಕ್ಯಾನ್  ಕೊಡುಗೆ, ಮಂಗಳೂರಿನಲ್ಲಿ ವೆನ್‌ಲಾಕ್ ಆಸ್ಪತ್ರೆಯಲ್ಲಿ ಎರಡು ಡಯಾಲಿಸಿಸ್ ಘಟಕ ಹಾಗೂ ಉಜಿರೆಯಲ್ಲಿರುವ ಎಸ್.ಡಿ.ಎಮ್. ಆಸ್ಪತ್ರೆಯಲ್ಲಿ ಹನ್ನೊಂದು ಡಯಾಲಿಸಿಸ್ ಘಟಕಗಳÀನ್ನು ಸದ್ಯದಲ್ಲಿಯೇ ಪ್ರಾರಂಭಿಸಿಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು. ಭಾನುವಾರ ಧರ್ಮಸ್ಥಳದಲ್ಲಿ ಪಟ್ಟಾಭಿಷೇಕದ 54ನೇ ವರ್ಷದ ವರ್ಧಂತಿ ಆಚರಣೆ ಸಂದರ್ಭ ಅವರು ಹೊಸ ಯೋಜನೆಗಳನ್ನು ಪ್ರಕಟಿಸಿದರು. ಗ್ರಾಮಾಭಿವೃದ್ಧಿ […]

ಅಶ್ಲೀಲ ಮೆಸೇಜ್​ಗಳನ್ನು ಕಳುಹಿಸುತ್ತಿದ್ದ ವಕೀಲ, ಒಂದು ದಿನ ರಾತ್ರಿ ಮಾಡಿದ್ದೇನು ಗೊತ್ತಾ ?

Sunday, October 24th, 2021
North Girl

ಮಂಗಳೂರು: ಮಂಗಳೂರಿನ ಲೋಕಾಯುಕ್ತ ಮತ್ತು ಎಸಿಬಿ ವಿಶೇಷ ವಕೀಲರಾಗಿದ್ದ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ವಿದ್ಯಾರ್ಥಿನಿ ಗಂಭೀರ ಆರೋಪ ಮಾಡಿದ್ದಾಳೆ. ಇದೀಗ ಈ ಬಗ್ಗೆ ಮಾತನಾಡಿರುವ ಸಂತ್ರಸ್ತೆ, ರಾಜೇಶ್ ಭಟ್ ರಾತ್ರಿ ಎಂಟು ಗಂಟೆಯವರೆಗೂ ಕಚೇರಿಯಲ್ಲೇ ಕೆಲಸ ಮಾಡಲು ಹೇಳಿದ್ದರು. ರಾತ್ರಿ ಅಶ್ಲೀಲ ಮೆಸೇಜ್ಗಳನ್ನು ಕಳುಹಿಸುತ್ತಿದ್ದರು. ಆದರೆ, ತಾನು ಆ ಮೆಸೇಜ್ಗಳಿಗೆ ಪ್ರತಿಕ್ರಿಯಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ವಕೀಲನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿರುವ ಉತ್ತರ ಪ್ರದೇಶ ಮೂಲದ ಸಂತ್ರಸ್ತೆ ವಿದ್ಯಾರ್ಥಿನಿ, ಇದೀಗ ವಕೀಲ […]

ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ

Sunday, October 24th, 2021
Vishvesha Thirtha

ಉಡುಪಿ : ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗೆ ಕೇಂದ್ರ ಸರಕಾರವು ಮರಣೋತ್ತರವಾಗಿ ಘೋಷಿಸಲಾದ 2020ನೇ ಸಾಲಿನ ಪದ್ಮವಿಭೂಷಣ ಪ್ರಶಸ್ತಿಯನ್ನು ನವೆಂಬರ್ 8ರಂದು ಹೊಸದಿಲ್ಲಿಯ ರಾಷ್ಟ್ರಪತಿ ಭವನದಲ್ಲಿ ಪ್ರದಾನ ಮಾಡಲಿದೆ. ಪೇಜಾವರ ಮಠಾಧೀಶರಾದ ಶ್ರಿ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ  ಪ್ರಶಸ್ತಿಯನ್ನು ಸ್ವೀಕರಿಸಲಿರುವರು. ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರು ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸೇವೆಯನ್ನು ಪರಿಗಣಿಸಿ ಅವರಿಗೆ ಕೇಂದ್ರ ಸರಕಾರವು 2020ನೇ ಸಾಲಿನ ಪ್ರತಿಷ್ಠಿತ ಪದ್ಮವಿಭೂಷಣ ಪ್ರಶಸ್ತಿಯನ್ನು ಘೋಷಿಸಿತ್ತು. ಆದರೆ ಕೋವಿಡ್-19 ಕಾರಣದಿಂದ ಇದುವರೆಗೆ ಪ್ರಶಸ್ತಿ […]

ದಲಿತ ಬಾಲಕಿಯ ಅತ್ಯಾಚಾರ, ಆರೋಪ ಸಾಬೀತು

Sunday, October 24th, 2021
judgement

ಮಂಗಳೂರು : ಅಪ್ರಾಪ್ತೆಯನ್ನು ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿ ಆಕೆ ಮಗುವಿಗೆ  ಜನ್ಮ  ನೀಡಲು  ಕಾರಣನಾದ ವ್ಯಕ್ತಿಯ ಮೇಲಿನ ಅಪರಾಧ ಕೃತ್ಯ ಸಾಬೀತಾಗಿದೆ ಎಂದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್‌ಟಿಎಸ್‌ಸಿ-1 (ಪೊಕ್ಸೊ) ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ನಿವಾಸಿ ಪಿ.ಜೆ. ಜೇಕಬ್ ಯಾನೆ ಚಾಕೋಚ‌ ಅತ್ಯಾಚಾರ ಎಸಗಿದ ಅಪರಾಧಿ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ದಲಿತ ಬಾಲಕಿ ಶಾಲೆಯಿಂದ ಮನೆಗೆ ಹೋಗುತ್ತಿದ್ದಳು. ಈ ವೇಳೆ, ಆರೋಪಿ ಆಕೆಯನ್ನು ಅಡ್ಡಗಟ್ಟಿ ಮನೆಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದನು. […]

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ.ಗಳ ಅನುದಾನ- ಸಿ.ಎಂ

Saturday, October 23rd, 2021
Kitturu Chennamma

ಹುಬ್ಬಳ್ಳಿ : ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸ್ತುತ ವರ್ಷದಲ್ಲಿ 50 ಕೋಟಿ ರೂ.ಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಇಂದು ಕಿತ್ತೂರು ಚನ್ನಮ್ಮ ವೃತ್ತದಲ್ಲಿ ರಾಣಿ ಚನ್ನಮ್ಮನ ಜಯಂತಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡುತ್ತಿದ್ದರು. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರವನ್ನು 2011 ರಲ್ಲಿ 8 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ಪ್ರಾರಂಭಿಸಲಾಯಿತು. ಕಿತ್ತೂರು ಚನ್ನಮ್ಮ ಪ್ರತಿಮೆಯನ್ನು ಬೆಳಗಾವಿಯ ನಗರದ ಕೇಂದ್ರ ಭಾಗದಲ್ಲಿ ಸ್ಥಾಪಿಸುವಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ […]

ವಿಶ್ವಹಿಂದೂ ಪರಿಷತ್ ಕೇಂದ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಧರ್ಮಸ್ಥಳ ಭೇಟಿ

Saturday, October 23rd, 2021
Dharmasthala

ಉಜಿರೆ: ವಿಶ್ವಹಿಂದೂ ಪರಿಷದ್ ಕೇಂದ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಶನಿವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಬಹುಮುಖಿ ಸಮಾಜ ಸೇವೆಗಾಗಿ ಅಭಿನಂದಿಸಿ, ಗೌರವಿಸಿದರು. ಬಳಿಕ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಅನುಸೂಚಿತ ಜಾತಿಗಳ ಮೇಲೆ ಮತಾಂತರ ಪಿಡುಗು ವ್ಯಾಪಿಸಿದೆ. ಜೊತೆಗೆ ಲವ್ ಜಿಹಾದ್, ಬೆದರಿಕೆ ಹಾಗೂ ಭಯದ ವಾತಾವರಣ ಸೃಷ್ಟಿಸಿ ಮತಾಂತರ ಮಾಡಲಾಗುತ್ತಿದೆ. ಇದನ್ನು ತಡೆಗಟ್ಟಲು ವಿಶ್ವ ಹಿಂದೂ ಪರಿಷದ್ ಗಂಭೀರ ಚಿಂತನೆ ನಡೆಸಿದೆ. ದೀಪಾವಳಿ ನಂತರ ಈ […]

ಇಬ್ಬರು ನಕ್ಸಲ್‍ ವಾದಿಗಳ ಪತ್ತೆಗೆ ತಲಾ ರೂ. 10 ಲಕ್ಷ ಬಹುಮಾನ ಘೋಷಿಸಿದ ತನಿಖಾ ಸಂಸ್ಥೆ

Saturday, October 23rd, 2021
naxal

ಕಾರ್ಕಳ : ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯವು ಇಬ್ಬರು ನಕ್ಸಲ್‍ ವಾದಿಗಳ ವಿರುದ್ಧ ಬಂಧನ ವಾರೆಂಟ್ ಜಾರಿಗೊಳಿಸಿ ಅದೇಶ ಹೊರಡಿಸಿದೆ. ಅವರ ಸುಳಿವು ನೀಡಿದವರಿಗೆ ತಲಾ ರೂ. 10 ಲಕ್ಷ ಬಹುಮಾನ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದ ಕೊಟ್ಯಂತಡ್ಕ ಮನೆಯ ಸುಂದರಿ ಆಲಿಯಾಸ್ ಗೀತಾ ಆಲಿಯಾಸ್ ಸಿಂಧು ಮತ್ತು ರಾಯಚೂರು ಜಿಲ್ಲೆಯ ಅರೋಲಿ ಗ್ರಾಮ ಕುಡುಡಿ ಮುಖ್ಯ ರಸ್ತೆಯ ಹನುವ್ವನ ದೂತರ ಮಠದ ಎದುರಿನ ಅಂಬೇಡ್ಕರ್ ಕಾಲನಿಯ ಮಹೇಶ್ ಆಲಿಯಾಸ್ ಜಯಣ್ಣ […]

ವಿಠಲ ಮಲೆಕುಡಿಯ ಹಾಗೂ ನಿಂಗಣ್ಣ ಮಲೆಕುಡಿಯ ನಿರ್ದೋಷಿ

Saturday, October 23rd, 2021
Vittala Malekudiya

ಮಂಗಳೂರು  : ವಿಠಲ ಮಲೆಕುಡಿಯ ಹಾಗೂ ನಿಂಗಣ್ಣ ಮಲೆಕುಡಿಯ ನಿರ್ದೋಷಿ ಎಂದು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ಒಂಬತ್ತು ವರ್ಷಗಳ ಹಿಂದೆ ಅವರನ್ನು ನಕ್ಸಲೈಟ್ ಎಂದು ಆರೋಪಿಸಿ ಯುಎಪಿಎ ಕಾಯ್ದೆ ಅಡಿ ದೇಶದ್ರೋಹ ಪ್ರಕರಣ ದಾಖಲಿಸಿತ್ತು. ಡಿವೈಎಫ್ಐ ಸಂಘಟನೆ ವಿಠಲ ಮಲೆಕುಡಿಯ ಮತ್ತವನ ತಂದೆಯ ಪರವಾಗಿ ಆಗ ದೊಡ್ಡ ಹೋರಾಟ ಸಂಘಟಿಸಿತ್ತು‌ ಈಗಿನ ಕೇರಳ ಸ್ಪೀಕರ್ ಆಗ ಸಿಪಿಎಂ ಲೋಕಸಭಾ ಸದಸ್ಯರಾಗಿದ್ದ ಎಂಬಿ ರಾಜೇಶ್, ಸಿಪಿಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಜೈಲಿಗೆ ಭೇಟಿ […]

ಇಸ್ಲಾಂ ಗೆ ಮತಾಂತರಗೊಂಡ ಹಿಂದೂ ಮಹಿಳೆಗೆ ಕೊನೆಗೂ ನ್ಯಾಯ ಸಿಗಲಿಲ್ಲ !

Saturday, October 23rd, 2021
ayesha

ಮಂಗಳೂರು : ಕಳೆದ ಎರಡು ವರ್ಷಗಳಿಂದ ಗಂಡನೊಂದಿಗೆ ಜೀವನ ನಡೆಸಬೇಕು ಎಂದು ಹೋರಾಟ ಮಾಡುತ್ತಿದ್ದ ಮಹಿಳೆ ಗಂಡನಿಂದ ಯಾವುದೇ ಸ್ಪಂದನೆ ಸಿಗದ ಕಾರಣ ಹೋರಾಟದಿಂದ ಹಿಂದೆ ಸರಿದು ತನ್ನಿಷ್ಟದಂತೆ ಜೀವಿಸಲು ತೀರ್ಮಾನಿಸಿದ್ದೇನೆ ಎಂದು ಹೇಳಿದ್ದಾರೆ. ಹಿಂದೂ ಧರ್ಮಕ್ಕೆ ಸೇರಿದ ಶಾಂತಿ ಜೂಬಿ ಮುಸ್ಲಿಂ ಯುವಕನನ್ನು ಮದುವೆಯಾಗಿ ಮತಾಂತರ ಗೊಂಡ ಬಳಿಕ  ಆತ ಆಕೆಯನ್ನು ಬಿಟ್ಟುಬಿಟ್ಟಿದ್ದಾನೆ. ಸುಳ್ಯದ ಕಟ್ಟೆಕ್ಕಾರ್ಸ್ ಕುಟುಂಬದ ಇಬ್ರಾಹಿಂ ಖಲೀಲ್ ಎಂಬವ ಕೇರಳದ ಕಣ್ಣೂರಿನ ಹಿಂದೂ ಧರ್ಮಕ್ಕೆ ಸೇರಿದ ಶಾಂತಿ ಜೂಬಿ ಎಂಬ ಯುವತಿಯನ್ನು ಮದುವೆಯಾಗಿದ್ದನು. ಯುವತಿ ಮತಾಂತರವಾದ […]