ರಸ್ತೆ ದಾಟುತ್ತಿದ್ದ ತಾಯಿ-ಮಗು ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತ್ಯು

Tuesday, October 12th, 2021
ksrtc-accident

ಉಪ್ಪಿನಂಗಡಿ : ರಸ್ತೆ ದಾಟುತ್ತಿದ್ದ ತಾಯಿ-ಮಗು ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ ಬಸ್‌ ನಿಲ್ದಾಣದ ಬಳಿ ನಡೆದಿದೆ. ಮೃತಪಟ್ಟವರು ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಎಂಬಲ್ಲಿನ ಸಿದ್ದೀಕ್ ಎಂಬುವರ ಪತ್ನಿ ಶಾಹಿದಾ (25) ಹಾಗೂ ಅವರ ಒಂದು ವರ್ಷದ ಪುತ್ರ ಶಾಹೀಲ್ ಎಂದು ಗುರುತಿಸಲಾಗಿದೆ. ಶಾಹಿದಾ ಅವರು ಗೇರುಕಟ್ಟೆಯ ತಾಯಿ ಮನೆಯಿಂದ  ಇಂದು ಬೆಳಗ್ಗೆ ಪುತ್ತೂರಿಗೆ ವೈದ್ಯರ ಬಳಿ ತನ್ನ ಮಗುವಿನೊಂದಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ, ಕೆಎಸ್ಆರ್‌ಟಿಸಿ ಬಸ್ಸೊಂದು […]

ಖ್ಯಾತ ಯಕ್ಷಗಾನ ಭಾಗವತ ಪದ್ಯಾಣ ಗಣಪತಿ ಭಟ್ ಹೃದಯಾಘಾತದಿಂದ ನಿಧನ

Tuesday, October 12th, 2021
Padyana Ganapathi Bhat

ಸುಳ್ಯ : ಖ್ಯಾತ ತೆಂಕುತಿಟ್ಟಿನ ಯಕ್ಷಗಾನ ಭಾಗವತ ಪದ್ಯಾಣ ಗಣಪತಿ ಭಟ್ (67) ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದಲ್ಲಿರುವ ಸ್ವಗೃಹದಲ್ಲಿ ಬೆಳಗ್ಗೆ 7.45ಕ್ಕೆ ಅವರು ಕೊನೆಯುಸಿರೆಳೆದರು. ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಪದ್ಯಾಣ ಕುಟುಂಬದಲ್ಲಿ  1955ರ ಜನವರಿ 21ರಂದು ಕಲ್ಮಡ್ಕ ಗ್ರಾಮದಲ್ಲಿ ಪದ್ಯಾಣ ತಿರುಮಲೇಶ್ವರ ಭಟ್ ಮತ್ತು ಸಾವಿತ್ರಿ ದಂಪತಿಯ ಮೂರನೇ ಮಗನಾಗಿ ಗಣಪತಿ ಭಟ್ ಅವರು  ಜನಿಸಿದರು. ಬಾಲ್ಯದಿಂದಲೇ ಯಕ್ಷಗಾನದಲ್ಲಿ ಆಸಕ್ತಿ ಹೊಂದಿದ್ದ ಇವರು ಧರ್ಮಸ್ಥಳದ ಯಕ್ಷಗಾನ ತರಬೇತಿ ಕೇಂದ್ರದಲ್ಲಿ […]

ಡೆತ್​​ನೋಟ್​​ನಲ್ಲಿ ಕೆಲವರ ಹೆಸರು ಬರೆದಿಟ್ಟು, ವಿಟ್ಲ ದೇವಸ್ಥಾನದ ಸಮೀಪ ಕೆರೆಗೆ ಹಾರಿ ಯುವತಿ ಆತ್ಮಹತ್ಯೆ

Monday, October 11th, 2021
Nishmitha

ಬಂಟ್ವಾಳ : ಯುವತಿಯೊಬ್ಬಳು ವಿಟ್ಲ ದೇವಸ್ಥಾನ ಸಮೀಪ ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸ್ಥಳೀಯ ನೆತ್ರಕೆರೆ ನಿವಾಸಿ ನಿಶ್ಮಿತಾ (22) ಸಾವನ್ನಪ್ಪಿದವರು. ನಿಶ್ಮಿತಾ ಸ್ಥಳೀಯ ಡೆಂಟಲ್ ಕ್ಲಿನಿಕ್ ಕೆಲಸ ನಿರ್ವಹಿಸುತ್ತಿದ್ದು ಭಾನುವಾರ  ಸಂಜೆಯಿಂದ ಕಾಣೆಯಾಗಿದ್ದರು. ಈಕೆ ಡೆತ್ ನೋಟ್ ಮತ್ತು ಮೊಬೈಲ್ ಅನ್ನು ಕೆರೆ ಬದಿಯಲ್ಲಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.11ರಂದು ಮುಂಜಾನೆ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದ್ದು, ಡೆತ್ನೋಟ್ನಲ್ಲಿ ಕೆಲವರ ಹೆಸರು ಉಲ್ಲೇಖವಿದೆ ಎನ್ನಲಾಗಿದೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, […]

ಮಂಗಳೂರು ಅದಾನಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಯೋಗಗಳಿಂದ ಸ್ಥಳೀಯರು ಹೊರಕ್ಕೆ

Monday, October 11th, 2021
Adani Airport

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣ ಅದಾನಿ ಕಂಪೆನಿಗೆ ವಹಿಸಿದ ಬಳಿಕ ವಿಮಾನ ನಿಲ್ದಾಣದ ಗುತ್ತಿಗೆ ಕಂಪೆನಿಗಳ ಅಡಿ ದುಡಿಯುತ್ತಿದ್ದ ಸ್ಥಳೀಯ ಕಾರ್ಮಿಕರನ್ನು ಹಲವು ನೆಪಗಳನ್ನು ಮುಂದಿಟ್ಟು ಕೈ ಬಿಡಲಾಗುತ್ತಿದೆ. ಹೊರ ರಾಜ್ಯದ ಗುತ್ತಿಗೆ ಕಾರ್ಮಿಕರ ಸೇರ್ಪಡೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಡಿವೈಎಫ್ಐ ಮುಖಂಡ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದ ಅಗ್ನಿಶಾಮಕ ದಳಕ್ಕೆ ಅದಾನಿ ಕಂಪೆನಿ ನೇರ ನೇಮಕಾತಿ ಮಾಡಬೇಕಿದ್ದು, 80 ಸಿಬ್ಬಂದಿಗಳ ನೇಮಕಾತಿಯ ಅಗತ್ಯ ಇದ್ದರೂ ಸದ್ಯ 20 ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಇಲ್ಲಿ ಆಘಾತಕಾರಿ ಸಂಗತಿಯೆಂದರೆ SSLC […]

ಅಂಗಡಿಯೊಳಗೆ ಕರೆದು ಬಾಲಕಿ ಅತ್ಯಾಚಾರ, ಮಾಲೀಕನ ಪುತ್ರನ ಬಂಧನ

Sunday, October 10th, 2021
Konaje Rape

ಮಂಗಳೂರು  : ಅಂಗಡಿಗೆ ಖರೀದಿಗೆ ಬಂದಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ  ಮಾಡಿದ ಆರೋಪದಲ್ಲಿ ಕೊಣಾಜೆ ಪೊಲೀಸರು ಅಂಗಡಿ ಮಾಲೀಕನ ಪುತ್ರನನ್ನು  ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಕೊಣಾಜೆ ಸೂಪರ್ ಸ್ಟೋರ್ಸ್ ಮತ್ತು ಸ್ವೀಟ್ಸ್ ಮಾಲೀಕನ ಪುತ್ರ ಉಸ್ಮಾನ್(35) ಬಂಧಿತ ಆರೋಪಿ. ಭಾನುವಾರ ಸಂಜೆ 13 ವರ್ಷದ ಬಾಲಕಿ ಖರೀದಿಗೆಂದು ಅಂಗಡಿಗೆ ಬಂದಿದ್ದು, ಈ ಸಂದರ್ಭ ಆರೋಪಿ ಆಕೆಯನ್ನು ಪುಸಲಾಯಿಸಿ ಒಳಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಇದರಿಂದ ಬೆದರಿದ ಬಾಲಕಿ ಅಲ್ಲಿಂದ ಓಡಿ […]

ಮಗನ ಮೇಲೆ ಶೂಟೌಟ್ : ಆರೋಪಿ ರಾಜೇಶ್ ಪ್ರಭುವಿಗೆ ನ್ಯಾಯಾಂಗ ಬಂಧನ

Sunday, October 10th, 2021
Rajesh Prabhu

ಮಂಗಳೂರು : ಮೋರ್ಗನ್ಸ್‌ಗೇಟ್‌ನ ವೈಷ್ಣವಿ ಎಕ್ಸ್‌ಪ್ರೆಸ್ ಕಾರ್ಗೊ ಮಾಲಕ  ಹಾಗೂ ಶೂಟೌಟ್ ಪ್ರಕರಣದ ಆರೋಪಿ ರಾಜೇಶ್ ಪ್ರಭುನನ್ನು ರವಿವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ವೈಷ್ಣವಿ ಎಕ್ಸ್‌ಪ್ರೆಸ್ ಕಾರ್ಗೊ ಸಂಸ್ಥೆಯ ಎದುರು ಇಬ್ಬರು ನೌಕರರ ಜತೆ ನಡೆದ ಸಂಘರ್ಷದ ಸಂದರ್ಭದಲ್ಲಿ ರಾಜೇಶ್ ಪ್ರಭು ಪಿಸ್ತೂಲ್‌ನಲ್ಲಿ ಹಾರಿಸಿದ್ದ ಗುಂಡು ಪುತ್ರ ಸುಧೀಂದ್ರನ ತಲೆಗೆ ಹೊಕ್ಕಿತ್ತು. ಪರಿಣಾಮವಾಗಿ ಸುಧೀಂದ್ರ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

ನಂದಾವರ ದೇವಸ್ಥಾನದ ಸಭಾಭವನದಲ್ಲಿ ದಾಸರ ಪದ ಭಜನಾ ಸ್ಪರ್ಧೆ

Sunday, October 10th, 2021
Nandavara Bajane

ಬಂಟ್ವಾಳ  : ಶ್ರೀ ವಿನಾಯಕ ದುರ್ಗಾಂಭ ಕ್ಷೇತ್ರ , ವಿಶ್ವ ಹಿಂದೂ‌ಪರಿಷತ್, ಭಜರಂಗದಳ ಸಜೀಪ ವಲಯದ ವತಿಯಿಂದ ದಾಸರ ಪದ ಭಜನಾ ಸ್ಪರ್ಧೆ ನಂದಾವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದಕ್ಷಿಣ ಪ್ರಾಂತ ಭಜರಂಗದಳ ಸಂಯೋಜಕ ಸುನಿಲ್ ಕೆ.ಆರ್. ಉದ್ಘಾಟಿಸಿದರು. ಈ ಕಾರ್ಯಕ್ರಮಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬೇಟಿ ನೀಡಿ ಶುಭ ಹಾರೈಸಿದರು. ನಂದವಾರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಅರವಿಂದ ಪದ್ಯಾಣ, ಸಮಿತಿ ಸದಸ್ಯರಾದ ಅರುಣ್, ಯಶವಂತ ದೇರಾಜೆ ವಿಶ್ವ ಹಿಂದೂ ಪರಿಷತ್ […]

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಹರಕೆ ಸೀರೆಗಳನ್ನು ಪ್ರಸಾದ ರೂಪದಲ್ಲಿ ವಿತರಣೆ

Sunday, October 10th, 2021
Polali Temple

ಬಂಟ್ವಾಳ : ಲಲಿತಾಪಂಚಮಿಯ ದಿನದಂದು ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರ ಸನ್ನಿಧಾನದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ ಭಕ್ತಾದಿಗಳಿಗೆ ಅಮ್ಮನವರಿಗೆ ಹರಕೆ ರೂಪದಲ್ಲಿ ಬಂದ ಸೀರೆಗಳನ್ನು ಪ್ರಸಾದ ರೂಪದಲ್ಲಿ ವಿತರಿಸಲು ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ಉಳಿಪ್ಪಾಡಿಗುತ್ತು ರಾಜೇಶ್ ನಾಯ್ಕ್, ಆಡಳಿತ ಮೋಕ್ತೇಸರರಾದ ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು,ಚೇರಾ ಸೂರ್ಯನಾರಾಯಣ ರಾವ್,ಪವಿತ್ರಪಾಣಿ ಮಾಧವ ಭಟ್,ಮಾಜಿ ಸಚಿವರಾದ ಬಿ.ನಾಗರಾಜ ಶೆಟ್ಟಿ ಪ್ರಮುಖರು ಉಪಸ್ಥಿತರಿದ್ದರು.ಊರ ಪರವೂರ ಭಕ್ತಾದಿಗಳು ಈ ಸಂದರ್ಭದಲ್ಲಿ ಸೀರೆ ಪ್ರಸಾದ ಸ್ವೀಕರಿಸಿದರು.  

ಅಕ್ಟೋಬರ್ 12 : ಮಂಗಳೂರು ತಾಲೂಕು ಚುಸಾಪದಿಂದ ಇರುಳು ಬಹುಭಾಷಾ ಕವಿಗೋಷ್ಠಿ

Saturday, October 9th, 2021
JF D Souza

ಮಂಗಳೂರು : ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಅಕ್ಟೋಬರ್ 12, ಮಂಗಳವಾರ ರಾತ್ರಿ 8 ಗಂಟೆಯಿಂದ ಮಧ್ಯರಾತ್ರಿಯವರೆಗೆ ಕ್ಲಬ್ ಹೌಸ್ ನಲ್ಲಿ ಇರುಳು ಬಹುಭಾಷಾ ಕವಿಗೋಷ್ಠಿಯನ್ನು ಆಯೋಜಿಸಿದೆ. ಭಾರತ, ಅಮೇರಿಕಾ, ದುಬೈಗಳಿಂದ ಕವಿಗಳು ಭಾಗವಹಿಸುತ್ತಿದ್ದು ಕನ್ನಡ, ಇಂಗ್ಲಿಷ್, ಹಿಂದಿ, ತುಳು, ಕೊಂಕಣಿ, ಬ್ಯಾರಿ,ಕೊಡವ, ಮಲಯಾಳಂ ಮೊದಲಾದ ಭಾಷೆಗಳಲ್ಲಿ ಕವನ ವಾಚನ ನಡೆಯಲಿದೆ. ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಜೆ.ಎಫ್ ಡಿಸೋಜಾ ಅವರು ವಹಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹರೀಶ್ ಸುಲಾಯ, […]

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಸುಧಾಕರ ಪೂಂಜ

Saturday, October 9th, 2021
Sudhakara Punja

ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2021-2023 ಸಾಲಿನ ನೂತನ ಅಧ್ಯಕ್ಷರಾಗಿ ಸುಧಾಕರ ಎಸ್ ಪೂಂಜ ಹೊಸಬೆಟ್ಟು ಆಯ್ಕೆ ಗೊಂಡಿದ್ದಾರೆ. ಬಂಟರ ಭವನದಲ್ಲಿ ನೂತನ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ಅಯ್ಕೆ ನಡೆಯಿತು. ಅಧ್ಯಕ್ಷರಾಗಿ ಸುಧಾಕರ ಎಸ್ ಪೂಂಜಾ ಹೊಸಬೆಟ್ಟು ಪುನರಾಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಲೋಕಯ್ಯ ಶೆಟ್ಟಿ ಮುಂಚೂರು ಕಾರ್ಯದರ್ಶಿಯಾಗಿ ಪ್ರವೀಣ್ ಶೆಟ್ಟಿ ಸುರತ್ಕಲ್, ಕೋಶಾಧಿಕಾರಿಯಾಗಿ ರತ್ನಾಕರ ಶೆಟ್ಟಿ ಸುರತ್ಕಲ್, ಜತೆ ಕಾರ್ಯದರ್ಶಿಯಾಗಿ ಪುಷ್ಪರಾಜ್ ಶೆಟ್ಟಿ ಕುಡುಂಬೂರು,ಸಂಘಟನಾ ಕಾರ್ಯದರ್ಶಿಯಾಗಿ ದೇವೇಂದ್ರ ಕೆ ಶೆಟ್ಟಿ ಇಡ್ಯಾ,ಸಾಂಸ್ಕೃತಿಕ […]