ಬಾಕಿ ಪ್ರಕರಣಗಳ ವಿಚಾರಣೆ ಶೀಘ್ರದಲ್ಲೇ ಇತ್ಯರ್ಥಪಡಿಸಿ: ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ

Thursday, August 26th, 2021
DC meeting

ಮಂಗಳೂರು :- ಬಾಲನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ವಿಚಾರಣೆಯನ್ನು ಶೀಘ್ರದಲ್ಲೇ ಇತ್ಯರ್ಥಪಡಿಸುವಂತೆ ಮಕ್ಕಳ ರಕ್ಷಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೂಚಿಸಿದರು. ಅವರು ಆಗಸ್ಟ್ 26 ರ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸಭೆ ಹಾಗೂ ಚೈಲ್ಡ್‍ಲೈನ್ ಸಲಹಾ ಮಂಡಳಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ 2 ಬಾಲನ್ಯಾಯಮಂಡಳಿಯಲ್ಲಿ ಬಾಕಿ ಇರುವ ಒಟ್ಟು 165 ಪ್ರಕರಣಗಳನ್ನು ಶೀಘ್ರವೇ ಇತ್ಯರ್ಥಪಡಿಸಿ, ಬಾಲನ್ಯಾಯ ನಿಧಿಗೆ ನೀಡಿರುವ ಅನುದಾನವನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ […]

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ, ಹಿರಿಯ ಪತ್ರಕರ್ತ ಡಿ.ಎಂ.ಕುಲಾಲ್ ನಿಧನ

Thursday, August 26th, 2021
DM Kulal

ಬಂಟ್ವಾಳ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ,ಹಿರಿಯ ಪತ್ರಕರ್ತ,ಸಂಘಟಕ,ಸಾಮಾಜಿಕ ಕಾರ್ಯಕರ್ತ ಡಿ.ಎಂ.ಕುಲಾಲ್ (54) (ದೈಪಲ ಮಾಧವ ಕುಲಾಲ್) ಅವರು ಸುಧೀರ್ಘ ಕಾಲದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ದೈಪಲದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಮೃತರು ತಾಯಿ,ಪತ್ನಿ,ಒಂದು ಹೆಣ್ಣು,ಒಂದು ಗಂಡು ಮಕ್ಕಳ ಸಹಿತ ಬಂಧುಗಳನ್ನು ಅಗಲಿದ್ದಾರೆ.ಮುಂಗಾರು,ಮಂಗಳೂರು ಮಿತ್ರ,ನೇತ್ರಾವತಿ ವಾರ್ತೆ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದ್ದ ಅವರು ಬಳಿಕ ವಿವಿಧ ಪತ್ರಿಕೆಗಳಿಗೆ ಲೇಖನವನ್ನು ಬರೆಯುತ್ತಿದ್ದರು. ಅವರ ಬಂಧುವಾಗಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ದಿವಂಗತ ಡಾ.ಅಮ್ಮೆಂಬಳ ಬಾಳಪ್ಪ ಅವರ ಜೀವನಚರಿತ್ರೆಯ ಪುಸ್ತಕ […]

ಯಲಹಂಕ ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ – ಒಂದೇ ಸಂಖ್ಯೆಯ ಎರಡು ವಾಹನಗಳ ವಶ

Thursday, August 26th, 2021
yalahanka

ಬೆಂಗಳೂರು : ಸಾರಿಗೆ ಇಲಾಖೆ ಅಧಿಕಾರಿಗಳು ಮತ್ತೊಮ್ಮೆ ಇಂದು ಕಾರ್ಯಾಚರಣೆ ನಡೆಸಿದ್ದು, ಒಂದೇ ನೋಂದಣಿ (KA 53 B 3633) ಸಂಖ್ಯೆಯನ್ನು ಬಳಸಿಕೊಂಡು ಸಂಚರಿಸುತ್ತಿದ್ದ ಎರಡು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಯಲಹಂಕ ಪ್ರಾದೇಶಿಕ ಸಾರಿಗೆ ಆಧಿಕಾರಿಗಳ ಕಚೇರಿಯ ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ರಾಜ್‌ ಕುಮಾರ್‌ ನೇತೃತ್ವದ ತಂಡ ಖಚಿತ ಮಾಹಿತಿಯನ್ನು ಆಧರಿಸಿ ಮೊದಲು ಯಲಹಂಕದಲ್ಲಿ ಒಂದು ಸ್ವರಾಜ್‌ ಮಜ್ದಾ ಬಸ್ಸನ್ನು ವಶಪಡಿಸಿಕೊಂಡರು. ನಂತರ ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಅದೇ ನೋಂದಣಿ ಸಂಖ್ಯೆಯನ್ನು ಬಳಸಿ ಸಂಚರಿಸುತ್ತಿದ್ದ ಇನ್ನೊಂದು ಸ್ವರಾಜ್‌ […]

ಟಿವಿ ನೋಡಲು ಬಂದ ಎಂಟು ವರ್ಷದ ಬಾಲಕಿಯ ಅತ್ಯಾಚಾರಕ್ಕೆ ಯತ್ನ, ಆರೋಪಿಯ ಬಂಧನ

Thursday, August 26th, 2021
Ramakrishna

ಮಂಗಳೂರು : ಮನೆಗೆ ಟಿವಿ ನೋಡಲು ಬಂದ ಎಂಟು ವರ್ಷದ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಮನೆಯ ಮಾಲೀಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಟೀಲು ಪೆರ್ಮುದೆಯ ರಾಮಕೃಷ್ಣ ಬಂಧಿತ ಆರೋಪಿ. ಶಿವಮೊಗ್ಗ ಮೂಲದ ಮಹಿಳೆಯು ಕಟೀಲು ಪೆರ್ಮುದೆಯ ರಾಮಕೃಷ್ಣ ಎಂಬವರ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದರು. ಆ.21ಕ್ಕೆ ಬಾಲಕಿಯ ತಾಯಿ ಕೆಲಸದ ನಿಮಿತ್ತ ಶಿವಮೊಗ್ಗಕ್ಕೆ ಪ್ರಯಾಣಿಸಿದ್ದಾರೆ. ಆಗ ತನ್ನ ಮೂವರು ಮಕ್ಕಳನ್ನು ಪೆರ್ಮುದೆಯ ಬಾಡಿಗೆ ಮನೆಯಲ್ಲೇ ಬಿಟ್ಟು ಹೋಗಿದ್ದಾರೆ ಎಂದು ತಿಳಿದುಬಂದಿದೆ. ಮಹಿಳೆಯ ಮೂವರು ಮಕ್ಕಳು ಅದೇ ದಿನ […]

ಕೋವಿಡ್ ಪ್ರಕರಣಗಳು ಅಗೋಸ್ಟ್ 24 : ದ.ಕ. 273, 4 ಸಾವು, ಉಡುಪಿ 128, 1 ಸಾವು

Tuesday, August 24th, 2021
corona

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮಂಗಳವಾರ 273 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ನಾಲ್ವರು ಸಾವಿಗೀಡಾಗಿದ್ದಾರೆ. 265 ಮಂದಿ ಗುಣಮುಖರಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 128 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 1,08,466 ಕೊರೋನ ಪಾಸಿಟಿವ್ ಪ್ರಕರಣಗಳ ಪೈಕಿ ಈಗಾಗಲೇ 1,04,034 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 1,542 ಮಂದಿ ಸಾವಿಗೀಡಾಗಿದ್ದು, ಪ್ರಸ್ತುತ 2,890 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 85,674 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಇದುವರೆಗೆ ದಾಖಲಾಗಿದ್ದು, ಒಟ್ಟು 1,04,21,720 ರೂ. ದಂಡ ವಸೂಲಿ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ […]

ಬಿಗ್ ಬಾಸ್ ವಿಜೇತ ಪಾವಗಡ ಮಂಜು ಧರ್ಮಸ್ಥಳದಲ್ಲಿ

Tuesday, August 24th, 2021
pavagada-Manju

ಉಜಿರೆ : ಬಿಗ್ ಬಾಸ್ ವಿಜೇತ ಪಾವಗಡ ಮಂಜು ಮಂಗಳವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಹೆಗ್ಗಡೆಯವರು ಅವರನ್ನು ಗೌರವಿಸಿ ಉಜ್ವಲ ಭವಿಷ್ಯವನ್ನು ಹಾರೈಸಿದರು. ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಅವರ ತಂದೆ ಹನುಮಂತರಾಯಪ್ಪ, ತಾಯಿ ಲಕ್ಷ್ಮಮ್ಮ, ತಮ್ಮ ರಾಘವ ಮತ್ತು ತಂಗಿ ಮಾನಸ ಉಪಸ್ಥಿತರಿದ್ದರು. ಪಾವಗಡ ಮಂಜು ಕಲರ್ಸ್ ಕನ್ನಡದ ಮಜಾ ಭಾರತದಲ್ಲಿ ಕಲಾವಿದರಾಗಿ ಕಳೆದ ನಾಲ್ಕು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ ತಮ್ಮ ಕುಟುಂಬದವರೊಂದಿಗೆ […]

ತುಲುವೆರೆ ಪಕ್ಷ: ಬೆಳ್ತಂಗಡಿ ತಾಲೂಕು ಸಮಿತಿ ರಚನೆ

Tuesday, August 24th, 2021
Tuluvere Paksha

ಬೆಳ್ತಂಗಡಿ : ತುಲುವೆರೆ ಪಕ್ಷದ ಬೆಳ್ತಂಗಡಿ ತಾಲೂಕು ಕಾರ್ಯಕರ್ತರ ಸಭೆಯು ಇತ್ತೀಚೆಗೆ ಅಂಬೇಡ್ಕರ್ ಭವನದಲ್ಲಿ ಪಕ್ಷದ ಅಧ್ಯಕ್ಷರಾದ ಶೈಲೇಶ್ ಆರ್.ಜೆ.ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ತುಳು ಭಾಷೆಗೆ ಸ್ಥಾನಮಾನ, ತುಳುನಾಡಿನ ಸಮಗ್ರ ಅಭಿವೃದ್ದಿ ಮತ್ತು ತುಳುನಾಡ್ ರಾಜ್ಯ ರಚನೆಗೆ ಪಕ್ಷವನ್ನು ಬಲಿಷ್ಠವಾಗಿ ಕಟ್ಟುವ ನಿರ್ಣಯದೊಂದಿಗೆ ಬೆಳ್ತಂಗಡಿ ತಾಲೂಕು ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ನ್ಯಾಯವಾದಿ ಪ್ರಶಾಂತ್. ಎಂ, ಉಪಾಧ್ಯಕ್ಷರಾಗಿ ಮುಖಿಂ ಖಾನ್, ಪ್ರಧಾನ ಕಾರ್ಯದರ್ಶಿಯಾಗಿ ನ್ಯಾಯವಾದಿ ಸತೀಶ್ ಪೂಜಾರಿ .ಎನ್ ಜೊತೆ ಕಾರ್ಯದರ್ಶಿಯಾಗಿ ದಿನೇಶ್ ಆರ್. ಮತ್ತು ಕಾರ್ಯಕಾರಿ ಸಮಿತಿಯ […]

ಬೆಳೆ ಸಮೀಕ್ಷೆ ವಿನೂತನ ಕೃಷಿ ಆ್ಯಪ್ ಬಿಡುಗಡೆಗೊಳಿಸಿದ ಡಾ.ಭರತ್ ಶೆಟ್ಟಿ ವೈ

Tuesday, August 24th, 2021
krishi App

ಸುರತ್ಕಲ್ : ರೈತರಿಗೆ ಮಾಹಿತಿ ನೀಡುವ ಸಲುವಾಗಿ,ಬೆಳೆ ಸಮೀಕ್ಷೆ, ಹಾನಿಯಾದಲ್ಲಿ ಪರಿಹಾರ ಪಡೆಯಲು ಅನುಕೂಲವಾಗುವಂತೆ ದಾಖಲೀಕರಣಕ್ಕೆ ಸರಕಾರ ಹೊಸ ತಂತ್ರಜ್ಞಾನ ಬಳಸಿ ಕೃಷಿ ಆ್ಯಪ್ ಹೊರ ತಂದಿದ್ದು ಕೃಷಿ ಇಲಾಖೆಯ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಮಾಹಿತಿ ನೀಡುವ ಮೂಲಕ ಇದರ ಸದುಪಯೋಗ ಆಗಬೇಕಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಅವರು ಕಾವೂರಿನಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಆ್ಯಪ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ರೈತ ತಾನು ಬೆಳೆಯುವ ಬೆಳೆಯ ಬಗ್ಗೆ ಈ ಆಪ್‍ನಲ್ಲಿ ಹಾಕಿ ಮಾಹಿತಿ […]

10ಕ್ಕೂ ಹೆಚ್ಚು ಕಡೆ ಇಂಟರ್ನೆಟ್ ಕೇಬಲ್ ತುಂಡರಿಸಿದ ಕಿಡಿಗೇಡಿಗಳು

Monday, August 23rd, 2021
cable cuting

ಬಂಟ್ವಾಳ: ಇಲ್ಲಿನ ವಾಮದಪದವು-ಕುದ್ಕೋಳಿ ನಡುವೆ ಹಾದು ಹೋಗಿರುವ ಸೊರ್ನಾಡು ರ್ಯಾಪಿಡ್ ಇನಫೋಟೆಕ್ ಸಂಸ್ಥೆಗೆ ಸೇರಿದ ಇಂಟರ್ನೆಟ್ ಕೇಬಲ್ ಗಳನ್ನು ಕಿಡಿಗೇಡಿಗಳು ತುಂಡರಿಸಿ ಹಾನಿ ಉಂಟು ಮಾಡಿದ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ಜನತೆಗೆ ಗುಣಮಟ್ಟದ ಇಂಟರ್ನೆಟ್ ಸೌಲಭ್ಯ ಒದಗಿಸಲು ಕಾನೂನು ಬದ್ಧ ಪರವಾನಿಗೆ ಪಡೆದು ಅಳವಡಿಸಿದ್ದ ಲಕ್ಷಾಂತರ ಮೌಲ್ಯದ ಕೇಬಲ್ ಗಳನ್ನು ಎಲ್ಪೇಲು ಸಹಿತ 10ಕ್ಕೂ ಮಿಕ್ಕಿ ಕಡೆಗಳಲ್ಲಿ ಭಾನುವಾರ ರಾತ್ರಿ ಕಿಡಿಗೇಡಿಗಳು ತುಂಡರಿಸಿದ್ದಾರೆ. ಇಲ್ಲಿನ ಹಲವು ಮಂದಿ ವಿದ್ಯಾರ್ಥಿಗಳು ಸಹಿತ […]

ನಾರಾಯಣಗುರುಗಳನ್ನು ಆದರ್ಶಗಳನ್ನು ನಮ್ಮಲ್ಲಿ ಮೈಗೂಡಿಸಿಕೊಂಡರೆ ಭಾರತ ವಿಶ್ವಗುರುವಾಗುವುದರಲ್ಲಿ ಸಂದೇಹವಿಲ್ಲ : ರಾಜೇಶ್ ನಾಯ್ಕ್

Monday, August 23rd, 2021
Narayana Guru

ಬಂಟ್ವಾಳ: ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳನ್ನು ಅನುಷ್ಠಾನಗೊಳಿಸುವ ಕಾರ್ಯ ಇಂದು ನಡೆಯಬೇಕಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು. ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಸೋಮವಾರ ಬಿಜೆಪಿ ಒಬಿಸಿ ಮೋರ್ಚಾ ವತಿಯಿಂದ ಏರ್ಪಡಿಸಲಾದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ನಾರಾಯಣಗುರುಗಳನ್ನು ಪೂಜಿಸುವುದರೊಂದಿಗೆ ಅವರ ಆದರ್ಶಗಳನ್ನು ನಮ್ಮಲ್ಲಿ ಮೈಗೂಡಿಸಿಕೊಂಡರೆ ಭಾರತ ವಿಶ್ವಗುರುವಾಗುವುದರಲ್ಲಿ ಸಂದೇಹವಿಲ್ಲ ಎಂದು ಹೇಳಿದರು. ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ ಈ ಸಂದರ್ಭ ಮಾತನಾಡಿ, ಹಿಂಸೆಯ ಭಾವ ನಮ್ಮಲ್ಲಿ ತೊಲಗಬೇಕಿದ್ದರೆ, ನಾರಾಯಣಗುರುಗಳ […]