ಊರಿಗೆ ಬರುವ ಮಾರಿ ಕಳೆವ ‘ಆಟಿ ಕಳೆಂಜ’: ತುಳುನಾಡಿನ ವಿಶಿಷ್ಟ ಆಚರಣೆ

Thursday, August 5th, 2021
Ati Kalanja

ಸುರತ್ಕಲ್ : ವಿನಾಯಕ ಫ್ರೆಂಡ್ಸ್ ಕ್ಲಬ್ ಮೂರನೇ ಬ್ಲಾಕ್ ಕಾಟಿಪಳ್ಳ ಮತ್ತು ಗಗ್ಗರ ದೈವೋಲೆನ ಪದಿನಾಜಿ ಕಟ್ಲೆ ಇದರ ಸಹಯೋಗದಲ್ಲಿ ‘ಆಟಿ ಕಳೆಂಜ ನಿಮ್ಮ ಮನೆಗೆ’ ಎಂಬ ಆಟಿಕಳಂಜ ಮನೆ ಮನೆ ಗೆ ಭೇಟಿ ನೀಡುವ ಕಾರ್ಯಕ್ರಮ ಸಾಂಪ್ರದಾಯಿಕವಾಗಿ ಆರಂಭಗೊಂಡಿತು. ದೈವದ ಮಧ್ಯಸ್ಥ ರವಿರಾಜ ಶೆಟ್ಟಿ ಮಾತನಾಡಿ ಅಳಿಯುತ್ತಿರುವ ಆಟಿಕಳಂಜ ಸಂಪ್ರದಾಯದ ಉಳಿಯುವಿಕೆಗಾಗಿ ವಿನಾಯಕ ಫ್ರೆಂಡ್ಸ್ ಕ್ಲಬ್ ಕಾಟಿಪಳ್ಳ ಮತ್ತು ಗಗ್ಗರ ದೈವೋಲೆನ ಪದಿನಾಜಿ ಕಟ್ಲೆ ಇದರ ಪ್ರಯತ್ನ ಶ್ಲಾಘನೀಯ ಎಂದರು. ಸ್ಥಳೀಯ ಕಾರ್ಪೋರೇಟರ್ ಲೋಕೇಶ್ ಬೊಳ್ಳಾಜೆ […]

ಚಾತುರ್ಮಾಸದ ವೈಶಿಷ್ಟ್ಯಗಳು ಮತ್ತು ಮಹತ್ವ

Thursday, August 5th, 2021
chaturmasya

ಮಂಗಳೂರು  : ಹಿಂದೂ ಧರ್ಮದಲ್ಲಿ ಆಚರಿಸುವ ಪ್ರತಿಯೊಂದು ಹಬ್ಬ, ಧಾರ್ಮಿಕ ಉತ್ಸವಗಳಿಗೆ ಒಂದೊಂದು ವಿಶೇಷ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಕಾರಣಗಳಿವೆ. ಹಿಂದೂ ಧರ್ಮದಲ್ಲಿ ಬರುವ ಹಬ್ಬಗಳ ಸಾಲು ಎಂದರೆ ಆಷಾಢ ಮಾಸದಿಂದ ಕಾರ್ತಿಕ ಮಾಸದ ಈ ನಾಲ್ಕು ತಿಂಗಳು ಬೇರೆ ಬೇರೆ ಹಬ್ಬಗಳ ಆಚರಣೆ ಮಾಡುತ್ತೇವೆ ಈ ನಾಲ್ಕು ತಿಂಗಳ ಅಂದರೆ ಆಷಾಢ ಶುಕ್ಲ ಏಕಾದಶಿಯಿಂದ ಕಾರ್ತಿಕ ಶುಕ್ಲ ಏಕಾದಶಿಯವರೆಗೆ ಅಥವಾ ಆಷಾಢ ಹುಣ್ಣಿಮೆಯಿಂದ ಕಾರ್ತಿಕ ಹುಣ್ಣಿಮೆಯವರೆಗಿನ ನಾಲ್ಕು ತಿಂಗಳುಗಳ ಕಾಲಾವಧಿಗೆ ‘ಚಾತುರ್ಮಾಸ’ ಎನ್ನುತ್ತಾರೆ. ಚಾತುರ್ಮಾಸದ ಕಾಲ […]

ಕಾರ್ಯಕ್ಷಮತೆಯನ್ನು ಅಧ್ಯಯನ ಮಾಡಲು ಕರಾರಸಾ ನಿಗಮಕ್ಕೆ ಟಾಟಾ ಮೋಟಾರ್ಸ್ ಉಚಿತವಾಗಿ ಬಿ ಎಸ್ -6 ಚಾಸಿಸ್ ವಿತರಣೆ

Thursday, August 5th, 2021
bmtc

ಬೆಂಗಳೂರು : ಕರಾರಸಾ ನಿಗಮಕ್ಕೆ ಟಾಟಾ ಮೋಟಾರ್ಸ್ ರವರು ಉಚಿತವಾಗಿ ಬಿಎಸ್ -6 ಚಾಸಿಸ್ ಅನ್ನು ಉಚಿತವಾಗಿ ಕಾರ್ಯಕ್ಷಮತೆಯನ್ನು ಅಧ್ಯಯನ ಮಾಡಲು ನೀಡಿರುತ್ತಾರೆ. ಬಿಎಸ್ -6 ವಾಹನದ ಕಾರ್ಯಾಚರಣೆಯನ್ನು ದಕ್ಷಿಣ ಭಾರತದಲ್ಲಿ ಪ್ರಥಮ ಬಾರಿಗೆ ಮಾಡಲಾಗುತ್ತಿದೆ. ಈ ಚಾಸಿಸ್ನ ಅಂದಾಜು ವೆಚ್ಚ ರೂ. 27 ಲಕ್ಷಗಳಾಗಿದೆ. ಇದು ಬಿಎಸ್ – 6 ಮಾದರಿಯ ಚಾಸ್ಸಿಯಾಗಿದ್ದು, 4 ಸಿಲಿಂಡರ್, 5 ಲೀ 180 ಎಚ್ಪಿ ಇಂಜಿನ್ ಆಗಿರುತ್ತದೆ. ಇದರ ವೀಲ್ಬೇಸ್ 224″ ಇರುತ್ತದೆ. ಹಾಗೂ ಬಿಎಸ್ -4 ಗೆ […]

ರೈಲ್ವೆ ಬೇಡಿಕೆಗಳ ಈಡೇರಿಕೆಗಾಗಿ ರೈಲ್ವೆ ಸಚಿವರಿಗೆ ನಳಿನ್ ಕುಮಾರ್ ಕಟೀಲ್ ಮನವಿ

Wednesday, August 4th, 2021
nalin-Kumar-Kateel

ಮಂಗಳೂರು  :  ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಶ್ಣವ್ ರವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬಂಧಿಸಿದ ಈ ಕೆಳಕಂಡ ವಿಷಯಗಳ ಕುರಿತು ಕ್ರಮಕೈಗೊಳ್ಳುವಂತೆ ಮನವಿ ಮಾಡಿದರು. ಆಡಳಿತಾತ್ಮಕ ಬದಲಾವಣೆ. 1. ಮಂಗಳೂರು ತೋಕುರು ರೈಲ್ವೆ ಲೈನ್ ನ್ನು ಸೌತ್ ವೆಸ್ಟರ್ನ್ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವ ಬಗ್ಗೆ. 2. ಹಾಸನ ಮಂಗಳೂರು ರೈಲ್ವೆ ಅಭಿವೃದ್ಧಿ ಕಂಪೆನಿಯನ್ನು […]

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಹಾಸನದಲ್ಲಿ ಅಭಿನಂದನಾ ಕಾರ್ಯಕ್ರಮ

Wednesday, August 4th, 2021
DK journalists

ಹಾಸನ: 35 ನೇ ಪತ್ರಕರ್ತರ ರಾಜ್ಯ ಸಮ್ಮೇಳನವನ್ನು ಮಂಗಳೂರಿನಲ್ಲಿ ಯಶಸ್ವಿಯಾಗಿ ನಡೆಸಿಕೊಟ್ಟ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಹಾಸನದಲ್ಲಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಯಿತು. ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪರವಾಗಿ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಸನದ ಹೊಳೆನರಸೀಪುರ ರಸ್ತೆಯಲ್ಲಿರುವ ನಂದಗೋಕುಲ ಕನ್ವೆನ್ಷನ್ ಹಾಲ್ ನಲ್ಲಿ ಆಗಸ್ಟ್ 3 ರಂದು ಸಂಜೆ ನಡೆದ ಅಭಿನಂದನಾ ಸಮಾರಂಭದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತು ಪದಾಧಿಕಾರಿಗಳನ್ನು ಹಾಗೂ ಯಶಸ್ವಿ ಸಮ್ಮೇಳನದ […]

ಜಾಗ ಮಾರಿ ಸಾಲ ಮಾಡಿ 15 ಲಕ್ಷ ವರದಕ್ಷಿಣೆ ಕೊಟ್ಟರೂ, 10 ಲಕ್ಷದ ಕಾರು ಬೇಕು ಎಂದ ಪತಿಯ ವಿರುದ್ಧ ದೂರು

Wednesday, August 4th, 2021
dowriCase

ಮಂಗಳೂರು : ವರದಕ್ಷಿಣೆ ಕೊಟ್ಟದ್ದೇ ಅಲ್ಲದೆ ಕಾರು ಬೇಕು ಎಂದು ಪತಿ ಹಾಗೂ ಆತನ ಮನೆಯವರು ದೈಹಿಕ, ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಮಹಿಳೆಯೋರ್ವರು ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತಾನು ದುಬೈನಲ್ಲಿ ಹೋಟೆಲ್ ನಡೆಸುತ್ತಿದ್ದೇನೆ ಎಂದು ನಂಬಿಸಿ  ಮದುವೆ ಮಾಡಿದ್ದರು. ಪತಿಯಾದ ತುಷಾರ್ ಬಿ. ಮಾಣೈ ಮತ್ತು ಆತನ ಮನೆಯವರು ವರದಕ್ಷಿಣೆಗಾಗಿ ಹಿಂಸೆ ನೀಡಿದ್ದು, ತುಷಾರ್ ಮದುವೆಯಾಗಿದ್ದು ಮದುವೆಯ ಎಲ್ಲಾ ಖರ್ಚುಗಳನ್ನು ವಧುವಿನ ಮನೆಯವರು ಬರೆಸಿದ್ದರು. ವರನ ಮನೆಯವರ ಬೇಡಿಕೆಯಂತೆ ಜಾಗ ಮಾರಿ ಸಾಲ […]

ಐಸಿಸ್ ಉಗ್ರ ಸಂಘಟನೆ ಜತೆ ನಂಟು, ಮಾಜಿ ಶಾಸಕ ಬಿ.ಎಂ.ಇದಿನಬ್ಬ ಪುತ್ರನ ಉಳ್ಳಾಲದ ಮನೆಗೆ ಎನ್ಐಎ ದಾಳಿ

Wednesday, August 4th, 2021
iddinabba-House

ಮಂಗಳೂರು: ಉಗ್ರ ಸಂಘಟನೆ ಜತೆ ನಂಟು ಇರುವ ಶಂಕೆಯಲ್ಲಿ  ಉಳ್ಳಾಲದ ಮಾಜಿ ಶಾಸಕ ಬಿ.ಎಂ.ಇದಿನಬ್ಬ ಅವರ ಪುತ್ರನ ಮನೆಗೆ ಇಂದು ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳು ಮನೆಗೆ ಬಂದು ತನಿಖೆ ಆರಂಭಿಸಿದ್ದಾರೆ. ಮನೆಯಲ್ಲಿ ಇದಿನಬ್ಬ ಅವರ ಪುತ್ರ ಬಿ.ಎಂ. ಬಾಷಾ ತಮ್ಮ ಕುಟುಂಬದ ಜತೆ ವಾಸವಿದ್ದಾರೆ. ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆ ಜತೆ ನಂಟು ಇರುವ ಶಂಕೆಯಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ. ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ ತಂಡ ಉಳ್ಳಾಲದ […]

ಮಂಗಳೂರಿಗೆ ಬಂದಿದೆ ಇಲೆಕ್ಟ್ರಿಕ್ ಆಟೋ, ಅತೀ ಕಡಿಮೆ ವೆಚ್ಚದಲ್ಲಿ ಪ್ರಯಾಣ ಸಾಧ್ಯ

Tuesday, August 3rd, 2021
Electric-Auto

ಮಂಗಳೂರು : ಸುರತ್ಕಲ್ ಸಮೀಪದ ಕೃಷ್ಣಾಪುರದಲ್ಲಿ ಇಲೆಕ್ಟ್ರಿಕ್ ರಿಕ್ಷಾ ಡ್ರೈವ್ ಮಾಡಿದ ಶಾಸಕರು ಇಲೆಕ್ಟ್ರಿಕ್ ವಾಹನವು ಮಾಲಿನ್ಯ ರಹಿತ, ನಿಶ್ಶಬ್ದ ಹಾಗೂ ಅತೀ ಕಡಿಮೆ ವೆಚ್ಚದಲ್ಲಿ ಲಾಭದಾಯಕ ಸ್ವ ಉದ್ಯೋಗ ಆಗುವ ಎಲ್ಲಾ ಲಕ್ಷಣಗಳಿದೆ ಎಂದರು. ಸರಕಾರದಿಂದ ಅರ್ಹ ಫಲಾನುಭವಿಗಳಿಗೆ ಸ್ವ ಉದ್ಯೋಗ ಮಾಡಲು ಕೊಡಲಾಗುವ ವಾಹನಗಳಲ್ಲಿ ಇಲೆಕ್ಟ್ರಿಕ್ ವಾಹನ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯುವುದಾಗಿ ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದ್ದಾರೆ. ಕೇಂದ್ರ ಸರಕಾರ ಮಾಲಿನ್ಯ ಕಡಿಮೆ ಮಾಡಲು ವಿದ್ಯುತ್ ಚಾಲಿತ ವಾಹನಗಳಿಗೆ ಭಾರೀ […]

ಕೊರೋನಾ ಹೆಚ್ಚಳ – ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳು ರದ್ದು

Tuesday, August 3rd, 2021
Mangalore University

  ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಕಾಲಕಾಲಕ್ಕೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಕಟ್ಟುನಿಟ್ಟಿನ ನಿರ್ಬಂಧಗಳ ನಂತರವು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನಲೆಯಲ್ಲಿ ಸರ್ಕಾರವು ಉಲ್ಲೇಖದಂತೆ ಕಣ್ಗಾವಲು , ನಿಯಂತ್ರಣ ಮತ್ತು ಜಾಗೃತೆಗೆ ಸಂಬಂಧಿಸಿದಂತೆ ಕೇರಳ ಮತ್ತು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಶೇಷ ಸರ್ವೇಕ್ಷಣೆಯನ್ನು ಮಾಡಲು ನಿರ್ದೇಶಿಸಿರುತ್ತದೆ. ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಅಂತರ್ ಜಿಲ್ಲೆಯಾದ ಕೇರಳ ರಾಜ್ಯದ ಕಾಸರಗೋಡು […]

ಕೊರೊನಾ ಹೆಚ್ಚಳ – ಗಡಿಭಾಗಕ್ಕೆ ಹೊಂದಿಕೊಂಡಿರುವ ಎಲ್ಲಾ ಮದ್ಯದಂಗಡಿಗಳನ್ನು ಬಂದ್

Tuesday, August 3rd, 2021
wine Shop

ಮಂಗಳೂರು : ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ, ಕಟ್ಟುನಿಟ್ಟಿನ ನಿಬರ್ಂಧಗಳ ನಂತರವು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನಲೆಯಲ್ಲಿ ಅದರ ಕಣ್ಗಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದಂತೆ ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಶೇಷ ಸರ್ವೇಕ್ಷಣೆಯನ್ನು ನಿರ್ದೇಶಿಸಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಸಾರ್ವಜನಿಕರು ಮದ್ಯ ಸೇವನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳ ಮದ್ಯದಂಗಡಿಗಳನ್ನೇ […]