ಕೇರಳ – ಕರ್ನಾಟಕ ಗಡಿಪ್ರದೇಶಗಳಲ್ಲಿ ಕಟ್ಟು ನಿಟ್ಟಿನ ಕ್ರಮ – ಎಡಿಜಿಪಿ ಪ್ರತಾಪ್ ರೆಡ್ಡಿ

Tuesday, August 3rd, 2021
Kerala Border

ಮಂಗಳೂರು  :  ದ.ಕ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಜೊತೆ ಕೇರಳ – ಕರ್ನಾಟಕ ಗಡಿ ಪ್ರದೇಶವಾಗಿರುವ ವಿಟ್ಲ ಠಾಣಾ ವ್ಯಾಪ್ತಿಯ ಸಾಲೆತ್ತೂರು ಸಮೀಪದ ಕೊಡಂಗೆ ಚೆಕ್ ಪೋಸ್ಟ್ ಗೆ  ಕಾನೂನು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿಯವರು ಆಗಮಿಸಿ ಪರಿಶೀಲನೆ ನಡೆಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೇರಳದಲ್ಲಿ ಕೊರೊನಾ ಪ್ರಕರಣ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ – ಕರ್ನಾಟಕ ಗಡಿಪ್ರದೇಶಗಳಲ್ಲಿ ಕಟ್ಟು ನಿಟ್ಟಿನ ಕ್ರಮ ಪಾಲಿಸಲಾಗುತ್ತಿದೆ.  ತಲಪಾಡಿಯಲ್ಲಿ ತೆರೆಯಲಾಗಿರುವ ಚೆಕ್ ಪೋಸ್ಟ್,  ವಿಟ್ಲ ಠಾಣಾ ವ್ಯಾಪ್ತಿಯ […]

ನಿಟ್ಟೆ ಕಾಲೇಜಿನ ಮಂಗಳೂರು ವಿದ್ಯಾರ್ಥಿನಿ ಅರ್ಬಿ ಫಾಲ್ಸ್ ನಲ್ಲಿ ನೀರುಪಾಲು

Monday, August 2nd, 2021
Nitte Student

ಕಾರ್ಕಳ :   ಅರ್ಬಿ ಫಾಲ್ಸ್ ವೀಕ್ಷಣೆಗೆಂದು ಹೋಗಿದ್ದ ವಿದ್ಯಾರ್ಥಿಗಳ ಪೈಕಿ ವಿದ್ಯಾರ್ಥಿನಿಯೊಬ್ಬಳು ನೀರಿನ ಸೆಳತಕ್ಕೆ ಸಿಲುಕಿ ಸಾವನ್ನಪ್ಪಿದ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಮೃತಪಟ್ಟವರನ್ನು ನಿಟ್ಟೆ ಕಾಲೇಜಿನ ಪ್ರಥಮ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿನಿ ಮಂಗಳೂರು ಜಪ್ಪು ನಿವಾಸಿ ವರ್ಷಿತಾ(19) ಎಂದು ಗುರುತಿಸಲಾಗಿದೆ. ಸಹಪಾಠಿಗಳಾದ ರುದ್ರ ಹಾಗೂ ಶಾಶಂಕ ಎಂಬವರೊಂದಿಗೆ ಸೋಮವಾರ ಮಧ್ಯಾಹ್ನದ ವೇಳೆಗೆ ಅರ್ಬಿ ಫಾಲ್ಸ್ ಪರಿಸರಕ್ಕೆ ಹೋಗಿದ್ದಳು. ಆಕೆ ಸಹಪಾಠಿಗಳೊಂದಿಗೆ ತುಂಬಿ ತುಳುಕುತ್ತಿದ್ದ ಫಾಲ್ಸ್‌ಗೆ ಇಳಿದಿದ್ದು, ಕ್ಷಣ ಮಾತ್ರದಲಿ ಸುಳಿಗೆ ಸಿಲುಕಿ ನೀರುಪಾಲಾಗಿದ್ದಳು. ಮಾಹಿತಿ ತಿಳಿದ ಅಗ್ನಿಶಾಮಕದಳದವರು […]

ಭಜನಾ ಮಂಡಳಿಗಳು ಇದ್ದಲ್ಲಿಯೇ ಭಜನಾ ಸ್ಪರ್ಧೆ: ₹ 12.5 ಲಕ್ಷ ಬಹುಮಾನ

Monday, August 2nd, 2021
Bajane

ಬೆಳ್ತಂಗಡಿ: ‘ಹಿಂದೂ ಸಮಾಜಕ್ಕೆ ಶಕ್ತಿ ನೀಡುವ ಕಾರ್ಯ ಭಜನಾ ಮಂಡಳಿ ಗಳಿಂದಾಗಿದೆ. ಭಜನಾ ಮಂದಿರಗಳ ಅಸ್ತಿತ್ವ ಉಳಿಸುವ ನಿಟ್ಟಿನಲ್ಲಿ ಸರ್ಕಾರಿ ದಾಖಲೆಗಳ ಸರಿಪಡಿಸುವ ಜತೆಗೆ ಮೂಲ ಸೌಕರ್ಯ ಅಭಿವೃದ್ಧಿಗೆ ಕಂದಾಯ ಸಚಿವರಾಗಿದ್ದ ಆರ್. ಅಶೋಕ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ’ ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ತಾಲ್ಲೂಕಿನ ಭಜನಾ ಮಂದಿರಗಳ ಮೂಲ ಸೌಕರ್ಯಗಳ ಕುರಿತು ಮಂದಿರಗಳ ಅಧ್ಯಕ್ಷರ ಹಾಗೂ ಕಾರ್ಯದರ್ಶಿಗಳ ಜೊತೆ ಬೆಳ್ತಂಗಡಿ ಮಂಜುನಾಥ ಸ್ವಾಮಿ ಸಭಾಭವನದಲ್ಲಿ ನಡೆಸಲಾದ ಸಭೆಯಲ್ಲಿ ಅವರು ಮಾತನಾಡಿದರು. ‘ಮಂದಿರಗಳಿಗೆ ಹಕ್ಕುಪತ್ರ ನೀಡುವ […]

ದ.ಕ ಜಿಲ್ಲಾ ಕಾಂಗ್ರೆಸ್ ಸ ಮಿತಿಯ ಹಿಂದುಳಿದ ವರ್ಗಗಳ ನೂತನ ಅಧ್ಯಕ್ಷರಾಗಿ ವಿಶ್ವಾಸ್ ಕುಮಾರ್ ದಾಸ್ ಪದಗ್ರಹಣ

Monday, August 2nd, 2021
Vishwas Kumara Das

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸ ಮಿತಿಯ ಹಿಂದುಳಿದ ವರ್ಗಗಳ ನೂತನ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಕಾರ್ಯಕ್ರಮ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಗಸ್ಟ್ 1, ರವಿವಾರ ನಡೆಯಿತು. ಕಾಂಗ್ರೆಸ್ ರಾಜ್ಯ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಘಾಟನೆ ಬಳಿಕ ಮಾತನಾಡಿದ ಅವರು ಸಂವಿಧಾನ ಉಳಿಸುವ ಹೋರಾಟ ಗಟ್ಟಿಯಾದಲ್ಲಿ ಮಾತ್ರ ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರೆಲ್ಲಗೂ ದೇಶದಲ್ಲಿ ಅವಕಾಶಗಳು ದೊರೆಯಲು ಸಾಧ್ಯ. ಅಧಿಕಾರ ಬರುತ್ತೆ, […]

ಕೊವಿಡ್‌ ನಡುವೆಯೂ ಮೊದಲ ದಿನ ಸಾಂಗವಾಗಿ ನಡೆದ ಪರೀಕ್ಷೆ

Monday, August 2nd, 2021
VV-Exam

ಮಂಗಳೂರು:  ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಬಾಕಿ ಉಳಿದಿದ್ದ ಪರೀಕ್ಷೆಗಳು ಆರಂಭವಾಗಿದ್ದು, ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಇಂದು (ಆಗಸ್ಟ್‌ 2) 839 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ (ಬೆಳಗ್ಗೆ 456, ಮಧ್ಯಾಹ್ನ 383). ಪ್ರಥಮ ಬಿ.ಎ (36), ಬಿ.ಎಸ್ಸಿ (109), ಬಿ.ಕಾಂ (289), ತೃತೀಯ ಬಿಸಿಎ (12), ಅಂತಿಮ ಬಿ.ಎ (29), ಬಿ.ಎಸ್ಸಿ (127), ಬಿ. ಕಾಂ (224) ಮತ್ತು ಅಂತಿಮ ಬಿಬಿಎಂ (3) ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಕೊರೋನಾ- 19 ದಿಂದ ಪೀಡಿತವಾಗಿರುವ ಕೇರಳದ […]

ಮಲ್ಪೆ ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಯುವತಿಯ ಮೃತ ದೇಹ ಪತ್ತೆ

Monday, August 2nd, 2021
Dejamma

ಮಲ್ಪೆ : ಮೈಸೂರಿನಿಂದ ಪ್ರವಾಸ ಬಂದಿದ್ದ ತಂಡದಲ್ಲಿ ಮಲ್ಪೆ ಬೀಚ್‌ನಲ್ಲಿ ರವಿವಾರ ನಾಪತ್ತೆಯಾಗಿದ್ದ ಯುವತಿಯ ಮೃತ ದೇಹ ಪತ್ತೆಯಾಗಿದೆ. ಕೊಡಗು ಮೂಲದ ಮೈಸೂರು ನಿವಾಸಿ ದೇಚಮ್ಮ ಯು.ಜೆ.(20) ರವಿವಾರ ನಾಪತ್ತೆಯಾಗಿದ್ದರು. ಈಕೆಯ ಜೊತೆ ಇದ್ದ ಸ್ನೆಹಿತರಾದ ಮೈಸೂರು ವಿಜಯಪುರದ ಎಂ.ಯು.ಶೈನಿ(20), ನವ್ಯ ಮಂದಣ್ಣ (20), ನಿಖಿಲ್ ಗೌಡ (20) ಎಂಬವರನ್ನು ಸ್ಥಳೀಯರು ರಕ್ಷಿಸಿದ್ದರು. ಇವರಲ್ಲಿ ತೀವ್ರ ಅಸ್ವಸ್ಥಗೊಂಡ ನಿಖಿಲ್ ಗೌಡ ಉಡುಪಿ ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ದಾಖಲಾಗಿದ್ದಾರೆ. ಇವರು  ಮಂಗಳೂರಿಗೆ ಬಂದಿದ್ದು ಮಂಗಳೂರಿನಿಂದ ಜು.31ರಂದು ಮಧ್ಯಾಹ್ನ ಮಲ್ಪೆ […]

ರವಿವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲೇ ಹೆಚ್ಚು 410 ಕೊರೊನಾ ಸೋಂಕು ಪತ್ತೆ, 6 ಮಂದಿ ಸಾವು, ಉಡುಪಿ ಜಿಲ್ಲೆ 162

Sunday, August 1st, 2021
corona virus

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು ರಾಜ್ಯದಲ್ಲಿ ರವಿವಾರ ಪತ್ತೆಯಾದ ಕೇಸುಗಳ ಪಟ್ಟಿಯಲ್ಲಿ ದ.ಕ. ಜಿಲ್ಲೆಯಲ್ಲಿ ಅತಿಹೆಚ್ಚು (410) ಪಾಸಿಟಿವ್ ಪ್ರಕರಣ ವರದಿಯಾಗಿವೆ. ದ.ಕ. ಜಿಲ್ಲೆಯಲ್ಲಿ ರವಿವಾರ 410 ಮಂದಿಗೆ ಕೋವಿಡ್ ಸೋಂಕು ತಗುಲಿದೆ. ಇದೇ ವೇಳೆ 6 ಮಂದಿ ಸಾವನ್ನಪ್ಪಿದ್ದು, 264 ಮಂದಿ ಗುಣಮುಖರಾಗಿದ್ದಾರೆ. ಸದ್ಯ 2,943 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಇದುವರೆಗೆ 1,00,780 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 1,430 ಮಂದಿ ಸಾವನ್ನಪ್ಪಿದ್ದಾರೆ. 96,407 ಮಂದಿ ಗುಣಮುಖ ರಾಗಿದ್ದಾರೆ. ಒಟ್ಟು […]

ಮೈಸೂರಿನಿಂದ ಪ್ರವಾಸ ಬಂದಿದ್ದ ಯುವತಿ ಮಲ್ಪೆ ಬೀಚ್‌ನಲ್ಲಿ ನಾಪತ್ತೆ, ಮೂವರ ರಕ್ಷಣೆ

Sunday, August 1st, 2021
dejamma

ಮಲ್ಪೆ : ಮೈಸೂರಿನಿಂದ ಪ್ರವಾಸ ಬಂದಿದ್ದ ಯುವತಿಯೊಬ್ಬಳು ಮಲ್ಪೆ ಬೀಚ್‌ನಲ್ಲಿ ಆಡುತ್ತಿದ್ದ ವೇಳೆ ಸಮುದ್ರ ಪಾಲಾಗಿದ್ದು, ಮೂವರನ್ನು ಸ್ಥಳೀಯರು ರಕ್ಷಿಸಿದ ಘಟನೆ ರವಿವಾರ ನಡೆದಿದೆ. ಕೊಡಗು ಮೂಲದ ಮೈಸೂರು ನಿವಾಸಿ ದೇಚಮ್ಮ ಯು.ಜೆ.(20) ನಾಪತ್ತೆಯಾಗಿರುವ ಯುವತಿ. ಈಕೆಯ ಜೊತೆ ಇದ್ದ ಸ್ನೆಹಿತರಾದ ಮೈಸೂರು ವಿಜಯಪುರದ ಎಂ.ಯು.ಶೈನಿ(20), ನವ್ಯ ಮಂದಣ್ಣ (20), ನಿಖಿಲ್ ಗೌಡ (20) ಎಂಬವರನ್ನು ರಕ್ಷಿಸಲಾಗಿದೆ. ಇವರಲ್ಲಿ ತೀವ್ರ ಅಸ್ವಸ್ಥಗೊಂಡ ನಿಖಿಲ್ ಗೌಡ ಉಡುಪಿ ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ದಾಖಲಾಗಿದ್ದಾರೆ. ಇವರು  ಮಂಗಳೂರಿಗೆ ಬಂದಿದ್ದು ಮಂಗಳೂರಿನಿಂದ ಜು.31ರಂದು […]

ಒಂದು ಕೋಟಿ ರೂ.ಗಳಷ್ಟು ನಷ್ಟ, ಬೈಕಂಪಾಡಿಯ ಕ್ಯಾಶು ಪ್ಯಾಕ್ಟರಿ ಮಾಲಕ ನಾಪತ್ತೆ

Sunday, August 1st, 2021
Ramanjaneya

ಮಂಗಳೂರು : ಬೈಕ್‌ನಲ್ಲಿ ಮನೆ ನೋಡಿಕೊಂಡು ಬರುವುದಾಗಿ ಹೇಳಿ ಹೋದ ಬೈಕಂಪಾಡಿಯ ಗೇರುಬೀಜ ಕಾರ್ಖಾನೆಯೊಂದರ ಮಾಲಕ ಹಿಂತಿರುಗದೆ ನಾಪತ್ತೆಯಾದ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕಂಪಾಡಿಯ ಜೈ ಶ್ರೀ ರಾಮ ಲಕ್ಷ್ಮೀ ಕ್ಯಾಶುಸ್’ ಹೆಸರಿನ ಗೇರುಬೀಜ ಕಾರ್ಖಾನೆಯ ಮಾಲಕ ರಾಮಾಂಜನೇಯ ಡಿ. (41) ನಾಪತ್ತೆಯಾದವರು. ಇತ್ತೀಚೆಗೆ ಕಾರ್ಖಾನೆಯು ಸುಮಾರು ಒಂದು ಕೋಟಿ ರೂ.ಗಳಷ್ಟು ನಷ್ಟ ಹೊಂದಿದ್ದರಿಂದ ಬೇಸರ ಗೊಂಡಿದ್ದರು ಎನ್ನಲಾಗಿದೆ. ಜು.29ರಂದು ಅಪರಾಹ್ನ ಬೇರೊಂದು ಮನೆ ನೋಡಿಕೊಂಡು ಬರುವುದಾಗಿ ಹೇಳಿ ಬೈಕ್‌ನಲ್ಲಿ ಹೋದವರು ನಾಪತ್ತೆ ಯಾಗಿದ್ದಾರೆ ಎಂದು ಅವರ […]

ಕೋವಿಡ್ ಸೋಂಕು ನಿಯಂತ್ರಿಸಲು ಕಠಿಣಾತಿ ಕಠಿಣ ಕ್ರಮಕೈಗೊಳ್ಳಲು ಮುಖ್ಯಮಂತ್ರಿಗಳ ಸೂಚನೆ

Sunday, August 1st, 2021
Basavaraaja Bommai

ಮಂಗಳೂರು : ಕೋವಿಡ್-19 ಸೋಂಕು ನಿರ್ವಹಣೆಯಲ್ಲಿ ಜಿಲ್ಲಾಡಳಿತ ಕೈಗೊಂಡ ಉಪಯುಕ್ತ ಕ್ರಮಗಳಿಗೆ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರನ್ನು ಅಭಿನಂದಿಸಿದರು. ಕೋವಿಡ್‍ಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಅತ್ಯಂತ ಅಗತ್ಯವಿರುವ ಪ್ರಾಣವಾಯು ವೈದ್ಯಕೀಯ ಆಮ್ಲಜನಕದ 17 ಘಟಕಗಳು ಜಿಲ್ಲೆಯಲ್ಲಿ ಅನುಷ್ಠಾನವಾಗುತ್ತಿದ್ದು, ಅವುಗಳಲ್ಲಿ ಈಗಾಗಲೇ 8 ಆಮ್ಲಜನಕ ಘಟಕಗಳ ಅನುಷ್ಠಾನ ಕಾರ್ಯ ಪೂರ್ಣಗೊಂಡಿದೆ, ಉಳಿದ ಘಟಕಗಳನ್ನು ಮುಂದಿನ 2 ವಾರಗಳಲ್ಲಿ ಪೂರ್ತಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಯವರಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು ಡಿಸಿ ಡಾ.ರಾಜೇಂದ್ರ ಅವರ ಕೆಲಸಕ್ಕೆ ಅತೀವ […]