ಶ್ರೀ ಕೃಷ್ಣ ಮಠದಲ್ಲಿ ಶಯನೀ ಏಕಾದಶಿ ಪ್ರಯುಕ್ತ ಮುದ್ರಾಧಾರಣೆ

Tuesday, July 20th, 2021
Mudra Dharane

ಉಡುಪಿ : ಶ್ರೀ ಕೃಷ್ಣ ಮಠದಲ್ಲಿ ಶಯನೀ ಏಕಾದಶಿ ಪ್ರಯುಕ್ತ ಮುದ್ರಾಧಾರಣೆ ನಡೆಯಿತು. ಬೆಳಗ್ಗೆ ಮಠದ ಋತ್ವಿಜರು ಸುದರ್ಶನ ಹೋಮ ನಡೆಸಿ ನಂತರ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಮುದ್ರಾಧಾರಣೆ ಮಾಡಿಕೊಂಡು, ಪರ್ಯಾಯ ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರಿಗೆ, ಹಾಗೂ ಹಾಗೂ ಪಲಿಮಾರು ಕಿರಿಯ ಮಠಾಧೀಶ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರಿಗೆ ತಪ್ತ ಮುದ್ರಾಧಾರಣೆ ನಡೆಸಿದರು. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಪರ್ಯಾಯ ಮಠಾಧೀಶರು ರಾಜಾಂಗಣದಲ್ಲಿ ಭಕ್ತಾದಿಗಳಿಗೆ ಮುದ್ರಾಧಾರಣೆ ನಡೆಸಿದರು. ಪಲಿಮಾರು ಮಠಾಧೀಶ ಶ್ರೀ […]

ಮಂಗಳೂರು ವಿವಿ: ಆಗಸ್ಟ್‌ 2 ರಿಂದ ಪದವಿ, 5 ರಿಂದ ಸ್ನಾತಕೋತ್ತರ ಪರೀಕ್ಷೆ

Tuesday, July 20th, 2021
Mangalore VV

ಮಂಗಳೂರು: ಕೋವಿಡ್-19ರ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟು ನಡೆಸಲು ಬಾಕಿ ಇರುವ ಎಪ್ರಿಲ್‌ 2021 ರ 1, 3, 5 ಮತ್ತು 7 ನೇ ಸೆಮಿಸ್ಟರ್‌ ಪದವಿ ಪರೀಕ್ಷೆಗಳನ್ನು ಆಗಸ್ಟ್‌ 2, 2021 ರಿಂದ ನಡೆಸಲು ಮಂಗಳೂರು ವಿಶ್ವವಿದ್ಯಾನಿಲಯ ನಿರ್ಧರಿಸಿದೆ. ಇದೇ ವೇಳೆ 1 ಮತ್ತು 3 ನೇ ಸೆಮಿಸ್ಟರ್‌ನ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನೂ ಆಗಸ್ಟ್‌ 5, 2021 ರಿಂದ ನಡೆಸಲು ಉದ್ದೇಶಿಸಲಾಗಿದೆ. ಸರ್ಕಾರ ಸೂಚಿಸಿರುವ ಕೋವಿಡ್‌ ನಿಯಂತ್ರಣ ನಿಯಮಗಳ ಕಠಿಣ ಪಾಲನೆಯೊಂದಿಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮುಂಚಿತವಾಗಿ […]

ಬ್ರಹ್ಮಾವರ ವಿಶಾಲಾ ಗಾಣಿಗ ಕೊಲೆಯಲ್ಲಿ ಪತಿಯೇ ಪ್ರಮುಖ ಸೂತ್ರದಾರ

Tuesday, July 20th, 2021
Vishala Ganiga

ಉಡುಪಿ : ಬ್ರಹ್ಮಾವರ ಕುಮಾರಗೋಡು ಎಂಬಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿ ವಿಶಾಲಾ ಗಾಣಿಗ (35) ರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಕ್ಕಾಗಿ ಉಡುಪಿ ಪೊಲೀಸರು ಪತಿ ರಾಮಕೃಷ್ಣ ಗಾಣಿಗ (42) ಎಂಬಾತನನ್ನು ಬಂಧಿಸಿದ್ದಾರೆ. ರಾಮಕೃಷ್ಣ ಅವರು ಎನ್‌ಆರ್‌ಐ ಉದ್ಯಮಿಯ ವೈಯಕ್ತಿಕ ಸಹಾಯಕರಾಗಿದ್ದು ದುಬೈನಲ್ಲಿ ನೆಲೆಸಿದ್ದಾರೆ. ಅವರು ತಮ್ಮ ಹೆಂಡತಿಯ ಅಂತಿಮ ವಿಧಿಗಳನ್ನು ನಿರ್ವಹಿಸಲು ದುಬೈನಿಂದ ಬ್ರಹ್ಮಾವರಕ್ಕೆ ಬಂದಿದ್ದರು. ವಿಶಾಲಾ ಗಾಣಿಗ ಕೊಲೆಯಲ್ಲಿ ಪತಿ ರಾಮಕೃಷ್ಣ ಗಾಣಿಗ ಪ್ರಮುಖ ವ್ಯಕ್ತಿ ಎಂದು ತೋರಿಸಿದ ಪುರಾವೆಗಳನ್ನು ನಾವು ಪಡೆದಿದ್ದೇವೆ. ಆದ್ದರಿಂದ ಅವರನ್ನು […]

ಕ್ಯಾಂಟೀನ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಯುವತಿ ನಾಪ್ತತೆ

Tuesday, July 20th, 2021
namitha

ಉಡುಪಿ :  ಭಟ್ಕಳ ಮೂಲದ ಮುಂಡಳ್ಳಿ ನಿವಾಸಿ ನಮಿತಾ (22) ಎಂಬವರು ಜುಲೈ 16ರಿಂದ ನಾಪ್ತತೆಯಾಗಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮಿತಾ  ಮಣಿಪಾಲದ ಬೋಡಾ ಶೀರಾ ಕ್ಯಾಂಟೀನ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು. ಚಹರೆ: 135 ಸೆಂ.ಮೀ. ಎತ್ತರ, ಗೋಧಿ ಮೈಬಣ್ಣ, ಕೋಲುಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆ ಮೊ.ನಂ: 9480805448, 9480805475 ಅಥವಾ ಕಂಟ್ರೋಲ್ ರೂಂ ನಂ: 0820-2570328 ಅನ್ನು ಸಂಪರ್ಕಿಸುವಂತೆ ಮಣಿಪಾಲ ಪೊಲೀಸ್ […]

ಉತ್ತಮ ಗುಣಮಟ್ಟ ಹಾಗೂ ಆಕರ್ಷಕ ವಿನ್ಯಾಸದಿಂದ “ಸಿರಿ” ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ

Tuesday, July 20th, 2021
siri

ಧರ್ಮಸ್ಥಳ : ಮಹಿಳೆಯರು, ಮಹಿಳೆಯರಿಂದ ಹಾಗೂ ಮಹಿಳೆಯರಿಗಾಗಿ ವ್ಯವಹಾರ ನಡೆಸುವ ಧರ್ಮಸ್ಥಳ “ಸಿರಿ” ಗ್ರಾಮೋದ್ಯೋಗ ಸಂಸ್ಥೆ ಲಾಭ ರಹಿತ ಸಂಸ್ಥೆಯಾಗಿದ್ದು ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಕಾಯಕಲ್ಪ ನೀಡುತ್ತಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಸೋಮವಾರ ಧರ್ಮಸ್ಥಳದಲ್ಲಿ ಬ್ಯಾಂಕ್ ಆಫ್ ಬರೋಡಾ ವತಿಯಿಂದ ಶ್ರೀ ಧರ್ಮಸ್ಥಳ “ಸಿರಿ” ಗ್ರಾಮೋದ್ಯೋಗ ಸಂಸ್ಥೆಗೆ ಸಿರಿ ಉತ್ಪನ್ನಗಳನ್ನು ಮಾರಾಟ ಮಾಡಲು ಕೊಡುಗೆಯಾಗಿ “ಮಾರುತಿ ಇಕೊ” ವಾಹನ ಹಸ್ತಾಂತರ ಸಮಾರಂಭದಲ್ಲಿ ಮಾತನಾಡಿದರು. ಉತ್ತಮ ಗುಣಮಟ್ಟ ಹಾಗೂ ಆಕರ್ಷಕ ವಿನ್ಯಾಸದ […]

ರಾಜಕೀಯದ ದುರುದ್ಧೇಶದಿಂದ ರಾಜ್ಯಾಧ್ಯಕ್ಷರ ಧ್ವನಿ ಅನುಕರಿಸಿ ವೈರಲ್ ಮಾಡಿದ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ : ಶಾಸಕ ವೇದವ್ಯಾಸ್ ಕಾಮತ್

Tuesday, July 20th, 2021
Vedavyas Kamath

ಮಂಗಳೂರು  : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಘನತೆಗೆ ಕುತ್ತು ತರಲು ರಾಜಕೀಯ ಪ್ರೇರಿತ ಹಿತಾಸಕ್ತಿಗಳು ರಾಜ್ಯಾಧ್ಯಕ್ಷರ ಧ್ವನಿ ಅನುಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ತನಿಖೆಗೆ ಗೃಹ‌ ಸಚಿವರನ್ನು ಒತ್ತಾಯಿಸುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ವಿಚಾರಗಳ ಚರ್ಚೆಯಾದರೂ ಅದನ್ನು ಶಾಸಕರ ಬಳಿ ಮಾತನಾಡದೆ ಪಕ್ಷದ ಶಿಸ್ತಿಗೆ ಬದ್ಧವಾಗಿರುವ ನಮ್ಮ ರಾಜ್ಯಾಧ್ಯಕ್ಷರು ಸಾರ್ವಜನಿಕರಲ್ಲಿ ಈ ವಿಚಾರ ಚರ್ಚಿಸಲು ಸಾಧ್ಯವೇ ಇಲ್ಲ. […]

ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಮಹಾಸ್ವಾಮಿ ದೈವೈಕ್ಯ

Monday, July 19th, 2021
Vidyadiraja-Swamiji

ಉಡುಪಿ  : ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಮಹಾಸ್ವಾಮಿಗಳು ದೈವೈಕ್ಯರಾಗಿದ್ದಾರೆ. ಗೋವಾದಲ್ಲಿರಯವ ಶ್ರೀ ಮಠದಲ್ಲಿ ಅವರು ಹರಿಪಾದ ಸೇರಿದ ಬಗ್ಗೆ ಮಠದ ಮೂಲಗಳು ತಿಳಿಸಿವೆ. ಗೌಡಸಾರಸ್ವತ ಬ್ರಾಹ್ಮಣ ಸಮಾಜದ ಗೋಕರ್ಣ ಪರ್ತಗಾಳಿ ಮಠದ ಶ್ರೀವಿದ್ಯಾಧಿರಾಜತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಸೋಮವಾರ ಹರಿಪಾದ ಸೇರಿದರು. ಸೋಮವಾರ ಮಧ್ಯಾಹ್ನ ಅವರು ಇಹಲೋಕ ತ್ಯಜಿಸಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಗಂಗೊಳ್ಳಿಯ ಸೇನಾಪುರ ಆಚಾರ್ಯ ಮನೆತನದವರಾದ ಅವರು ಗಂಗೊಳ್ಳಿಯ ಶ್ರೀ ವೇಂಕಟರಮಣ […]

ಪತ್ರಕರ್ತ ಡಾ.ಸಂದೀಪ್ ವಾಗ್ಲೆ ಅವರಿಗೆ ‘ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ

Monday, July 19th, 2021
Sandeep Wagle

ಮಂಗಳೂರು: ಸೌಹಾರ್ದತೆ ಮತ್ತು ಮಾನವೀಯ ಮೌಲ್ಯವನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಕನ್ನಡ ಪ್ರಭ ದಿನಪತ್ರಿಕೆಯ ವರದಿಗಾರ ಡಾ.ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ. ಕನ್ನಡ ಪ್ರಭ ದಿನ ಪತ್ರಿಕೆಯಲ್ಲಿ 2020, ನವಂಬರ್ 25ರಂದು ಪ್ರಕಟಗೊಂಡ ಸಂದೀಪ್ ವಾಗ್ಲೆ ಅವರ ವರದಿ ‘ಕೋಮು ಸೌಹಾರ್ದತೆಗೆ ಸಾಕ್ಷಿ-ಸೇತುವಾದ ಯಕ್ಷಗಾನ’ ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ. 5,001 ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತವೆ ಎಂದು ದ.ಕ.ಜಿಲ್ಲಾ ಕಾರ್ಯನಿರತ […]

ಎರೆಡಲ ಪನೆರೆ ಪೋವೊಡ್ಚಿ, ಪೊಸ ಟೀಮು ಮಲ್ಪುವ : ನಳಿನ್ ಕುಮಾರ್ ಕಟೀಲ್ ಆಡಿಯೋ ವೈರಲ್

Monday, July 19th, 2021
nalin kumar kateel

ಮಂಗಳೂರು  :  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಳಿನ್ ಕುಮಾರ್ ಅವರು, ” ಆ ಧ್ವನಿ ನನ್ನದಲ್ಲ, ಈ ಬಗ್ಗೆ ತನಿಖೆ ನಡೆಸಲು ಈಗಾಗಲೇ ಮುಖ್ಯಮಂತ್ರಿಗೆ ಪತ್ರ ಬರೆದಿದ್ದೇನೆ ಎಂದಿದ್ದಾರೆ. ಆಡಿಯೋದಲ್ಲಿ ತುಳುವಿನಲ್ಲಿ ‘ಎರೆಡಲ ಪನೆರೆ ಪೋವೊಡ್ಚಿ.  ಈಶ್ವರಪ್ಪ , ಜಗದೀಶ್ ಶೆಟ್ಟರ್ ಟೀಮುನೇ ದೆಪ್ಪುವ, ಪೊಸ ಟೀಮು ಮಲ್ಪುವ, ಇತ್ತೇ ಪುರ ನಮ್ಮ ಕೈಟ್ ಉಂಡು, ಮೂಜಿ ಪುದರ್ ವುಂಡು ಎಂದು […]

6 ಮಂದಿಗೆ ಮಿದುಳು ನಿಷ್ಕ್ರಿಯಗೊಂಡ ಮಹಿಳೆಯ ಅಂಗಾಂಗ ದಾನ

Monday, July 19th, 2021
linda

ಮಂಗಳೂರು: ನಗರದ ಫಾದರ್ ಮುಲ್ಲರ್ಸ್‌ ಆಸ್ಪತ್ರೆಯಲ್ಲಿ ಮಿದುಳು ನಿಷ್ಕ್ರಿಯಗೊಂಡ ಮಹಿಳೆಯ ಅಂಗಾಂಗ ದಾನ ನಡೆಸಲಾಗಿದ್ದು, ಈ ಮೂಲಕ 6 ಮಂದಿಗೆ ಜೀವದಾನ ಮಾಡಿದಂತಾಗಿದೆ. ಕಿನ್ನಿಗೋಳಿಯ ಅವಿವಾಹಿತೆ ಲಿಂಡಾ ಶಾರೆನ್ ಡಿಸೋಜ(41) ಅವರ ಮೆದುಳು ನಿಷ್ಕ್ರಿಯಗೊಂಡ ಕಾರಣ ದಾನ ಮಾಡಲು ಆಕೆಯ ಸೋದರರು ನಿರ್ಧರಿಸಿದ್ದರು. ಭಾನುವಾರ ಸಂಜೆ ಈ ಪ್ರಕ್ರಿಯೆ ಪೂರ್ಣಗೊಂಡಿತು. ಲಿಂಡಾ ಅವರ ಹೃದಯ ಮತ್ತು ಶ್ವಾಸಕೋಶ ಚೆನ್ನೈನ ಎಂಜಿಎಂ ಆಸ್ಪತ್ರೆಗೆ, ಲಿವರ್(ಯಕೃತ್ತು) ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ, ಎರಡು ಕಿಡ್ನಿಗಳಲ್ಲಿ ಒಂದು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಹಾಗೂ […]