ಷರತ್ತಿಗೊಳಪಟ್ಟು ನಾಳೆಯಿಂದ ಕಾಸರಗೋಡು ಬಸ್ ಸಂಚಾರ ಆರಂಭ

Sunday, July 18th, 2021
KV Rajendra

ಮಂಗಳೂರು : ಜಿಲ್ಲೆಯಲ್ಲಿ ಕೋವಿಡ್-19 ಆನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದು, ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹೆಚ್ಚಿನ ಜಾಗರೂಕತೆಯನ್ನು ಅನುಸರಿಸುವ ಅನಿವಾರ್ಯವಿದ್ದು, ಮುಂಬರುವ ದಿನಗಳಲ್ಲಿ ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ರಾಜ್ಯ ಸರ್ಕಾರವು ಕೇರಳ ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ, ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕಲಸ, ವ್ಯಾಪಾರ ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ಸಂಖ್ಯೆಯಲ್ಲಿ ದಿನನಿತ್ಯ ವಿದ್ಯಾರ್ಥಿಗಳು, […]

ಸಂಚರಿಸುತ್ತಿದ್ದ ರೈಲಿಗೆ ಗುಡ್ಡ ಕುಸಿತ, ಮಂಗಳೂರು-ಬೆಂಗಳೂರು ಪ್ರಯಾಣಿಕ ರೈಲಿಗೆ ಹಾನಿ

Sunday, July 18th, 2021
Train

ಪುತ್ತೂರು : ಸಂಚರಿಸುತ್ತಿದ್ದ ರೈಲಿಗೆ ಪುತ್ತೂರು ಕಬಕ -ಸುಬ್ರಹ್ಮಣ್ಯ ರೈಲ್ವೇ ಹಳಿಯ ನಡುವೆ ವೀರಮಂಗಲ ಗಡಿಪಿಲ ಸಮೀಪದಲ್ಲಿ ಧರೆ ಕುಸಿದು ರೈಲಿನ ಗಾರ್ಡ್‌ಗೆ ಹಾನಿಯಾಗಿ ರೈಲು ಸಂಚಾರ  ಸ್ಥಗಿತಗೊಂಡಿದೆ. ಮಂಗಳೂರು-ಬೆಂಗಳೂರು ಪ್ರಯಾಣಿಕ ರೈಲು ಈ ಹಳಿಯಲ್ಲಿ ಹಾದು ಹೋಗುತ್ತಿದ್ದಾಗ ಏಕಾ-ಏಕಿ ಧರೆ ಕುಸಿದಿದ್ದು, ಮಣ್ಣು ರೈಲಿನ ಮುಂಭಾಗಕ್ಕೆ ಕುಸಿದಿದ್ದು ರೈಲಿನ ಗಾರ್ಡ್ ಗೆ ಹಾನಿಯಾಗಿದೆ. ರೈಲು ಹಳಿಯಲ್ಲಿ ಬಾಕಿಯಾಗಿದ್ದು, ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮಣ್ಣು ತೆರವು ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ದ.ಕ. ಜಿಲ್ಲೆಯಲ್ಲಿ ಜುಲೈ 19 ರಂದು ರೆಡ್ ಅಲರ್ಟ್, 20ರಿಂದ 22ರವರೆಗೆ ಆರೆಂಜ್ ಅಲರ್ಟ್

Sunday, July 18th, 2021
Mangalore Rain

ಮಂಗಳೂರು :  ಭಾರತೀಯ ಹವಾಮಾನ ಇಲಾಖೆಯು ಜುಲೈ 19 ರಂದು  ದ.ಕ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮತ್ತು ಜು.20ರಿಂದ 22ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಬಂಗಾಳ ಕೊಲ್ಲಿಯ ಉಪ ಸಾಗರದಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ರವಿವಾರವೂ ದ.ಕ. ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿದೆ. ಮುಂಜಾನೆಯಿಂದಲೇ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಬಾರಿ ಮಳೆ ಇರಲಿದೆ  ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕ ಹಾಗೂ ವಿಜ್ಞಾನಿ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪ್ರವೇಶ ಪತ್ರದ ಮಾಹಿತಿಗೆ ಸಹಾಯವಾಣಿ

Sunday, July 18th, 2021
sslc Exam

ಮಂಗಳೂರು : 2021ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಜುಲೈ 19 ಮತ್ತು 22 ರಂದು ಜಿಲ್ಲೆಯ 179 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 32,657 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪ್ರವೇಶ ಪತ್ರಗಳು ಆಯಾ ಶಾಲಾ ಲಾಗಿನ್‌ನಲ್ಲಿ ಲಭ್ಯವಿದ್ದು ಶಾಲಾ ಮುಖ್ಯಸ್ಥರ ಮೂಲಕ ವಿದ್ಯಾರ್ಥಿಗಳಿಗೆ ಈಗಾಗಲೇ ಪ್ರವೇಶಪತ್ರಗಳನ್ನು ವಿತರಿಸಲಾಗಿದೆ. ಯಾವುದಾದರೂ ವಿದ್ಯಾರ್ಥಿಗಳಿಗೆ ಜಿಲ್ಲೆಯ ಯಾವುದೇ ಪ್ರೌಢಶಾಲೆಗಳು ಪ್ರವೇಶಪತ್ರವನ್ನು ಸಕಾಲದಲ್ಲಿ ವಿತರಿಸದೇ ಇದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ದೂರವಾಣಿಯಲ್ಲಿ ಸಂಪರ್ಕಿಸಿ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಡಳಿತ ಉಪನಿರ್ದೇಶಕರ ಮೊ.ಸಂ: 9448999337, […]

ಪತ್ರಕರ್ತರ ಸಮಾಜಮುಖಿ ಕಾರ್ಯ ಶ್ಲಾಘನೀಯ: ಪ್ರಭಾಕರ ಶರ್ಮ

Sunday, July 18th, 2021
Prabhakara Sharma

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಈ ಹಿಂದೆ ದ.ಕ. ಜಿಲ್ಲಾ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ ಬೆಳ್ತಂಗಡಿ ತಾಲೂಕಿನ ಕುತ್ಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಶನಿವಾರ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ನೋಟ್ ಬುಕ್ ವಿತರಿಸಿ ಮಾತನಾಡಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಎಸ್.ಎ.ಪ್ರಭಾಕರ ಶರ್ಮ, ಪತ್ರಕರ್ತರ […]

ವಿವಿ ಕಾಲೇಜು: ನ್ಯಾಕ್‌ ವರದಿ ಕುರಿತ ಕಾರ್ಯಾಗಾರ ಸಂಪನ್ನ

Saturday, July 17th, 2021
naik

ಮಂಗಳೂರು: ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ), ರಾಷ್ಟ್ರೀಯ ಮೌಲ್ಯೀಕರಣ ಮತ್ತು ಮಾನ್ಯತಾ ಪರಿಷತ್ತು (ನ್ಯಾಕ್‌) ಗೆ ಸಲ್ಲಿಸಬೇಕಾದ ಸ್ವ-ಅಧ್ಯಯನ ವರದಿ ಕುರಿತಂತೆ ಪ್ರಾಧ್ಯಾಪಕರಿಗಾಗಿ ಒಂದು ದಿನದ ಕಾರ್ಯಾಗಾರವನ್ನು ರವೀಂದ್ರ ಕಲಾಭವನದಲ್ಲಿ ಶುಕ್ರವಾರ ಆಯೋಜಿಸಿತ್ತು. ಪ್ರಾಂಶುಪಾಲೆ ಡಾ. ಅನಸೂಯ ರೈ ಕಾರ್ಯಕ್ರಮ ಉದ್ಘಾಟಿಸಿ, ಕಾಲೇಜು ನ್ಯಾಕ್‌ ಮಾನ್ಯತೆ ಪಡೆಯಲು ಶ್ರಮಿಸಿದವರನ್ನು ನೆನಪಿಸಿಕೊಂಡರಲ್ಲದೆ, ಪಡೆದಿರುವ ʼಎʼ ಶ್ರೇಣಿಯನ್ನು ಉತ್ತಮಪಡಿಸಿಕೊಳ್ಳುವ ಪ್ರಯತ್ನ ನಡೆದಿದೆ, ಎಂದರು. ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಕಚೇರಿಯ ನ್ಯಾಕ್‌ ವಿಶೇಷಾಧಿಕಾರಿಗಳಾದ […]

ಕೆ.ಟಿ. ಚಂದ್ರಶೇಖರಯ್ಯ ಅವರಿಗೆ ‘ಬೆಸ್ಟ್ ಇಂಜಿನಿಯರ್‌’ ಪ್ರಶಸ್ತಿ ಪ್ರದಾನ

Saturday, July 17th, 2021
mpmla-news

ಮಂಗಳೂರು : ಎಂಪಿಎಂಎಲ್ಎ ನ್ಯೂಸ್ ಪತ್ರಿಕೆಯ 12ನೇ ವರ್ಷದ ಸೌಹಾರ್ದ ಸಂಗಮ ಕಾರ್ಯಕ್ರಮದ ಅಂಗವಾಗಿ ನೀಡಲಾಗುವ “ಬೆಸ್ಟ್ ಇಂಜಿನಿಯರ್’ ಅವಾರ್ಡ್” ಪ್ರಶಸ್ತಿಯನ್ನು ಮಂಗಳೂರಿನ ಲೋಕೋಪಯೋಗಿ ಇಲಾಖೆಯ ನಂ. 1 ಉಪವಿಭಾಗದ ಸಹಾಯಕ ಕಾರ‍್ಯ ಪಾಲಕ ಇಂಜಿನಿಯರ್ ಕೆ.ಟಿ. ಚಂದ್ರಶೇಖರಯ್ಯ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ|  ಪಿ.ಎಸ್‌. ಯಡಪಡಿತ್ತಾಯರವರು ಪ್ರದಾನ ಮಾಡಿದರು. ಈ ಸಂದರ್ಭ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ|  ಪಿ.ಎಸ್‌. ಯಡಪಡಿತ್ತಾಯರವರು ಮಾತನಾಡುತ್ತಾ, MPMLAS NEWS ಪತ್ರಿಕೆ ಕಳೆದ ಹಲವಾರು ವರ್ಷಗಳಿಂದ ಸೌಹಾರ್ದ ಸಂಗಮ ಕಾರ್ಯಕ್ರಮಗಳನ್ನು […]

ಮಂಗಳೂರು : ಎಪಿಎಂಸಿ ಯಾರ್ಡ್‌ನ ತಡೆಗೋಡೆ ಕುಸಿದು 13ಕ್ಕೂ ಅಧಿಕ ವಾಹನಗಳು ಜಖಂ

Saturday, July 17th, 2021
APMC-compound

ಮಂಗಳೂರು :  ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಶಿಥಿಲಗೊಂಡ ಅವರಗೋಡೆಯೊಂದು ಬಿದ್ದು ಸುಮಾರು ಹದಿಮೂರು ದ್ವಿಚಕ್ರವಾಹನಗಳು ಜಖಂ ಗೊಂಡ ಘಟನೆ ಶನಿವಾರ ಸಂಜೆ ಮಂಗಳೂರು ಹಳೆಯ ಬಂದರ್‌ ನಲ್ಲಿ ನಡೆದಿದೆ. ಬಂದರ್‌ನ ನಲಪಾಡ್ ಕುನಿಲ್ ಟವರ್ಸ್‌ಗೆ ಹೊಂದಿಕೊಂಡಂತಿರುವ ಎಪಿಎಂಸಿ ಯಾರ್ಡ್‌ನ ತಡೆಗೋಡೆ ಕುಸಿದ ಪರಿಣಾಮ  13ಕ್ಕೂ ಅಧಿಕ ವಾಹನಗಳು ಜಖಂಗೊಂಡಿದ್ದು ಯಾವುದೇ ಅಪಾಯ ಸಂಭವಿಸಿಲ್ಲ. ಅಪಾರ್ಟ್‌ಮೆಂಟ್‌ನಲ್ಲಿ ನೂರಕ್ಕೂ ಹೆಚ್ಚು ಫ್ಲಾಟ್‌ಗಳಿದ್ದು, ಬಹುತೇಕ ಮಕ್ಕಳು ಕಟ್ಟಡದ ಆವರಣದಲ್ಲಿ ಆಟ ಆಡುವಾಡುತ್ತಾರೆ, ಅದೃಷ್ಟವಶಾತ್ ಶನಿವಾರ ಸಂಜೆ ವೇಳೆ ಮಳೆ ಬರುತ್ತಿದ್ದರಿಂದ ಮಕ್ಕಳು ಹೊರಬಂದಿಲ್ಲ. […]

ಮಂಗಳೂರಿನಲ್ಲಿ ರ್‍ಯಾಗಿಂಗ್ ನಡೆಸಲು ಯಾವುದೇ ರೀತಿಯ ಅವಕಾಶಗಳನ್ನು ಕೊಡುವುದಿಲ್ಲ : ಪೊಲೀಸ್ ಆಯುಕ್ತ

Saturday, July 17th, 2021
Raging

ಮಂಗಳೂರು :  ನಗರದ ಇಂದಿರಾ ನರ್ಸಿಂಗ್ ಕಾಲೇಜಿನಲ್ಲಿ ಜೂನಿಯರ್ ವಿದ್ಯಾರ್ಥಿಯೊರ್ವನ ಮೇಲೆ ರ್‍ಯಾಗಿಂಗ್ ನಡೆಸಿದ್ದು, ಈ ಆರೋಪದ ಮೇಲೆ ಶುಕ್ರವಾರ ನ 6 ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ. ಈ ಕುರಿತು ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ನಗರದಲ್ಲಿ  2 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಬೇರೆ ಬೇರೆ ಊರುಗಳಿಂದ ಬಂದು ಶಿಕ್ಷಣ ಪಡೆಯುತ್ತಿದ್ದಾರೆ ಹಾಗಾಗಿ ಇಲ್ಲಿ ರ್‍ಯಾಗಿಂಗ್ ನಡೆಸಲು ಯಾವುದೇ ರೀತಿಯ ಅವಕಾಶಗಳನ್ನು ಕೊಡುವುದಿಲ್ಲ ಎಂದು ಹೇಳಿದ್ದಾರೆ. ಜು.14 ರ ರಾತ್ರಿ […]

ಮುದ್ರಾಡಿ ಕಾಂಗ್ರೆಸ್ ಪ್ರಮುಖರು ಬಿಜೆಪಿ ಸೇರ್ಪಡೆ

Friday, July 16th, 2021
Karkala

ಕಾರ್ಕಳ : ಕಳೆದ ಗ್ರಾಮ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ  ವಿವಿಧ ಪಕ್ಷಗಳಿಂದ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಳ್ಳುವವರ ಸರದಿ ಮುಂದುವರಿದಿದ್ದು ಮುದ್ರಾಡಿ ಗ್ರಾಮ ಪಂಚಾಯತ್‌ನ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ 4 ಬಾರಿ ಆಯ್ಕೆಯಾಗಿದ್ದ ಸಂತೋಷ್ ಕುಮಾರ್ ಶೆಟ್ಟಿ ಮತ್ತು ಕಳೆದ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಯಶೋಧ ಶೆಟ್ಟಿ ರವರು ಶಾಸಕರ ಕಛೇರಿ ವಿಕಾಸದಲ್ಲಿ ಶಾಸಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಮುದ್ರಾಡಿಯಲ್ಲಿ ಕಾಂಗ್ರೆಸ್‌ನವರ ದಬ್ಬಾಳಿಕೆಯನ್ನು ವಿರೋದಿಸಿ ಮತ್ತು ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತು, ಶಾಸಕರ […]