ಬಿರುಕು ಬಿಟ್ಟ ಮರವೂರು ಸೇತುವೆ ದುರಸ್ತಿ ಜುಲೈಯಲ್ಲಿ ಪೂರ್ಣ

Friday, June 25th, 2021
Maravooru Bridge

ಮಂಗಳೂರು : ಇತ್ತೀಚೆಗೆ ಬಾರಿ ಮಳೆಯಿಂದ ಬಿರುಕು ಬಿಟ್ಟಿರುವ ಮರವೂರು ಸೇತುವೆಯ ದುರಸ್ತಿ ಕಾರ್ಯವನ್ನು ಮೂಲ್ಕಿ-ಮೂಡುಬಿದಿರೆ ಶಾಸಕ ಉಮಾನಾಥ್‌ ಕೋಟ್ಯಾನ್‌‌ ಅವರು ಜೂನ್‌ 24ರ ಗುರುವಾರ ಪರಿಶೀಲಿಸಿದರು. ದುರಸ್ತಿ  ಕೆಲಸ ಭರದಿಂದ ನಡೆಯುತ್ತಿದ್ದು, ಗುತ್ತಿಗೆದಾರರು ಹಾಗೂ ಎಂಜಿನಿಯರ್‌‌ ಜುಲೈಯಲ್ಲಿ ಕೊನೆಯಲ್ಲಿ ಪೂರ್ಣಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸೇತುವೆಯ ದುರಸ್ತಿಯಾದ ಕೂಡಲೇ ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗುವುದು. ಪಕ್ಕದಲ್ಲಿ ಹೊಸ ಸೇತುವೆಯ ಕಾಮಗಾರಿಯೂ ನಡೆಯುತ್ತಿದ್ದು, ಪೂರ್ಣವಾದ ಬಳಿಕ ವಾಹನ ಸಂಚಾರಕ್ಕೆ ಮುಕ್ತಗೊಳಿಸಿ, ಹಳೆಯ ಸೇತುವೆಯ ಸಂಪೂರ್ಣ ದುರಸ್ತಿ ಮಾಡುವ ಯೋಜನೆ ಇದೆ” ಎಂದು […]

ಕಾರುಗಳ ಮುಖಾಮುಖಿ ಢಿಕ್ಕಿ, ಇಬ್ಬರಿಗೆ ಗಂಭೀರ ಗಾಯ

Friday, June 25th, 2021
car-accident

ಮಂಗಳೂರು : ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಇಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ-ಕಡಬ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಕುಂಡಾಜೆ ಸೇತುವೆಯಲ್ಲಿ ಜೂನ್‌‌ 25ರ ಶುಕ್ರವಾರ ನಡೆದಿದೆ. ಬೆಲೆನೋ ಕಾರು ಆಲಂಕಾರು ಭಾಗದಿಂದ ಕೊಯಿಲ ಕಡೆಗೆ ಹೋಗುತ್ತಿದ್ದು, ಉಪ್ಪಿನಂಗಡಿ ಕಡೆಯಿಂದ ಕಡಬದ ಕಡೆಗೆ ವೇಗವಾಗಿ ಬರುತ್ತಿದ್ದ ಆಲ್ಟೋ ಕಾರು ಢಿಕ್ಕಿಯಾಗಿ ಜಖಂ ಗೊಂಡಿದೆ. ಘಟನೆಯ ಪರಿಣಾಮ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕಡಬ ಪೊಲೀಸರು ಪರಿಶೀಲನೆ […]

ವಾರಾಂತ್ಯದ ಕರ್ಫ್ಯೂ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿ: ಡಾ.ರಾಜೇಂದ್ರ ಕೆ.ವಿ

Thursday, June 24th, 2021
KV Rajendra

ಮಂಗಳೂರು : ಕೊರೋನ ನಿಯಂತ್ರಣಕ್ಕೆ ವಾರಾಂತ್ಯದ  ಕರ್ಫ್ಯೂ ನಲ್ಲಿ ಸಂಪೂರ್ಣ ಲಾಕ್‍ಡೌನ್ ಇದ್ದು ಪರಿಣಾಮಕಾರಿಯಾಗಿ ಅನುಷ್ಟಾನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಸೂಚನೆ ನೀಡಿದರು. ಅವರು ಗುರುವಾರ  ತಮ್ಮ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಹಾಲ್‍ನಲ್ಲಿ ತಾಲೂಕುಗಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರ್‍ಗಳು, ತಾಲೂಕು ಆರೋಗ್ಯಾಧಿಕಾರಿಗಳ ಜೊತೆಗೆ ಕೊರೋನಾ ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜೂನ್ 25ರ ಶುಕ್ರವಾರ ಸಂಜೆ 7ರಿಂದ ಜೂನ್ 28ರ ಸೋಮವಾರ ಬೆಳಗ್ಗೆ 7ರವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ […]

ಮಂಗಳೂರು ವಕೀಲರ ಸಂಘದಿಂದ ಬೃಹತ್ ಲಸಿಕಾ ಅಭಿಯಾನ: 500ಕ್ಕೂ ಹೆಚ್ಚು ಮಂದಿಗೆ ವ್ಯಾಕ್ಸೀನ್

Thursday, June 24th, 2021
Advocates-Vaccination

ಮಂಗಳೂರು: ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಮಂಗಳೂರು ವಕೀಲರ ಸಂಘದಿಂದ ಇಂದು ಬೃಹತ್ ಲಸಿಕಾ ಅಭಿಯಾನ ನಡೆಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶ್ರೀ ಮುರಳೀಧರ ಪೈ ಅವರ ಮಾರ್ಗದರ್ಶನದಲ್ಲಿ ಬೃಹತ್ ಲಸಿಕಾ ಅಭಿಯಾನ ಯಶಸ್ವಿಯಾಗಿ ನಡೆಯಿತು. ಮಂಗಳೂರು ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ನಾಲ್ಕನೇ ಅಭಿಯಾನ ಇದಾಗಿದ್ದು, ದೊಡ್ಡ ಸಂಖ್ಯೆಯಲ್ಲಿ ಫಲಾನುಭವಿಗಳು ಲಸಿಕೆ ಪಡೆದುಕೊಂಡರು. 18 ವಯಸ್ಸಿನ ಮೇಲ್ಪಟ್ಟ ವಕೀಲರಿಗೆ, 45 ವರ್ಷ ಮೇಲ್ಪಟ್ಟ ವಕೀಲರಿಗೆ ಇದುವರೆಗೆ ಲಸಿಕಾ ಅಭಿಯಾನ ಯಶಸ್ವಿಯಾಗಿ ನಡೆದಿತ್ತು. […]

ಬಸ್ಸಿನಲ್ಲಿರುವ ಸೀಟಿನ ಅರ್ಧದಷ್ಟು ಪ್ರಯಾಣಿಕರನ್ನು ಕರೆದುಕೊಂಡು ಹೋದರೆ ಲಾಭವಿಲ್ಲ : ಖಾಸಗಿ ಬಸ್ಸು ಮಾಲಕರು

Thursday, June 24th, 2021
dilraj-Alva

ಮಂಗಳೂರು : ಸರ್ಕಾರಿ ಬಸ್ಸುಗಳು ರಸ್ತೆಗಿಳಿದರೂ, ಖಾಸಗಿ ಬಸ್ ಗಳು  ಮಾತ್ರ ಇನ್ನು ರಸ್ತೆಗಿಳಿದಿಲ್ಲ. ಬಸ್ಸಿನಲ್ಲಿರುವ ಸೀಟಿನ ಅರ್ಧದಷ್ಟು ಪ್ರಯಾಣಿಕರನ್ನು ಕರೆದುಕೊಂಡು ಹೋದರೆ  ಬಸ್ ಮಾಲಕರಿಗೆ ಪೂರೈಸುವುದಿಲ್ಲ ಎಂದು ಖಾಸಗಿ ಬಸ್ಸು ಮಾಲಕರು ಅಭಿಪ್ರಾಯಪಟ್ಟಿದ್ದಾರೆ. ಸರಕಾರದ ಮಾರ್ಗಸೂಚಿಯನ್ನು ಯಥಾವತ್ತಾಗಿ ಪಾಲಿಸಲು ಸಾಧ್ಯವಿಲ್ಲ. ಬಸ್ಸಿನಲ್ಲಿರುವ ಸೀಟಿನ ಅರ್ಧದಷ್ಟು ಪ್ರಯಾಣಿಕರನ್ನು ಕರೆದುಕೊಂಡು ಹೋದರೆ ನಮಗೆ ಯಾವುದೇ ಆದಾಯ ಲಭಿಸದು. ಈಗಾಗಲೆ ಡೀಸೆಲ್ ಬೆಲೆ ಏರಿಕೆಯಾಗಿದೆ. ಪ್ರಯಾಣ ದರ ಹೆಚ್ಚಿಸುವಂತೆ ಕೇಳುವುದು ಕೂಡ ಸದ್ಯದ ಸ್ಥಿತಿಯಲ್ಲಿ ಸಮಂಜಸವಲ್ಲ. ನಾವು ಕೆಲವು ಬೇಡಿಕೆಗಳನ್ನು ಸರಕಾರದ ಮುಂದಿಟ್ಟಿದ್ದೆವು. […]

ಸೋಮೇಶ್ವರ ಕಡಲ ಕಿನಾರೆಯ ರುದ್ರಬಂಡೆ ಯಿಂದ ಹಾರಿ ಇಂಜಿನಿಯರಿಂಗ್ ಆತ್ಮಹತ್ಯೆ

Thursday, June 24th, 2021
Pawan-Bhat

ಉಳ್ಳಾಲ :  ಸೋಮೇಶ್ವರ ಕಡಲ ಕಿನಾರೆಯ ರುದ್ರಬಂಡೆ ಯಿಂದ ಹಾರಿ ಇಂಜಿನಿಯರಿಂಗ್ ಪದವಿ ಮುಗಿಸಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸೋಮೇಶ್ವರ ಪುರಸಭಾ ಕಚೇರಿ ಬಳಿಯ ನಿವಾಸಿ ಪವನ್ ಭಟ್ (30) ಆತ್ಮಹತ್ಯೆಗೈದ ಯುವಕ. ಗಣೇಶ್ ಪ್ರಸನ್ನ ಮತ್ತು ರಾಜೇಶ್ವರಿ ದಂಪತಿಯ ಹಿರಿಯ ಮಗನಾದ ಪವನ್ ಮೈಸೂರಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮುಗಿಸಿದ್ದ ಎನ್ನಲಾಗಿದೆ. ಮೈಸೂರಿನಿಂದ ಬಂದ ಬಳಿಕ ನಿತ್ಯವೂ ಸೋಮೇಶ್ವರ ದೇವಸ್ಥಾನಕ್ಕೆ ಪವನ್ ಬಂದು ಹೋಗುತ್ತಿದ್ದರೆನ್ನಲಾಗಿದೆ. ಬುಧವಾರ ಸಂಜೆ 4.30ರ ಹೊತ್ತಿಗೆ ಸಮುದ್ರ ಕಿನಾರೆಗೆ ಬಂದಿದ್ದ ಪವನ್, ರುದ್ರಪಾದೆಯ […]

ಪತ್ರಕರ್ತರಿಗೆ, ಕುಟುಂಬ ಸದಸ್ಯರಿಗೆ ಲಸಿಕಾ ಕಾರ್ಯಕ್ರಮ

Wednesday, June 23rd, 2021
press-vacination

ಮಂಗಳೂರು  : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾಡಳಿತದ ವತಿಯಿಂದ ಪತ್ರಕರ್ತರಿಗೆ ಮತ್ತು ಪತ್ರಕರ್ತರ ಕುಟುಂಬ ಸದಸ್ಯರಿಗೆ ಕೋವಿಶಿಲ್ಡ್ ಲಸಿಕೆ ನೀಡುವ ಶಿಬಿರ ಬುಧವಾರ ಉರ್ವದ ಪತ್ರಿಕಾ ಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಲಸಿಕಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಕೋವಿಡ್ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ಸಲುವಾಗಿ ಎಲ್ಲರೂ ಕೋವಿಡ್ ನಿರೋಧಕ ಲಸಿಕೆಯನ್ನು ಪಡೆದುಕೊಳ್ಳಬೇಕು. ಲಸಿಕೆ ಉತ್ಪಾದನೆಯಾಗಿ ಹಂತ ಹಂತವಾಗಿ ಪೂರೈಕೆಯಾಗುತ್ತಿರುವ ಕಾರಣ 45 ವರ್ಷಕ್ಕಿಂತ […]

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಶ್ಯಾಮ್ ಪ್ರಸಾದ್ ಮುಖರ್ಜಿ ಸಂಸ್ಮರಣೆ

Wednesday, June 23rd, 2021
Balidan-diwas

ಮಂಗಳೂರು : ಜನ ಸಂಘದ ಸಂಸ್ಥಾಪಕ ರಾದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ತಿಥಿಯ ಕಾರ್ಯಕ್ರಮವು ಇಂದು ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ವೈಶ್ಯ ಎಜುಕೇಷನ್ ಸೊಸೈಟಿ ಸಭಾಂಗಣದಲ್ಲಿ ಮಂಡಲದ ಅಧ್ಯಕ್ಷರಾದ ಶ್ರೀ ವಿಜಯ ಕುಮಾರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್ ಅವರ ಉಪಸ್ಥಿತಿಯಲ್ಲಿ ಜರಗಿತು. ಮೂಡ ಅಧ್ಯಕ್ಷರಾದ ರವಿ ಶಂಕರ್ ಮಿಜಾರ್ ಅವರು ಶ್ರೀ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ […]

ಅಪ್ರಾಪ್ತ ಮಗನನ್ನು ಕಡಿದು ಕೊಲೆಗೈದು, ನೇಣು ಹಾಕಿಕೊಂಡು ಆತ್ಮ ಹತ್ಯೆ ಮಾಡಿಕೊಂಡ ತಂದೆ

Wednesday, June 23rd, 2021
Sathwik

ಪುಂಜಾಲಕಟ್ಟೆ :  ಬಾಡಿಗೆ ಮನೆಯಲ್ಲಿ ವಾಸವಿದ್ದ ತಂದೆಯೊಬ್ಬ  ಮಗನನ್ನು ಕಡಿದು ಕೊಲೆ ಮಾಡಿ ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ಬುಧವಾರ ನಡೆದಿದೆ. ಬಾಬು ನಾಯ್ಕ (58) ತನ್ನ ಪುತ್ರ ಸಾತ್ವಿಕ್ (15) ನನ್ನು ಕಡಿದು ಕೊಲೆಗೈದು ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯ ಸಮೀಪದ ಶ್ರೀ ರಾಮ ಭಜನಾ ಮಂದಿರದ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಾಬು ನಾಯ್ಕ ಕುಡಿತದ ಚಟ ಹೊಂದಿದ್ದ ಎನ್ನಲಾಗಿದೆ.  ಘಟನೆ ವೇಳೆ ಬಾಬು ನಾಯ್ಕನ ಪತ್ನಿ […]

ಗಾಯಗೊಂಡ ಮಹಿಳಾ ಹೋಮ್ ಗಾರ್ಡ್ ನ್ನು ತಮ್ಮ ಕಾರ್ ನಲ್ಲಿ ಆಸ್ಪತ್ರೆಗೆ ಸೇರಿಸಿದ ಸಚಿವ ಶ್ರೀನಿವಾಸ್ ಪೂಜಾರಿ

Wednesday, June 23rd, 2021
mulki Home guard

ಮಂಗಳೂರು: ಮುಲ್ಕಿ ಠಾಣೆಯ ಮಹಿಳಾ  ಹೋಮ್ ಗಾರ್ಡ್ ಒಬ್ಬರು ಸ್ಕೂಟರ್ ನಿಯಂತ್ರಣಕ್ಕೆ ಸಿಗದೇ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟಾಟಾ ಏಸ್ ಗೂಡ್ಸ್ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಗಾಯಗೊಂಡ ಘಟನೆ ವಿಜಯ ಸನ್ನಿಧಿ ಜಂಕ್ಷನ್ ಬಳಿ ನಡೆದಿದೆ. ಬುಧವಾರ  ಮಧ್ಯಾಹ್ನ 12.20ರ ಸಮಯಕ್ಕೆ ರೇಣುಕಾ ಎಂಬವರು ಠಾಣೆಯಿಂದ ತಮ್ಮ ಹೊಂಡಾ ಆ್ಯಕ್ಟೀವಾ ವಾಹನದಲ್ಲಿ ಊಟಕ್ಕೆ ಮನೆಗೆ ಹೋಗುತ್ತಿರುವಾಗ ಈ ಅಪಘಾತವಾಗಿದೆ. ಪರಿಣಾಮವಾಗಿ ರೇಣುಕಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಅದೇ ದಾರಿಯಲ್ಲಿ ಸಾಗುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ […]