ಸಂಚಾರಿ ವಿಜಯ್ ಗೆ ಶ್ರದ್ಧಾಂಜಲಿ, ಮರಣದ ಬಳಿಕ ಅಂಗಾಂಗ ದಾನ ಮಾಡುವುದಾಗಿ ಘೋಷಿಸಿದ ಅಭಯಚಂದ್ರ ಜೈನ್

Friday, June 18th, 2021
Abhayachandra Jain

ಮಂಗಳೂರು  : ನಟ ಸಂಚಾರಿ ವಿಜಯ್ ಮರಣ ನಂತರವೂ ಏಳು ಜನರಿಗೆ ಅಂಗಗಳನ್ನು ನೀಡಿ ಇತರರಿಗೆ ಜೀವದಾನದ ಮಾದರಿಯಾಗಿದ್ದಾರೆ ಎಂದು ಮಾಜಿ ಸಚಿವ ಅಭಯ ಚಂದ್ರ ಜೈನ್ ತಿಳಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿಂದು ಸಂಚಾರಿ ವಿಜಯ್ ಭಾವಚಿತ್ರಕ್ಕೆ ಹೂಮಾಲೆ ಅರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದ ಅವರು, ಮರಣಾ ನಂತರ ತಾನೂ ಕೂಡಾ ತನ್ನ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿರುವುದಾಗಿ ಪ್ರಕಟಿಸಿದರು. ನಾನು  ಮರಣ ಹೊಂದಿದ  ಬಳಿಕ ನನ್ನ ಅಂಗಾಂಗಳನ್ನು ದಾನ ಮಾಡುವಂತೆ   ವಿಲ್  ಬರೆಯಲು ನಿರ್ಧರಿಸಿದ್ದೇನೆ ಎಂದು ಹೇಳಿದ ಅವರು, ದ.ಕ. ಜಿಲ್ಲಾ […]

ಆಧುನಿಕ ಜಗತ್ತಿನ ಸವಾಲಿಗೆ ವೇದಾಂತ ಚಿಂತನೆ ಪರಿಹಾರ : ಡಾ. ವಿವೇಕ್ ಮೋದಿ

Thursday, June 17th, 2021
vivek-modi

ಮಂಗಳೂರು : “ಜಗತ್ತು ಎಷ್ಟೇ ಮುಂದುವರಿದರೂ ಭಾರತದ ಚಿಂತನೆಗಳು ಸಾರ್ವಕಾಲಿಕ. ಭಾರತೀಯ ವೇದಾಂತ ಚಿಂತನೆಗಳಲ್ಲಿ ಆಧುನಿಕ ಜಗತ್ತಿನ ಪ್ರತಿಯೊಂದು ಸವಾಲಿಗೂ ಪರಿಹಾರವಿದೆ, ಆತ್ಮಶ್ರದ್ಧೆಯೊಂದಿದ್ದರೆ ಯಾವುದೂ ಇಲ್ಲಿ ಅಬೇಧ್ಯವಲ್ಲ ಎಂಬ ಸಂದೇಶವನ್ನು ಸ್ವಾಮಿ ವಿವೇಕಾನಂದರು ನೀಡಿದ್ದಾರೆ” ಎಂದು, ಹೈದರಾಬಾದ್ನ ನಾಯಕತ್ವ ತರಬೇತುದಾರ ಡಾ. ವಿವೇಕ್ ಮೋದಿ ಹೇಳಿದರು. ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ನಡೆಯುತ್ತಿರುವ ‘ವಿವೇಕ ವಾಣಿʼ ಆನ್‌ಲೈನ್‌ ಸರಣಿ ಉಪನ್ಯಾಸ ಕಾರ್ಯಕ್ರಮದ ಐದನೇ ಉಪನ್ಯಾಸದಲ್ಲಿ “ಪ್ರಸ್ತುತ ಸವಾಲುಗಳನ್ನು ಎದುರಿಸಲು ಸ್ವಾಮಿ ವಿವೇಕಾನಂದರ ಚಿಂತನೆ” […]

ಪಾಲಿಕೆಯ ಅಧಿಕಾರಿಗಳೆಂದುಕೊಂಡು ಲಾಕ್‌ಡೌನ್ ವೇಳೆ ತೆರೆದಿದ್ದ ಬಟ್ಟೆ ಅಂಗಡಿಯಲ್ಲಿ ವಸೂಲಿ

Thursday, June 17th, 2021
manapa

ಮಂಗಳೂರು : ಮಹಾನಗರ ಪಾಲಿಕೆಯ ಅಧಿಕಾರಿಗಳೆಂದು ಹೇಳಿಕೊಂಡು ನಗರದ ಟೋಕಿಯೋ ಮಾರ್ಕೆಟ್‌ನಲ್ಲಿರುವ ಬಟ್ಟೆ ಅಂಗಡಿಯೊಂದಕ್ಕೆ ಬಂದ ಮೂವರು ಅಂಗಡಿ ತೆರೆದಿರುವುದಕ್ಕೆ ದಂಡ ಕಟ್ಟಲು ಹೇಳಿರುವುದಾಗಿ  ಆರೋಪಿಸಿ ನಗರದ ಬಂದರು ಠಾಣೆಯಲ್ಲಿ ದೂರು ದಾಖಲಾಗಿದೆ. ಲಾಕ್‌ಡೌನ್ ವೇಳೆ ಅಂಗಡಿ ತೆರೆದಿದ್ದ ವೇಳೆ  ಟೋಕಿಯೊ ಮಾರ್ಕೆಟ್‌ ಶಾಪಿಂಗ್ ಮಳಿಗೆಗೆ ಗುರುವಾರ  ಬೆಳಗ್ಗೆ 9 ಗಂಟೆ ಸುಮಾರಿಗೆ ಭೇಟಿ ನೀಡಿದ ಮೂವರು, ತಾವು ಪಾಲಿಕೆ ಅಧಿಕಾರಿಗಳೆಂದು ಪರಿಚಯಿಸಿಕೊಂಡು ಲಾಕ್‌ಡೌನ್ ವೇಳೆ ಅಂಗಡಿ ತೆರೆದಿರುವುದಕ್ಕೆ 50,000 ರೂ. ನೀಡುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ತಾನು ಒಪ್ಪದಿದ್ದಾಗ ಎಲ್ಲ ಸರಿ […]

ಅಕ್ಕಿ ಸಾಗಾಟದ ಲಾರಿ ಮೂಡುಬಿದಿರೆ ಬಳಿ ದಂಡೆಗೆ ಢಿಕ್ಕಿ

Thursday, June 17th, 2021
raise-lorry

ಬಂಟ್ವಾಳ : ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಬಂಟ್ವಾಳ- ಮೂಡುಬಿದಿರೆ ರಸ್ತೆಯ ವಿದ್ಯಾಗಿರಿ ಬಳಿ ರಸ್ತೆ ಬದಿಯ ದಂಡೆಗೆ ಢಿಕ್ಕಿ ಹೊಡೆದ ಘಟನೆ ಗುರುವಾರ ನಡೆದಿದೆ. ಘಟನೆಯಲ್ಲಿ ಲಾರಿಯ ಚಾಲಕ ಹಾಗೂ ನಿರ್ವಾಹಕ ಗಾಯಗೊಂಡಿದ್ದಾರೆ. ಲಾರಿಯು ಶಿವಮೊಗ್ಗದಿಂದ ಪುತ್ತೂರಿಗೆ ಅಕ್ಕಿ ಸಾಗಾಟ ಮಾಡುತ್ತಿತ್ತು. ಲಾರಿಯನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.

ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ತಂದೆಯಿಂದ ನಿರಂತರ ಅತ್ಯಾಚಾರ

Thursday, June 17th, 2021
Girl Raped

ಮಂಗಳೂರು: ಇಬ್ಬರು ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಮೇಲೆ 3 ವರ್ಷಗಳಿಂದ ಅತ್ಯಾಚಾರ ನಡೆಸುತ್ತಿದ್ದ ಸುರತ್ಕಲ್ ನ ವಿಕೃತ ಕಾಮುಕ ತಂದೆಯನ್ನು  ಪೊಲೀಸರು ಬಂಧಿಸಿದ್ದಾರೆ. ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಜಳಿಗೆ ಸದಾ ಹೊಡೆದು ಕಿರುಕುಳ ನೀಡುತ್ತಿದ್ದ ಈತ ಸಮಯ ಸಾಧಿಸಿ ಮಕ್ಕಳ ಮೇಲೆಯೇ ಅತ್ಯಾಚಾರ ನಡೆಸುತ್ತಿದ್ದ. ಇತ್ತೀಚೆಗೆ ಪತ್ನಿ ಮತ್ತು ಹೆಣ್ಣುಮಕ್ಕಳಿಗೆ ಹಲ್ಲೆ ನಡೆಸಿದ್ದು ಅವರು ತವರು ಮನೆಗೆ ತೆರಳಿದ್ದರು. ಈ ಸಂದರ್ಭ ಹೆಣ್ಣುಮಕ್ಕಳು ಮಾವನ ಬಳಿ ಈ ವಿಚಾರ ಹೇಳಿಕೊಂಡಿದ್ದರು. ಬಳಿಕ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಬಿ.ಎಸ್ ಯಡಿಯೂರಪ್ಪ ಅವರ ಸಿಎಂ ಸ್ಥಾನಕ್ಕೆ ಕಂಟಕಗಳು ಎದುರಾಗಬಾರದು ಎಂದು ಮಂಡ್ಯದಲ್ಲಿಈಡುಗಾಯಿ ಸೇವೆ

Wednesday, June 16th, 2021
Kalamma

ಮಂಡ್ಯ: ರಾಷ್ಟೀಯ ಉಸ್ತುವಾರಿ ಅರುಣ್ ಸಿಂಗ್ ಆಗಮನದ ಬೆನ್ನಲ್ಲೇ  ಬಿ.ಎಸ್ ಯಡಿಯೂರಪ್ಪ ಅವರ ಅಭಿಮಾನಿಗಳು  ಅವರ ಸಿಎಂ ಸ್ಥಾನಕ್ಕೆ ಯಾವುದೇ ಕಂಟಕಗಳು ಎದುರಾಗಬಾರದು ಎಂದು ಮಂಡ್ಯದಲ್ಲಿ ಈಡುಗಾಯಿ  ಒಡೆದು ಕಾಳಮ್ಮನಿಗೆ ಸೇವೆ ಸಲ್ಲಿಸಿದ್ದಾರೆ. ಮಂಡ್ಯದ ಕಾಳಮ್ಮ ದೇವಸ್ಥಾನದ ಮುಂಭಾಗ ಪೂಜೆ ಸಲ್ಲಿಸಿ ಎಂಟು ದಿಕ್ಕುಗಳಿಗೂ ಈಡುಗಾಯಿ ಒಡೆದು ಮುಂದಿನ ಎರಡು ವರ್ಷಗಳ ಕಾಲವು ಯಡಿಯೂರಪ್ಪ ಅವರೆ ಸಿಎಂ ಆಗಿ ಮುಂದುವರಿಯಬೇಕೆಂದು ಪ್ರಾರ್ಥನೆ ಮಾಡಿಕೊಂಡರು. ಬಿ.ಎಸ್ ಯಡಿಯೂರಪ್ಪ ಅವರು ಇಳಿ ವಯಸ್ಸಿನಲ್ಲೂ ರಾಜ್ಯಾದ್ಯಂತ ಪ್ರವಾಸ ಮಾಡಿ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಮುಂದಿನ […]

5 ವಿದ್ಯುತ್‌ ಕಂಬಗಳ ಜೊತೆ, ರಸ್ತೆಗುರುಳಿದ ಟ್ರಾನ್ಸ್‌ಫಾರ್ಮರ್‌

Wednesday, June 16th, 2021
Transformer

ಮಂಗಳೂರು :  ನಿರಂತರವಾಗಿ ಸುರಿಯುತ್ತಿರುವ ಮಳೆ,  ಭಾರಿ ಗಾಳಿಯಿಂದ  ಬುಧವಾರ ಮಧ್ಯಾಹ್ನ ಮಂಗಳಾದೇವಿ ಬಳಿ ಟ್ರಾನ್ಸ್‌ಫಾರ್ಮರ್‌ ಒಂದು  ರಸ್ತೆಗೆ ಬಿದ್ದಿದ್ದು, ಅಕ್ಕಪಕ್ಕದಲ್ಲಿದ್ದ 5 ವಿದ್ಯುತ್‌ ಕಂಬಗಳೂ ತುಂಡಾಗಿವೆ. ರಸ್ತೆಯಲ್ಲಿ ವಾಹನ ಸಂಚಾರ ಇಲ್ಲದಿದ್ದುದರಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಘಟನೆಯಿಂದ ಮಂಗಳಾದೇವಿ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯವುಂಟಾಗಿದೆ. ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಧಾವಿಸಿ, ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ. ಟ್ರಾನ್ಸ್‌ಫಾರ್ಮರ್‌ ಇದ್ದ ಜಾಗದಲ್ಲಿ ಮರಗಳೂ ಇದ್ದು, ರಸ್ತೆಯ ಇನ್ನೊಂದು ಬದಿಗೆ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೀಲ್ ಡೌನ್ ಇದ್ದರೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸುತ್ತಿರುವ ಭಕ್ತರು

Wednesday, June 16th, 2021
Subrahmanya

ಸುಬ್ರಹ್ಮಣ್ಯ : ಸೋಮವಾರದಿಂದ  ಸುಬ್ರಹ್ಮಣ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸೀಲ್ ಡೌನ್ ಮಾಡಲಾಗಿದ್ದರೂ ಹೊರ ಜಿಲ್ಲೆಗಳಿಂದ ಕುಕ್ಕೆಗೆ ಯಾತ್ರಿಕರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ  ಆಗಮಿಸುತ್ತಿದ್ದಾರೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಆನ್ ಲಾಕ್ ಇರುವುದರಿಂದ ಮತ್ತು ಮಂಗಳವಾರ ಆಶ್ಲೇಷ ನಕ್ಷತ್ರ ಇದ್ದುದರಿಂದ ಹೆಚ್ಚಿನ ಭಕ್ತರು ಆಗಮಿಸಿದ್ದರು. ಸೋಮವಾರದಿಂದ ಸುಬ್ರಹ್ಮಣ್ಯ   ಪಂಚಾಯತಿ ವ್ಯಾಪ್ತಿಯ ಪ್ರವೇಶ ರಸ್ತೆಗಳನ್ನು ಬಂದ್ ಮಾಡಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಕುಲ್ಕುಂದ ಭಾಗದಿಂದ ಕುಕ್ಕೆ ಕಡೆಗೆ ಯಾತ್ರಿಕರ ವಾಹನಗಳು ಆಗಮಿಸುತ್ತಿದೆ. ಅಲ್ಲಿ ನಿರ್ಮಿಸಿರುವ ಚೆಕ್ ಪೋಸ್ಟ್ ನಲ್ಲಿ ಪೊಲೀಸರು […]

ಕೋವಿಡ್ ಸೂಪರ್ ವಾರಿಯರ್; ಮೆರಿಲ್ ರೇಗೋ

Tuesday, June 15th, 2021
Meril-Rego

ಮಂಗಳೂರು  : ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮೆರಿಲ್ ರೇಗೋ‌ ನೇತೃತ್ವದಲ್ಲಿ ಲಾಕ್‌ಡೌನ್ ನಿಂದ ಸಂಕಷ್ಟಕ್ಕೊಳಗಾದವರಿಗೆ ಸಹಾಯ ಹಾಗೂ ಕೋವಿಡ್ ರೋಗಿಗಳಿಗೆ ನೆರವು ನಿರಂತರವಾಗಿ ನೀಡಲಾಗುತ್ತಿದೆ‌. ಲಾಕ್‌ಡೌನ್ ಆರಂಭದಲ್ಲಿ ಪ್ರಾರಂಭಿಸಿದ ಮಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರಾಶ್ರಿತರಿಗೆ ಹಾಗೂ ಸರಕು ಸಾಗಾಣಿಕೆಯ ವಾಹನ ಚಾಲಕರಿಗೆ ಮಧ್ಯಾಹ್ನದ ಊಟ ವಿತರಿಸುವ ಕಾರ್ಯ ಪ್ರತಿದಿನ ನಿರಂತರವಾಗಿ ನಡೆಯುತ್ತಿದೆ. ದಿನಂಪ್ರತಿ 400-500ರಷ್ಟು ಜನರಿಗೆ ಊಟವನ್ನು ವಿತರಿಸಲಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಲಾಗಿದೆ. ಇತ್ತೀಚೆಗೆ ಮಾಜಿ ಪ್ರಧಾನಿ […]

ವರ್ಕಾಡಿ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ಕ್ಯಾಂಪ್ಕೊ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

Tuesday, June 15th, 2021
campco

ಮಂಗಳೂರು :  ಅಡಿಕೆ ಮತ್ತು ಕೊಕ್ಕೋ ಬೆಳೆಗಾರರ ಸಂಕಷ್ಟ ಸಮಯದಲ್ಲಿ ರೈತರ ಬೆನ್ನೆಲುಬಾಗಿ ನಿಂತ ಕ್ಯಾಂಪ್ಕೊ ಕೋವಿಡ್ ಸಂಕಷ್ಟ ಕಾಲದಲ್ಲಿ ಕೂಡ ರೈತರಿಗೆ ನೆರವಾಗಿ ಯೋಗ್ಯ ಬೆಲೆಯನ್ನು ನೀಡಿ ಅಡಿಕೆ ಖರೀದಿಸುವುದರಲ್ಲಿ ಯಶಸ್ವಿ ಆಗಿದೆ ಎಂದು ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ ಶಂಕರ ನಾರಾಯಣ ಭಟ್ ಖಂಡಿಗೆ ಅವರು ತಿಳಿಸಿದರು. ವರ್ಕಾಡಿ ಸೇವಾ ಸಹಕಾರಿ ಬ್ಯಾಂಕ್ ನ ಸಹಯೋಗದೊಂದಿಗೆ ಪಾವೂರು, ವರ್ಕಾಡಿ ಯಲ್ಲಿ ಕಾರ್ಯಾರಂಭಿಸಿದ ನೂತನ ಅಡಿಕೆ ಖರೀದಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು ಇದೀಗ ಸಂಸ್ಥೆಯ ಸಕ್ರಿಯ […]