ಜೂನ್ 6ಕ್ಕೆ ಮಂಗಳೂರು ಚುಸಾಪದಿಂದ ಗುಣಾಜೆ ಉಪನ್ಯಾಸ

Thursday, June 3rd, 2021
gunaje

ಮಂಗಳೂರು : ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಸಾಹಿತ್ಯ ಉಪನ್ಯಾಸ ಮಾಲಿಕೆಯನ್ನು ಆರಂಭಿಸುತ್ತಿದ್ದು , ಮಾಲಿಕೆಯ ಮೊದಲ ಸಂಚಿಕೆಯಾಗಿ ಜೂನ್ 6ನೇ ತಾರೀಕು ಭಾನುವಾರ ಸಂಜೆ ಐದು ಗಂಟೆಗೆ ಮಂಗಳೂರಿನಲ್ಲಿ ನಡೆಯಲಿದೆ. ಹಿರಿಯ ಸಾಹಿತಿ, ನಿವೃತ್ತ ಕನ್ನಡ ಶಿಕ್ಷಕ ಗುಣಾಜೆ ರಾಮಚಂದ್ರ ಭಟ್ ಅವರು ‘ಸಾಹಿತ್ಯದಲ್ಲಿ ಭಾಷಾಶುದ್ಧಿ’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಕಾ.ವೀ.ಕೃಷ್ಣದಾಸ್ ಅಧ್ಯಕ್ಷತೆ ವಹಿಸುವರು. ದಕ್ಷಿಣ ಕನ್ನಡ ಚುಸಾಪ ಅಧ್ಯಕ್ಷ ಶ್ರೀ […]

ಇತ್ತೀಚೆಗಷ್ಟೇ ವಿವಾಹವಾಗಿದ್ದ ಅರಣ್ಯ ವೀಕ್ಷಕ ನೇಣುಬಿಗಿದು ಆತ್ಮಹತ್ಯೆ

Thursday, June 3rd, 2021
Balakrishna

ಬೆಳ್ತಂಗಡಿ :  ಇತ್ತೀಚೆಗಷ್ಟೇ ವಿವಾಹವಾಗಿದ್ದ ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದ ಅರಣ್ಯ ವೀಕ್ಷಕರೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೂ.3ರಂದು ಕಳಿಯ ಗ್ರಾಮದ ಗೇರುಕಟ್ಟೆ ಪಲ್ಲಿದಳಿಕೆ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದ ಅರಣ್ಯ ವೀಕ್ಷಕ ಬಾಲಕೃಷ್ಣ ಗೌಡ (40) ಆತ್ಮಹತ್ಯೆ ಮಾಡಿಕೊಂಡವರು. ಬಾಲಕೃಷ್ಣರ ಮೃತದೇಹ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮನೆಯ ಸಮೀಪ ಗುಡ್ಡದಲ್ಲಿ ಗುರುವಾರ ಬೆಳಗ್ಗೆ ಪತ್ತೆಯಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಬಾಲಿವುಡ್ ನಟ ಸೋನು ಸೂದ್ ಕರಾವಳಿಗೂ ಸಹಾಯದ ಹಸ್ತ, ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಕ್ಷಿಪ್ರ ಆಮ್ಲಜನ ಕೇಂದ್ರಕ್ಕೆ ಚಾಲನೆ

Thursday, June 3rd, 2021
sonu-sood

ಮಂಗಳೂರು : ಕೊರೋನಾ ಸಂಕಷ್ಟದಲ್ಲಿರುವವರಿಗೆ ನಾನಾ ವಿಧದಲ್ಲಿಸಹಾಯಮಾಡುವ ಬಾಲಿವುಡ್ ನಟ ಸೋನು ಸೂದ್ ಇದೀಗ ದ.ಕ. ಜಿಲ್ಲೆಯನ್ನೊಳಗೊಂಡು ಕರಾವಳಿಗೂ ಆಮ್ಲಜನ ಕೇಂದ್ರ  ಸ್ಥಾಪಿಸಲು ನೆರವಾಗಿದ್ದಾರೆ. ಸೋನು ಸೂದ್ ಚಾರಿಟೆಬಲ್ ಫೌಂಡೇಶನ್ ವತಿಯಿಂದ ಕರ್ನಾಟಕದ 4ನೆ ಕ್ಷಿಪ್ರ ಆಮ್ಲಜನ ಕೇಂದ್ರ (ರ್ಯಾಪಿಡ್ ಆಕ್ಸಿಜನ್ ಸೆಂಟರ್)ಕ್ಕೆ ನಗರದ ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಗುರುವಾರ ಚಾಲನೆ ನೀಡಲಾಗಿದೆ. 7000 ಲೀಟರ್ ಹಾಗೂ 1300 ರಿಂದ 1400 ಲೀಟರ್ ಸಾಮರ್ಥ್ಯದ ತಲಾ 10ರಂತೆ 20 ಆಕ್ಸಿಜನ್ ಸಿಲಿಂಡರ್‌ಗಳು ಈ ಕೇಂದ್ರದಲ್ಲಿ ಸದ್ಯ ಲಭ್ಯವಿದೆ. ಅಗತ್ಯವಿದ್ದಲ್ಲಿ ಇನ್ನಷ್ಟು ಆಕ್ಸಿಜನ್ […]

ಇನ್ನು ಮುಂದೆ ಕರ್ನಾಟಕದಲ್ಲಿ ಬಸ್ಸುಗಳ ಮೇಲೆ ಕೆಎಸ್ಆರ್‌ಟಿಸಿ ಇರಲ್ಲ, ಅದು ಕೇರಳದ ಪಾಲಾಗಿದೆ

Thursday, June 3rd, 2021
ksrtcBus.

ಮಂಗಳೂರು  : ಕರ್ನಾಟಕ ಮತ್ತು ಕೇರಳ ಸರ್ಕಾರಿ ಬಸ್ಸುಗಳು ಕೆಎಸ್ಆರ್‌ಟಿಸಿ ಅಂತ ಕಡಿತ ಗೊಳಿಸಿದ ಇಂಗ್ಲಿಷ್ ಪದ ಬಳಸುತ್ತಿತ್ತು. ಆದರೆ ಆ  ಕೆಎಸ್ಆರ್‌ಟಿಸಿ  ಪದವನ್ನು ಕೇರಳ ಮಾತ್ರ ಪದ ಬಳಸಬೇಕು ಎಂದು ಕೇಂದ್ರ ವ್ಯಾಪಾರ ಗುರುತು ನೋಂದಾವಣಿ(ಟ್ರೇಡ್ ಮಾರ್ಕ್ ರಿಜಿಸ್ಟಿ) ಅಂತಿಮ ತೀರ್ಪು ನೀಡಿದೆ. ಕೇರಳ ಮಾತ್ರ ಇನ್ನು ಮುಂದೆ ತನ್ನ ಸಾರಿಗೆ ಸಂಸ್ಧೆಯನ್ನು ಕೆಎಸ್ಆರ್‌ಟಿಸಿ ಅಂತ ಬಳಸಬೇಕು. ಅಲ್ಲದೆ ಕರ್ನಾಟಕ ರಾಜ್ಯದ ಸಾರಿಗೆ ಬಸ್ ಮತ್ತು ಇತರ ಕಡೆ ನೋದಾಯಿಸಿದ್ದ, ಪ್ರಕಟನೆ ಬೋರ್ಡ್ ಎಲ್ಲ ಲೋಗೋ ಮತ್ತು ಚಿತ್ರಗಳನ್ನು […]

ಮಹಿಳೆಯ ಮನೆಗೆ ಅಕ್ರಮ ಪ್ರವೇಶಿಸಿ ಕೊಲೆ ಯತ್ನ, ಏಳು ಮಂದಿಯ ಬಂಧನ

Wednesday, June 2nd, 2021
Shaktinagara Attackers

ಮಂಗಳೂರು : ಮಹಿಳೆಯೊಬ್ಬರ ಮನೆಗೆ ಅಕ್ರಮ ಪ್ರವೇಶಿಸಿ ಮನೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಗೊಳಿಸಿ, ಮಹಿಳೆಗೆ  ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿ 9 ಮಂದಿಗಳ ಪೈಕಿ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಡಿಕಲ್ ನಿವಾಸಿ ರಂಜಿತ್ ಯಾನೆ ರಂಜು ಯಾನೆ ತಮ್ಮು (28), ಉರ್ವಸ್ಟೋರ್‌ನ ಸುಂಕದಕಟ್ಟೆ ನಿವಾಸಿ ಅವಿನಾಶ್ ಯಾನೆ ಅವಿ (23), ಪ್ರಜ್ವಲ್ ಯಾನೆ ಪಚ್ಚು(24), ದೀಕ್ಷಿತ್ ಯಾನೆ ದೀಚು(21), ಹೇಮಂತ್ ಯಾನೆ ಹೋಮು(19), ಧನು(19) ಹಾಗೂ ಯತಿರಾಜ್ ಯಾನೆ ಯತಿ(23) ಬಂಧಿತರು. ಬಂಧಿತರಿಂದ ಮಾರಕಾಸ್ತ್ರ ಹಾಗೂ […]

ತಂದೆಯ ಅಂತ್ಯ ಸಂಸ್ಕಾರದ ವೇಳೆ ಹೃದಯಾಘಾತದಿಂದ ಮಗ ಸಾವು

Wednesday, June 2nd, 2021
Shailesh

ಪುತ್ತೂರು : ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದ ಆಸ್ಟ್ರೇಲಿಯಾ ಉದ್ಯೋಗಿ, ಕೊರೋನದಿಂದ ಮೃತಪಟ್ಟ ತಂದೆಯ ಅಂತ್ಯ ಸಂಸ್ಕಾರದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿರುವ  ಘಟನೆ ಬುಧವಾರ ನಡೆದಿದೆ. ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಬೈಲುಗುತ್ತು ಕೊಪ್ಪಳ ಎಂಬಲ್ಲಿ ಈ ಘಟನೆ ನಡೆದಿದೆ. ಪುಣಚ ಬೈಲುಗುತ್ತು ಕೊಪ್ಪಳ ನಿವಾಸಿ ಕೆಪಿಟಿ ನಿವೃತ್ತ ಪ್ರೊಫೆಸರ್ ಭುಜಂಗ ಶೆಟ್ಟಿ(85) ಅವರು ಕೋವಿಡ್‌ನಿಂದ ಮಂಗಳವಾರ ರಾತ್ರಿ ಮೃತಪಟ್ಟಿದ್ದರು. ಅವರ ಅಂತಿಮ ಸಂಸ್ಕಾರವು ಬುಧವಾರ ಬೈಲುಗುತ್ತು ಕೊಪ್ಪಳ ನಿವಾಸದಲ್ಲಿ ಕೋವಿಡ್ ನಿಯಮಾವಳಿ ಯೊಂದಿಗೆ ನಡೆಸಲಾಯಿತು. […]

ವಿ ಹೆಚ್ ಪಿ ಮುಖಂಡನ ವಿರುದ್ಧ ಅವಹೇಳನ : ನಾಲ್ವರ ಬಂಧನ

Wednesday, June 2nd, 2021
sharan case

ಮಂಗಳೂರು :  ವಾಟ್ಸ್ಆ್ಯಪ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಹಾಗೂ ದುರ್ಗಾವಾಹಿನಿ ಸಂಘಟನೆಯ ಬಗ್ಗೆ ಅವಹೇಳನಕಾರಿ ಸಂದೇಶವನ್ನು ರವಾನಿಸಿರುವ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರನ್ನು ಸುಳ್ಯ ಕಸಬಾ ತಾಲೂಕಿನ ಭವಾನಿ ಶಂಕರ್ (32), ಬಜಾಲ್‌ನ ನೌಶಾದ್ (27), ಕಾವೂರಿನ ರವಿ ಅಲಿಯಾಸ್ ಟಿಕ್ಕಿ ರವಿ (38), ಹಾಗೂ ಮೂಡಬಿದ್ರೆಯ ಜಯಕುಮಾರ್ (33) ಎಂದು ಗುರುತಿಸಲಾಗಿದೆ. ಬಂಧಿತರು ತಮಗೆ ಬಂದಿದ್ದ ಸಂದೇಶವನ್ನು ಇತರ ಗ್ರೂಪ್ ಹಾಗೂ ಸ್ನೇಹಿತರಿಗೆ ಪಾರ್ವಾಡ್ ಮಾಡಿದ್ದಾರೆ. ಈ ಸಂದೇಶದ ಮೂಲ, […]

ವೈದ್ಯರ ನಡೆ ಹಳ್ಳಿ ಕಡೆ ಅಭಿಯಾನಕ್ಕೆ ಗಂಜಿಮಠದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ

Wednesday, June 2nd, 2021
Bharath Shetty

ಮಂಗಳೂರು  : ವೈದ್ಯರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತರು, ಟಾಸ್ಕ್ ಪೋರ್ಸ್ ಸದಸ್ಯರು ತಮ್ಮ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಮನೆಮನೆ ಸಂಪರ್ಕ ಮಾಡಬೇಕು. ಅಲ್ಲಿ ಕೋವಿಡ್ 19 ಸೋಂಕಿತರು ಆಸ್ಪತ್ರೆಗೆ ತೆರಳದೆ ಮನೆಯಲ್ಲಿಯೇ ಇದ್ದು ರೋಗ ಗಂಭೀರವಾದಾಗ ಕೊನೆಯ ಹಂತದಲ್ಲಿ ವೈದ್ಯರನ್ನು ಕಾಣುವುದರಿಂದ ಸಾವು, ನೋವು ಪ್ರಮಾಣ ಹೆಚ್ಚಾಗುತ್ತದೆ. ಇದನ್ನು ತಪ್ಪಿಸಲು ಅವರಲ್ಲಿ ಜಾಗೃತಿ ಮೂಡಿಸಲು ರಾಜ್ಯ ಸರಕಾರದ ಜಾರಿಗೆ ತಂದಿರುವ ವೈದ್ಯರ ನಡೆ ಹಳ್ಳಿಯ ಕಡೆ ಅಭಿಯಾನವನ್ನು ಜನರಿಗೆ ತಲುಪುವಲ್ಲಿ ನಾವೆಲ್ಲ ಕೆಲಸ ಮಾಡಬೇಕು ಎಂದು ಮಂಗಳೂರು […]

ಮೆಡಿಕಲ್‌ ಶಾಪಿಗೆ ನುಗ್ಗಿ ಮಹಿಳೆಯ ಮಾನಭಂಗಕ್ಕೆ ಯತ್ನ: ವ್ಯಕ್ತಿಯ ಬಂಧನ

Wednesday, June 2nd, 2021
Rape Attempt

ಈಶ್ವರಮಂಗಲ: ಯಾರು ಇಲ್ಲದೆ ಇರುವುದನ್ನು ಗಮನಿಸಿದ ವ್ಯಕ್ತಿಯೊಬ್ಬ ಔಷಧ ಖರೀದಿಗೆಂದು ಈಶ್ವರಮಂಗಲದ ಮೆಡಿಕಲ್‌ಗೆ ಬಂದು ಅಲ್ಲಿದ್ದ ಮಹಿಳಾ ಸಿಬ್ಬಂದಿಯನ್ನು ಮಾನಭಂಗಕ್ಕೆ ಯತ್ನಿಸಿದ ಘಟನೆ ಸುಳ್ಯ ಸಮೀಪದ ಈಶ್ವರಮಂಗಲದಲ್ಲಿ ನಡೆದಿದೆ. ಈಶ್ವರಮಂಗಲ ಕುಕ್ಕಾಜೆ ನಿವಾಸಿ ಇಬ್ರಾಹಿಂ ಕುಕ್ಕಾಜೆ (60) ಎಂಬಾತ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದು, ಸಾರ್ವಜನಿಕರು ಆತನನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಮೆಡಿಕಲ್‌ನಲ್ಲಿ ಮಹಿಳೆ ಒಬ್ಬರೇ ಇರುವುದನ್ನು ಗಮನಿಸಿದ ಇಬ್ರಾಹಿಂ ಒಳನುಗ್ಗಿ ಮಾನಭಂಗಕ್ಕೆ ಯತ್ನಿಸಿದ್ದು, ಈ ವೇಳೆ ಮಹಿಳೆ ಕಿರುಚಿದ್ದರು. ತಕ್ಷಣ ಸುತ್ತಮುತ್ತಲಿದ್ದ ಮಂದಿ ಜಮಾಯಿಸಿ ಆತನನ್ನು ಹಿಡಿದು ಈಶ್ವರಮಂಗಲ ಹೊರ ಠಾಣೆ ಪೊಲೀಸರಿಗೆ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳಪೆ ನೆಟ್ ವರ್ಕ್ ಒದಗಿಸುವ ಮೊಬೈಲ್ ಕಂಪೆನಿಗಳು, ಕ್ರಮಕ್ಕೆ ಸೂಚನೆ

Tuesday, June 1st, 2021
mobile-network-issue

ಮಂಗಳೂರು : ಬೆಂಗಳೂರು ಅಥವಾ ಮುಂಬೈಗೆ ಹೋಲಿಸಿದರೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮೊಬೈಲ್ ಕಂಪೆನಿಗಳು ಬಹುತೇಕ ಕಳಪೆ ನೆಟ್ ವರ್ಕ್ ಒದಗಿಸುತ್ತಿವೆ. ಪದೇ ಪದೇ ಫೋನ್ ಡಿಸ್ ಕನೆಕ್ಷನ್, ಇಂಟರ್ನೆಟ್ ವೇಗ ಕಡಿತ ದ ಸಮಸ್ಯೆ ಎದುರಾಗಿದೆ.  ಕಂಪೆನಿಗಳ ಗ್ರಾಹಕ ಸೇವಾ ಸಿಬ್ಬಂದಿಗಳನ್ನು ಸಂಪರ್ಕಿಸಲು ಹರಸಾಹಸ ಪಡುವ ಪರಿಸ್ಥಿತಿ ಎದುರಾಗಿದೆ. ದೂರು ನೀಡಲು ಕನಿಷ್ಠ ಹತ್ತು ನಿಮಿಷಗಳಾದರೂ ಕಾಯುವ ಪರಿಸ್ಥಿತಿ ಉಂಟಾಗಿದೆ. ಜಿಲ್ಲೆಯ ಜನವಸತಿ ಪ್ರದೇಶಗಳಲ್ಲಿ ಮೊಬೈಲ್ ನೆಟ್‍ವರ್ಕ್ ಸೌಲಭ್ಯ ಒದಗಿಸುವುದರೊಂದಿಗೆ ಮೊಬೈಲ್ ಸೇವಾ ಪೂರೈಕೆದಾರರು ಉತ್ತಮ ಸೇವೆಯನ್ನು ಒದಗಿಸಬೇಕು […]