ಸಂಘನಿಕೇತನ : 77ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ವೈಭವದ ಶೋಭಾಯಾತ್ರೆ

Wednesday, September 11th, 2024
sanghanikethana

ಮಂಗಳೂರು : ಮಂಗಳೂರು ನಗರದ ಸಂಘನಿಕೇತನದ ಕೇಶವ ಸ್ಮೃತಿ ಸಂವರ್ಧನಾ ಸಮಿತಿ ಆಶ್ರಯದಲ್ಲಿ 5 ದಿನಗಳಿಂದ ನಡೆಯುತ್ತಿರುವ 77ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ವೈಭವದ ಶೋಭಾಯಾತ್ರೆ ಬುಧವಾರ ಸಂಜೆ ನಡೆಯಿತು. ಉತ್ಸವ ಸ್ಥಳದಿಂದ ಚೆಂಡೆ, ಶಂಖ, ಜಾಗಟೆ, ಕುಣಿತ ಭಜನೆ ಹಾಗೂ ವಿವಿಧ ವಾದ್ಯ ಘೋಷಗಳೊಂದಿಗೆ ಶೋಭಾಯಾತ್ರೆ ಆರಂಭಗೊಂಡಿತು. ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ , ಗಣೇಶೋತ್ಸವ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಅಪಾರ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಶೋಭಾಯಾತ್ರೆ ಸಾಗುವ […]

ತಾಯಿಯ ರಕ್ಷಿಸಿದ ಬಾಲಕಿಗೆ ಪೊಲೀಸ್ ಆಯುಕ್ತರಿಂದ ಸನ್ಮಾನ

Wednesday, September 11th, 2024
vaibhavi

ಮಂಗಳೂರು: ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು. 7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ ಆಯುಕ್ತರು ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿ, ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ವೈಭವಿಯ ಈ ಪ್ರಜ್ಞೆ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ ಮಕ್ಕಳಿಗೆ ಇಂತಹ ಸಮಯ ಪ್ರಜ್ಞೆ ಮತ್ತು […]

ಹಿಂದೂ ಜನಜಾಗೃತಿ ಸಮಿತಿ ಮತ್ತು ಧರ್ಮಾಭಿಮಾನಿ ನ್ಯಾಯವಾದಿಗಳಿಂದ ದೂರು !

Wednesday, September 11th, 2024
Hindu-Gods

ಮಂಗಳೂರು : ‘Fact Vid’ ಹೆಸರಿನ ಫೇಸ್ಬುಕ್ ಪೇಜ್ ಒಂದರಲ್ಲಿ ಅನೇಕ ದಿನಗಳಿಂದ AI (Artificial Intelligence) ತಾಂತ್ರಿಕ ಸಹಾಯದಿಂದ ಹಿಂದೂ ದೇವತೆಗಳ ಅಪಮಾನಾತ್ಮಕ ಮತ್ತು ಅಶ್ಲೀಲ ಫೋಟೋಗಳನ್ನು ನಿರಂತರವಾಗಿ ಫೇಸ್ಬುಕ್ ಜಾಲತಾಣದ ಮುಖಾಂತರ ಪ್ರಸಾರ ಮಾಡಲಾಗುತ್ತಿದೆ. ಈ Al ಆಧಾರಿತ ಚಿತ್ರಗಳಿಂದ ಕೋಟ್ಯಂತರ ಹಿಂದೂ ಬಾಂಧವರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಸಂಬಂಧಿತ ಸೈಬರ್ ಕ್ರೈಮ್ ವಿಭಾಗವು ಇದರ ಬಗ್ಗೆ ಕೂಡಲೇ ಎಚ್ಚೆತ್ತುಕೊಂಡು ಪೇಜ್ ನ ಅಡ್ಮಿನ್ ಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಹಿಂದೂ ಜನಜಾಗೃತಿ […]

ಪೊಲೀಸ್ ಹೆಡ್ ಕಾನ್ಸ್‌ ಟೇಬಲ್ ಸುನೀಲ್ (50) ನಿಧನ

Tuesday, September 10th, 2024
sunil

ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಪೊಲೀಸ್ ಕಾನ್ಸ್‌ ಟೇಬಲ್ ಸುನೀಲ್ (50) ಅವರು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕರಿಯಾಗದೇ ನಗರ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಕಾಸರಗೋಡಿನವರಾದ ಸುನೀಲ್ ಅವರು 1996 ರಲ್ಲಿ ಪೊಲೀಸ್ ಸೇವೆಗೆ ಭರ್ತಿಯಾಗಿದ್ದರು ಬಳಿಕ ಉಡುಪಿ ಹಾಗೂ ಮಂಗಳೂರಿನ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಮಂಗಳೂರು ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ […]

ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

Tuesday, September 10th, 2024
gurukiran

ಮಂಗಳೂರು: ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿನ ಅದ್ವಿತೀಯ ಸಾಧನೆಯನ್ನು ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಕರಾವಳಿ ಮೂಲದ ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ. ಬೆಂಗಳೂರು ವಿಶ್ವವಿದ್ಯಾನಿಲಯವು ಸೆಪ್ಟೆಂಬ‌ರ್ 10 ರಂದು ನಡೆದ ಘಟಿಕೋತ್ಸವದಲ್ಲಿ ನೀಡಿ ಗೌರವಿಸಿತು. ಕಲೆ,ಸಂಗೀತ ಕ್ಷೇತ್ರದಲ್ಲಿ ನ ಸಾಧನೆಗಾಗಿ ಈ ಗೌರವ ಲಭಿಸಿದೆ.ಕನ್ನಡ ಚಿತ್ರರಂಗದ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಗುರುಕಿರಣ್‌ ಇನ್ನು ಮುಂದೆ ಡಾಕ್ಟರ್ ಗುರುಕಿರಣ್‌ ಆಗಲಿದ್ದು, ಅಭಿಮಾನಿಗಳಿಗೆ ಸಂತಸ ತಂದಿದೆ.

ಶಿಕ್ಷಕರು ತಮ್ಮ ಜ್ಞಾನ ಧಾರೆ ಎರೆಯಬೇಕು :- ಮಮತಾ ಗಟ್ಟಿ

Tuesday, September 10th, 2024
Mamatha-gatty

ಮಂಗಳೂರು : ಸಾಕ್ಷರರು ತಮ್ಮಲ್ಲಿರುವ ಜ್ಞಾನವನ್ನು, ವಿದ್ಯೆಯನ್ನು ಅನಕ್ಷರಸ್ಥರಿಗೆ ನೀಡಿದಾಗ, ಧಾರೆ ಎರೆದಾಗ ಜಿಲ್ಲೆಯೂ ಸಂಪೂರ್ಣ ಸಾಕ್ಷರತಾ ಜಿಲ್ಲೆಯಾಗಿ ರೂಪುಗೊಳ್ಳಲು ಸಾಧ್ಯ ಎಂದು ಗೇರು ನಿಗಮದ ಅಧ್ಯಕ್ಷೆ ಮಮತ ಗಟ್ಟಿ ಹೇಳಿದರು. ಮಂಗಳವಾರ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಲೋಕ ಶಿಕ್ಷಣ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾ ಪಂಚಾಯತ್, ಜಿಲ್ಲಾ ಸಾಕ್ಷರತಾ ಸಮಿತಿ, ತಾಲೂಕು ಪಂಚಾಯತ್ ಬಂಟ್ವಾಳ ಹಾಗೂ ಜನ ಶಿಕ್ಷಣ ಟ್ರಸ್ಟ್ ನವ ಸಾಕ್ಷರರ ಗ್ರಾಮ ವಿಕಾಸ ಕೇಂದ್ರಗಳು ಸಹಭಾಗಿತ್ವದಲ್ಲಿ […]

ʼಕೇಂದ್ರ ಸರ್ಕಾರದ ಪಿಎಂಇಜಿಪಿ, ಮುದ್ರಾ ಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ’

Tuesday, September 10th, 2024
Mudraloan

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಪಿಎಂಇಜಿಪಿ ಹಾಗೂ ಮುದ್ರಾ ಯೋಜನೆಯಡಿ ಗ್ರಾಮೀಣ ಭಾಗದವರಿಗೆ ವಿಶೇಷವಾಗಿ ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ/ಪಂಗಡ ಮತ್ತು ಹಿಂದುಳಿದ ವರ್ಗದ ಹೆಚ್ಚಿನ ಫಲಾನುಭವಿಗಳನ್ನು ತಲುಪಲು ಬ್ಯಾಂಕ್ ಗಳು ಉತ್ತೇಜನ ನೀಡಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದ್ದಾರೆ.. ಮಂಗಳೂರು ನಗರದಲ್ಲಿರುವ ದ.ಕ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ದ.ಕ ಜಿಲ್ಲಾ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ಯಾ. ಚೌಟ ಅವರು, ಕೇಂದ್ರ ಸರ್ಕಾರದ […]

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ; ಡಾ. ಇ. ಶ್ರೀಧರನ್ ಗೆ ಜಾರ್ಜ್ ಫೆರ್ನಾಂಡಿಸ್ ಸಂಸ್ಮರಣಾ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Sunday, September 8th, 2024
jayasrikrishna

ಮುಂಬಯಿ: ಜಾರ್ಜ್ ಫರ್ನಾಂಡಿಸ್ ರವರ ಸಂಸ್ಮರಣಾ ರಾಷ್ಟ್ರೀಯ ಪ್ರಶಸ್ತಿ ಯನ್ನು ದೇಶದ ಉನ್ನತ ಮಟ್ಟದ ವ್ಯಕ್ತಿತ್ವವನ್ನು ಹೊಂದಿದ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಇವರಿಗೆ ಪ್ರದಾನಿಸಲು ನಮಗೆ ಬಹಳ ಸಂತೋಷವಾಗಿದೆ. ಕೊಂಕಣ ರೈಲ್ವೆ ಜಾರ್ಜ್ ಫರ್ನಾಂಡಿಸ್ ರವರ ಕನಸು, ಅವರ ಕನಸನ್ನು ನನಸಾಗಿಸುವಲ್ಲಿ ಡಾ. ಇ. ಶ್ರೀಧರನ್ ರವರ ಕಾರ್ಯ ಮರೆಯುವಂತಿಲ್ಲ ಎಂದು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ.ಶೆಟ್ಟಿ ಯವರು ನುಡಿದರು. 25 ನೇ ವರ್ಷದ ಸಂಭ್ರಮದಲ್ಲಿರುವ ಅವಿಭಜಿತ ದಕ್ಷಿಣ ಕನ್ನಡ […]

ಶ್ರೀ ಮಂಗಳಾದೇವಿ ಸೇವಾ ಸಮಿತಿಯ 55ನೇ ಗಣೇಶೋತ್ಸವಕ್ಕೆ ಚಾಲನೆ

Sunday, September 8th, 2024
Mangaladevi-Ganeshotsava

ಮಂಗಳೂರು : ಶ್ರೀ ಮಂಗಳಾದೇವಿ ಸೇವಾ ಸಮಿತಿಯ 55ನೇ ವರ್ಷದ ಗಣೇಶೋತ್ಸವವು ಸೆಪ್ಟೆಂಬರ್ 7ರಿಂದ 9, 2024ರ ವರೆಗೆ ಮೂರು ದಿನಗಳ ಕಾಲ ಡೆಯಲಿದ್ದು , ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಯವರಿಂದ ಗಣಹೋಮ ಹಾಗೂ ಶ್ರೀ ವಿನಾಯಕನ ಪ್ರತಿಷ್ಠೆಯೊಂದಿಗೆ ಶನಿವಾರ ಆರಂಭಗೊಂಡಿತು. ಬೆಳಿಗ್ಗೆ 9ಗಂಟೆಗೆ 55ನೇ ಸಾರ್ವಜನಿಕ ಗಣೇಶೋತ್ಸವವನ್ನು ಬೋಳಾರ ಶ್ರೀ ಲಕ್ಷ್ಮೀ ಜುವೆಲ್ಲರ್ಸ್ ಮಾಲೀಕರಾದ ಪ್ರವೀಣ್ ಶೇಟ್ ನಾಗ್ವೆಕರ್ ದೀಪ ಬೆಳಗಿಸುವುದರ ಮೂಲಕ ವಿದ್ಯುಕ್ತ ಚಾಲನೆ ನೀಡಿದರು. ಬೆಳಿಗ್ಗೆ 10 ಗಂಟೆಗೆ ಶ್ರೀಮತಿ ರಾಜೀ […]

ವಿಧಾನಪರಿಷತ್ ಸ್ಥಾನದ ಉಪಚುನಾವಣೆ, ಮಂಗಳೂರಿನಲ್ಲಿ ಸಂಸದ ಬಸವರಾಜ ಬೊಮ್ಮಾಯಿ

Thursday, September 5th, 2024
Bommai-Mangalore

ಮಂಗಳೂರು: ದಕ್ಷಿಣ ಕನ್ನಡ-ಉಡುಪಿ ವಿಧಾನಪರಿಷತ್ ಸ್ಥಾನದ ಉಪಚುನಾವಣೆ ಹಿನ್ನೆಲೆ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಅಭಿಪ್ರಾಯ ಸಂಗ್ರಹದ ಬಗ್ಗೆ ಮಾತನಾಡಿ, ಮುಂಬರುವ ಸ್ಥಳೀಯಾಡಳಿತದ ಪರಿಷತ್ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಇಂದು ಸಭೆ ನಡೆಸಲಾಗಿದೆ. ಮೂಲಭೂತ ತಳಹದಿಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ನಾಯಕರು, ಹಿರಿಯರ ಜೊತೆ ಚರ್ಚಿಸಿ ಯಾವ ರೀತಿ ಚುನಾವಣಾ ಪ್ರಕ್ರಿಯೆ ಮಾಡಬೇಕು ಅಂತ ಚರ್ಚಿಸುತ್ತೇವೆ. ಈ ಬಗ್ಗೆ ವರದಿ ಕೊಡಲು ಕೋರ್ ಕಮಿಟಿಯಲ್ಲಿ ನಿರ್ಧಾರ ಆಗಿತ್ತು ಅದರಂತೆ ಮಂಗಳೂರಿಗೆ ನನ್ನನ್ನು ಕಳುಹಿಸಿ ಕೊಟ್ಟಿದ್ದಾರೆ. ಎಲ್ಲರ […]