ಲಾಕ್ ಡೌನ್ ಜೂಜಾಟ : ಹನ್ನೊಂದು ಮಂದಿಯ ಬಂಧನ, 1,76,800/- ರೂ ಮೌಲ್ಯದ ಸೊತ್ತು ವಶ

Friday, May 21st, 2021
Andar Bahar

ಮಂಗಳೂರು : ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪದವು ಗ್ರಾಮದ ಬಿಕರ್ನಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿ, ಸಾಮಾಜಿಕ ಅಂತರವನ್ನು ಪಾಲಿಸದೇ ಮಾಸ್ಕ್ ಧರಿಸದೇ ಅಕ್ರಮ ಜೂಜಾಟವಾದ ಆಂದರ್- ಬಾಹರ್ ಆಟವನ್ನು ಆಡುತ್ತಿದ್ದ ಹನ್ನೊಂದು ಮಂದಿಯನ್ನು ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐಯವರಾದ  ರಾಜೇಂದ್ರ. ಬಿ, ಪ್ರದೀಪ ಟಿಆರ್ ಮತ್ತು ಸಿಬ್ಬಂದಿಗಳು ಮೇ 21 ಶುಕ್ರವಾರ ಬಂಧಿಸಿದ್ದಾರೆ. 1) ರಾಜೇಂದ್ರ ಹಲ್ದಾರ್(41), ವಾಸ:, ಆದಿಲಬಾದ್, ತೆಲಂಗಾಣ, ಹಾಲಿ ವಾಸ ಪದವು ಕುಲಶೇಖರ, ಮಂಗಳೂರು 2) […]

ಕೊರೋನಾ ಸೋಂಕಿತರು ಮೇ 21 : ದ.ಕ. 864 – ಸಾವು 7, ಉಡುಪಿ 855 -ಸಾವು 7, ಕಾಸರಗೋಡು 650

Friday, May 21st, 2021
positive

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಶುಕ್ರವಾರ 864 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 1166 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಶುಕ್ರವಾರ ಮತ್ತೆ 7 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 845ಕ್ಕೇರಿದೆ. ಜಿಲ್ಲೆಯಲ್ಲಿ ಈವರಗೆ 8,20,577 ಮಂದಿಯ ಗಂಟಲ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,52,050 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 68,527 ಮಂದಿ ಕೊರೋನ ಸೋಂಕಿಗೊಳಗಾಗಿದ್ದಾರೆ. ಈ ಪೈಕಿ 57,284 ಮಂದಿ ಗುಣಮುಖರಾಗಿದ್ದಾರೆ. ಸದ್ಯ 10,398 […]

ಇಂದಿರಾ ಕ್ಯಾಂಟೀನ್‌ಗಳಲ್ಲಿ ಮೂರು ಹೊತ್ತು ಉಚಿತ ಊಟ, ಉಪಹಾರ – ಮೇಯರ್

Friday, May 21st, 2021
Indira Canteen

ಮಂಗಳೂರು : ಪಾಲಿಕೆ ವ್ಯಾಪ್ತಿಯ 5 ಪ್ರದೇಶಗಳಲ್ಲಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಕೂಲಿ ಕಾರ್ಮಿಕರು, ವಲಸಿಗರು, ದುರ್ಬಲ ವರ್ಗದವರು ಹಾಗೂ ಸಂಕಷ್ಟಗೊಳಗಾದ ಸ್ಥಳೀಯರಿಗೆ ಅನುಕೂಲವಾಗುವಂತೆ ಉಚಿತವಾಗಿ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟವನ್ನು ಉಚಿತವಾಗಿ ನೀಡಲಾಗುತ್ತಿದೆ. ನಗರದಲ್ಲಿ ಕಂಡುಬರುವ ನಿರ್ಗತಿಕರಿಗೆ ಪಾಲಿಕೆಯ ಡೇ ನಲ್ಮ್ ಯೋಜನೆಯಡಿ ಬಂದರಿನಲ್ಲಿ (ಪುರುಷರು), ಉರ್ವಾದಲ್ಲಿ (ಮಹಿಳೆಯರು) ಆರಂಭಿಸಿರುವ ರಾತ್ರಿ ವಸತಿರಹಿತ ಆಶ್ರಯ ಕೇಂದ್ರಗಳಿಗೆ ತಲುಪಿಸಿ ಆರೈಕೆ ಮಾಡಲಾಗುತ್ತಿದೆ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದರು. ಪಾಲಿಕೆಯ ಕಚೇರಿಯಲ್ಲಿ ಮಾತನಾಡಿದ ಅವರು ನಗರದ 10 ಆರೋಗ್ಯ […]

ಕಾಂಗ್ರೇಸಿನ ಟೂಲ್ ಕಿಟ್ ಪ್ರಮಾದವನ್ನು ದೇಶ ಎಂದಿಗೂ ಕ್ಷಮಿಸದು – ಶಾಸಕ ಕಾಮತ್

Friday, May 21st, 2021
Vedavyas Kamath

ಮಂಗಳೂರು : ಕೋವಿಡ್ ಸಂಕಷ್ಟದ ಪರಿಸ್ಥಿತಿಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಕಾಂಗ್ರೇಸ್ ಹವಣಿಸುತ್ತಿದೆ. ಆದರೆ ಜನರು ಬುದ್ಧಿವಂತರಾಗಿದ್ದಾರೆ. ಕಾಂಗ್ರೇಸಿನ ನೀಚ ರಾಜಕಾರಣವನ್ನು ಜನತೆ ಸರಿಯಾಗಿ ಅರ್ಥೈಸಿಕೊಂಡಿದ್ದಾರೆ ಎಂದು ವೇದವ್ಯಾಸ್ ಶಾಸಕ ಕಾಮತ್ ಹೇಳಿದ್ದಾರೆ. ದೇಶವು ಕೋವಿಡ್ ಸೋಂಕಿನ ವಿರುದ್ಧ ಹೋರಾಡುತ್ತಿರುವ ಸಂದರ್ಭದಲ್ಲಿ ಕಾಂಗ್ರೇಸ್ ತನ್ನ ಕಾರ್ಯಕರ್ತರಿಗೆ ನೀಡಿರುವ ಟೂಲ್ ಕಿಟ್ ಒಂದು‌ ವ್ಯವಸ್ಥಿತ ಷಡ್ಯಂತ್ರದ ಭಾಗವಾಗಿದೆ. ಕೇವಲ ರಾಜಕೀಯ ಲಾಭಕ್ಕಾಗಿ ದೇಶದ ಹಿತವನ್ನು ಬಲಿಗೊಡಲು ಕಾಂಗ್ರೇಸ್ ಪ್ರಯತ್ನಿಸುತ್ತಿದೆ. ಕಳೆದ 70 ವರ್ಷಗಳ ಕಾಲ ಜನರನ್ನು ವಂಚಿಸಿ ಆಡಳಿತಕ್ಕೆ ಬಂದ […]

ಡಾ.ಬಿ ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕೇಸ್; ಸಿಪಿಐ(ಎಂ) ಆಕ್ಷೇಪ

Friday, May 21st, 2021
Vasantha Achari

ಮಂಗಳೂರು  : ನಾಡಿನ ಸಮಾಜಮುಖಿ ವೈದ್ಯರಾದ ಡಾ.ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕ್ಷುಲ್ಲಕ ಕಾರಣಕ್ಕೆ ಕೇಸ್ ದಾಖಲಿಸಿರುವುದಕ್ಕೆ ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ. ಸೂಪರ್ ಮಾರ್ಕೆಟ್ ಒಳಗಡೆ ಮಾಸ್ಕ್ ಧರಿಸಲಿಲ್ಲ ಎಂಬ ಕಾರಣಕ್ಕೆ ನಡೆದ ವಾದ ವಿವಾದದ ಅನ್ವಯ ಈ ಕೇಸನ್ನು ದಾಖಲಾತಿಸಲಾಗಿದೆ ಎಂದು ಪೋಲೀಸ್ ಅಧಿಕಾರಿಗಳು ತಿಳಿಸಿದ್ದು ಇದು ಪಿತೂರಿಯ ಷಡ್ಯಂತ್ರವಿದೆ ಕೂಡಿದ್ದು ಈ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿದ ವೀಡೀಯೋ ದಿಂದ ತಿಳಿದು ಬರುತ್ತದೆ ಎಂದು ಸಿಪಿಐ(ಎಂ) ಪತ್ರಿಕಾ ಹೇಳಿಕೆಯಲ್ಲಿ […]

ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಗುರು ವಂ. ವಿನ್ಸೆಂಟ್ ವಿಕ್ಟರ್ ಮಿನೇಜಸ್ ನಿಧನ

Friday, May 21st, 2021
vincent

ಮಂಗಳೂರು : ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಗುರು ಹಾಗೂ ರಾಕ್ಣೊ ವಾರಪತ್ರಿಕೆಯ ಮಾಜಿ ಸಂಪಾದಕ ವಂ. ವಿನ್ಸೆಂಟ್ ವಿಕ್ಟರ್ ಮಿನೇಜಸ್ (75) ನಗರದ ಫಾ. ಮುಲ್ಲರ್ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು. 1945ರಲ್ಲಿ ವಾಲೆನ್ಶಿಯಾದಲ್ಲಿ ಜನಿಸಿದ ಅವರು 1974ರಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಧರ್ಮಗುರುವಾಗಿ ದೀಕ್ಷೆ ಪಡೆದರು. ಸಹಾಯಕ ಧರ್ಮಗುರುವಾಗಿ ಕಿರೆಂ ಮತ್ತು ಬಿಜಯ್ ನಲ್ಲೂ ಹಾಗೂ ನಾರಂಪಾಡಿ, ಪೆರ್ನಾಲ್, ಮಿಯಾರ್, ಕಾಸ್ಸಿಯಾ, ದೇರೆಬೈಲ್, ಪಾಲ್ದಾನೆ ಚರ್ಚುಗಳಲ್ಲಿ ಧರ್ಮಗುರುವಾಗಿ ಸೇವೆ ಸಲ್ಲಿಸಿದ್ದರು. ನಿವೃತ್ತಿಯ ನಂತರ ಅವರು ಜೆಪ್ಪುವಿನ ವಿಶ್ರಾಂತ ಧರ್ಮಗುರುಗಳ ನಿವಾಸದಲ್ಲಿ […]

ಪತ್ರಕರ್ತರನ್ನು ಫ್ರಂಟ್ ಲೈನ್ ವಾರಿಯರ್ಸ್‌ ಎಂದು ಹೇಳಿ ಲಸಿಕೆ ಕೊಟ್ಟರೆ ಸಾಲದು, ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ

Thursday, May 20th, 2021
journalist

ಮಂಗಳೂರು : ಪತ್ರಕರ್ತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿದೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅವರು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ  ಶಿವಾನಂದ‌ ತಗಡೂರು ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ. ಕೋವಿಡ್-19 ಲಾಕ್ ಡೌನ್ ಕಾರಣದಿಂದಾಗಿ ರಾಜ್ಯದಲ್ಲಿ ಪತ್ರಕರ್ತರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಪ್ರದೇಶಗಳ ಪತ್ರಕರ್ತರ ಸ್ಥಿತಿ ಶೋಚನೀಯವಾಗಿದೆ. ಅವರಿಗೆ ಸಂಬಳ, […]

ಮುಖ್ಯಮಂತ್ರಿಗಳಿಗೆ ತಲುಪಿದ ಕುಕ್ಕೆ ಸುಬ್ರಮಣ್ಯ ದೇವರ ಹೋಮದ ಪ್ರಸಾದ, ರೂ.100.00 ಕೋಟಿ ಬಿಡುಗಡೆಗೆ ಸಚಿವರ ಮೊರೆ

Thursday, May 20th, 2021
Angara

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಚಿವ ಎಸ್.ಅಂಗಾರ ಅವರ ನೇತೃತ್ವದಲ್ಲಿ ಶಾಸಕರ ನಿಯೋಗವು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿಪ್ರಕೃತಿ ವಿಕೋಪ ನಿಧಿಯಿಂದ ರೂ. 100.00 ಕೋಟಿಗಳನ್ನು ಮಂಜೂರು ಮಾಡುವಂತೆ ಮನವಿ ಸಲ್ಲಿಸಿದರು. ಕೊರೋನಾ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಬಂದು ಸರ್ವರಿಗೆ ಸುಖ, ಆರೋಗ್ಯ,ಸಮೃದ್ಧಿ ಕರುಣಿಸಲೆಂದು ಶ್ರೀ ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ ನಡೆಸಲಾದ ಧನ್ವಂತರಿ ಹೋಮ, ಕ್ರಿಮಿಹಾರ ಸೂಕ್ತ ಹೋಮ, ಚಂಡಿಕಾ ಯಾಗ, ಶ್ರೀ ಸುಬ್ರಮಣ್ಯ ದೇವರ ಪ್ರಸಾದವನ್ನು […]

ಶೋಭಾ ಕರಂದ್ಲಾಜೆಯ ಪ್ರಜಾಪ್ರಭುತ್ವದ ಸದಸ್ಯತ್ವದಿಂದ ರದ್ದು ಮಾಡಬೇಕು : ಐವನ್ ಡಿ ಸೋಜ

Thursday, May 20th, 2021
ivan

ಮಂಗಳೂರು : ದೇಶದ ಲೋಕಸಭೆಗೆ ಶೋಭಾ ಕರಂದ್ಲಾಜೆಯಂತಹ ಸಂಸದರು ಆಯ್ಕೆಯಾಗಿರುವುದು ಪ್ರಜಾಪ್ರಭುತ್ವದ ಒಂದು ದೊಡ್ಡ ದುರಂತ,  ಇಂತಹವರನ್ನು ಪ್ರಜಾಪ್ರಭುತ್ವದ ಸದಸ್ಯತ್ವದಿಂದ ರದ್ದು ಮಾಡಬೇಕು. ತಮ್ಮ ಸ್ವಾರ್ಥಕ್ಕಾಗಿ ಒಂದು ಸಮುದಾಯವನ್ನೇ ಬಲಿತೆಗೆದುಕೊಂಡು, ಸುಳ್ಳು ಹೇಳಿಕೆಗಳನ್ನು ನೀಡಿರುವುದು ಪ್ರಜಾಪ್ರಭುತ್ವದಲ್ಲಿ ಇದೊಂದು ಕಪ್ಪು ಚುಕ್ಕೆ  ಎಂದು ಐವನ್ ಡಿ ಸೋಜ ತಿಳಿಸಿದರು. ಶೋಭಾ ಕರಂದ್ಲಾಜೆ ಕ್ರೈಸ್ತ ಸಮಾಜಕ್ಕೆ ಅಪಮಾನ ಮಾಡಿರುವುದನ್ನು ಖಂಡಿಸಿ ಕಮಿಷನರಿಗೆ, ಉಪಪೋಲಿಸ್ ಆಯುಕ್ತ(ಡಿಸಿಪಿ)ರಾದ ಹರಿರಾಮ್ ಶಂಕರ್, ಇವರಿಗೆ ದೂರು  ನೀಡಲಾಯಿತು ಮತ್ತು ಕೂಡಲೇ ಕೇಸು ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಯಿತು. ಮನವಿಯನ್ನು ಸ್ವೀಕರಿಸಿದ ಡಿಸಿಪಿಯವರು […]

ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಕಾರು ಮತ್ತು ಸ್ಕೂಟರ್ ಡಿಕ್ಕಿ, ಮಹಿಳೆ ಮೃತ್ಯು

Thursday, May 20th, 2021
Thokkottu Accident

ಉಳ್ಳಾಲ : ಕಾರು ಮತ್ತು ಸ್ಕೂಟರ್ ನಡುವೆ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಉಂಟಾದ ಅಪಘಾತದಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಕುಂಪಲ ಆಶ್ರಯ ಕಾಲನಿ ನಿವಾಸಿ ವಸಂತಿ ನಾಯರ್ (45) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ವಸಂತಿ ಅವರು ಇಂದು ಬೆಳಗ್ಗೆ ಜಪ್ಪಿನ ಮೊಗರಿನಲ್ಲಿರುವ ತನ್ನ ತಾಯಿಯನ್ನು ನೋಡಲು ಮಗಳ ಜೊತೆ ತೆರಳುತ್ತಿರುವ ವೇಳೆ ಅಪಘಾತ ನಡೆದಿದೆ. ತಲಪಾಡಿ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ನೆಗೆದು ಸ್ಕೂಟರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ […]