ಏಳು ತಿಂಗಳ ಗರ್ಭಿಣಿ, ಪ್ರೊಬೇಷನರಿ ಮಹಿಳಾ ಪೊಲೀಸ್ ಇನ್ಸ್ ಪೆಕ್ಟರ್ ಶಾಮಿಲಿ ಕೋವಿಡ್ ಗೆ ಬಲಿ

Tuesday, May 18th, 2021
Shalini

ಮಂಗಳೂರು : ದಕ್ಷಿಣ ಕನ್ನಡ ಪೊಲೀಸ್ ಠಾಣೆಯಲ್ಲಿ ಪ್ರೊಬೇಷನರಿ ಮಹಿಳಾ ಪೊಲೀಸ್ ಇನ್ಸ್ ಪೆಕ್ಟರ್ 24 ವರ್ಷದ ಶಾಮಿಲಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಕೋಲಾರ ಮೂಲದ ಶಾಮಿಲಿ ದಕ್ಷಿಣ ಕನ್ನಡ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದು 7 ತಿಂಗಳ ಗರ್ಭಿಣಿ ಯಾಗಿದ್ದರು. ಅತಿ ಸಣ್ಣ ವಯಸ್ಸಿನ ಶಾಮಿಲಿ ಮಾರಕ ಕೊರೋನಾ ಗೆ ಬಲಿಯಾಗಿದ್ದಾರೆ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಮಾಡಿದ್ದಾರೆ. ಶಾಮಿಲಿ ಕೋಲಾರದ ಆರ್ ಎಲ್ ಜಾಲಪ್ಪ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ದಕ್ಷಿಣ ಕನ್ನಡ ಸೂಪರಿಂಡೆಂಟ್ ರಿಷಿಕೇಶ್ ಸೋನಾವಾನೆ ಟ್ವೀಟ್ ಮಾಡಿದ್ದಾರೆ. […]

ಎಚ್ಚರಿಕೆ ನೀಡಿದ್ದಾಗಲೂ ಟಗ್ ಬೋಟ್ ಹಿಂದಿರುಗದ ಕುರಿತಂತೆ ತನಿಖೆಗೆ ಆದೇಶ

Monday, May 17th, 2021
R Ashoka

ಮಂಗಳೂರು : ಟೌಟೆ ಚಂಡಮಾರುತದ ಕುರಿತಂತೆ ಉಂಟಾಗಲಿರುವ ಹವಾಮಾನ ವೈಪರೀತ್ಯದ ಕುರಿತು ಜಿಲ್ಲಾ ಆಡಳಿತವು ನಿರಂತರ ಮುನ್ನೆಚ್ಚರಿಕೆ ನೀಡಿದ್ದಾಗಲೂ ದಡಕ್ಕೆ ಹಿಂದಿರುಗದ ಟಗ್ ಬೋಟ್ ಗಳ ನಿರ್ಧಾರದ ಕುರಿತಂತೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಸೋಮವಾರ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ಕಂದಾಯ ಸಚಿವ ಆರ್ ಅಶೋಕ ಅವರು ಈ ಕುರಿತಂತೆ ಪ್ರತಿಕ್ರಿಯೆ ನೀಡಿದ್ದು, ವರದಿಯ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಈ ಟಗ್ ಬೋಟ್ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ […]

ಬೋಟ್ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ ಎಂಆರ್‌ಪಿಎಲ್ ಕಂಪನಿಯಿಂದ ತಲಾ 10 ಲಕ್ಷ ರೂ ಪರಿಹಾರ : ಆರ್. ಅಶೋಕ್

Monday, May 17th, 2021
R Ashoka

ಮಂಗಳೂರು :   ತೌಕ್ತೆ ಚಂಡಮಾರುತದಿಂದ ದಕ್ಷಿಣ ಕನ್ನಡ. ಜಿಲ್ಲೆಯಲ್ಲಿ  ಹಾನಿಗೊಳಗಾದ ಪ್ರದೇಶಗಳಿಗೆ ಕಂದಾಯ ಸಚಿವರಾದ ಆರ್. ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎನ್.ಎಂ.ಪಿ.ಟಿ.ಗೆ ಆಗಮಿಸಿದ ಸಚಿವರು ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿ ಕೋಸ್ಟ್ ಗಾರ್ಡ್ ಹಾಗೂ ನೌಕಾಪಡೆಯ ಜಂಟಿ ಕಾರ್ಯಾಚರಣೆ ಮೂಲಕ ರಕ್ಷಿಸಲಾದ ಕೋರಮಂಡಲ್ ಸರೆಂಡರ್ 9ನ ಸಿಬ್ಬಂದಿಯನ್ನು ಭೇಟಿಯಾದರು. ಎನ್ಎಂಪಿಟಿಯಲ್ಲಿ ಕಂದಾಯ ಸಚಿವರು ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಡಿದ ಅವರು, ತೌಕ್ತೆ ಚಂಡಮಾರುತದಿಂದ ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಅಪಾರ ಹಾನಿ ಉಂಟಾಗಿದ್ದು, ಇದರಿಂದ […]

ಕೋವಿಡ್ ಸೋಂಕಿತ ವ್ಯಕ್ತಿಯ ಮೃತ ದೇಹ ಅದಲು ಬದಲು, ಮೃತ ವ್ಯಕ್ತಿಯ ಸಂಬಂಧಿಕರ ಆಕ್ರೋಶ

Monday, May 17th, 2021
Dead body

ಕಾರ್ಕಳ: ಆಸ್ಪತ್ರೆ ಸಿಬಂದಿಯ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತ ಪಟ್ಟ ವ್ಯಕ್ತಿಯ ಶವ ಬದಲಾಗಿರುವುದು ಸಂಬಂಧಿಕರಿಗೆ ತಿಳಿದು ಶವವನ್ನು ವಾಪಸ್ ಕಳಿಸಿದ ಘಟನೆ ಸೋಮವಾರ ನಡೆದಿದೆ. ಅಂತ್ಯ ಸಂಸ್ಕಾರಕ್ಕೆಂದು ಕಾರ್ಕಳದ ಕರಿಯಕಲ್ಲು ಸ್ಮಶಾನಕ್ಕೆ ಮೃತ ದೇಹ ತಂದಿದ್ದ ವೇಳೆ  ಈ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಶೃಂಗೇರಿ ಮೂಲದ 44 ರ ವಯಸ್ಸಿನ ವ್ಯಕ್ತಿ ಕಾರ್ಕಳದ ತನ್ನ ಪತ್ನಿ ಮನೆಗೆ ಬಂದಿದ್ದ ಅವರಿಗೆ ಸೋಂಕು ದೃಢ ಪಟ್ಟಿತ್ತು. ಮಂಗಳೂರು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.ಚಿಕಿತ್ಸೆ […]

ಸಮುದ್ರದ ಮಧ್ಯೆ ಬಂಡೆಗಳ ನಡುವೆ ಸಿಲುಕಿಕೊಂಡಿರುವ ಟಗ್ ಬೋಟಿನ ಎಲ್ಲಾ 9 ಜನರ ರಕ್ಷಣೆ

Monday, May 17th, 2021
Tug boat Rescue

ಮಂಗಳೂರು  : ಭಾರತೀಯ ಜನತಾ ಪಾರ್ಟಿಯ ರಾಜ್ಯ ಅಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ನಳೀನ್ ಕುಮಾರ್ ಕಟೀಲ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಯವರೊಂದಿಗೆ ಕೋಸ್ಟಲ್ ಗಾರ್ಡ್ ಡಿ. ಐ.ಜಿ ಶ್ರೀ ಎಸ್.ಬಿ. ವೆಂಕಟೇಶ್ ಅವರನ್ನು ಭೇಟಿ ಮಾಡಿ ಸಮುದ್ರದ ಪ್ರಕ್ಷುಬ್ಧತೆಯಿಂದ ಕಾಪು ಲೈಟ್ ಹೌಸ್ ನಿಂದ ಸುಮಾರು ಐದು ನಾಟಿಕಲ್ ದೂರದಲ್ಲಿ ಸಮುದ್ರದ ಮಧ್ಯೆ ಬಂಡೆಗಳ ನಡುವೆ ಸಿಲುಕಿಕೊಂಡಿರುವ ಮಂಗಳೂರಿನ ಎಂಆರ್ […]

ಪುತ್ತೂರು : ಲಾರಿ-ಸ್ಕೂಟರ್ ಡಿಕ್ಕಿ ಸವಾರ ಮೃತ್ಯು

Monday, May 17th, 2021
Seetharam

ಪುತ್ತೂರು : ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್ ರಸ್ತೆಯಲ್ಲಿನ ತೆಂಕಿಲ ಎಂಬಲ್ಲಿ  ಲಾರಿ ಮತ್ತು ಸ್ಕೂಟರೊಂದರ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಮೃತರನ್ನು ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಸೀತಾರಾಮ ಭಟ್ ಎಂದು ಗುರುತಿಸಲಾಗಿದೆ. ಸೀತಾರಾಮ ಭಟ್ ಬೆಳ್ಳಾರೆಯಿಂದ ತನ್ನ ಸ್ಕೂಟರ್‌ನಲ್ಲಿ ಮಂಗಳೂರು ರಸ್ತೆಯಲ್ಲಿ ಹೋಗುತ್ತಿದ್ದ ವೇಳೆಯಲ್ಲಿ ತೆಂಕಿಲದಲ್ಲಿ ಮುಂಭಾಗದಿಂದ ಆಗಮಿಸುತ್ತಿದ್ದ ಲಾರಿ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಅಪಘಾತದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಅವರು […]

ಕೊರೋನ ಸೋಂಕು ಮೇ 16 : ದಕ್ಷಿಣ ಕನ್ನಡ 957, ಏಳು ಸಾವು, ಉಡುಪಿ 745, 5 ಸಾವು

Monday, May 17th, 2021
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ 957 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 1,638 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ರವಿವಾರ ಜಿಲ್ಲೆಯಲ್ಲಿ 7 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 815ಕ್ಕೇರಿದೆ. ಜಿಲ್ಲೆಯಲ್ಲಿ ಈವರಗೆ 8,05,019 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,40,705 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 64,314 ಮಂದಿ ಕೊರೋನ ಪಾಸಿಟಿವ್‌ಗೊಳಗಾಗಿದ್ದಾರೆ. ಈ ಪೈಕಿ 50,993 ಮಂದಿ ಗುಣಮುಖರಾಗಿದ್ದಾರೆ. ಸದ್ಯ […]

ಕೋವಿಡ್ ಸಂದರ್ಭದಲ್ಲಿ ಧಾರ್ಮಿಕ ಆಚರಣೆಗಳಿಗೆ ಪರಿಹಾರವಿದೆ : ಡಿ. ವೀರೇಂದ್ರ ಹೆಗ್ಗಡೆ

Sunday, May 16th, 2021
veerendra Heggade

ಧರ್ಮಸ್ಥಳ  : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಪ್ರಿಲ್ ಮತ್ತು ಮೇ ತಿಂಗಳು ಧಾರ್ಮಿಕ ಚಟುವಟಿಕೆಗಳಿಗೆ ಪ್ರಮುಖವಾದ ಮಾಸವಾಗಿದೆ. ಈ ಉಭಯ ಜಿಲ್ಲೆಗಳಲ್ಲಿ ಪ್ರಾಕೃತಿಕವಾಗಿಯೂ ಮೇ ತಿಂಗಳ ಬಳಿಕ 4 ರಿಂದ 5 ತಿಂಗಳು ಮಳೆಗಾಲವಾದುದರಿಂದ ಕೃಷಿಯನ್ನು ಹೊರತುಪಡಿಸಿ ಯಾವುದೇ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಹತ್ತನಾವಧಿ ಅಂದರೆ ವರ್ಷದಲ್ಲಿ ದೇವಸ್ಥಾನ, ದೈವಸ್ಥಾನ, ಭೂತಸ್ಥಾನ ಮತ್ತು ಕೌಟುಂಬಿಕ ಸಾನಿಧ್ಯಗಳ ನಾಗಾರಾಧನೆ ಇತ್ಯಾದಿ ನಡೆಯುತ್ತದೆ. ಆ ಬಳಿಕ ದೀಪಾವಳಿ ವರೆಗೂ ಎಲ್ಲಾ ಧಾರ್ಮಿಕ ಚಟುವಟಿಕೆಗಳಿಗೆ ವಿಶ್ರಾಂತಿ ಇರುತ್ತದೆ ಮತ್ತು […]

ಫಲ್ಗುಣಿ ನದಿಯ ಸಂಪರ್ಕ ಹಳ್ಳದಲ್ಲಿ 25ಕ್ಕಿಂತಲೂ ಅಧಿಕ ನೀರುನಾಯಿಗಳು

Sunday, May 16th, 2021
water Dog

ಉಜಿರೆ : ಬೆಳ್ತಂಗಡಿ ತಾಲ್ಲೂಕಿನ ಗರ್ಡಾಡಿ ಬಳಿಯ ಫಲ್ಗುಣಿ ನದಿಯ ಸಂಪರ್ಕ ಹಳ್ಳದಲ್ಲಿ ಶನಿವಾರ ನೀರುನಾಯಿಗಳ ಹಿಂಡು ಕಂಡುಬಂದಿವೆ. ಇದೇ ಸ್ಥಳದಲ್ಲಿ ಕಳೆದ ಅಕ್ಟೋಬರ್‌ನಲ್ಲಿ ರಾತ್ರಿ ಹೊತ್ತು ನೀರುನಾಯಿಗಳು ಕಂಡುಬಂದಿದ್ದವು. ಇದೀಗ ಹಗಲಿನಲ್ಲಿ 25ಕ್ಕಿಂತಲೂ ಅಧಿಕ ನೀರುನಾಯಿಗಳು ಫಲ್ಗುಣಿ ನದಿಯ ಸಂಪರ್ಕ ಹಳ್ಳದಲ್ಲಿ ಕಂಡುಬಂದಿರುವುದು ಆಶ್ಚರ್ಯ ಉಂಟುಮಾಡಿದೆ’

ಎಂಆರ್‌ಪಿಎಲ್‌ಗೆ ಸೇರಿದ್ದ ತೇಲು ಜೆಟ್ಟಿ ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಮುಳುಗಡೆ, ಇಬ್ಬರು ಮೃತ, ಐವರು ನಾಪತ್ತೆ

Sunday, May 16th, 2021
Tag Boat

ಮಂಗಳೂರು : ಎಂಆರ್‌ಪಿಎಲ್‌ಗೆ ಸೇರಿದ್ದ ತೇಲು ಜೆಟ್ಟಿ (ಸಿಂಗಲ್ ಪಾಯಿಂಟ್ ಮೂರಿಂಗ್-ಎಸ್‌ಪಿಎಂ) ನಿರ್ವಹಣೆ ಮಾಡುವವರ ಟಗ್‌ನೌಕೆ ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಅರಬಿ ಸಮುದ್ರದಲ್ಲಿ ಮುಳುಗಡೆಯಾಗಿ ಇಬ್ಬರು ಮೃತಪಟ್ಟು, ಐವರು ನಾಪತ್ತೆಯಾಗಿದ್ದಾರೆ.  ನಾಪತ್ತೆಯಾಗಿದ್ದ ವರಿಗಾಗಿ ರವಿವಾರವೂ ಶೋಧಕಾರ್ಯ ಮುಂದುವರಿದಿದೆ‌. ಮಂಗಳೂರಿನ ನವಮಂಗಳೂರು ಬಂದರ್‌ನಿಂದ ಸುಮಾರು 17 ನಾಟಿಕಲ್ ಮೈಲ್ ದೂರದಲ್ಲಿ ಅರಬಿ ಸಮುದ್ರದಲ್ಲಿರುವ ಎಸ್‌ಪಿಎಂ ಮೂಲಕ ಬೃಹತ್ ತೈಲ ಹಡಗುಗಳಿಂದ ಈ ನೌಕೆಯ ತೈಲವನ್ನು ಸ್ವೀಕರಿಸಲಾಗುತ್ತದೆ. ಇದಕ್ಕೆ ಬೇಕಾದ ನಿರ್ವಹಣಾ ಕೆಲಸಗಳಿಗೆ ಟಗ್ ಮೂಲಕ ಹೊರಗುತ್ತಿಗೆಯ ತಾಂತ್ರಿಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.  9 ಮಂದಿಯ ತಂಡ […]