ಕೊರೋನ ಸೋಂಕು ಪ್ರಕರಣಗಳು ಶನಿವಾರ : ದಕ್ಷಿಣ ಕನ್ನಡ ಜಿಲ್ಲೆ 1787- ಮೂರು ಸಾವು, ಉಡುಪಿ 1146 – ಏಳು ಸಾವು
Sunday, May 16th, 2021ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 1787 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 1,490 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಶನಿವಾರ 3 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್ಗೆ ಬಲಿಯಾದವರ ಸಂಖ್ಯೆ 808ಕ್ಕೇರಿದೆ. ಜಿಲ್ಲೆಯಲ್ಲಿ ಈವರಗೆ 8,01,768 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,38,411 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 63,357 ಮಂದಿ ಕೊರೋನ ಸೋಂಕಿಗೊಳಗಾಗಿದ್ದಾರೆ. ಈ ಪೈಕಿ 49,355 ಮಂದಿ ಗುಣಮುಖರಾಗಿದ್ದಾರೆ. […]