ಮಂಗಳೂರು ವಿ.ವಿಯಲ್ಲಿ ಶಿಕ್ಷಕರ ದಿನಾಚರಣೆ

Thursday, September 5th, 2024
Teachers-day

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಯು.ಆರ್ ರಾವ್ ಸಭಾಂಗಣದಲ್ಲಿ ಶಿಕ್ಷಕ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕುಲಸಚಿವ ರಾಜು ಕೆ. ಮೊಗವೀರ, ವಿಶ್ವದ ಯಾವುದೇ ವಿಶ್ವ ವಿದ್ಯಾಲಯಗಳ ನಿಜವಾದ ನಿರ್ಮಾತೃರು ಅಲ್ಲಿನ ಶಿಕ್ಷಕರು. ಪ್ರಸಕ್ತ ಶಿಕ್ಷಣವು, ವಿದ್ಯಾರ್ಥಿಗಳಲ್ಲಿ ತಮ್ಮ ಪ್ರಶ್ನೆಗಳಿಗೆ ಕಲ್ಪನೆಗೂ ಮೀರಿದ ಉತ್ತರಗಳನ್ನು ಕಂಡುಕೊಳ್ಳಲು ಹೊಸ ಸಾಧ್ಯತೆಗಳನ್ನು ತರೆದಿಡುವ ಮೂಲಕ ವ್ಯಕ್ತಿತ್ವ ವಿಕಾಸದೆಡೆಗೆ ಗಮನಹರಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ, ಪಿ.ಎಲ್ ಧರ್ಮ ಅವರು ತಮ್ಮ ವಿದ್ಯಾರ್ಥಿ ಜೀವನ ಮತ್ತು ವಿವಿ ಯಲ್ಲಿನ […]

ಭಂಡಾರಿ ಫೌಂಡೇಶನ್ ವತಿಯಿಂದ “ಗುರುವಂದನೆ”

Thursday, September 5th, 2024
Bhandary-Foundation

ಮಂಗಳೂರು: “ಶಿಕ್ಷಕರು ಸಮಾಜದಲ್ಲಿ ನಂಬಿಕೆ ಮತ್ತು ಅತ್ಯಂತ ಹೆಚ್ಚು ಗೌರವದ ಸ್ಥಾನಮಾನಕ್ಕೆ ಅರ್ಹರಾಗಿದವರು. ಆ ಸ್ಥಾನಮಾನ ಮುಂದೆಯೂ ಉಳಿಯುವಂತಾಗಲಿ“ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಅವರು ಗುರುವಾರ ಸಂಜೆ ಅಡ್ಯಾರ್ ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ಭಂಡಾರಿ ಫೌಂಡೇಶನ್ ವತಿಯಿಂದ ಜರುಗಿದ ಶಿಕ್ಷಕರ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. “ಶಿಕ್ಷಕ ವೃತ್ತಿ ಎನ್ನುವುದು ಸನ್ಯಾಸತ್ವ ಸ್ವೀಕಾರ ಮಾಡಿದಂತೆ. ಒಬ್ಬ ಸ್ಫೂರ್ತಿ ತುಂಬುವ ಶಿಕ್ಷಕನ ಮೂಲಕ ಆ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ದೇಶದಲ್ಲಿ […]

ಕಲರ್ಸ್ ಕನ್ನಡದಲ್ಲಿ ಸೆಪ್ಟೆಂಬರ್ 9ರಿಂದ ಹೊಸ ಧಾರಾವಾಹಿ ‘ದೃಷ್ಟಿಬೊಟ್ಟು’

Thursday, September 5th, 2024
drushti Bottu

ಮಂಗಳೂರು: ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು ‘ದೃಷ್ಟಿಬೊಟ್ಟು’. ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ ಆರೂವರೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ. ಜನಪ್ರಿಯ ಕಿರುತೆರೆ ತಾರೆ ವಿಜಯ್ ಸೂರ್ಯ ಈ ಧಾರಾವಾಹಿಯ ಮೂಲಕ ಕಲರ್ಸ್ ಕನ್ನಡ ವಾಹಿನಿಗೆ ಮರಳಿರುವುದು ವಿಶೇಷ. ನಾಯಕಿಯ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಎಂಬ ಹೊಸ […]

ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್… ಪತ್ನಿ ಸಮೇತ ಹಾಜರಾತಿಗೆ ಹೈಕೋರ್ಟ್ ಆದೇಶ

Tuesday, August 20th, 2024
timarodi

ಬೆಂಗಳೂರು : ನ್ಯಾಯಾಂಗ ನಿಂದನೆ ಯಾಗೂ ನ್ಯಾಯಾಧೀಶರನ್ನು ಸಾರ್ವಜನಿಕವಾಗಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಷರತ್ತಾಗಿ ಕ್ಷಮೆಯಾಚಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ ಪ್ರಮಾಣ ಪತ್ರವನ್ನು ಪುರಸ್ಕರಿಸಿದ ನ್ಯಾಯಾಲಯವು ನ್ಯಾಯಾಧೀಶರನ್ನು ನಿಂದಿಸಿದ ಪ್ರಕರಣವನ್ನು ಮುಕ್ತಾಯಗೊಳಿಸಿತ್ತು. ಆದರೆ ಇದೀಗ ಇನ್ನುಳಿದಂತೆ ಭೂ ಕಬಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿ ಮುಕ್ತಾಯಗೊಂಡಿರುವುದಿಲ್ಲವಾಗಿದ್ದು, ಆ ಪ್ರಕರಣದಲ್ಲಿ ಇದೇ ಆಗಸ್ಟ್ 29 ನ್ಯಾಯಾಲಯದ ಮುಂದೆ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಆತನ ಪತ್ನಿಗೆ ಕುದ್ದು ಹಾಜರಾತಿಗೆ ಆದೇಶ ಮಾಡಿದೆ.

“ಅನರ್ಕಲಿ” ತುಳು ಸಿನಿಮಾ ಆಗೋಸ್ಟ್ 23 ರಂದು ತೆರೆಗೆ

Tuesday, August 20th, 2024
Anarkali

ಮಂಗಳೂರು: ಲಕುಮಿ ಸಿನಿ ಕ್ರಿಯೇಷನ್ ಮತ್ತು ಲೋ ಬಜೆಟ್ ಪ್ರೊಡಕ್ಷನ್ ನಿರ್ಮಾಣದಲ್ಲಿ ಹರ್ಷಿತ್ ಸೊಮೇಶ್ವರ ನಿರ್ದೇಶನದಲ್ಲಿ ತಯಾರಾದ “ಅನರ್ ಕಲಿ” ತುಳು ಸಿನಿಮಾದ ಪತ್ರಿಕಾಗೋಷ್ಠಿ ಸೋಮವಾರ ಸಂಜೆ ನಗರದಲ್ಲಿ ನಡೆಯಿತು. ಮಾಧ್ಯಮವನ್ನುದ್ದೇಶಿಸಿ ಮಾತಾಡಿದ ಲಯನ್ ಕಿಶೋರ್ ಡಿ ಶೆಟ್ಟಿ ಅವರು, “ಅನರ್ಕಲಿ ಸಿನಿಮಾ ಈಗಾಗಲೇ ಪ್ರೀಮಿಯರ್ ಶೋ ಏರ್ಪಡಿಸಲಾಗಿದೆ. ಸಿನಿಮಾ ನೋಡಿದ ಪ್ರೇಕ್ಷಕರು ನಮ್ಮ ಪ್ರಯತ್ನವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸಿನಿಮಾ ಕುರಿತು ತುಳುನಾಡಿನಲ್ಲಿ ಒಳ್ಳೆಯ ಮಾತು ಕೇಳಿಬರುತ್ತಿದೆ. ಇದು ನಮ್ಮ ಚಿತ್ರತಂಡಕ್ಕೆ ಖುಷಿ ತಂದಿದೆ. ನಾಡಿದ್ದು ಆಗಸ್ಟ್ […]

“ಕಾಂಗ್ರೆಸ್ ಗೂಂಡಾ ರಾಜಕಾರಣ ಹೊಸದೇನೂ ಅಲ್ಲ” -ಡಾ.ವೈ.ಭರತ್ ಶೆಟ್ಟಿ

Tuesday, August 20th, 2024
Bharath-shetty

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಗೂಂಡಾ ಸಂಸ್ಕೃತಿ ರಾಜಕಾರಣ ಹೊಸದೇನೂ ಅಲ್ಲ. ಅದರ ಮುಂದುವರಿದ ಭಾಗವಾಗಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಬಸ್ಸಿಗೆ ಕಲ್ಲು ತೂರಾಟ ಮಾಡುವುದು, ಟೈರ್ ಗೆ ಬೆಂಕಿ ಹಚ್ಚುವುದು ಮಾಡಿದ್ದಾರೆ. ಇದು ರಾಜ್ಯದಲ್ಲಿ ಪಶ್ಚಿಮ ಬಂಗಾಲ ಮಾದರಿಯಲ್ಲಿ ಹಿಂಸಾಕೃತ್ಯ ನಡೆಸುವುದರ ಪೂರ್ವಸೂಚನೆಯಾಗಿದೆ” ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ವೈ.ಭರತ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ”ಸಾರ್ವಜನಿಕರು ಸಂಚರಿಸುವ ಬಸ್ಸಿಗೆ ಕಲ್ಲು ತೂರಾಟ ನಡೆಸಿ ಪ್ರಯಾಣಿಕರಿಗೆ […]

“ಪಡುಬಿದ್ರೆ-ಕಾರ್ಕಳ ಟೋಲ್ ನಿರ್ಮಾಣದ ವಿರುದ್ಧ ಪ್ರತಿಭಟನೆಗೆ ಬಸ್ ಮಾಲಕರ ಸಂಘ ಬೆಂಬಲ” -ಸುದೇಶ್ ಮರೋಳಿ

Tuesday, August 20th, 2024
sudesh-maroli

ಮಂಗಳೂರು: ”ಪಡುಬಿದ್ರೆ-ಕಾರ್ಕಳ ಹೆದ್ದಾರಿಯಲ್ಲಿ ಕಂಚಿನಡ್ಕ ಬಳಿ ಟೋಲ್ ನಿರ್ಮಾಣ ಮಾಡಲು ಮುಂದಾಗಿರುವ ಕ್ರಮವನ್ನು ಕೆನರಾ ಬಸ್ ಮಾಲಕರ ಅಸೋಸಿಯೇಷನ್ ಖಂಡಿಸುತ್ತಿದ್ದು ಇದರ ವಿರುದ್ಧ ಯಾವುದೇ ರೀತಿಯ ಪ್ರತಿಭಟನೆಗೆ ಸಂಘಟನೆ ಸಿದ್ಧವಾಗಿದೆ“ ಎಂದು ಸಂಘಟನೆಯ ಕಾರ್ಯದರ್ಶಿ ಸುದೇಶ್ ಮರೋಳಿ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು. “ಕೇಂದ್ರ ಸರಕಾರದ ನಿಯಮಗಳ ಅನ್ವಯ ಹೆದ್ದಾರಿಯಲ್ಲಿ 60 ಕಿಮೀ ಅಂತರದಲ್ಲಿ ಟೋಲ್ ಗೇಟ್ ನಿರ್ಮಾಣ ಮಾಡಲು ಅವಕಾಶವಿಲ್ಲ. ಆದರೆ ಹೆಜಮಾಡಿ ಟೋಲ್ ಗೇಟ್ ಇಲ್ಲಿಂದ 6 ಕಿಮೀ ದೂರದಲ್ಲಿದ್ದು ಇದರಿಂದ ಸಾರ್ವಜನಿಕರಿಗೆ ಭಾರೀ ಹೊರೆ ಬೀಳಲಿದೆ. […]

“ಸಿದ್ದರಾಮಯ್ಯ ರಾಜೀನಾಮೆ ಕೊಡುವ ತನಕ ಹೋರಾಟ ನಿರಂತರ” -ವೇದವ್ಯಾಸ ಕಾಮತ್

Tuesday, August 20th, 2024
vedavyas-kamath

ಮಂಗಳೂರು: “ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ್ದು ನಿಷ್ಪಕ್ಷಪಾತ ತನಿಖೆಗೆ ಅನುಕೂಲವಾಗುವಂತೆ ಕೂಡಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು“ ಎಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಪತ್ರಿಕಾಗೋಷ್ಟಿಯಲ್ಲಿ ಒತ್ತಾಯಿಸಿದ್ದಾರೆ. ”ಸಂವಿಧಾನದ ರಕ್ಷಣೆ ತಮ್ಮಿಂದ ಮಾತ್ರ ಎಂದು ಹೇಳಿಕೊಂಡು ಓಡಾಡುತ್ತಿರುವ ಕಾಂಗ್ರೆಸಿಗರು ಪ್ರತಿಭಟನೆ ನೆಪದಲ್ಲಿ ರಾಜ್ಯದೆಲ್ಲೆಡೆ ಗಲಭೆ ನಡೆಸುತ್ತಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಯಾರೇ ಮಾತಾಡಿದರೂ ಅವರು ಸರಿಯಿಲ್ಲ ಅವರು ಬಿಜೆಪಿ ಏಜೆಂಟ್ ಎಂದು ಸಿದ್ದರಾಮಯ್ಯ […]

ಸಮೃದ್ಧ ಮೀನುಗಾರಿಕೆಗೆ ಹಾರೈಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ

Tuesday, August 20th, 2024
samudra-pooje

ಮಂಗಳೂರು: ಮೀನುಗಾರರ ಶ್ರೇಯೋಭಿವೃದ್ದಿಗಾಗಿ ತಣ್ಣೀರುಬಾವಿ ಮೊಗವೀರ ಮಹಾಸಭಾ (ರಿ) ಇದರ ವತಿಯಿಂದ ಚಿತ್ರಾಪುರ ಕಡಲ ಕಿನಾರೆಯಲ್ಲಿ ಆ. 19ರಂದು ಸಮುದ್ರ ಪೂಜೆ ನಡೆಯಿತು. ಸಮುದ್ರರಾಜನಿಗೆ ಹಾಲು, ಫಲ ಅರ್ಪಿಸಿ, ಸಮುದ್ರ ಪೂಜೆಯಲ್ಲಿ ಭಾಗಿಯಾಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟ ದ.ಕ. ಸಂಸದ ಕ್ಯಾ| ಬ್ರಿಜೇಶ್ ಚೌಟ ” ಕರಾವಳಿಯಲ್ಲಿ ನೂಲ ಹುಣ್ಣಿಮೆಯಂದು ಸಮುದ್ರರಾಜನಿಗೆ ಪೂಜೆ ಸಲ್ಲಿಸುವುದು ಸಾಮಾನ್ಯ ಪ್ರತೀತಿ. ಹೊಸಋತುವಿನ ಮೀನುಗಾರಿಕೆಗೆ ತೆರಳುವ ಪ್ರತಿ ಮೀನುಗಾರರನ್ನು ಯಾವುದೇ ಪ್ರಾಣಾಪಾಯ ಇಲ್ಲದಂತೆ ಸಮುದ್ರರಾಜ ರಕ್ಷಿಸಲಿ, ಮತ್ಸ್ಯ ಸಮೃದ್ಧಿ ಉಂಟಾಗಲಿ” […]

ರೂಪೇಶ್ ಶೆಟ್ಟಿ ಹೊಸ ತುಳು ಚಿತ್ರ “ಜೈ” ಟೈಟಲ್ ಅನಾವರಣ ಕಾರ್ಯಕ್ರಮ

Monday, August 19th, 2024
jai

ಮಂಗಳೂರು: ಬಿಗ್ ಬಾಸ್ ರೂಪೇಶ್ ಶೆಟ್ಟಿ ಹಾಗೂ ತಂಡದ ತುಳು ಚಲನ ಚಿತ್ರ “ಜೈ” ಇದರ ಟೈಟಲ್ ಅನಾವರಣ ಕಾರ್ಯಕ್ರಮ ಆದಿತ್ಯವಾರ ಸಂಜೆ ಸಿಟಿ ಸೆಂಟರ್ ಮಾಲ್ ನಲ್ಲಿ ಜರುಗಿತು. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಮಂಗಳೂರು ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ದಕ್ಷಿಣ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್, ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಬಳಿಕ ಮಾತಾಡಿದ ಸ್ಪೀಕರ್ ಯು.ಟಿ.ಖಾದರ್ ಅವರು, “ಹಿಂದೆ ತುಳು ಭಾಷೆ ನಮ್ಮ ಜಿಲ್ಲೆಗೆ ಮಾತ್ರ ಸೀಮಿತ ಎಂಬ ಮಾತಿತ್ತು. ಆದರೆ […]