ಕಾಸರಗೋಡು : ಮಂಜೇಶ್ವರ ಕ್ಷೇತ್ರದ ಅಭ್ಯರ್ಥಿ ವಿ.ವಿ. ರಮೇಶನ್, ಕಾಸರಗೋಡು ಕ್ಷೇತ್ರದ ಎಂ.ಎ. ಲತೀಫ್ ಪರ ಚುನಾವಣಾ ಪ್ರಚಾರದಲ್ಲಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇರಳದಲ್ಲಿ ಈ ಬಾರಿ ಒಂದು ಸ್ಥಾನಕ್ಕೂ ಅವಕಾಶ ನೀಡುವುದಿಲ್ಲ ಎಂದಿದ್ದಾರೆ. ಬಿಜೆಪಿ 2019 ರಲ್ಲಿ ಕೇವಲ ಒಂದೇ ಒಂದು ಸ್ಥಾನದಲ್ಲಿ ಖಾತೆ ತೆರೆದಿದ್ದು ನೇಮಂನಲ್ಲಿ ಗೆದ್ದಿತ್ತು. ಈ ಬಾರಿ ಈ ಖಾತೆಯನ್ನು ಮುಚ್ಚುತ್ತೇವೆ, ಕಾಂಗ್ರೆಸ್ ನ ಒಳಒಪ್ಪಂದದಿಂದ ಬಿಜೆಪಿ ಗೆದ್ದಿತ್ತು. ಈ ಬಾರಿ ಅದನ್ನು ಬಂದ್ ಮಾಡುತ್ತೇವೆ ಎಂದು ಹೇಳಿದರು. ಮೊಗ್ರಾಲ್ ಶಾಲಾ ಮೈದಾನ ದಲ್ಲಿ ಮಂಜೇಶ್ವರ […]
ಮಂಗಳೂರು : ಕೋವಿಡ್ 19 ನ್ನು ಪರಿಣಾಮ ಕಾರಿಯಾಗಿ ನಿಯಂತ್ರಿಸುವ ದೃಷ್ಟಿಯಿಂದ ದ. ಕ ಜಿಲ್ಲಾಧಿಕಾರಿಯವರು ಹೊರಡಿಸಿರುವ ಆದೇಶಕ್ಕೆ ಸಾರ್ವಜನಿಕರು ಆತಂಕ ವ್ಯಕ್ತ ಪಡಿಸಿದ್ದು, ಮರು ಸ್ಪಷ್ಟನೆ ನೀಡಲು ಜಿಲಾಧಿಕಾರಿಯವರಿಗೆ ಸೂಚನೆ ಕೊಟ್ಟಿರುವುದಾಗಿ ದ. ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದ್ದಾರೆ. ಜಿಲ್ಲೆಯಲ್ಲಿ ಯಕ್ಷಗಾನ, ಕೋಲಾ, ನೇಮ, ಪೂಜೆ, ಜಾತ್ರೆ ಮತ್ತು ಸಾಂಪ್ರದಾಯಿಕ ಧಾರ್ಮಿಕ ಕಾರ್ಯಕ್ರಮಗಳು ಕೋವಿಡ್ 19 ನಿಯಮಪಾಲನೆಯೊಂದಿಗೆ ನಡೆಸಬಹುದಾಗಿದೆ ಎಂದು ದ. ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿದ್ದಾರೆ. […]
ಮಂಗಳೂರು : ದ.ಕ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನ ಸೋಂಕಿತರ ಸಂಖ್ಯೆಯಿಂದ ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 (3) ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ. ಮಾರ್ಚ್ 29ರಿಂದಲೇ ದ.ಕ. ಜಿಲ್ಲೆಯಲ್ಲಿ 144(3) ಸೆಕ್ಷನ್ ನಿಷೇಧಾಜ್ಞೆ ಜಾರಿಯಲ್ಲಿದ್ದು, ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಹೋಳಿಹಬ್ಬ, ಶಬೇ ಬರಾಅತ್ , ಗುಡ್ ಫ್ರೈಡೇ ಇತ್ಯಾದಿ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳು ಇತ್ಯಾದಿ […]
ಮಂಗಳೂರು : ಭಾರತೀಯ ಸೇನೆಯ ಗಡಿಭದ್ರತಾ ಪಡೆ ( ಬಾರ್ಡರ್ ಸೆಕ್ಯುರಿಟಿ ಫೋರ್ಸ್) ಗೆ ಕರಾವಳಿಯ ಇಬ್ಬರು ವನಿತೆಯರು, ದೇಶ ಸೇವೆಗೆ ಆಯ್ಕೆಯಾಗಿದ್ದು, ಇದೇ ಏಪ್ರಿಲ್ 1ರಿಂದ ಭಾರತೀಯ ಸೇನೆಗೆ ಸೇರ್ಪಡೆಯಾಗಲಿದ್ದಾರೆ. ಭಾರತೀಯ ಸೇನೆಯ ಗಡಿಭದ್ರತಾ ಪಡೆ ( ಬಾರ್ಡರ್ ಸೆಕ್ಯುರಿಟಿ ಫೋರ್ಸ್) ಗೆ ಆಯ್ಕೆಯಾಗಿರುವ ಪುತ್ತೂರು ತಾಲೂಕಿನ ಬಲ್ನಾಡಿನ ರಮ್ಯಾ ಹಾಗೂ ಕಡಬ ತಾಲೂಕಿನ ಕಾಣಿಯೂರಿನ ಯೋಗಿತಾ ಇನ್ನೆರಡು ದಿನದಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಪುತ್ತೂರು ಬಲ್ನಾಡು ಗ್ರಾಮದ ಪದ್ಮಯ್ಯ ಗೌಡ ಹಾಗೂ ತೇಜಾವತಿ ದಂಪತಿಯ ಪುತ್ರಿಯಾಗಿರುವ […]
ಮಂಗಳೂರು: ರಾಯಚೂರು ವಿಶ್ವ ವಿದ್ಯಾನಿಲಯದಲ್ಲಿ ಕುಲಪತಿ ಹುದ್ದೆ ಕೊಡಿಸುವುದಾಗಿ ಮಂಗಳೂರು ವಿವಿಯಲ್ಲಿ ಕೆಮಿಸ್ಟ್ರಿ ವಿಭಾಗದಲ್ಲಿ ಪ್ರೊಫೆಸರ್ ಆಗಿರುವ ವಿವೇಕ್ ಆಚಾರ್ಯ ಎಂಬವರನ್ನು ವಂಚಿಸಿದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಪಡೆದು ವಂಚಿಸಿದ ಆರೋಪದ ಮೇರೆಗೆ ರಾಮ ಸೇನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರನನ್ನು ಪೊಲೀಸರು ಬಂಧಿಸಿದ್ದಾರೆ. ರಾಮಸೇನೆಯ ಸಂಸ್ಥಾಪಕ ಮತ್ತು ರಾಜ್ಯಾಧ್ಯಕ್ಷನಾಗಿರುವ ಪ್ರಸಾದ್ ಅತ್ತಾವರ ವಿವೇಕ ಆಚಾರ್ಯ ಎಂಬವರಿಗೆ ರಾಯಚೂರು ವಿಶ್ವ ವಿದ್ಯಾನಿಲಯದಲ್ಲಿ ಉಪ ಕುಲಪತಿ ಸ್ಥಾನ ಕೊಡಿಸುತ್ತೇನೆಂದು ಹೇಳಿ 17.5 ಲಕ್ಷ ರೂ. ಹಣವನ್ನು ಪಡೆದಿದ್ದ ಬಗ್ಗೆ ಕಂಕನಾಡಿ […]
ಮಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಕಾಸರಗೋಡು ನಿವಾಸಿ ಸುಕ್ಕುರ್ ಮೊಯಿದ್ದೀನ್ ಕುನ್ಹಿ (48) ಹಾಗೂ ಭಟ್ಕಳದ ಮಿಸ್ರಿ ನಸೀಮುಲ್ ಗನಿ (44) ಎಂಬವರು ವಿಶೇಷವಾಗಿ ವಿನ್ಯಾಸದ ಪಾದರಕ್ಷೆಯ ಒಳಗೆ ಚಿನ್ನವನ್ನಿಟ್ಟು ಸಾಗಾಟ ಮಾಡುತ್ತಿದ್ದರು. ಆರೋಪಿಗಳಿಂದ 18.75 ಲಕ್ಷ ರೂ ಮೌಲ್ಯದ 405 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಕಾರ್ಯಾಚರಣೆಯಲ್ಲಿ ಕಸ್ಟಮ್ಸ್ ವಿಭಾಗದ ಅಧಿಕಾರಿಗಳಾದ ಡಾ. ಕಪಿಲ್ ಗಡೆ, ರಾಕೇಶ್ ಕುಮಾರ್, ಸಂದೀಪ್ […]
ವಿಟ್ಲ : ಮೆಹೆಂದಿ ಕಾರ್ಯಕ್ರಮಕ್ಕೆ ವೊಂದಕ್ಕೆ ಬಂದ ಬಾಲಕನ ಮೇಲೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲದ ಮನೆಯೊಂದರಲ್ಲಿ ಮೆಹೆಂದಿ ಕಾರ್ಯಕ್ರಮವಿತ್ತು. ಇಲ್ಲಿಗೆ ಪುತ್ತೂರು ಮೂಲದ ಹನ್ನೊಂದು ವರ್ಷದ ಬಾಲಕ ಆಗಮಿಸಿದ್ದ. ಇಲ್ಲಿಗೆ ಕಬಕ ಮೂಲದ ಹಮೀದ್ ಯಾನೆ ಮೌಲ ಅಮ್ಮಿ ಎಂಬಾತ ಕೂಡಾ ಬಂದಿದ್ದ. ಈ ಸಂದರ್ಭ ಆರೋಪಿಯು ಬಾಲಕನನ್ನು ಪುಸಲಾಯಿಸಿ ಹೊರಗಡೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನೀಡಿದ್ದಾರೆನ್ನಲಾಗಿದೆ. ಈ ಬಗ್ಗೆ ಬಾಲಕ ಮನೆಯವರಿಗೆ ವಿಚಾರ […]
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಕಳೆದ ಸಾಲಿನ ಪದವಿ ಪರೀಕ್ಷೆಯಲ್ಲಿ ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ರ‍್ಯಾಂಕ್ ಪಡೆದುಕೊಂಡಿದ್ದಾರೆ. ಕಲಾ ವಿಭಾಗದಲ್ಲಿ ನಗರದ ಶೋಭಾ ಪಿ ಮತ್ತು ಕೆ ಎಸ್ ಪ್ರೇಂಕುಮಾರ್ ಅವರ ಪುತ್ರಿ ಸಾಯಿ ಸೂರ್ಯ ಕೆ ಪಿ 6 ನೇ ರ‍್ಯಾಂಕ್ ಮತ್ತು ಆಕಾಶಭವನದ ಪ್ರೇಮನಾಥ ಆಚಾರ್ಯ ಅವರ ಪತ್ನಿ, ಪಾರ್ವತಿ- ಪ್ರಭಾಕರ ಆಚಾರ್ಯ ದಂಪತಿಯ ಪುತ್ರಿ ಸಂಧ್ಯಾ 9 ನೇ ರ‍್ಯಾಂಕ್ ಗಳಿಸಿದ್ದಾರೆ. ಸಂಧ್ಯಾ ಬೆಳ್ಮದೋಟದ ದಕ್ಷಿಣ ಕನ್ನಡ ಜಿಲ್ಲಾ […]
ಕಾಪು : ರಾಜ್ಯ ಮಟ್ಟದ ವಾಲಿಬಾಲ್ ಆಟಗಾರ ಅಭ್ಯಾಸ ವೇಳೆ ಕೋರ್ಟ್‌ನ ಪಕ್ಕದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಉಡುಪಿಯ ಜಿಲ್ಲೆಯ ಇನ್ನಂಜೆಯಲ್ಲಿ ನಡೆದಿದೆ. ಕುರ್ಕಾಲು ಸುಭಾಸ್ ನಗರ ನಿವಾಸಿ 33 ವರ್ಷ ವಯಸ್ಸಿನ ದೇವು ಯಾನೆ ದೇವರಾಜ್ ಮೃತ ಆಟಗಾರ. ಅವರು ಈ ಹಿಂದೆ ಈ ಹಿಂದೆ ಕಲ್ಲು ಗಣಿಯೊಂದರಲ್ಲಿ ರೈಟರ್ ಆಗಿ ದುಡಿಯುತ್ತಿದ್ದರು. ಶನಿವಾರ ರಾತ್ರಿ ಇನ್ನಂಜೆಯಲ್ಲಿ ನಡೆಯುತ್ತಿದ್ದ ಇನ್ನಂಜೆ ಪ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿ ಇನ್ನಂಜೆ ಚಾಲೆಂಜರ್ಸ್ ತಂಡದ ಪರವಾಗಿ ಆಟವಾಡುತ್ತಿದ್ದ ದೇವರಾಜ್ ಅವರು […]