ಪತ್ರಕರ್ತರ ಕ್ಷೇಮಾಭಿವೃದ್ಧಿನಿಧಿಗೆ ಪ್ರವಾಸೋದ್ಯಮ ಸಚಿವ ಸಿ ಪಿ ಯೋಗೇಶ್ವರ್ ಚಾಲನೆ

Saturday, March 20th, 2021
Journalist welfare

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಸಹ ಭಾಗಿತ್ವದಲ್ಲಿ ಆರಂಭಿಸಲಾಗಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಪ್ರವಾಸೋದ್ಯಮ ಸಚಿವ ಸಿ ಪಿ ಯೋಗೀಶ್ವರ್ ಚಾಲನೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕರಾದ ಕುಮಾರ್ ಪುಷ್ಕರ್ ಹಾಗೂ ಜಿಲ್ಲಾಧಿಕಾರಿ ಡಾ. […]

ಗೋಶಾಲೆಯಲ್ಲಿರೋ ಕರುಗಳನ್ನು ನೋಡಿದಾಗ ಕರುಳು ಕಿತ್ತು ಬರುತ್ತದೆ : ಮೊಯ್ದೀನ್ ಬಾವಾ

Saturday, March 20th, 2021
Kapila Goshala

ಮಂಗಳೂರು   :  ಕಪಿಲಾ ಗೋಶಾಲೆಯನ್ನು ಹಾಡಹಗಲೇ ಧ್ವಂಸ ಮಾಡಿದ್ದು ಖಂಡನೀಯ. ಗೋಶಾಲೆಯಲ್ಲಿರೋ ಕರುಗಳನ್ನು ನೋಡಿದಾಗ ಕರುಳು ಕಿತ್ತು ಬರುತ್ತದೆ. ನೆಲಸಮಗೊಂಡ ಗೋಶಾಲೆಯ ಮಾಲೀಕನಿಗೆ ನಾನು ವೈಯಕ್ತಿಕ ನೆಲೆಯಲ್ಲಿ ಒಂದು ಲಕ್ಷ ರೂಪಾಯಿ ಹಣವನ್ನು ಸಹಾಯಧನವಾಗಿ ನೀಡುತ್ತೇನೆ ಎಂದು  ಮಾಜಿ ಶಾಸಕ ಮೋಯ್ದಿನ್‌ ಬಾವಾ ಅವರು ಚೆಕ್ಕನ್ನು ಮಾಲೀಕ‌ ಪ್ರಕಾಶ್ ಶೆಟ್ಟಿಯವರಿಗೆ ಹಸ್ತಾಂತರಿಸಿದರು. ಇವತ್ತು ಬೀಫ್ ರಫ್ತು ಮಾಡುವುದರಲ್ಲಿ ದೇಶ ನಂಬರ್ ವನ್ ಆಗಿರೋದಕ್ಕೆ ಬಿಜೆಪಿ ಕಾರಣ.  ಗೋವಿನ ಹೆಸರಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಆದರೆ ಈ ಆಡಳಿತವೇ ಕಪಿಲ […]

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಅವ್ಯವಹಾರ ; ತನಿಖೆಯು ಪಾರದರ್ಶಕವಾಗಿಸಲು ಆಗ್ರಹ

Saturday, March 20th, 2021
Dharmika Maha Sangha

ಉಡುಪಿ  : ಸರಕಾರವು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಅವ್ಯವಹಾರಗಳ ಬಗ್ಗೆ ಕೂಡಲೇ ತನಿಖೆ ಮಾಡಲು ನೀಡಿದ ಆದೇಶಕ್ಕೆ ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘವು ಅಭಿನಂದನೆಗಳನ್ನು ವ್ಯಕ್ತಪಡಿಸುತ್ತದೆ. ಆದರೆ ಕೇವಲ ಒಂದು ದಿನದ ತನಿಖೆಯಿಂದ ಇಲ್ಲಿಯವರೆಗೆ ನಡೆದ ಎಲ್ಲಾ ಅವ್ಯವಹಾರಗಳ ಪೂರ್ಣ ತನಿಖೆ ಮಾಡಲು ಸಾಧ್ಯವಾಗುವುದಿಲ್ಲ. ಆದರೂ ಮಾನ್ಯ ಸಚಿವರು ಕೂಡಲೇ ಸಕಾರಾತ್ಮಕ ಕೃತಿ ಮಾಡಿದ್ದು ನಿಜವಾಗಿ ಸ್ತುತ್ಯಾರ್ಹವಾಗಿದ್ದು, ಈ ಬಗ್ಗೆ ಮಾನ್ಯ ಧಾರ್ಮಿಕ ದತ್ತಿ ಸಚಿವರಾದ ಶ್ರೀ ಕೋಟಾ ಶ್ರೀನಿವಾಸ ಪೂಜಾರಿಯವರಿಗೂ ನಾವು ಅಭಿನಂದನೆಯನ್ನು ಸಲ್ಲಿಸುತ್ತೇವೆ […]

ಗುದನಾಳದಲ್ಲಿ ಅಡಗಿಸಿಟ್ಟು ಚಿನ್ನ ಸಾಗಾಟ, ಕಸ್ಟಮ್ ಅಧಿಕಾರಿಗಳಿಂದ ವಿಚಾರಣೆ

Friday, March 19th, 2021
Gold

ಮಂಗಳೂರು : ದುಬೈನಿಂದ ಬಂದ ಪ್ರಯಾಣಿಕರೊಬ್ಬರು ಗುದನಾಳದಲ್ಲಿ ಚಿನ್ನವನ್ನು ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದಕ್ಕೆ ನಗರದ ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳು ಬಂಧಿಸಿದ್ದಾರೆ. ನಗರದ ಉಲ್ಲಾಸ್‌ ‌ನಗರದ ವ್ಯಕ್ತಿ ಸ್ಪೈಸ್ ಜೆಟ್ ವಿಮಾನದ ಮೂಲಕ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ  ಬಂದಿದ್ದರು. ಕಸ್ಟಮ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಚಿನ್ನವನ್ನು ಪೌಡರ್ ರೂಪದಲ್ಲಿ ಅಡಗಿಸಿ ಸಾಗಾಟ ಮಾಡಿರುವುದು ಪತ್ತೆಯಾಗಿದೆ. ಜೊತೆಗೆ ಬಳಿ ರಿಂಗ್, ಕಡ, ಬಟನ್ ರೂಪದಲ್ಲಿಯೂ ಚಿನ್ನ ಪತ್ತೆಯಾಗಿದೆ. ಆರೋಪಿಯಿಂದ 284.900 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ರೂ. 13,16,238 ಎಂದು […]

ಬಾಲಕನ ಶ್ವಾಸಕೋಶದಲ್ಲಿ ಗುಂಡುಸೂಜಿ, ವೈದ್ಯರು ಶಸ್ತ್ರಚಿಕಿತ್ಸೆ ಇಲ್ಲದೆ ಮಾಡಿದ್ದೇನು ಗೊತ್ತಾ !

Friday, March 19th, 2021
Mubshir

ಮಂಗಳೂರು :  ನೋಟಿಸ್ ಬೋರ್ಡಿಗೆ ಬಳಸಲಾಗುವ ಗುಂಡುಸೂಜಿ 12 ರ ಬಾಲಕನ ಹೊಟ್ಟೆಯೊಳಗೆ ಸೇರಿ ಕೆಮ್ಮು, ಉಸಿರಾಟ ತೊಂದರೆ, ಜ್ವರ ಬಾಧೆಯಿಂದ  ವೈದ್ಯರನ್ನು ಸಂಪರ್ಕಿಸಿ, ಎಕ್ಸ್‌ರೇ ತೆಗೆದಾಗ ಅದು ಶ್ವಾಸಕೋಶದಲ್ಲಿ ಸಿಕ್ಕಿಕೊಂಡಿರುವ ಪ್ರಕರಣವೊಂದು ನಗರದ ಹೊರ ವಲಯದ ಬಜಾಲ್‌ನಿಂದ ವರದಿಯಾಗಿದೆ. ಬಜಾಲ್ ಪಕ್ಕಲಡ್ಕ ನಿವಾಸಿ ಅಬ್ದುಲ್ ಖಾದರ್ ಎಂಬವರ ಪುತ್ರ ಮುಬಶ್ಶಿರ್ (12) ಎಂಬವರ ಶ್ವಾಸಕೋಶದಲ್ಲಿ ಗುಂಡುಸೂಜಿ ಪತ್ತೆಯಾಗಿದೆ. ಮನೆಯವರು ಕೆಮ್ಮು, ಜ್ವರ ಸಾಮಾನ್ಯ ರೋಗ ಲಕ್ಷಣವೆಂದು ಪರಿಗಣಿಸಿದ್ದ ಪೋಷಕರು ಚಿಕಿತ್ಸೆ ಕೊಡಿಸಿದ್ದರು. ಅಲ್ಪ ಪ್ರಮಾಣದಲ್ಲಿ ಚೇತರಿಕೆ ಕಂಡುಬಂದರೂ ಕೆಮ್ಮು ನಿಂತಿರಲಿಲ್ಲ. ಜ್ವರವೂ […]

ಪತ್ರಕರ್ತನಾದವನಿಗೆ ಸಂಪಾದನೆ ಮಾಡಲು ಸಾಕಷ್ಟು ದಾರಿಗಳಿವೆ : ಪ್ರಕಾಶ್ ಡಿ.ರಾಂಪೂರ್

Friday, March 19th, 2021
Alvas Journalism

ಮೂಡುಬಿದ್ರೆ :  `ಒಬ್ಬ ಪತ್ರಕರ್ತನಾದವನಿಗೆ ಸಂಪಾದನೆ ಮಾಡಲು ಸಾಕಷ್ಟು ದಾರಿಗಳಿವೆ. ಆದರೆ ನೀತಿಯುತವಾದ ಮಾರ್ಗವನ್ನು ಆಯ್ಕೆ ಮಾಡುವುದು ಪತ್ರಕರ್ತನ ಜವಾಬ್ದಾರಿ. ಒಬ್ಬ ಪತ್ರಕರ್ತನಾದವನ ವ್ಯಕ್ತಿತ್ವ, ವಿಶ್ವಾಸರ್ಹತೆ ಅವನು ಆಯ್ಕೆ ಮಾಡಿಕೊಳ್ಳುವ ದಾರಿಯ ಮೇಲೆ ಅವಲಂಬಿತವಾಗಿರುತ್ತದೆ’ ಎಂದು ಬೆಂಗಳೂರು ಪಬ್ಲಿಕ್ ಟಿವಿ ವರದಿಗಾರ ಹಾಗೂ ಆಳ್ವಾಸ್ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ಹಿರಿಯ ವಿದ್ಯಾರ್ಥಿ ಪ್ರಕಾಶ್ ಡಿ.ರಾಂಪೂರ್ ಹೇಳಿದರು. ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ಸ್ನಾತಕೋತ್ತರ ವಿಭಾಗವು ಆಯೋಜಿಸಿದ್ದ “ಅಲ್ಯುಮಿನಿ ಲೆಕ್ಚರ್” ಕರ್ಯಕ್ರಮದಲ್ಲಿ ಅವರು […]

ನಾಡಕೋವಿಯಿಂದ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಯುವಕ

Friday, March 19th, 2021
NadaKovi

ಕಾರ್ಕಳ :   ವಿವಾಹಿತ ಯುವಕನೋರ್ವ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದಲ್ಲಿ ನಾಡಕೋವಿಯಿಂದ ತನಗೆ ಗುಂಡಿಕ್ಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮೃತ ಯುವಕನನ್ನು ವಿಶಾಕ್ ಪೂಜಾರಿ(30) ಎಂದು ಗುರುತಿಸಲಾಗಿದೆ. ಮೃತ ಯುವಕ ವಿವಾಹಿತನಾಗಿದ್ದು 1ಹೆಣ್ಣು ಮಗುವನ್ನು ಹೊಂದಿದ್ದಾರೆ. ಇಂದು ಬೆಳಿಗ್ಗೆ ಮನೆಯಿಂದ ಹೊರಗೆ ಹೋಗಿ ಬರುತ್ತೇನೆ ಎಂದು ಹೋದವರು ನಂತರ ಪತ್ತೆಯಾಗಲಿಲ್ಲ. ಕಂಗಾಲಾದ ಮನೆಯವರು ಹುಡುಕಾಟ ನಡೆಸಿದಾಗ ತೋಟದಲ್ಲಿ ಮೃತದೇಹ ಪತ್ತೆಯಾಗಿದೆ . ಸ್ಥಳಕ್ಕೆ ಕಾರ್ಕಳ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂದರು ಠಾಣೆಯಲ್ಲಿಯ ಪೊಲೀಸರ ಆಶ್ರಯದಲ್ಲಿ ಬೆಳೆದ 20 ರ ಆ ಯುವತಿಗೀಗ 60 ತುಂಬಿದೆ

Thursday, March 18th, 2021
Honnamma

ಮಂಗಳೂರು : 1981 ರಲ್ಲಿ ಮಂಗಳೂರು ರೈಲ್ವೇ ನಿಲ್ದಾಣದಲ್ಲಿ ಕಣ್ಣೀರಿಡುತ್ತಾ ಕುಳಿತಿದ್ದ 20 ರ ಆ ಯುವತಿ ಯನ್ನು ಪೊಲೀಸರು ವಿಚಾರಿಸಿದಾಗ ಆಕೆ ಮಾತನಾಡುವ ಸ್ಥಿತಿಯಲ್ಲಿರಲಿಲ್ಲ ಅವಳ ಬಂಧುಗಳನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ ಆಗ ಪೊಲೀಸರು ಆಕೆಗೆ ಜಾಗ ಕೊಟ್ಟಿದ್ದು ಮಂಗಳೂರಿನ ಬಂದರು ಠಾಣೆಯಲ್ಲಿ. ಅಂದಿನ ಡಿವೈಎಸ್ಪಿ ಜಯಂತ ಶೆಟ್ಟಿಯವರು ಮಂಗಳೂರು ರೈಲ್ವೇ ನಿಲ್ದಾಣದಲ್ಲಿ ಹೆತ್ತವರು ಕೈತಪ್ಪಿ ಹೋಗಿದ್ದಾಗ ರೋದಿಸುತ್ತಿದ್ದ ಆ ಯುವತಿಯನ್ನು ಠಾಣೆಯಲ್ಲೇ ಉಪಚರಿಸಿ ಆಶ್ರಯ ನೀಡುವ ವ್ಯವಸ್ಥೆಯನ್ನು ಕಲ್ಪಿಸಿದ್ದರು. 40 ವರ್ಷಗಳ ಹಿಂದೆ ಆಕೆಗೆ 20 […]

ಮಸೀದಿ ಹಾಗೂ ದರ್ಗಾಗಳ ಆಡಳಿತ ಸಮಿತಿಗಳಿಗೆ ಶಬ್ದ ಮಾಲಿನ್ಯ ನಿಯಂತ್ರಣ ಸಂಬಂಧ ಅರಿವು ಮೂಡಿಸಲು ತೀರ್ಮಾನ

Thursday, March 18th, 2021
Azan

ಮಂಗಳೂರು  :  ಈ ಹಿಂದೆ ಅಲಹಾಬಾದ್ ಹೈಕೋರ್ಟ್ ಮತ್ತು ಕರ್ನಾಟಕ ಉಚ್ಚ ನ್ಯಾಯಾಲಯ ಯಾವುದೇ ಧ್ವನಿವರ್ಧಕಗಳನ್ನು ಬಳಸದೆ ಅಜಾನ್ ಧಾರ್ಮಿಕ ಪ್ರಾರ್ಥನೆ ಕರೆಯನ್ನು ಮಸೀದಿಗಳ ಮಿನಾರ್‌ಗಳಿಂದ ಮಾನವ ಧ್ವನಿಯಿಂದ ಮಾತ್ರ ಪಠಿಸಬಹುದು ಎಂದು ಹೇಳಿತ್ತು. ಅಜಾನ್ ಇಸ್ಲಾಂ ಧರ್ಮದ ಅತ್ಯಗತ್ಯ ಮತ್ತು ಅವಿಭಾಜ್ಯ ಅಂಗವಾಗಿರಬಹುದು ಆದರೆ ಧ್ವನಿವರ್ಧಕಗಳು ಅಥವಾ ಇತರ ಧ್ವನಿ ವರ್ಧಕ ಸಾಧನಗಳ ಮೂಲಕ ಅದರ ಪಠಣವು ಆರ್ಟಿಕಲ್ 25 ರ ಅಡಿಯಲ್ಲಿ ಪ್ರತಿಪಾದಿಸಲಾದ ಮೂಲಭೂತ ಹಕ್ಕನ್ನು ರಕ್ಷಿಸುವ ಧರ್ಮದ ಅವಿಭಾಜ್ಯ ಅಂಗವೆಂದು ಹೇಳಲಾಗುವುದಿಲ್ಲ. ಸಾರ್ವಜನಿಕ ಆದೇಶ, ನೈತಿಕತೆ […]

ಮಹಿಳಾ ಸಿಬ್ಬಂದಿಗಳ ಜೊತೆ ಅಸಭ್ಯವಾಗಿ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವಿಟ್ಲ ಆರೋಗ್ಯ ಕೇಂದ್ರದ ಕ್ಲರ್ಕ್

Wednesday, March 17th, 2021
Mascarenas

ವಿಟ್ಲ : ವಿಟ್ಲದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರ್ತವ್ಯದಲ್ಲಿ ಬಂದಿದ್ದ ಶ್ರವಣ ತಪಾಸಣಾ ಶಿಬಿರದ ಮಹಿಳಾ ಸಿಬ್ಬಂದಿಗಳ ಜೊತೆ ಅಸಭ್ಯವಾಗಿ ವರ್ತಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗುಮಾಸ್ತನ ವಿರುದ್ಧ ಜಿಲ್ಲಾ ಆರೋಗ್ಯಾಧಿಕಾರಿಗೆ ದೂರು ನೀಡಿದ್ದಾರೆ. ಆರೋಗ್ಯ ಕೇಂದ್ರದಲ್ಲಿ ಕಳೆದ ಕೆಲವರ್ಷಗಳಿಂದ ಗುಮಾಸ್ತನಾಗಿರುವ ಫೌಲ್ ಮಸ್ಕರೇನಸ್ ವಿರುದ್ಧ ಮಹಿಳಾ ಸಿಬ್ಬಂದಿಗಳು ದೂರು ನೀಡಿದ್ದಾರೆ. ಆಸ್ಪತ್ರೆಯಲ್ಲಿ ನಡೆಯುತ್ತಿರುವ ಶ್ರವಣ ತಪಾಸಣಾ ಶಿಬಿರಕ್ಕಾಗಿ ದಕ್ಷಿಣ ಕನ್ನಡ ಎನ್.ಪಿ.ಪಿ.ಸಿ.ಡಿ. ಕಾರ್ಯಕ್ರಮದ ಸಿಬ್ಬಂದಿಗಳು ವಿಟ್ಲಕ್ಕೆ ಆಗಮಿಸಿದ್ದರು. ಮಹಿಳಾ ಸಿಬ್ಬಂದಿಗಳು ಬಂದ ಕೆಲಕ್ಷಣದಲ್ಲೇ […]