ಮಂಗಳೂರು ನೆಹರೂ ಮೈದಾನದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

Thursday, August 15th, 2024
78th independece

ಮಂಗಳೂರು : ದಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೆಹರೂ ಮೈದಾನದಲ್ಲಿ ದ.ಕ ಜಿಲ್ಲಾಡಳಿತ ಆಯೋಜಿಸಿದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಇದಕ್ಕೂ ಮೊದಲು ಪೊಲೀಸ್ ವಾದ್ಯವೃಂದ, ಸಂಚಾರಿ ಪೊಲೀಸ್, ಅಬಕಾರಿ ಇಲಾಖೆ, ಗೃಹ ರಕ್ಷಕ ದಳ, ಆರ್ ಎಸ್ ಪಿ ಬಾಲಕ- ಬಾಲಕಿಯರ ತಂಡ, ಸ್ಕೌಟ್ಸ್ ಮತ್ತು ಗೈಡ್ಸ್, ಭಾರತ ಸೇವಾ ದಳ ತಂಡಗಳು ಸೇರಿದಂತೆ ಒಟ್ಟು 16 ತಂಡಗಳಿಂದ ಪಥಸಂಚಲನ ನಾಡೆಯಿತು. ರಾಜ್ಯದಲ್ಲಿ ಸುಸ್ಥಿರ ಮೂಲಸೌಕರ್ಯ […]

ಗ್ಯಾರಂಟಿ ಯೋಜನೆಗಳಿಂದ 1.2 ಕೋಟಿ ಜನ ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Thursday, August 15th, 2024
hebbalkar

ಉಡುಪಿ: ಕಳೆದ ವರ್ಷ ಗ್ಯಾರಂಟಿ ಯೋಜನೆಗಳಿಂದ 7 ಕೋಟಿ ಜನರಿಗೆ ಅನುಕೂಲವಾಗಿದೆ. 1.2 ಕೋಟಿ ಜನ ಬಡತನ ರೇಖೆಯಿಂದ ಮೇಲಕ್ಕೆ ಬಂದಿದ್ದಾರೆ. ಇದುವರೆಗೂ ಬಜೆಟ್ ನಲ್ಲಿ ಶೇ. 4 ರಿಂದ 5 ರಷ್ಟು ಅನುದಾನ ಮಾತ್ರ ಬಡವರಿಗೆ ಹಂಚಿಕೆಯಾಗುತ್ತಿತ್ತು. ಈ ಬಾರಿ ಬಜೆಟ್ ‌ನಲ್ಲಿ ಶೇ. 15 ರಷ್ಟು ಅನುದಾನ ಬಡವರಿಗೆ ಹಂಚಿಕೆಯಾಗಿರುವುದು ವಿಶೇಷ. ಇದರಿಂದ ಬಡವರ ಬದುಕು ಸುಧಾರಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ […]

ದುರಂತ ಮರಣವನ್ನಪ್ಪಿದ ಮೂವರಿಗೆ ಮಂಗಳೂರು ಮೇಯರ್ ರಿಂದ ಪರಿಹಾರ ವಿತರಣೆ

Wednesday, August 14th, 2024
sudhir-shetty

ಮಂಗಳೂರು : ಮಹಾನಗರ ಪಾಲಿಕೆಯ ವ್ಯಾಪ್ತಿಯ ಕೊಟ್ಟಾರಚೌಕಿಯಲ್ಲಿ ರಿಕ್ಷಾ ತೋಡಿಗೆ ಬಿದ್ದು ದುರ್ಮರಣವನ್ನಪ್ಪಿದ ದೀಪಕ್ ಅಚಾರ್, ಅವರಿಗೆ ತಾಯಿ ಚಿನ್ನಮ್ಮ ಆಚಾರ್ ಅವರಿಗೆ ಪಾಂಡೇಶ್ವರದಲ್ಲಿ ರೈಲ್ವೆ ನಿಲ್ದಾಣದ ಬಳಿ ರಿಕ್ಷಾ ತೊಳೆಯುತ್ತಿದ್ದಾಗ ವಿದ್ಯುತ್ ತಂತಿ ಬಿದ್ದು,ಮೃತಪಟ್ಟ ರಾಜು‌ ಅವರ ಪತ್ನಿ ವಿಜಯ ಅವರಿಗೆ, ಹಾಗೂ ದೇವರಾಜು ಪತ್ನಿ ಭವಾನಿ ಅವರಿಗೆ ತಲಾ ಒಂದು ಲಕ್ಷ ರೂ.ಪ್ರಾಕೃತಿಕ ವಿಕೋಪ ದಡಿ ಪರಿಹಾರವನ್ನು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಹಸ್ತಾಂತರಿಸಿದರು. ಮಾನವೀಯ ನೆಲೆಯಲ್ಲಿ ಪಾಲಿಕೆ ಹಸ್ತಾಂತರ ಮಾಡಿದ ಗರಿಷ್ಟ […]

ಶಾಸಕ ವೇದವ್ಯಾಸ ಕಾಮತ್ ನಿವಾಸದಲ್ಲಿ ಹರ್ ಘರ್ ತಿರಂಗ

Wednesday, August 14th, 2024
Tiranga

ಮಂಗಳೂರು : ದೇಶವು 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹೊಸ್ತಿಲಲ್ಲಿದ್ದು ಹೆಮ್ಮೆಯ ಪ್ರಧಾನಿ ನರೇಂದ್ರ ಮೋದೀಜಿಯವರ ಕರೆಯಂತೆ ನಮ್ಮೆಲ್ಲರ ಮನೆಗಳಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸುವ ಅಭಿಯಾನದಲ್ಲಿ ಪಾಲ್ಗೊಳ್ಳೋಣವೆಂದು ಶಾಸಕ ವೇದವ್ಯಾಸ ಕಾಮತ್ ಅವರು ಹೇಳಿದರು. ತಮ್ಮ ನಿವಾಸದಲ್ಲಿ ಧ್ವಜವನ್ನು ಕಟ್ಟಿ ಮಾತನಾಡಿದ ಶಾಸಕರು ಆಗಸ್ಟ್ 13 ರಂದು ಆರಂಭವಾಗಿರುವ ಈ ಅಭಿಯಾನ ಆಗಸ್ಟ್ 15ರ ಸಂಜೆ ಕೊನೆಗೊಳ್ಳಲಿದೆ. ದೇಶವನ್ನು ಕಟ್ಟಲು ಅನೇಕ ಮಹನೀಯರು ತಮ್ಮ ಅಮೂಲ್ಯ ಬದುಕನ್ನೇ ಮುಡಿಪಾಗಿಟ್ಟಿದ್ದು ತಾಯಿ ಭಾರತಿಯನ್ನು ಬ್ರಿಟಿಷ್ ದಾಸ್ಯದಿಂದ ಮುಕ್ತಿಗೊಳಿಸುವ ಹೋರಾಟದಲ್ಲಿ ಕೆಲವರು […]

ಸಾಹಿತ್ಯ ಕೂಟ ಮಂಗಳೂರು ತಂಡದಿಂದ ಸಾಹಿತ್ಯ ಕಲರವ ಕಾರ್ಯಕ್ರಮ

Wednesday, August 14th, 2024
moraji desai residencial-school

ಪುತ್ತೂರು: ಸಾಹಿತ್ಯ ಕೂಟ ಮಂಗಳೂರು ಇವರ ಆಶ್ರಯದಲ್ಲಿ ಪುತ್ತೂರಿನ ಬಾಲ್ನಾಡಿನಲ್ಲಿ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇತ್ತೀಚೆಗೆ ಸಾಹಿತ್ಯ ಕಲರವ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಗಳಾಗಿ ಕವಿ, ಲೇಖಕರಾದ ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಮತ್ತು ಎಸ್.ವಿ.ಎಸ್ ಕಾಲೇಜಿನ ಪ್ರಾಧ್ಯಾಪಕ, ಹವ್ಯಾಸಿ ಬರಹಗಾರ ಕಿಟ್ಟು ರಾಮಕುಂಜ ಇವರು, ಕಾವ್ಯ ಒಂದು ರಸಾನುಭವ ಮತ್ತು ಮಕ್ಕಳಲ್ಲಿ ಸಾಹಿತ್ಯ ಅಭಿರುಚಿ ಯಾಕಿರಬೇಕು ಎನ್ನುವ ವಿಷಯದ ಕುರಿತು ಮಾತನಾಡಿದರು. ಕವನವನ್ನು ರಚಿಸುವ ಬಗೆ ಹಾಗೂ ಅದರ ಮಹತ್ವವನ್ನು ರವೀಂದ್ರ ನಾಯಕ್ ಸಣ್ಣಕ್ಕಿಬಿಟ್ಟು ಅವರು […]

ಅಧ್ಯಾಪಕರಿಗೂ ಸೂಕ್ತ ಮಾರ್ಗದರ್ಶನ ಅಗತ್ಯ: ಮಾಣಿಲ ಶ್ರೀಧಾಮದ ಮೋಹನ ದಾಸ ಸ್ವಾಮೀಜಿ

Wednesday, August 14th, 2024
state-teachers-Mahasangha

ಮಂಗಳೂರು: ಯುವ ಸಮುದಾಯವನ್ನು ಬೆಳೆಸುವಲ್ಲಿ ಅಧ್ಯಾಪಕರ ಪಾತ್ರ ಮಹತ್ತರವಾದದ್ದು. ಸಮಾಜದಲ್ಲಿ ಉತ್ತಮ ಪ್ರಜೆಗಳನ್ನು ರೂಪಿಸಿ, ಆ ಮೂಲಕ ದೇಶದ ಅಭಿವೃದ್ಧಿ ಕಾಣುವಲ್ಲಿ ಅಧ್ಯಾಪಕರು ಪ್ರಮುಖ ಪಾತ್ರ ವಹಿಸುತ್ತಾರೆ, ಎಂದು ಮಾಣಿಲ ಶ್ರೀಧಾಮದ ಮೋಹನ ದಾಸ ಸ್ವಾಮೀಜಿ ತಿಳಿಸಿದರು. ಕರ್ನಾಟಕ ರಾಜ್ಯ ಶಿಕ್ಷಕ ಮಹಾಸಂಘದ ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗ ಶ್ರೀ ಧಾಮ ಮಾಣಿಲದ ಆಶ್ರಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ವಿಭಾಗ ಅಭ್ಯಾಸ ವರ್ಗವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರ ಭದ್ರತೆಗೆ ಅಧ್ಯಾಪಕ ಸಂಘಟನೆಗಳು ಅಗತ್ಯವಾಗಿವೆ. ಅಂತಹ ಅಧ್ಯಾಪಕರಿಗೆ ಸೂಕ್ತ ಮಾರ್ಗದರ್ಶನಗಳು […]

ಬಿಜೆಪಿ ಸರ್ಕಾರದ ಅವಧಿಯ ರೂ.75.00 ಕೋಟಿಗೂ ಅಧಿಕ ಮೊತ್ತದ ಬಾಕಿ ಅನುದಾನ ತಡೆದ ಕಾಂಗ್ರೆಸ್ : ವಿ ಸುನಿಲ್‌ ಕುಮಾರ್

Tuesday, August 13th, 2024
sunil-kumar

ಕಾರ್ಕಳ : ರಾಜ್ಯದ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯ 2022-23ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಂಜೂರಾತಿ ನೀಡಿ ಬಿಡುಗಡೆ ಮಾಡಿದ್ದ ಸುಮಾರು ರೂ.75.00 ಕೋಟಿಗೂ ಅಧಿಕ ಮೊತ್ತದ ಅನುದಾನವನ್ನು ಈಗಿನ ಕಾಂಗ್ರೆಸ್‌ ಸರ್ಕಾರ ತಡೆ ಹಿಡಿದಿದ್ದು, ತಡೆ ಹಿಡಿದಿರುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಕಾರ್ಕಳ ಶಾಸಕರು ಹಾಗೂ ಮಾಜಿ ಸಚಿವರಾದ ವಿ ಸುನಿಲ್‌ ಕುಮಾರ್‌ರವರು ಮುಖ್ಯಮಂತ್ರಿಯವರನ್ನು ಆಗ್ರಹಿಸಿದ್ದಾರೆ. ಗ್ರಾಮೀಣಾಭಿವೃದ್ಧಿ […]

ದಕ್ಷಿಣ ಕನ್ನಡದ ಪಿಎಂ ಆವಾಸ್ ಯೋಜನೆ ಫಲಾನುಭವಿಗಳ ಮನೆಗಳಲ್ಲಿ “ಹರ್ ಘರ್ ತಿರಂಗಾ” ಅಭಿಯಾನಕ್ಕೆ ಚಾಲನೆ

Tuesday, August 13th, 2024
ದಕ್ಷಿಣ ಕನ್ನಡದ ಪಿಎಂ ಆವಾಸ್ ಯೋಜನೆ ಫಲಾನುಭವಿಗಳ ಮನೆಗಳಲ್ಲಿ “ಹರ್ ಘರ್ ತಿರಂಗಾ” ಅಭಿಯಾನಕ್ಕೆ ಚಾಲನೆ

ಮಂಗಳೂರು : ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನವನ್ನು ದೇಶದೆಲ್ಲೆಡೆ ಸಾರ್ಥಕಗೊಳಿಸುವಂತೆ ಪ್ರಧಾನಿ ಮೋದಿ ಅವರು ಈಗಾಗಲೇ ಕರೆ ನೀಡಿದ್ದಾರೆ. ಅದರಂತೆ ದಕ್ಷಿಣ ಕನ್ನಡ ಲೋಕಸಭಾ ವ್ಯಾಪ್ತಿಯ ಎಲ್ಲ ಪಿಎಂ ಆವಾಸ್ ಫಲಾನುಭವಿಗಳ ಯೋಜನೆ ಮನೆಗಳ ಮೇಲೂ ತ್ರಿವರ್ಣ ಧ್ವಜ ಹಾರಾಡಿಸುವ ವಿನೂತನ ಪ್ರಯತ್ನಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮುಂದಾಗಿದ್ದಾರೆ. ಮಂಗಳೂರಿನ ಜಪ್ಪಿನಮೊಗರಿನಲ್ಲಿರುವ ಶ್ರೀಮತಿ ವಿನಯಾ ಶ್ರೀನಿವಾಸ್ ಅವರ ಮನೆ ಮೇಲೆ ಮಂಗಳವಾರ ಬೆಳಗ್ಗೆ ಹರ್ ಘರ್ ಅಭಿಯಾನದಡಿ ತ್ರಿವರ್ಣ ಧ್ವಜ ಹಾರಾಡಿಸುವ […]

“ಕಪ್ಪತ್ತಗುಡ್ಡ” ರಕ್ಷಿಸೋಣ ಅಭಿಯಾನಕ್ಕೆ ಚಾಲನೆ

Tuesday, August 13th, 2024
"ಕಪ್ಪತ್ತಗುಡ್ಡ" ರಕ್ಷಿಸೋಣ ಅಭಿಯಾನಕ್ಕೆ ಚಾಲನೆ

ಗದಗ : ತೋಂಟದಾರ್ಯ ಮಠದ ಶ್ರೀಗಳಾದ ಡಾ.ಸಿದ್ದರಾಮ ಸ್ವಾಮಿಜಿಯವರ ಮಾರ್ಗದರ್ಶನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದಂತಹ ಪತ್ರಕರ್ತರಿಂದ ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೆ ಪ್ರಖ್ಯಾತವಾಗಿರುವ ಗದಗ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ ಕಪ್ಪತ್ತಗುಡ್ಡ ಉಳಿಸಿ, ರಕ್ಷಿಸೋಣ ಎಂಬ ಅಭಿಯಾನ ಆಗಸ್ಟ್ 11ರಂದು ಬಾನುವಾರ ಕಪ್ಪತ್ತಗುಡ್ಡದ ಮೇಲೆ ನಡೆಯಿತು. ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೆ ಪ್ರಖ್ಯಾತವಾಗಿರುವ ಕಪ್ಪತಗುಡ್ಡ ಗದಗ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿದೆ. ಪ್ರವಾಸಿಗರನ್ನು ಕೈಬೀಸಿ ಕರೆವ ಕಪ್ಪತ್ತಗುಡ್ಡಕ್ಕೆ ದಿನನಿತ್ಯ ನೂರಾರು ಪ್ರವಾಸಿಗರು ಆಗಮಿಸಿ ಇಲ್ಲಿನ ಪ್ರಕೃತಿ […]

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Saturday, August 10th, 2024
Hegde-Modi

ನವ ದೆಹಲಿ : ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿಯವರನ್ನು ಶುಕ್ರವಾರ ಪಾರ್ಲಿಮೆಂಟ್ ಭವನದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಮೂರನೇ ಬಾರಿ ಪ್ರಧಾನಮಂತ್ರಿ ಆಯ್ಕೆಯಾಗಿರುವುದಕ್ಕೆ ಶುಭಹಾರೈಸಿ ಶ್ರೀಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದವನ್ನು ನೀಡಿ ದೇಶಕ್ಕೆ ಇನ್ನು ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಆಶೀರ್ವದಿಸಿದರು. ನಂತರ ಅನೇಕ ವಿಷಯಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ರಾಜ್ಯಸಭಾ ಸಂಸದರ ವ್ಯಾಪ್ತಿಗೆ ಬರುವ ನಿಧಿಯನ್ನು ಪೂಜ್ಯರು ಬೀದರ್‌ನಲ್ಲಿ ವಿನೂತನವಾಗಿ ವಿನಿಯೋಗಿಸಿ ಒಂದು ಕ್ಷೀರಕ್ರಾಂತಿಗೆ ನಾಂದಿ ಹಾಡಿರುವ ಬಗ್ಗೆ […]