ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠೀ, ಬ್ರಹ್ಮರಥೋತ್ಸವ

Sunday, December 20th, 2020
Kukke subrahmanya

ಸುಬ್ರಹ್ಮಣ್ಯ : ದಕ್ಷಿಣ ಭಾರತದ ಪ್ರಮುಖ ನಾಗ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠೀ ಮಹೊತ್ಸವ ಸಂಪನ್ನಗೊಂಡಿದೆ. ದೇವಳದ ರಾಜಮಾರ್ಗದಲ್ಲಿ ಯಶಸ್ವಿನಿ ಅನೆಯೊಂದಿಗೆ ಸಂಭ್ರಮದ ಬ್ರಹ್ಮರಥೋತ್ಸವ ಜರಗಿತು.ಕೋಟ್ಯಾಂತರ ಭಕ್ತರ ಅರಾಧ್ಯ ದೈವ ಸುಬ್ರಹ್ಮಣ್ಯ ಸ್ವಾಮಿ ಮುಂಜಾನೆಯ 7.25 ರ ಧನು ಲಗ್ನ ಸುಮುಹೂರ್ತದಲ್ಲಿ ಬ್ರಹ್ಮರಥದಲ್ಲಿ ರಥಾರೂಢನಾಗಿ ಭಕ್ತರಿಗೆ ದರ್ಶನ ನೀಡಿದ್ದಾನೆ. ಕೋವಿಡ್ ಕಾರಣದಿಂದಾಗಿ ಪರ ಊರಿನ ಭಕ್ತರಿಗೆ ಪ್ರವೇಶ ನಿರ್ಬಂನಿರ್ಬಂಧವಿದ್ದರೂ ಕೂಡಾ ಅಪಾರ ಸಂಖ್ಯೆಯಲ್ಲಿ ಭಕ್ತರು  ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮ ರಥೋತ್ಸವವನ್ನು ನೋಡಿ ಕಣ್ತುಂಬಿಕೊಂಡರು. […]

ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ ಡಿ.22ರಂದು

Sunday, December 20th, 2020
Grama panchayath

ಮಂಗಳೂರು : ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ  ಡಿ.22ರಂದು ನಡೆಯಲಿದ್ದು, ದ.ಕ.ಜಿಲ್ಲೆಯ 106 ಗ್ರಾಪಂಗಳ 1,631 ಸ್ಥಾನಗಳಿಗೆ 3,854 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅನುಸೂಚಿತ ಜಾತಿಯ 238, ಅನುಸೂಚಿತ ಪಂಗಡದ 215 ಹಾಗೂ ಹಿಂದುಳಿದ ‘ಅ’ ವರ್ಗದ 958, ಹಿಂದುಳಿದ ‘ಬಿ’ ವರ್ಗದ 226, ಸಾಮಾನ್ಯ 2,217 ಸಹಿತ ಒಟ್ಟು 3,854 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ. ಮೊದಲ ಹಂತದಲ್ಲಿ ನಡೆಯುವ ಚುನಾವಣೆಗೆ ಮಂಗಳೂರಿನ 322, ಮೂಡುಬಿದಿರೆಯ 99, ಬಂಟ್ವಾಳದ 396 ಸಹಿತ 817 ಮತಗಟ್ಟೆಗಳನ್ನು ನಿರ್ಮಿಸಲಾಗಿದೆ. ಅಲ್ಲದೆ 1350 ಮತಪೆಟ್ಟಿಗೆಗಳನ್ನು […]

ಡಾ. ಸಂಧ್ಯಾ ಆರ್. ಅನ್ವೆಕರ್ ಸಹ್ಯಾದ್ರಿ ಕಾಲೇಜ್ ಗೆ ಭೇಟಿ

Sunday, December 20th, 2020
sandya Anvekar

ಮಂಗಳೂರು  : ಡಾ. ಸಂಧ್ಯಾ ಆರ್. ಅನ್ವೆಕರ್, ಕರ್ನಾಟಕ ಸರ್ಕಾರದ ಕಾರ್ಯಕ್ರಮದ ಸ್ಕಿಲ್ಲಿಂಗ್, ಕಿಟ್ಸ್, ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ, ಮುಖ್ಯಸ್ಥೆ: ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತುಮ್ಯಾನೇಜ್ಮೆಂಟ್ ಮಂಗಳೂರಿಗೆ ಭೇಟಿ ನೀಡಿದರು. ಕರ್ನಾಟಕ ಸರ್ಕಾರದ ಸ್ಕಿಲ್ಲಿಂಗ್, ಕಿಟ್ಸ್, ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಕಾರ್ಯಕ್ರಮ ವಿಭಾಗದ ಮುಖ್ಯಸ್ಥೆ ಡಾ. ಸಂಧ್ಯಾ ಆರ್. ನಾವೀನ್ಯತೆ ಮತ್ತು ಉದ್ಯಮಶೀಲತೆಯನ್ನು ಬೆಂಬಲಿಸಲು ಸಂಸ್ಥೆ ಒದಗಿಸಿರುವ ಮೂಲಸೌಕರ್ಯ ಮತ್ತು ಸೌಲಭ್ಯಗಳನ್ನು ಶ್ಲಾಘಿಸಿದರು. ಕರ್ನಾಟಕ […]

ದಕ್ಷಿಣ ಕನ್ನಡ ಜಿಲ್ಲೆಯ 5 ಅಭಿವೃದ್ಧಿ ಕಾಮಗಾರಿಗಳಿಗೆ ನಿತಿನ್ ಗಡ್ಕರಿ ಚಾಲನೆ

Saturday, December 19th, 2020
Nithin Gadkari

ಮಂಗಳೂರು : ದ.ಕ ಜಿಲ್ಲೆಯ 214.22 ಕೋಟಿ ರೂ. ವೆಚ್ಚದ 5 ಅಭಿವೃದ್ಧಿ ಕಾಮಗಾರಿಗಳಿಗೆ ರಾಷ್ಟ್ರೀಯ ಹೆದ್ದಾರಿ ಹಾಗೂ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವರ್ಚುವಲ್ ಕಾರ್ಯಕ್ರಮದ ಮೂಲಕ ಚಾಲನೆ ನೀಡಿದರು. ರಾಷ್ಟ್ರೀಯ ಹೆದ್ದಾರಿ 66ರ ಕೂಳೂರಿನಲ್ಲಿರುವ ಫಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ 69.02 ಕೋಟಿ ರೂ. ವೆಚ್ಚದ ನೂತನ ಷಟ್ಪಥ ಕೂಳೂರು ಸೇತುವೆ, ರಾಷ್ಟ್ರೀಯ ಹೆದ್ದಾರಿ 275ರಲ್ಲಿರುವ ಸಂಪಾಜೆ ಘಾಟ್ನ ತಡೆಗೋಡೆ ಹಾಗೂ ರಸ್ತೆ 2.53 ಕಿ.ಮೀ. […]

ಎ.ಐ.ಸಿ.ಸಿ.ಕಾರ್ಯದರ್ಶಿಯಾಗಿ ಮಾಜಿ ಶಾಸಕರಾದ ಶ್ರೀ ಐವನ್ ಡಿ ಸೋಜ ನೇಮಕ

Saturday, December 19th, 2020
IvanDSouza

ಮಂಗಳೂರು  : ಎ.ಐ.ಸಿ.ಸಿ.ಕಾರ್ಯದರ್ಶಿಯಾಗಿ ಮಾಜಿ ಶಾಸಕರಾದ ಶ್ರೀ ಐವನ್ ಡಿ ಸೋಜರವರು ನೇಮಕ-ಕೇರಳ ರಾಜ್ಯದ ಹೊಣೆಗಾರಿಕೆ; ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ, ಇವರು ಕರ್ನಾಟಕ ಸರಕಾರದ ಮಾಜಿ ಮುಖ್ಯ ಸಚೇತಕ, ವಿಧಾನ ಪರಿಷತ್ ಮಾಜಿ ಶಾಸಕರಾದ ಶ್ರೀ ಐವನ್ ಡಿ ಸೋಜರವರನ್ನು ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿಯಾಗಿ ಕೂಡಲೇ ಜಾರಿಗೆ ತರುವಂತೆ ನೇಮಕ ಮಾಡಿದ್ದಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಆಡಳಿತ) ಶ್ರೀ ಕೆ.ಸಿ.ವೇಣುಗೋಪಾಲ್ ಇವರು ಆದೇಶವನ್ನು ಹೊರಡಿಸಿದ್ದಾರೆ. […]

ಕೋಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೆಜ್ಜೇನು ದಾಳಿಯಿಂದ ಆರು ಮಹಿಳೆಯರು ಗಂಭೀರ

Saturday, December 19th, 2020
honey bee

ಬ್ರಹ್ಮಾವರ : ಕೋಟ ಗ್ರಾಮ ಪಂಚಾಯತ್ ಮಿತಿಯೊಳಗಿನ ಕಾಸನಗುಂದು ಎಂಬಲ್ಲಿ  ಹೆಜ್ಜೇನು ದಾಳಿಯಿಂದಾಗಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದ ಆರು ಮಹಿಳೆಯರು ಗಂಭೀರ ಗಾಯಗೊಂಡು ತೀವ್ರ  ಗಾಯಗೊಂಡ ಘಟನೆ  ಡಿಸೆಂಬರ್ 18 ಶುಕ್ರವಾರದಂದು ನಡೆದಿದೆ. ಶುಕ್ರವಾರ ಸಂಜೆ ಮಹಿಳೆಯರು ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಹೆಜ್ಜೇನುಗಳು ದಾಳಿ ನಡೆಸಿದೆ. ಗಾಯಗೊಂಡ ಐವರನ್ನು ಚಿಕಿತ್ಸೆಗಾಗಿ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರು ಮಹಿಳೆಯರ ಪೈಕಿ ಓರ್ವರಾದ ಪ್ರೇಮಾ ಯಾನೆ ಬುಡ್ಡು ತೀವ್ರ ದಾಳಿಗೆ ಒಳಗಾಗಿದ್ದರಿಂದ, ಆಕೆಯನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಉಜಿರೆಯ ಎಂಟರ ಬಾಲಕ ಅನುಭವ್ ಕೋಲಾರದಲ್ಲಿ ಪತ್ತೆ, ಆರು ಮಂದಿ ಅಪಹರಣಕಾರರು ವಶಕ್ಕೆ

Saturday, December 19th, 2020
Anubhav

ಬೆಳ್ತಂಗಡಿ : ಉಜಿರೆಯ ಎಂಟರ ಹರೆಯದ ಬಾಲಕ ಅನುಭವ್ ನನ್ನು ಕೋಲಾರದಲ್ಲಿ ಸುರಕ್ಷಿತವಾಗಿ ಪತ್ತೆ ಹಚ್ಚವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.‌ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು  ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋಲಾರ ಜಿಲ್ಲೆಯ ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಹರಣಕಾರರನ್ನು ಮಗುವಿನೊಂದಿಗೆ ವಿಶೇಷ ತಂಡ ಪೊಲೀಸರು ಶನಿವಾರ ಬೆಳಗ್ಗೆ 5ರ ಹೊತ್ತಿಗೆ ಪತ್ತೆ ಹಚ್ಚಿದ್ದಾರೆ. ಆರೋಪಿಗಳನ್ನೂ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದು ಕೋಲಾರದಿಂದ ವಿಶೇಷ ತನಿಖಾ ತಂಡ ಪ್ರಯಾಣ ಆರಂಭಿಸಿದೆ. ಕೋಲಾರದ ಮಾಲೂರು ತಾಲೂಕಿನ ಕೂರ್ನ ಹೊಸಹಳ್ಳಿ […]

ಕಾಂಗ್ರೆಸ್ ಮುಖಂಡ ಮಾಧವ ಮಾವೆ ಹಾಗೂ ಪತ್ನಿ ಬಿಜೆಪಿಗೆ ಸೇರ್ಪಡೆ

Saturday, December 19th, 2020
Madhava Mave

ಮಂಗಳೂರು: ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿದ್ದ ಮಾಧವ ಮಾವೆ ಹಾಗೂ ಪತ್ನಿ ಜಿಪಂ ಸದಸ್ಯೆ ಮಂಜುಳಾ ಮಾಧವ ಮಾವೆ, ಸೇರಿದಂತೆ ಹಲವಾರು ಮಂದಿ ಕಾರ್ಯಕರ್ತರು ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಎಲ್ಲರಿಗೂ ಬಿಜೆಪಿ ಧ್ವಜ ನೀಡಿ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು. ಬಿಜೆಪಿಗೆ ಸೇರ್ಪಡೆಯಾಗಿರುವ ಮಾಧವ ಮಾವೆ ಮಾತನಾಡಿ, ಕಟೀಲ್ ಅವರು ಯಾವಾಗಲೂ ಬೆನ್ನುತಟ್ಟಿ ಬಿಜೆಪಿಗೆ ಬರಬೇಕೆಂದು ಆಹ್ವಾನ ನೀಡುತ್ತಿದ್ದರು‌. ಅವರ ಕೈಯ ಸ್ಪರ್ಶ ದಿಂದ  ಇಂದು ನಾವು […]

ಶಿಕ್ಷಣ ಮತ್ತು ಸಮೂಹ ಉದ್ಯಮ ಸಂಸ್ಥೆಗಳ ಸ್ಥಾಪಕ ಶ್ರೀ.ಆರ್.ಎನ್. ಶೆಟ್ಟಿ ಇನ್ನು ನೆನಪು ಮಾತ್ರ

Friday, December 18th, 2020
RN Shetty

ಕುಂದಾಪುರ  : ಆರ್.ಎನ್.ಎಸ್. ಶಿಕ್ಷಣ ಮತ್ತು ಉದ್ಯಮ ಸಮೂಹ ಸಂಸ್ಥೆಗಳ ಸ್ಥಾಪಕ ಶ್ರೀ.ಆರ್.ಎನ್. ಶೆಟ್ಟಿ (92) ಗುರುವಾರ  ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ 1928ರ ಆಗಸ್ಟ್ 15ರಂದು ಜನಿಸಿದ ಆರ್.ಎನ್. ಶೆಟ್ಟಿ ಅವರು ಧಾರ್ಮಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ, ವೈದ್ಯಕೀಯ, ಆತಿಥ್ಯ, ವಸತಿ, ಔದ್ಯಮಿಕ, ಔದ್ಯೋಗಿಕ, ವಾಣಿಜ್ಯ, ಶೈಕ್ಷಣಿಕ, ಮೂಲಸೌಕರ್ಯ, ವಿದ್ಯುತ್ ಹಾಗೂ ನೀರಾವರಿ ಕ್ಷೇತ್ರ ಸೇರಿದಂತೆ ವಿವಿಧ ರಂಗಗಳಲ್ಲಿ ತೊಡಗಿಸಿಕೊಂಡಿದ್ದರು. 1961ರಲ್ಲಿ ಮೂಲಸೌಕರ್ಯ ಕಂಪನಿ ಹುಟ್ಟು ಹಾಕಿದ ಆರ್.ಎನ್. ಶೆಟ್ಟಿ ಅವರು, ಹಿಡಕಲ್ […]

ಉದ್ಯಮಿಯ 8 ವರ್ಷದ ಪುತ್ರನ ಅಪಹರಣ, 10 ಕೋಟಿ ಹಣದ ಬೇಡಿಕೆ

Friday, December 18th, 2020
Anubhav

ಉಜಿರೆ: ಇಂಡಿಕಾ ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಉಜಿರೆಯ ರಥಬೀದಿ ನಿವಾಸಿ, ಖ್ಯಾತ ಉದ್ಯಮಿ ಬಿಜೋಯ್ ಯವರ 8 ವರ್ಷದ ಪುತ್ರ ಅನುಭವ್ ನನ್ನು  ಗುರುವಾರ ಸಂಜೆ ಮನೆಯಂಗಳದಿಂದ  ಅಪಹರಿಸಲಾಗಿದ್ದು, ಅಪಹರಣಗಾರರ ಸುಳಿವು ಇನ್ನೂ ಲಭ್ಯವಾಗಿಲ್ಲ. ಆದರೆ ಅಪಹರಣಗಾರರು ಬಾಲಕನ ಬಿಡುಗಡೆಗೆ ರೂ.10 ಕೋಟಿ ಹಣದ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಡಿ.17 ರಂದು ಮನೆಯ ಗೇಟಿನ ಬಳಿ ಆಟವಾಡುತ್ತಿದ್ದ ಅನುಭವ್ ನನ್ನು ಇಂಡಿಕಾ ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಅಪಹರಿಸಿದ್ದು, ಈ ಸಂದರ್ಭ ಬಾಲಕನ ತಾತ ಶಿವನ್ ರವರು ಓಡಿ […]