ಕೆತ್ತಿಕ್ಕಲ್‌ನಲ್ಲಿ ಭೂಕುಸಿತದ ಭೀತಿ ಇರುವ ಪ್ರದೇಶಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Sunday, August 4th, 2024
Brijesh Chowta

ಮಂಗಳೂರು : ವಾಮಂಜೂರು ಬಳಿಯ ಕೆತ್ತಿಕ್ಕಲ್‌ನಲ್ಲಿ ಭೂಕುಸಿತದ ಭೀತಿಗೊಳಗಾದ ಪ್ರದೇಶಕ್ಕೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆತ್ತಿಕಲ್ ಗುಡ್ಡದ ಮೇಲೆ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ನಿರ್ಮಿಸುತ್ತಿರುವ ವೆಟ್ ವೆಲ್‌ಗೆ ಭೇಟಿ ನೀಡಿದ ಬಳಿಕ ರಾ.ಹೆ ಬಳಿಯಿರುವ ಕೆತ್ತಿಕಲ್ ಗುಡ್ಡ ಕುಸಿತ ಸಂಭವಿಸಿದ ಪ್ರದೇಶಕ್ಕೆ ಭೇಟಿ ನೀಡಿ ಜಾಗದ ಪರೀಶೀಲನೆ ನಡೆಸಿದ ಸಂಸದರು ಅಲ್ಲಿನ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಂದ ಮಾಹಿತಿ ಪಡೆದರು. ಮುಂಬರುವ […]

“ರಾಜ್ಯ ಸರಕಾರ ದ.ಕ. ಜಿಲ್ಲೆಗೆ 300 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು“-ವೇದವ್ಯಾಸ ಕಾಮತ್

Sunday, August 4th, 2024
BJP-South

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದ್ದು ಅಪಾರ ಪ್ರಮಾಣದ ಸೊತ್ತು ನಷ್ಟ ಉಂಟಾಗಿದೆ. ಜಿಲ್ಲೆಯ ಜನತೆ ಮತ್ತೆ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ ರಾಜ್ಯ ಸರಕಾರ 300 ಕೋಟಿ ರೂ. ವಿಶೇಷ ಪರಿಹಾರ ಘೋಷಣೆ ಮಾಡಬೇಕೆಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಪತ್ರಿಕಾಗೋಷ್ಟಿಯಲ್ಲಿ ಒತ್ತಾಯಿಸಿದರು. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿರಂತರ ಮಳೆಯಿಂದಾಗಿ ಹಲವು ಮನೆಗಳು ಕುಸಿದಿದ್ದು ಮನೆಗಳ ಮೇಲೆ ಮರಗಳು ಉರುಳಿಬಿದ್ದು ಸುಮಾರು 300 ಕೋಟಿಗೂ ಅಧಿಕ ಹಾನಿ […]

ಮಾನವೀಯತೆ ಮೆರೆದ ಬಸ್ ಸಿಬ್ಬಂದಿಗೆ ತುಳು ಚಲನ ಚಿತ್ರ ನಿರ್ಮಾಪಕರ ಸಂಘದಿಂದ ಅಭಿನಂದನೆ

Sunday, August 4th, 2024
Bus-drivers

ಮಂಗಳೂರು: ಬಸ್‌ನಲ್ಲಿ ಅನಾರೋಗ್ಯಕ್ಕೀಡಾದ ವಿದ್ಯಾರ್ಥಿನಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕೃಷ್ಣ ಪ್ರಸಾದ್ ಟ್ರಾವೆಲ್ಸ್ ಬಸ್ ಚಾಲಕ ಗಜೇಂದ್ರ ಕುಂದ‌ರ್, ನಿರ್ವಾಹಕರಾದ ಸುರೇಶ್, ಮಹೇಶ್‌ರನ್ನು ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ವತಿಯಿಂದ ಬಂಟ್ಸ್ ಹಾಸ್ಟೇಲ್ ಬಳಿಯ ಹೊಟೇಲ್ ವುಡ್ ಲ್ಯಾಂಡ್ ನ‌ ಸಭಾಂಗಣದಲ್ಲಿ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಅಭಿನಂದಿಸಲಾಯಿತು. ಸಂಘದ ಅಧ್ಯಕ್ಷ ಆರ್ ಧನರಾಜ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಮಾತನಾಡಿ, ಬಸ್ ಸಿಬ್ಬಂದಿಗಳ ಮಾನವೀಯತೆಯ ಕಾಳಜಿ ಮೆಚ್ಚುವಂತದ್ದು, ಅವರೆಲ್ಲರೂ […]

ಲಯನ್ಸ್ ಪ್ರಾಯೋಜಿತ ಎಂಫ್ರೆಂಡ್ಸ್ ಮೀಲ್ಸ್ ಆನ್ ವ್ಹೀಲ್ಸ್- ಕಾರುಣ್ಯ ಕಿಚನ್ ಉದ್ಘಾಟನೆ

Saturday, August 3rd, 2024
Karunya

ಮಂಗಳೂರು: ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಒಳರೋಗಿಗಳ ಸಹವರ್ತಿಗಳಿಗೆ ರಾತ್ರಿ ಊಟ ನೀಡುವ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟಿನ ಕಾರುಣ್ಯ ಯೋಜನೆಗೆ ಲಯನ್ಸ್ ಜಿಲ್ಲೆ 317 ಡಿ ವತಿಯಿಂದ ಲಯನ್ಸ್ ಕ್ಲಬ್ಸ್ ಇಂಟರ್‌ನ್ಯಾಶನಲ್ ಫೌಂಡೇಶನ್ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ `ಮೀಲ್ಸ್ ಆನ್ ವ್ಹೀಲ್ಸ್’ ಫುಡ್ ಟ್ರಕ್ ಮತ್ತು ಸುಸಜ್ಜಿತ ಕಾರುಣ್ಯ ಅಡುಗೆ ಮನೆ ಉದ್ಘಾಟನೆ ಶನಿವಾರ ನಡೆಯಿತು. ಜೆಪ್ಪು ವೆಲೆನ್ಸಿಯಾದ ಹೋಲಿ ರೊಸಾರಿಯೊ ಕಾನ್ವೆಂಟ್ ರಸ್ತೆಯಲ್ಲಿ ನಿರ್ಮಿಸಿದ ಅಡುಗೆ ಮನೆ, ಸ್ವಯಂಚಾಲಿತ ಚಪಾತಿ ಯಂತ್ರ, ಇಡ್ಲಿ […]

“ಬಿಜೆಪಿಗರು ಕೋಟ, ಬೊಮ್ಮಾಯಿ, ಸುಧಾಕರ್ ಮನೆಗೆ ಪಾದಯಾತ್ರೆ ಮಾಡಲಿ!“ಐವನ್ ಡಿಸೋಜ ಗುಡುಗು

Saturday, August 3rd, 2024
Ivan-D-Souza

ಮಂಗಳೂರು: ಬಿಜೆಪಿ ಆತ್ಮವಂಚನೆ ಮಾಡಿಕೊಳ್ತಾ ಇದೆ. ವಾಲ್ಮೀಕಿ ಇಲಾಖೆಯಲ್ಲಿ ಹಗರಣ ಆಗಿದೆ ಕ್ರಮ ಕೈಗೊಂಡಿದ್ದೇವೆ. ಅದನ್ನೇ ರಾಜಕೀಯಕ್ಕೆ ಬಳಸಿಕೊಂಡು ಪಾದಯಾತ್ರೆ ಮಾಡುವುದಾದರೆ ನಿಮ್ಮ ಸರಕಾರ ಇದ್ದಾಗ ಇಲಾಖೆಯ ಹಣ ನುಂಗಿ ನೀರು ಕುಡಿದಿರುವ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸುಧಾಕರ್ ಮನೆಗೆ ಮಾಡಿ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಪತ್ರಿಕಾಗೋಷ್ಟಿಯಲ್ಲಿ ಗುಡುಗಿದ್ದಾರೆ. ನಗರದ ಕಾಂಗ್ರೆಸ್ ಭವನದಲ್ಲಿ ಮಾಧ್ಯಮವನ್ನು ಉದ್ದೇಶಿಸಿ ಮಾತಾಡಿದ ಅವರು, ಸುಧಾಕರ್ ಕೊರೋನ ಹೆಸರಲ್ಲಿ ನೂರಾರು ಕೋಟಿ ರೂಪಾಯಿ […]

ಬೀದಿ ಬದಿ ವ್ಯಾಪಾರಿಗಳ ಮೇಲಿನ ಟೈಗರ್ ಕಾರ್ಯಾಚರಣೆ ನಿಲ್ಲಿಸಿ : ರಮಾನಾಥ ರೈ ಆಗ್ರಹ

Saturday, August 3rd, 2024
Ramanatha-Rai

ಮಂಗಳೂರು‌: ನಗರದ ಬೀದಿ ಬದಿ ವ್ಯಾಪಾರಿಗಳನ್ನು ತೆರವು ಮಾಡುವ ಬಿಜೆಪಿ ಆಡಳಿತದ ಮಂಗಳೂರು ಮಹಾನಗರ ಪಾಲಿಕೆಯ ಟೈಗರ್ ಕಾರ್ಯಾಚರಣೆ ಅನ್ಯಾಯ ಮತ್ತು ತಾರತಮ್ಯದಿಂದ ಕೂಡಿದೆ. ಕೂಡಲೆ ಟೈಗರ್ ಕಾರ್ಯಾಚರಣೆ ಸ್ಥಗಿತಗೊಳಿಸಿ ಬೀದಿ ಪಾಲಾಗಿರುವ ಬೀದಿ ಬದಿ ವ್ಯಾಪಾರಿಗಳಿಗೆ ಮಹಾನಗರ ಪಾಲಿಕೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು. ಮಹಾನಗರ ಪಾಲಿಕೆ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳಿಗೆ ಬದಲಿ ವ್ಯವಸ್ಥೆ ಮಾಡದೆ ಅವರ ಸೊತ್ತುಗಳನ್ನು ಜೆಸಿಬಿ ಬಳಸಿ ಧ್ವಂಸ ಮಾಡಿ ತೆರವು ಮಾಡಿರುವ ಪಾಲಿಕೆಯ ಕಾರ್ಯಾಚರಣೆ ಅನ್ಯಾಯ ಮತ್ತು ಅಮಾನವೀಯ. ಬೀದಿ […]

ದುಬೈ (ಯು.ಎ.ಇ.) : ನರ್ಸ್ ಹುದ್ದೆಗೆ ಅರ್ಜಿ ಆಹ್ವಾನ

Friday, August 2nd, 2024
male-nurse

ಮಂಗಳೂರು : ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ (ಕೆ.ಎಸ್.ಡಿ.ಸಿ) ಅಧೀನದಲ್ಲಿ ಬರುವ ಅಂತರಾಷ್ಟ್ರೀಯ ವಲಸಿಗರ ಕೇಂದ್ರದ ಮೂಲಕ ಗಲ್ಫ್ ದುಬೈ ದುಬೈ (ಯು.ಎ.ಇ.) ದೇಶದಲ್ಲಿ ಪುರುಷ ನರ್ಸ್ ಹುದ್ದೆಗಳಿಗೆ ಕನಿಷ್ಠ 2 ವರ್ಷ ಅನುಭವವಿರುವ ಆಸಕ್ತ ಅಭ್ಯರ್ಥಿಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ವೇತನದ: ಪ್ರತಿ ತಿಂಗಳಿಗೆ ರೂ. 1,11,000 ವರೆಗೆ. ಕಂಪೆನಿ ವತಿಯಿಂದ ವಸತಿ, ವೈದ್ಯಕೀಯ ವಿಮೆ, ಸಾರಿಗೆ, ವೀಸಾ ಮತ್ತು ಏರ್ ಟಿಕೆಟ್ ಒದಗಿಸಲಾಗುತ್ತದೆ. ಅರ್ಹತೆ: ಬಿ.ಎಸ್ಸಿ ನರ್ಸಿಂಗ್/ಪೋಸ್ಟ್ ಬೇಸಿಕ್ ಬಿ.ಎಸ್ಸಿ ನರ್ಸಿಂಗ್. ಅರ್ಹ ಅಭ್ಯರ್ಥಿಗಳಿಗೆ 2024 […]

ಮಂಗಳೂರಿನ ಸಹ್ಯಾದ್ರಿ ಕಾಲೇಜ್ ನಲ್ಲಿ ಅಪ್ರೆಂಟಿಸ್ ಟ್ರೈನೀಸ್ ಕೇಂದ್ರೀಕೃತ ವಾಕ್-ಇನ್-ಇಂಟರ್ವ್ಯೂ

Friday, August 2nd, 2024
sahyadri college

ಮಂಗಳೂರು : ಬೆಂಗಳೂರಿನ ತಾಂತ್ರಿಕ ಶಿಕ್ಷಣ, ಕರ್ನಾಟಕ ಸರ್ಕಾರ ಮತ್ತು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಮಂಗಳೂರು ಜಂಟಿಯಾಗಿ ಮಂಗಳೂರಿನ ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಮಂಗಳವಾರ ದಿನಾಂಕ 6 ಆಗಸ್ಟ್ 2024 ರಂದು ಪದವೀಧರರು, ಎಂಜಿನಿಯರುಗಳು ಮತ್ತು ಡಿಪ್ಲೊಮಾ ಹೊಂದಿರುವವರಿಗೆ ಕೇಂದ್ರೀಕೃತ ವಾಕ್-ಇನ್ ಸಂದರ್ಶನವನ್ನು ಆಯೋಜಿಸಿರುತ್ತಾರೆ. ಬೆಳಿಗ್ಗೆ ಗಂಟೆ 9:30 ರಿಂದ ಪ್ರಾರಂಭ. ಬೋರ್ಡ್ ಆಫ್ ಅಪ್ರೆಂಟಿಸ್‌ಶಿಪ್ ತರಬೇತಿ, ಸೌತ್ ರೀಜನ (SR) ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಉನ್ನತ ಶಿಕ್ಷಣ ಇಲಾಖೆಯ ಅಡಿಯಲ್ಲಿ ಸ್ವಾಯತ್ತ […]

ಸುರತ್ಕಲ್ ಎನ್ ಐಟಿಕೆ ಉಪ ನಿರ್ದೇಶಕರಾಗಿ ಡಾ.ಸುಭಾಷ್ ಸಿ.ಯರಗಲ್ ನೇಮಕ

Friday, August 2nd, 2024
Dr. Subhash C

ಮಂಗಳೂರು : ಸುರತ್ಕಲ್ ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ ಐಟಿಕೆ)ದ ಉಪ ನಿರ್ದೇಶಕರಾಗಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ.ಸುಭಾಷ್ ಸಿ.ಯರಗಲ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. 1996ರಲ್ಲಿ ಎನ್ ಐಟಿಕೆ ಸೇರಿದ ಡಾ.ಯರಗಲ್ ಅವರು ಸಂಸ್ಥೆಯ ಬೆಳವಣಿಗೆ ಮತ್ತು ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಆಡಳಿತ ಮಂಡಳಿಯ ಸದಸ್ಯ, ಡೀನ್ (ಯೋಜನೆ ಮತ್ತು ಅಭಿವೃದ್ಧಿ) ಮತ್ತು ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಸೇರಿದಂತೆ ಹಲವಾರು ಪ್ರಮುಖ ಆಡಳಿತಾತ್ಮಕ ಹುದ್ದೆಗಳನ್ನು ನಿರ್ವಹಿಸಿದ್ದಾರೆ. […]

ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವ ಬಗ್ಗೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ: ಸಿ.ಎಂ.ಸಿದ್ದರಾಮಯ್ಯ

Friday, August 2nd, 2024
cm-kodagu

ಮಡಿಕೇರಿ : ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ತೀರ್ಮಾನವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭೂ ಕುಸಿತ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ 746 ಕೋಟಿ ಮತ್ತು ಮಡಿಕೇರಿ ಜಿಲ್ಲಾ ಪಿಡಿ ಖಾತೆಯಲ್ಲಿ 46 ಕೋಟಿ ಹಣ ಇದೆ. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಹಣ ನೀಡಲಾಗುವುದು ಎಂದು ವಿವರಿಸಿದರು. ಮಳೆ […]