ಡಿ. ವೀರೇಂದ್ರ ಹೆಗ್ಗಡೆಯವರ 53ನೇ ಪಟ್ಟಾಭಿಷೇಕ ವರ್ಧಂತಿ, ಜನಮಂಗಳ ಯೋಜನೆಗಳಿಗೆ ಚಾಲನೆ

Saturday, October 24th, 2020
SKD

ಧರ್ಮಸ್ಥಳ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ 21 ಕೋಟಿ ರೂ. ವೆಚ್ಚದಲ್ಲಿ 20,000 ಟ್ಯಾಬ್ ಗಳನ್ನು ಹಾಗೂ 10,000 ಲ್ಯಾಪ್ ಟಾಪ್ ಗಳನ್ನು ವಿತರಿಸಲಾಗುವುದು. 15 ಕೋಟಿ ರೂಪಾಯಿ ವೆಚ್ಚದಲ್ಲಿ “ಯಂತ್ರ ಶ್ರೀ” ಯೋಜನೆಯಡಿ ಕೃಷಿಕರಿಗಾಗಿ ಯಂತ್ರಗಳನ್ನು ಖರೀದಿಸಿ ಕೃಷಿಗೆ ಪ್ರೋತ್ಸಾಹ ನೀಡಿ ಎಂಟು ಸಾವಿರ ಎಕರೆ ಪ್ರದೇಶದಲ್ಲಿ ಕೃಷಿಗೆ ಕಾಯಕಲ್ಪ ನೀಡಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ತಿಳಿಸಿದ್ದಾರೆ. ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಶನಿವಾರ ತಮ್ಮ 53ನೇ ವರ್ಷದ ಪಟ್ಟಾಭಿಷೇಕ […]

ನವರಾತ್ರಿ – ಶಸ್ತ್ರಾಸ್ತ್ರ, ವಾಹನಗಳಿಗೆ ಆಯುಧ ಪೂಜೆ

Saturday, October 24th, 2020
Ayudha Pooja

ಮಂಗಳೂರು : ಆಯುಧ ಪೂಜೆ ನವರಾತ್ರಿ ಹಬ್ಬದ ದಿನಗಳಲ್ಲಿ ಬರುವ ಒಂದು ವಿಶೇಷ ದಿನ. ಇದನ್ನು ಸಾಂಪ್ರದಾಯಿಕವಾಗಿ ಭಾರತದಲ್ಲಿ ಆಚರಿಸಲಾಗುತ್ತದೆ. ನವರಾತ್ರಿ ಯಲ್ಲಿ ಒಂಬತ್ತನೇ ದಿನ ಶಸ್ತ್ರಾಸ್ತ್ರ ಮತ್ತು ಸಾಧನಗಳನ್ನು ಪೂಜಿಸಲಾಗುತ್ತದೆ ಅದನ್ನೇ ಆಯುಧ ಪೂಜೆ ಎಂದು ಕರೆಯಲಾಗುತ್ತದೆ ನವರಾತ್ರಿಯ ಸಂದರ್ಭದಲ್ಲಿ ಬರುವ ಆಯುಧ ಪೂಜೆಯ ದಿನ ಜನರು ಜೀವನೋಪಾಯಕ್ಕಾಗಿ ಬಳಸುವ ಸಾಧನಗಳು ಮತ್ತು ವಸ್ತುಗಳನ್ನು ಪೂಜಿಸಿವುದು ಹಿಂದಿನಿಂದಲೂ ಬಂದ ಸಂಪ್ರದಾಯ. ಹಿಂದೂ ಸಮುದಾಯದ ಪೂಜಾ ಸಾಧನಗಳು, ವಿದ್ಯುತ್ ಉಪಕರಣಗಳು, ವಾಹನಗಳು ಮತ್ತುತಮ್ಮ ಜೀವನೋಪಾಯವನ್ನು ಗಳಿಸಲು ಬಳಸುವ ಉಪಕರಣಗಳಿಗೆ […]

ದೇವಿಯರ ಹಬ್ಬ “ನವರಾತ್ರಿ – ದಸರಾ”

Saturday, October 24th, 2020
Nava durge

ಹಬ್ಬಗಳ ತವರೂರಾದ ಭಾರತ ದೇಶದಲ್ಲಿ ನವರಾತ್ರಿ ಅಥವಾ `ದಸರಾ’ ಹಬ್ಬಕ್ಕೆ ತನ್ನದೇ ಆದ ಮಹತ್ವ, ಪೌರಾಣಿಕ ಹಿನ್ನೆಲೆ ಇದೆ. ಭಾರತಾದ್ಯಂತ `ದಸರಾ’ ಹಬ್ಬವನ್ನು ತುಂಬಾ ಉತ್ಸಾಹದಿಂದ ವಿಜೃಂಭಣೆಯಿಂದ ಆಚರಿಸುತ್ತಾರೆ. ಪಶ್ಚಿಮ ಬಂಗಾಳದಲ್ಲಿ 9 ದಿನಗಳಲ್ಲಿ ದುರ್ಗಾದೇವಿಯ ವಿಶಾಲವಾದ ಸುಂದರ ಮೂರ್ತಿಗಳನ್ನು ದೊಡ್ಡ ಪ್ರಮಾಣದಲ್ಲಿ, ಅಲಂಕೃತ ಮಂಟಪಗಳಲ್ಲಿ ಕೂರಿಸಿ ಪೂಜಿಸಲಾಗುತ್ತದೆ. ವಿಜಯದಶಮಿಯ ದಿನ ಭವ್ಯ ಮೆರವಣಿಗೆಯ ಮೂಲಕ ವಿಸರ್ಜಿಸಲಾಗುತ್ತದೆ. ಇದು ಬಂಗಾಳಿಯವರಿಗೆ ನಾಡಹಬ್ಬವಾಗಿದೆ, ಪಂಜಾಬ್ನಲ್ಲಿ ಭಕ್ತರು 7 ದಿನಗಳ ಕಾಲ ಉಪವಾಸ ಮಾಡಿದ ನಂತರ ಎಂಟನೇ ದಿನ ಪುಟ್ಟ್ […]

ಫಾರೂಕ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಗುಂಡು ಹಾರಿಸಿ ಬಂಧಿಸಿದ ಪೊಲೀಸರು

Saturday, October 24th, 2020
KhalilShoot

ಬಂಟ್ವಾಳ : ರೌಡಿ ಶೀಟರ್ ಉಮರ್ ಫಾರೂಕ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಗುಂಡ್ಯದಲ್ಲಿ ಪೊಲೀಸರು ಗುಂಡು ಹಾರಿಸಿ  ಶನಿವಾರ ಬೆಳಗ್ಗೆ ಬಂಧಿಸಿದ್ದಾರೆ. ಕಾರಿನಲ್ಲಿ ಬೆಂಗಳೂರಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಶರಣಾಗುವಂತೆ ಸೂಚಿಸಿದರು ತಪ್ಪಿಸಲು ಯತ್ನಿಸಿದ ಆರೋಪಿಯನ್ನು ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.  ಘಟನೆಯಲ್ಲಿ  ಬಂಟ್ವಾಳ  ಎಸ್ಸೈ  ಪ್ರಸನ್ನ  ಗಾಯಗೊಂಡಿದ್ದಾರೆ ಮೂಲತಃ ಕಲ್ಲಡ್ಕ ನಿವಾಸಿ ಪ್ರಸಕ್ತ ನಂದಾವರದಲ್ಲಿ ವಾಸವಿರುವ ಖಲೀಲ್ ಬಂಧಿತ ಆರೋಪಿ. ಶುಕ್ರವಾರ ಸಂಜೆ ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ಕಲ್ಲಡ್ಕ ನಿವಾಸಿ ರೌಡಿ ಶೀಟರ್ ಉಮರ್ ಫಾರೂಕ್ ಎಂಬಾತನನ್ನು […]

ಮೇಲ್ಕಾರ್​​​​​ನ ಗುಡ್ಡೆಯಂಗಡಿ ಬಳಿ ಮಾರಕಾಸ್ತ್ರಗಳಿಂದ ಇರಿದು ರೌಡಿ ಶೀಟರ್ ಹತ್ಯೆ

Friday, October 23rd, 2020
Farooq

ಬಂಟ್ವಾಳ: ಶುಕ್ರವಾರ ಸಂಜೆ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲ್ಕಾರ್ನ ಗುಡ್ಡೆಯಂಗಡಿ ಎಂಬಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಇರಿದು ಹತ್ಯೆ ನಡೆಸಲಾಗಿದೆ. ರೌಡಿ ಶೀಟರ್ ಉಮ್ಮರ್ ಫಾರೂಕ್ ಅಲಿಯಾಸ್ ಚೆನ್ನಾ ಫಾರೂಕ್ (32)  ಎಂಬಾತನನ್ನು ಗುಂಪೊಂದು ಹತ್ಯೆ ಮಾಡಿದೆ ಎಂದು ಮಾಹಿತಿ ಲಭ್ಯವಾಗಿದೆ. ಬೈಕಿನಲ್ಲಿ ಹೋಗುತ್ತಿದ್ದ ಫಾರೂಕ್ ಮೇಲೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ತೀವ್ರ ಗಾಯಗೊಂಡ ಫಾರೂಕ್ ಕೊನೆಯುಸಿರೆಳೆದಿದ್ದಾನೆ. ರೌಡಿಶೀಟರ್ ಫಾರೂಕ್ ಯಾನೆ ಚೆನ್ನ ಫಾರೂಕ್ ಎಂಬಾತನನ್ನು ಆತನ ಸೇಹಿತನೇ ಕೊಲೆ ಮಾಡಿದ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಸ್ಥಳಕ್ಕೆ […]

ಹೊರರಾಜ್ಯಗಳಿಂದ ಗೋಮಾಂಸ ತಂದು ಮಂಗಳೂರಿನ ಸ್ಟಾಲ್ ಗಳಲ್ಲಿ ಮಾರಾಟ : ದೂರು

Friday, October 23rd, 2020
mutton Stall

ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಹೊರರಾಜ್ಯ ಮತ್ತು ಜಿಲ್ಲೆಗಳಿಂದ ಮಾಂಸ ತಂದು ಮಂಗಳೂರಿನ ಸ್ಟಾಲ್ ಗಳಲ್ಲಿ ಮಾರಾಟ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ಅನೇಕ ದೂರು ಬಂದಿದ್ದು, ಅನಧಿಕೃತವಾಗಿ ಮಾರಾಟ ಮಾಡಿರುವುದು ಕಂಡುಬಂದಲ್ಲಿ ಮಳಿಗೆಯ ಪರವಾನಿಗೆ ರದ್ದುಗೊಳಿಸಲಾಗುವುದು ಎಂದು ಮನಪಾ ಮಹಾಪೌರರು ತಿಳಿಸಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 20 ಬೀಫ್ ಸ್ಟಾಲ್‌ನಲ್ಲಿ ಬೇರೆ ರಾಜ್ಯ, ಜಿಲ್ಲೆಗಳಿಂದ ಮಾಂಸ ತಂದು ಮಾರಾಟ ಮಾಡದಂತೆ ಸಂಬಂಧಿತ ಮಾಲಕರು ಕ್ರಮ ಕೈಗೊಳ್ಳಬೇಕು. ಎಲ್ಲ ಮಾರಾಟಗಾರರು ಇನ್ನು ಮುಂದಕ್ಕೆ ಪಾಲಿಕೆಯ ಅಧೀನದಲ್ಲಿರುವ ಅಧಿಕೃತ […]

ಕಾಸರಗೋಡು ಜಿಲ್ಲೆಯಲ್ಲಿ ಅಕ್ಟೋಬರ್ 31ರ ವರೆಗೆ ನಿಷೇಧಾಜ್ಞೆ ವಿಸ್ತರಣೆ

Friday, October 23rd, 2020
Kasaragodu DC

ಕಾಸರಗೋಡು : ಕೊರೋನ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಹಂತಹಂತವಾಗಿ ಜಾರಿಗೆ ತರಲಾಗಿದ್ದ ನಿಷೇಧಾಜ್ಞೆಯನ್ನು ಅಕ್ಟೋಬರ್ 31ರ ತನಕ ವಿಸ್ತರಿಸಿ ಜಿಲ್ಲಾಧಿಕಾರಿ ಡಾ.ಸಜಿತ್ ಬಾಬು ಆದೇಶ ಹೊರಡಿಸಿದ್ದಾರೆ. ಸೋಂಕು ನಿಯಂತ್ರಣದ ದ್ರಷ್ಟಿಯಿಂದ ಅಕ್ಟೋಬರ್ 3ರಿಂದ ಸೆಕ್ಷನ್ 144ರಂತೆ ನಿಷೇಧಾಜ್ಞೆಯನ್ನು ಕೇರಳದಲ್ಲಿ ಜಾರಿಗೆ ತರಲಾಗಿತ್ತು. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಹಂತಹಂತವಾಗಿ ನಿಷೇದಾಜ್ಞೆ ಜಾರಿಗೆ ತರಲಾಗಿತ್ತು. ಮಂಜೇಶ್ವರ, ಕುಂಬಳೆ, ಬದಿಯಡ್ಕ, ಕಾಸರಗೋಡು, ವಿದ್ಯಾನಗರ, ಮೇಲ್ಪರಂಬ, ಬೇಕಲ, ಹೊಸದುರ್ಗ, ನೀಲೇಶ್ವರ, ಚಂದೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಪ್ಪ, ಒಡೆಯಂಚಾಲ್, ಪನತ್ತಡಿ ಪೇಟೆ […]

ಧರ್ಮಸ್ಥಳದಲ್ಲಿ ಹೆಗ್ಗಡೆಯವರ ಪಟ್ಟಾಭಿಷೇಕದ 53ನೇ ವರ್ಷದ ವರ್ಧಂತಿ ಆಚರಣೆ ನಾಳೆ

Friday, October 23rd, 2020
veerendra Heggade

ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 53ನೆ ವರ್ಷದ ವರ್ಧಂತಿ ಸಮಾರಂಭ ಇದೇ ೨೪ ರಂದು ಶನಿವಾರ ಸರಳವಾಗಿ ನಡೆಯಲಿದೆ. 1948 ರ ನವೆಂಬರ್ 25 ರಂದು ಜನಿಸಿದ ಅಂದಿನ ವೀರೇಂದ್ರ ಕುಮಾರ್ ತನ್ನ ಇಪ್ಪತ್ತನೆ ವರ್ಷ ಪ್ರಾಯದಲ್ಲಿ ಧರ್ಮಸ್ಥಳದ ಇಪ್ಪತ್ತೊಂದನೆ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾದರು. 2017 ಅಕ್ಟೋಬರ್ 24ಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರು 50 ವರ್ಷಗಳ ಸೇವೆಯನ್ನು ಪೂರೈಸಿದ್ದು 2018 ರ ಅ. 24ರ ವರೆಗೆ ಒಂದು ವರ್ಷ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಸುವರ್ಣ […]

ಸುರೇಂದ್ರ ಬಡ್ಡಿ ವ್ಯವಹಾರದ ಪಾಪದ ಹಣವನ್ನು ಕಿಶನ್ ಹೆಗ್ಡೆ ಕೊಲೆಗೆ ಬಳಸಿದ್ದ, ಅದಕ್ಕಾಗಿ ಕೊಲೆ ಶಂಕೆ

Thursday, October 22nd, 2020
suresh Kulal

ಬಂಟ್ವಾಳ : ಕಿಶನ್ ಹೆಗ್ಡೆ ಕೊಲೆಗೆ ಪ್ರತಿಕಾರವಾಗಿ ಸುರೇಂದ್ರ ಬಂಟ್ವಾಳ್ ಅವರನ್ನು ಕೊಲೆ ಮಾಡಲಾಗಿದೆ ಎನ್ನುವ ಬಗ್ಗೆ ಮಹತ್ವದ ಸುಳಿವು ಸಿಕ್ಕಿದ್ದು,  ಸುರೇಂದ್ರನ ಆಪ್ತ ಸ್ನೇಹಿತ  ಎಂದು ಹೇಳಿಕೊಂಡು ಒಬ್ಬ ವ್ಯಕ್ತಿ ಆಡಿಯೋ ಕಳಿಸಿದ್ದು ಪೊಲೀಸರು ಸುಳಿವಿನ ಬೆನ್ನು ಹತ್ತಿದ್ದಾರೆ. ರೌಡಿ ಶೀಟರ್, ನಟ ಸುರೇಂದ್ರ ಭಂಡಾರಿ ಬಂಟ್ವಾಳ್ ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಎರಡು ಪ್ರತ್ಯೇಕ ತಂಡ ರಚಿಸಿ ಹಂತಕರ ಬೇಟೆ ಆರಂಭಿಸಿದ್ದಾರೆ. ಸುರೇಂದ್ರ ಬಂಟ್ವಾಳ್ ಅವರ ಆಪ್ತ ಸ್ನೇಹಿತ ಸತೀಶ್ ಕುಲಾಲ್ ಎಂದು ಹೇಳಿಕೊಂಡು ಒಬ್ಬ ವ್ಯಕ್ತಿ ಆಡಿಯೋ ಸಂದೇಶದ  […]

ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಬೋಟುಗಳಲ್ಲಿ ಅಕ್ರಮ ಮೀನುಗಾರಿಕೆ, 10 ಮಂದಿ ವಶ

Thursday, October 22nd, 2020
Tamil Boat

ಮಲ್ಪೆ :  ಅಕ್ರಮ ಲೈಟ್ ಫಿಶಿಂಗ್ ಹಾಗೂ ಚೌರಿ ಹಾಕಿ ಮೀನು ಹಿಡಿಯುತಿದ್ದ ತಮಿಳುನಾಡಿನ ಬೋಟುಗಳಲ್ಲಿ ಒಂದನ್ನು ಮಲ್ಪೆ ಬಂದರಿನಿಂದ ಕೇವಲ 10 ನಾಟಿಕಲ್ ಮೈಲು ದೂರದಲ್ಲಿ ವಶಕ್ಕೆ ಪಡೆದ ಮಲ್ಪೆ ಮೀನುಗಾರರ ತಂಡ  ಬೋಟಿನಲ್ಲಿದ್ದ 10 ಮಂದಿ ಸಿಬ್ಬಂದಿಗಳೊಂದಿಗೆ ಮಲ್ಪೆ ಬಂದರಿಗೆ ತಂದಿದ್ದಾರೆ. ಶಾನ್ ಮಾಲಕತ್ವದ ‘ಮಕರ ಸಂಕ್ರಾಂತಿ’ ಪರ್ಸೀನ್ ಬೋಟು ಬುಧವಾರ ಮೀನುಗಾರಿಕೆಗೆಂದು ಸಮುದ್ರಕ್ಕೆ ತೆರಳಿದ್ದು,  ಗುರುವಾರ  ಬೆಳಗಿನಜಾವ ಸುಮಾರು 10 ನಾಟಿಕಲ್ ಮೈಲು ದೂರದಲ್ಲಿ ತಮಿಳುನಾಡಿಗೆ ಸೇರಿದ್ದೆನ್ನಲಾದ ಬೃಹತ್ ಗಾತ್ರದ ‘ಇಂಡಿಯನ್’ ಹೆಸರಿನ ಬೋಟು ಲೈಟ್ […]